Breaking News
Home / ಹುಬ್ಬಳ್ಳಿ (page 5)

ಹುಬ್ಬಳ್ಳಿ

ಹೊಸ ವರ್ಷಾಚರಣೆಗೆ ಸಜ್ಜಾದ ಹುಬ್ಬಳ್ಳಿ: ಮೋಜು ಮಸ್ತಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸ್​ ಇಲಾಖೆ

ಹುಬ್ಬಳ್ಳಿ, ಡಿಸೆಂಬರ್​ 31: ಕೊರೊನಾ ಭೀತಿಯ ನಡುವೆಯೂ ನಗರದ ಜನರು ಅದ್ಧೂರಿಯಾಗಿಹೊಸ ವರ್ಷಾಚರಣೆಗೆ ಸಜ್ಜಾಗಿದ್ದಾರೆ. ಹುಬ್ಬಳ್ಳಿಯ (Hubballi) ಅನೇಕ ಹೋಟೆಲ್‌ (Hotel) ಮತ್ತು ರೆಸ್ಟೋರೆಂಟ್​ಗಳು (Restaurant) ವಿವಿಧ ಥೀಮ್‌ಗಳೊಂದಿಗೆ ಸ್ಮರಣೀಯ ಈವೆಂಟ್‌ಗಳನ್ನು ಆಯೋಜಿಸುತ್ತಿವೆ. ಮತ್ತು ಈವೆಂಟ್​ಗಳಲ್ಲಿ ಪಾಲ್ಗೊಳ್ಳುವವರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನು ಕೆಲವು ಹೋಟೆಲ್‌ಗಳು ಯಾವುದೇ ಅದ್ಧೂರಿ ಕಾರ್ಯಕ್ರಮಗಳನ್ನು ನಡೆಸದಿರಲು ನಿರ್ಧರಿಸಿವೆ. ಹೊಸ ವರ್ಷಾಚರಣೆಗೆ ನಗರ ಪೊಲೀಸರು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾತ್ರಿ 10 ಗಂಟೆಯ ನಂತರ ಯಾವುದೇ …

Read More »

ಕಾಟೇರ’ ಸಿನಿಮಾ ನೋಡಿ ಮೆಚ್ಚಿಕೊಂಡ ಪ್ರಲ್ಹಾದ್​ ಜೋಶಿ

ಹುಬ್ಬಳ್ಳಿಯಲ್ಲಿ ಪ್ರಲ್ಹಾದ್​ ಜೋಶಿ ಅವರು ‘ಕಾಟೇರ’ ಸಿನಿಮಾವನ್ನು ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್​ ಟೆಂಗಿನಕಾಯಿ ಕೂಡ ಸಾಥ್​ ನೀಡಿದ್ದಾರೆ. ದರ್ಶನ್​ ನಟನೆ, ಸಿನಿಮಾದಲ್ಲಿನ ಸಂದೇಶ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಲ್ಹಾದ್​ ಜೋಶಿ ಹೊಗಳಿದ್ದಾರೆ. ಕೇಂದ್ರ ಸಚಿವರಿಂದ ಮೆಚ್ಚುಗೆ ಸಿಕ್ಕಿದ್ದಕ್ಕೆ ದರ್ಶನ್​ ಫ್ಯಾನ್ಸ್​ ಖುಷಿ ಆಗಿದ್ದಾರೆ. ರಾಜ್ಯದ ನೂರಾರು ಚಿತ್ರಮಂದಿರಗಳಲ್ಲಿ ‘ಕಾಟೇರ‘ ಸಿನಿಮಾ (Kaatera Movie) ಸದ್ದು ಮಾಡುತ್ತಿದೆ. ನಟ ದರ್ಶನ್​ (Darshan) ಅವರ ಅಭಿನಯಕ್ಕೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ ಅವರು …

Read More »

ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?

ನಿಗದಿತ ಅವಧಿಯಲ್ಲಿ ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌ಗೆ ಧಾರವಾಡದ ಗ್ರಾಹಕರ ಆಯೋಗ ಕರಾರಿನಂತೆ ಪ್ರತಿ ತಿಂಗಳು ರು. 10 ಸಾವಿರ ಬಾಡಿಗೆ ನೀಡುವಂತೆ ಆದೇಶ ನೀಡಿದೆ.ಧಾರವಾಡದ ಸಂಜೀವ ದೇಸಾಯಿ ಎಂಬುವವರು (consumer) 2017ರಲ್ಲಿ ಸ್ಕೈಟೌನ್‌ ಬಿಲ್ಡರ್ಸ್‌ ಮತ್ತು ಡೆವೆಲಪರ್ಸ್‌ ಬಳಿ ಪೂರ್ತಿ ಹಣ ಪಾವತಿಸಿ ಫ್ಲ್ಟಾಟ್‌ (Flat) ಖರೀದಿಸಿದ್ದರು. ಖರೀದಿ ಕರಾರಿನಂತೆ 24 ತಿಂಗಳೊಳಗೆ ಮನೆಯನ್ನು ಪೂರ್ಣಗೊಳಿಸಿ ಕೊಡಬೇಕು. ತಪ್ಪಿದ್ದಲ್ಲಿ ಪ್ರತಿ ತಿಂಗಳು ರೂ.10 ಸಾವಿರ ಮನೆ ಬಾಡಿಗೆಯನ್ನು ಪೂರ್ತಿ ಮನೆ …

Read More »

ಹುಬ್ಬಳ್ಳಿ: ಪ್ರತಿಷ್ಠಿತ ಹೋಟೆಲ್​ನಲ್ಲಿ ಮಹಿಳೆಗೆ ಕಿರುಕುಳ

ಹುಬ್ಬಳ್ಳಿ, ಡಿ.24: ಪ್ರತಿಷ್ಠಿತ ಹೋಟೆಲೊಂದರಲ್ಲಿ ಮಹಿಳೆಗೆ ಮೂವರು ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ (Hubli) ಅಮರಗೋಳ ಬಳಿ ಇರುವ ಪ್ರತಿಷ್ಠಿತ ರಾಯಲ್ ರಿಟ್ಜ್ ಹೋಟೆಲ್​ನಲ್ಲಿ (Royal Ridge Hotel) ಇದೇ ತಿಂಗಳ 2ನೇ ತಾರೀಖಿನಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಲೈಂಗಿಕ ಕಿರುಕುಳ ಹಿನ್ನಲೆ ಮೂವರ ವಿರುದ್ದ ಹುಬ್ಬಳ್ಳಿಯ APMC ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ನಡೆದು 20 ದಿನಗಳು ಕಳೆದರೂ ಆರೋಪಿಗಳ ವಿರುದ್ಧ ಯಾವುದೇ …

Read More »

ಕೌಟುಂಬಿಕ ಕಲಹ ಅಣ್ಣನಿಂದ ತಮ್ಮನ ಹತ್ಯೆ

ಹುಬ್ಬಳ್ಳಿ: ಒಡಹುಟ್ಟಿದ ಅಣ್ಣನೇ ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಪವನ್ ಕಟವಾಟೆ (30) ಎಂದು ಗುರುತಿಸಲಾಗಿದೆ. ರಾಜು ಕೊಲೆಗೈದ ಆರೋಪಿ. ಪವನ್ ಮನೆ ಬಿಟ್ಟು ಹುಬ್ಬಳ್ಳಿಯ ವಿಜಯನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದ. ಹೀಗಿದ್ದರೂ ಮದ್ಯ ಸೇವಿಸಿ ಅಣ್ಣನ ಜೊತೆ ಜಗಳವಾಡುತ್ತಿದ್ದ ಎಂದು ತಿಳಿದುಬಂದಿದೆ. ಬುಧವಾರ ಪವನ್​ ಅಣ್ಣನ ಮನೆಗೆ ಬಂದು ಕ್ಯಾತೆ ತೆಗೆದಿದ್ದಾನೆ. ಇದರಿಂದ ಕೋಪಗೊಂಡ ರಾಜು, ತಡರಾತ್ರಿ …

Read More »

ಯುವಕನಿಂದ ಚಕ್ಕಡಿ ಎಳೆಯುತ್ತ ಉಳವಿ ಯಾತ್ರೆ

ಧಾರವಾಡ: ಚಕ್ಕಡಿಯ ನೊಗ ಹೆಗಲ ಮೇಲಿಟ್ಟುಕೊಂಡು ಚಕ್ಕಡಿಯನ್ನೇ ಎಳೆದುಕೊಂಡು ಮುಸ್ಲಿಂ ಸಮುದಾಯ ವ್ಯಕ್ತಿಯೊಬ್ಬರು ಉಳವಿಯತ್ತ ಪ್ರಯಾಣವನ್ನು ಗುರುವಾರ ಆರಂಭಿಸಿದ್ದು, ಇದು ಈಗ ಎಲ್ಲರ ಗಮನ ಸೆಳೆದಿದೆ. ಈ ಸಾಹಸಮಯ ಭಕ್ತಿಯ ಸಂಕಲ್ಪ ಕೈಗೊಂಡಿರುವುದು ಮಂಗಳಗಟ್ಟಿ ಗ್ರಾಮದ ಇಮಾಮ್‌ಸಾಬ್ ನದಾಫ್. ಗರಗದ ಕಲ್ಮಠದ ಶ್ರೀಗಳೊಂದಿಗೆ ಗರಗ ಮಡಿವಾಳೇಶ್ವರ ಮಠದಿಂದ ಉಳವಿ ಚೆನ್ನಬಸವೇಶ್ವರ ದೇವಸ್ಥಾನಕ್ಕೆ ಏಳನೇ ವರ್ಷದ ಪಾದಯಾತ್ರೆಯನ್ನು ಆರಂಭಿಸಿದ್ದು, ಈ ಪಾದಯಾತ್ರೆ ಮೂಲಕ ಇಮಾಮ್‌ಸಾಬ್ ಗಮನ ಸೆಳೆಯುವಂತೆ ಮಾಡಿರುವುದು ವಿಶೇಷ. ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ …

Read More »

ಹೆಸ್ಕಾಂನಲ್ಲಿ 51 ಕೋಟಿ ರೂ. ವಂಚನೆ: ಮಧ್ಯಂತರ ವರದಿ ಸಲ್ಲಿಕೆ; ಐವರು ಸಿಬ್ಬಂದಿ ಅಮಾನತು…

ಹುಬ್ಬಳ್ಳಿ: ಹೆಸ್ಕಾಂನ ಹುಬ್ಬಳ್ಳಿಯ ಉಗ್ರಾಣದಲ್ಲಿ ನಡೆದ 51 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸ್ಕಾಂನ ಲೆಕ್ಕಾಧಿಕಾರಿ ಸೇರಿದಂತೆ ಐವರನ್ನು ಅಮಾನತು ಮಾಡಲಾಗಿದೆ. ಲೆಕ್ಕಾಧಿಕಾರಿ ಬೆಂಜಮಿನ್ ಮಸ್ಕನರ್ಸ್, ಸಹಾಯಕ ಲೆಕ್ಕಾಧಿಕಾರಿ ಯು.ಎಸ್.ಉಳ್ಳಾಗಡ್ಡಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ವಿಶ್ವನಾಥ ಶಿರಹಟ್ಟಿಮಠ, ವಸಂತಕುಮಾರ ರಾಠೋಡ, ಅಂಜಿನಪ್ಪ ಬಿ, ಅಮಾನತುಗೊಂಡವರು. ಅವ್ಯವಹಾರದ ಕುರಿತು ತನಿಖೆ ನೆಡೆಸಲು ಐವರು ಅಧಿಕಾರಿಗಳ ತಂಡ ರಚಿಸಲಾಗಿತ್ತು. ತಂಡ ಮೂರು ವರ್ಷ ತನಿಖೆ ನಡೆಸಿ, ಮಧ್ಯಂತರ ವರದಿ ಸಲ್ಲಿಸಿದ್ದು, ಅದರನ್ವಯ ಹೆಸ್ಕಾಂ …

Read More »

‘ಟೆಂಡರ್ ಹಂತದ ಕೋಟ್ಯಂತರ ಕಾಮಗಾರಿ ಪ್ರಭಾವ ಬಳಸಿ ಸ್ಥಗಿತ’: ಶೆಟ್ಟರ್ ವಿರುದ್ದ ಟೆಂಗಿನಕಾಯಿ ಆರೋಪ

ಹುಬ್ಬಳ್ಳಿ: ಹು-ಧಾ ಸೆಂಟ್ರಲ್ ವಿಧಾನಸಭಾ ಮತ ಕ್ಷೇತ್ರದಲ್ಲಿ ಟೆಂಡರ್ ಹಂತದಲ್ಲಿರುವ ಕೋಟ್ಯಂತರ ರೂಪಾಯಿ ರಸ್ತೆ, ಸೇತುವೆ ಕಾಮಗಾರಿಯನ್ನು ಹಿಂದಿನ ಶಾಸಕರು ತಮ್ಮ ಪ್ರಭಾವ ಬಳಸಿ, ಕಾಮಗಾರಿಗಳನ್ನು ಸ್ಥಗಿತಗೊಳಿಸಿದ್ದು, ಅಭಿವೃದ್ಧಿ ಕಾಮಗಾರಿಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿ.ಪ ಸದಸ್ಯ ಜಗದೀಶ್ ಶೆಟ್ಟರ್ ವಿರುದ್ಧ ಶಾಸಕ ಮಹೇಶ ಟೆಂಗಿನಕಾಯಿ ಗಂಭೀರ ಆರೋಪ ಮಾಡಿದರು. 30 ಕೋಟಿ ರೂ ವೆಚ್ಚದ ಕಾಮಗಾರಿ ಸ್ಥಗಿತ: ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಹು-ಧಾ ಸೆಂಟ್ರಲ್ ವಿಧಾನಸಭಾ …

Read More »

ಧಾರವಾಡದಲ್ಲಿ ಕೊರೊನಾ ವರದಿಯಾಗಿಲ್ಲ, ಸಾರ್ವಜನಿಕರು ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಯಾವುದೇ ಸ್ವರೂಪದ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಸಾರ್ವಜನಿಕರು ಕೊರೊನಾ ಬಗ್ಗೆ ಗಾಬರಿಪಡದೇ ಆರೋಗ್ಯ ಸುರಕ್ಷತೆಗಾಗಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಕೋವಿಡ್ 19 ರ ಅಂಕಿಅಂಶಗಳು, ಕೇರಳದಲ್ಲಿನ ಕೋವಿಡ್-19 ಪ್ರಕರಣಗಳ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್-19 ರ ಉಪತಳಿ ಜೆಎನ್.1 (JN.1) …

Read More »

ರಾಜ್ಯದಲ್ಲಿ ಕೋವಿಡ್‌ ಹೈ ಅಲರ್ಟ್‌: ಕಿಮ್ಸ್​ ಕೈ ಸೇರದ ಸರ್ಕಾರದ ಮಾರ್ಗಸೂಚಿ

ಹುಬ್ಬಳ್ಳಿ: ಕೇರಳದಲ್ಲಿ ಕೋವಿಡ್​ ಉಪ ತಳಿ ಜೆಎನ್‌-1 ಪತ್ತೆಯಾಗಿದ್ದು, ರಾಜ್ಯದಲ್ಲಿಯೂ ಆತಂಕ ಆರಂಭವಾಗಿದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಕರ್ನಾಟಕದಲ್ಲಿ ಹೈಲರ್ಟ್ ಘೋಷಣೆ ಮಾಡಿದೆ. ಜತೆಗೆ, 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೊರೊನಾ ಲಕ್ಷಣ ಇರುವವರಿಗೂ ಮಾಸ್ಕ್‌ ಕಡ್ಡಾಯ ಮಾಡಲಾಗಿದೆ ಎಂದು ಕಿಮ್ಸ್ ಆಸ್ಪತ್ರೆಯ ಪ್ರಭಾರ ನಿರ್ದೇಶಕ ಡಾ. ಎಸ್.ಎಸ್.ಕಮ್ಮಾರ ಹೇಳಿದ್ದಾರೆ‌.‌ ಈಗಾಗಲೇ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ರಾಜ್ಯದಲ್ಲಿ ಕೊರೊನಾ …

Read More »