Breaking News
Home / ಹುಬ್ಬಳ್ಳಿ (page 51)

ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಮದುವೆಗೆ ಮುಂಚೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹುಬ್ಬಳ್ಳಿ: ಯುವತಿಯೊಬ್ಬಳು ಮದುವೆಗೆ ಮುಂಚೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಅಶೋಕನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಸಂತೋಷ ನಗರದಲ್ಲಿ ಘಟನೆ ನಡೆದಿದ್ದು, ಇಷ್ಟೆಲ್ಲಕ್ಕೂ ಭಾವಿ ಪತಿರಾಯನ(fiancé) ಕಿರುಕುಳವೇ (Torture) ಕಾರಣ ಎಂದು ಮೃತ ಯುವತಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾವಿ ಪತಿಯ ಕಿರುಕುಳದಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಎಂಗೇಜ್ಮೆಂಟ್ (Engagement) ಆದಾಗಿನಿಂದಲೂ ಯುವತಿಗೆ ಭಾವಿ ಪತಿ ಕಿರುಕುಳ ನೀಡುತ್ತಿದ್ದ ಎಂಬ …

Read More »

ಪುನೀತ್ ರಾಜಕುಮಾರ್ ನಿಧನದ ನಂತರ ನೂರಾರು ಜನರು ನೇತ್ರದಾನಕ್ಕೆ ನೋಂದಣಿ

ಹುಬ್ಬಳ್ಳಿ: ಪವರ್​​ ಸ್ಟಾರ್​​ ಪುನೀತ್ ರಾಜ್​ಕುಮಾರ್​​ (Power Star Puneeth Rajkumar) ಸಾವಿನ ನಂತರ ನೇತ್ರದಾನ (eye donation) ಮಾಡುವವರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದೆ. ಹುಬ್ಬಳ್ಳಿಯ ಎಂಎಂ ಜೋಶಿ ನೇತ್ರ ಚಿಕಿತ್ಸಾಲಯದಲ್ಲಿ (M M Joshi Eye Hospital) ಒಂದೇ ವಾರದಲ್ಲಿ 500 ಜನರಿಂದ ನೇತ್ರದಾನಕ್ಕೆ ನೊಂದಣಿಯಾಗಿದೆ. ನಿತ್ಯ ಕರೆ ಮಾಡಿ ನೂರಾರು ದಾನಿಗಳು ತಮ್ಮ ಹೆಸರು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಪುನೀತ್ ನಿಧನದ ನಂತರವೂ ಸಮಾಜದಲ್ಲಿ  ಜನರಿಗೆ ದಾರಿದೀಪವಾಗ್ತಿದ್ದಾರೆ. ಪವರ್ ಸ್ಟಾರ್ …

Read More »

ಡಿಮ್ಹಾನ್ಸ್‌ ಆಸ್ಪತ್ರೆಗೆ ಸೌಕರ್ಯ ಕಲ್ಪಿಸದ ಸರ್ಕಾರ: ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದ ಹೈಕೋರ್ಟ್

ಧಾರವಾಡ: ಧಾರವಾಡದ ಡಿಮ್ಹಾನ್ಸ್‌ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದೆ. ಧಾರವಾಡದ ಡಿಮ್ಹಾನ್ಸ್‌ ಆಸ್ಪತ್ರೆಗೆ ಸರ್ಕಾರ ಮೂಲಸೌಕರ್ಯ ಕಲ್ಪಿಸಿಲ್ಲ. ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರೂ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಗೈರು ಹಾಜರಾಗಿದ್ದಾರೆ. ಕ್ಯಾಬಿನೆಟ್ ಮೀಟಿಂಗ್‌ಗೆ ಹಾಜರಾಗಲು ತೆರಳಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ …

Read More »

ಪೆಟ್ರೋಲ್ ದರ ಇಳಿಕೆ ರಾಜ್ಯ ಸರಕಾರ ಬೊಕ್ಕಸಕ್ಕೆ ಸುಮಾರು 2100 ಕೋಟಿ ರೂ. ಕೊರತೆಯಾಗಲಿದೆ ; ಬೊಮ್ಮಾಯಿ

ಹುಬ್ಬಳ್ಳಿ: ಕೇಂದ್ರ ಸರಕಾರ ಮಾದರಿಯಲ್ಲಿ, ರಾಜ್ಯ ಸರಕಾರದಿಂದಲೂ ಪೆಟ್ರೋಲ್ ಹಾಗೂ ಡೀಸಲ್ ಮೇಲೆ 7 ರೂ. ತೆರಿಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುರುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ನಿರ್ಧಾರ ಪ್ರಕಟಿಸುತ್ತಿದ್ದಂತೆಯೇ ನಾವು ಸಹ ತೈಲ ದರ ಇಳಿಕೆಗೆ ಕ್ರಮ ಕೈಗೊಂಡಿದ್ದೇವೆ. ಈ ಕುರಿತು ಕೇಂದ್ರ ಗೃಹ ಹಾಗೂ ಹಣಕಾಸು ಸಚಿವರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ. ಎಲ್ಲ ರಾಜ್ಯಗಳು …

Read More »

ಹಾನಗಲ್ ನಲ್ಲಿ ಪಕ್ಷ ಸೋಲುತ್ತೆ ಎಂಬುದು ಬೊಮ್ಮಾಯಿಗೂ ಗೊತ್ತು, ನಿರಾಣಿಗೂ ಗೊತ್ತು; ಸುಳ್ಳು ಹೇಳುವುದರಲ್ಲಿ ಬಿಜೆಪಿಗರು ನಿಸ್ಸೀಮರು; ಸಿದ್ದರಾಮಯ್ಯ

ಹುಬ್ಬಳ್ಳಿ: ಹಾನಗಲ್, ಸಿಂದಗಿ ಉಪಚುನಾವಣಾ ಅಖಾಡ ರಂಗೇರಿದ್ದು, ಆಡಳಿತ ಪಕ್ಷ ಬಿಜೆಪಿ, ವಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳು ಎರಡೂ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ. ಬಿಜೆಪಿ ಸೋಲಲಿದೆ ಎಂಬುದು ಸಿಎಂ ಬೊಮ್ಮಾಯಿಗೂ ಗೊತ್ತು, ಸಚಿವ ನಿರಾಣಿಗೂ ಗೊತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಾನಗಲ್ ನಲ್ಲಿ ಬಿಜೆಪಿ ಸೋಲಲಿದೆ. ಹೀಗಾಗಿ ಹಣ …

Read More »

ಬೆಳಗ್ಗೆ ‌ಎದ್ದು ದೇವರಿಗೆ ಕೈ ಮುಗಿವ ಮೊದಲು ಗ್ಯಾಸ್ ಸಿಲಿಂಡರ್, ಬೈಕಿಗೆ‌ ಪೂಜೆ ಮಾಡಿ ಇನ್ನೊಂದು ಸ್ವಲ್ಪ ಹೆಚ್ಚು ಮೈಲೇಜ್ ಬರಲಿ‌ ಎನ್ನುವ ಪರಿಸ್ಥಿತಿ ಬಂದಿದೆ : ರಣದೀಪ್ ಸಿಂಗ್ ಸುರ್ಜೇವಾಲಾ

ಹಾವೇರಿ: ಬೆಳಗ್ಗೆ ‌ಎದ್ದು ದೇವರಿಗೆ ಕೈ ಮುಗಿವ ಮೊದಲು ಗ್ಯಾಸ್ ಸಿಲಿಂಡರ್, ಬೈಕಿಗೆ‌ ಪೂಜೆ ಮಾಡಿ ಇನ್ನೊಂದು ಸ್ವಲ್ಪ ಹೆಚ್ಚು ಮೈಲೇಜ್ ಬರಲಿ‌ ಎನ್ನುವ ಪರಿಸ್ಥಿತಿ ಬಂದಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ,ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದರು. ಹಾನಗಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ, ಬೊಮ್ಮಾಯಿ ಕಾರಣದಿಂದ ಬೆಲೆಯೇರಿಕೆಯಿಂದಾಗಿ ದೇಶದ, ರಾಜ್ಯದ ಯುವಜನತೆ ಇಂದು ತೊಂದರೆ ಅನುಭವಿಸುತ್ತಿದ್ದಾರೆ.ಮೋದಿ, ಮೆಹೆಂಗಾಯಿ ಎರಡೂ ದೇಶಕ್ಕೆ ಹಾನಿಕಾರಕವಾಗಿದೆ ಎಂದು …

Read More »

ವಿಷ ಪ್ರಾಶನವಾಗಿ ಹತ್ತು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಗೊಂಗಡಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಧಾರವಾಡ: ವಿಷ ಪ್ರಾಶನವಾಗಿ ಹತ್ತು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಗೊಂಗಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. ತನ್ವೀರ ಮೃತಪಟ್ಟ ಹತ್ತು ತಿಂಗಳ ಮಗು. ನಿನ್ನೆ ಏಕಾಏಕಿ ಅಸ್ವಸ್ಥಗೊಂಡಿದ್ದ ಮಗುವನ್ನು ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿತ್ತು. ಆದರೆ ಮಗುವಿನ ಮೃತದೇಹದಿಂದ ದುರ್ವಾಸನೆ ಬರಲು ಆರಂಭಿಸಿದ ಬಳಿಕ ವಿಷ ಹಾಕಿರೋ ಶಂಕೆ ವ್ಯಕ್ತವಾಗಿತ್ತು.     ವಿಷ ಹಾಕಿರೋ ಶಂಕೆ ವ್ಯಕ್ತವಾಗುತ್ತಿದಂತೆ ತಂದೆ ಮಹಮ್ಮದ‌ …

Read More »

ಟಿಕೆಟ್ ರಹಿತ ಪ್ರಯಾಣ – ನೈರುತ್ಯ ರೈಲ್ವೆ ವಲಯದಿಂದ 5.55 ಕೋಟಿ ದಂಡ ವಸೂಲಿ!

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿ 3 ತಿಂಗಳಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಂದ ಬರೋಬ್ಬರಿ 5.55 ಕೋಟಿ ದಂಡ ವಸೂಲಿ ಮಾಡಲಾಗಿದೆ. ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟು 1,16,521 ಜನ ಟಿಕೆಟ್ ರಹಿತ ಪ್ರಯಾಣಿಕರನ್ನು ಹಿಡಿಯಲಾಗಿದೆ. ಇವರಿಂದ 5.52 ಕೋಟಿ ದಂಡ ವಸೂಲಿ ಮಾಡಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2435 ಪ್ರಕರಣಗಳನ್ನು ದಾಖಲಿಸಿ 13.74 ಲಕ್ಷ ದಂಡ ವಸೂಲಿ ಮಾಡಲಾಗಿತ್ತು. ಟಿಕೆಟ್ ತಪಾಸಣಾ ಸಿಬ್ಬಂದಿ ಕಾರ್ಯ ನಿರ್ವಹಣೆ ಈ ಸಲ …

Read More »

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಹುಬ್ಬಳ್ಳಿ: ಪರ್ಯಾಯ ಆದಾಯ ಮೂಲವಾಗಿ ಆರಂಭಿಸಿರುವ ಸಾರಿಗೆ ಸಂಸ್ಥೆಯ “ನಮ್ಮ ಕಾರ್ಗೋ’ ಸೇವೆಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಟ್ರ್ರ್ಯಾಕಿಂಗ್‌ ವ್ಯವಸ್ಥೆ ಇರುವುದರಿಂದ ವಿಶ್ವಾಸಾರ್ಹತೆ ಮೂಡಿಸಿದೆ. ಪ್ರತಿ ತಿಂಗಳು ಆದಾಯದ ಪ್ರಮಾಣ ಹೆಚ್ಚುತ್ತಿದ್ದರೂ ಸದ್ಯ ಪ್ರಮುಖ ಸ್ಥಳಗಳಿಗೆ ಮಾತ್ರ ಈ ಸೌಲಭ್ಯವಿದೆ. ನಾಲ್ಕು ಸಂಸ್ಥೆಗಳ ಅತೀ ದೊಡ್ಡ ಸಾರಿಗೆ ಜಾಲಕ್ಕೆ ಹೋಲಿಸಿದರೆ ನಿರೀಕ್ಷಿತ ಆದಾಯವೇನಲ್ಲ. ಕೋವಿಡ್‌ ಲಾಕ್‌ಡೌನ್‌, ನೌಕರರ ಮುಷ್ಕರ, ಡೀಸೆಲ್‌ ದರ, ಬಿಡಿ ಭಾಗಗಳ ಏರಿಕೆ, ಸರ್ಕಾರಗಳಿಂದ ಬಾರದ ಬಾಕಿ …

Read More »

ನನಗೆ ರಾಜ್ಯ ರಾಜಕಾರಣವಷ್ಟೇ ಸಾಕು: ಸಿದ್ದರಾಮಯ್ಯ

ಹುಬ್ಬಳ್ಳಿ: ರಾಹುಲ್‌ ಗಾಂಧಿಯವರೇ ಎಐಸಿಸಿ ಅಧ್ಯಕ್ಷರಾಗಬೇಕು ಎಂದು ಹಿಂದೆ ಹಲವು ಬಾರಿ ಹೇಳಿದ್ದೇನೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ನನಗೆ ರಾಜ್ಯ ರಾಜಕಾರಣವಷ್ಟೇ ಸಾಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕೇಂದ್ರ ರಾಜಕಾರಣಕ್ಕೆ ಬರುವಂತೆ ನನ್ನನ್ನು ಯಾರೂ ಕರೆದಿಲ್ಲ. ಅದರಲ್ಲಿ ಆಸಕ್ತಿಯೂ ಇಲ್ಲ. ಇದರ ಬಗ್ಗೆ ಚರ್ಚೆಯೂ ಆಗಿಲ್ಲ. ನನಗೀಗ 74 ವರ್ಷ ವಯಸ್ಸು. ಇನ್ನು ಐದು …

Read More »