Breaking News

ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ “ಕಮಲ” ಪಡೆ ಎಚ್.ಡಿ.ಕುಮಾರಸ್ವಾಮಿ ಕುಟುಂಬದ ಪ್ರತಿಕೃತಿ ದಹಿಸಿದ್ದು ಏಕೆ?

ಹುಬ್ಬಳ್ಳಿ, ಫೆಬ್ರವರಿ, 20: ಎಚ್‌.ಡಿ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿಯವರ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ. ಹಾಗೂ ಪ್ರಲ್ಹಾದ್‌ ಜೋಶಿಯವರ ತೇಜೋವಧೆ ಮಾಡುವ ಹುನ್ನಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಧಾರವಾಡದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಪ್ರಲ್ಹಾದ್‌ ಜೋಶಿಯವರ ವಿರುದ್ಧ ಬಿಜೆಪಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ವಿನೂತನ ರೀತಿಯಲ್ಲಿ ಪ್ರತಿಭಟನೆ …

Read More »

ಧಾರವಾಡದಲ್ಲಿ ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ

ಧಾರವಾಡ: ‘ಶಾಸ್ತ್ರೀಯ ಭಾಷೆ ಮತ್ತು ಕಲೆಗೆ ಹೆಚ್ಚಿನ ಪ್ರೋತ್ಸಾಹ ಒದಗಿಸಲಾಗುವದು’ ಎಂದು ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘಾವಲ್ ಭರವಸೆ ನೀಡಿದರು. ಕೇಂದ್ರ ಲಲಿತಕಲಾ ಅಕಾಡೆಮಿಯ ಪ್ರಾದೇಶಿಕ ಕಚೇರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.   ‘ಸಾಂಸ್ಕೃತಿಕ ಊರು ಧಾರವಾಡವನ್ನು ಮುಂದೆ ಕಲೆ ಹಾಗೂ ಸಾಂಸ್ಕೃತಿಕ ರಾಜಧಾನಿಯನ್ನಾಗಿ ಅಭುವೃದ್ಧಿಪಡಿಸಲಾಗುವುದು. ಅದಕ್ಕೆ ಅಗತ್ಯವಿರುವ ಎಲ್ಲಾ ಅಕಾಡೆಮಿಗಳ ಕಚೇರಿಯನ್ನು ಧಾರವಾಡಕ್ಕೆ ನೀಡಲಾಗುವುದು. ಮುಂದೆ ಸಂಗೀತ, ನಾಟಕ ಆಕಡೆಮಿ …

Read More »

ಡಿ.ರೂಪಾ, ರೋಹಿಣಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂಗೆ ಸಲಹೆ: ಪ್ರಲ್ಹಾದ ಜೋಶಿ

ಧಾರವಾಡ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಆರೋಪ, ಪ್ರತ್ಯಾರೋಪದಂತ ಬೆಳವಣಿಗೆಗೆ ಕಡಿವಾಣ ಹಾಕುವುದು ಅಗತ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು. ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಸೋಮವಾರ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು.     ‘ಪರಸ್ಪರ ದೂರುಗಳಿದ್ದರೆ ಸಂಬಂಧಪಟ್ಟವರಿಗೆ ದೂರು ಸಲ್ಲಿಸಬೇಕಿತ್ತು. ಆದರೆ ಈ ರೀತಿ ಪತ್ರಿಕಾ ಹೇಳಿಕೆ ನೀಡುತ್ತಿರುವುದು …

Read More »

ಹರ್ಷೋದ್ಗಾರದಲ್ಲಿ ಸಿದ್ಧಾರೂಢ ರಥೋತ್ಸವ, ಲಕ್ಷಾಂತರ ಜನ ಸಾಕ್ಷಿ

ಹುಬ್ಬಳ್ಳಿ: ಎಲ್ಲಿ ನೋಡಿದರು ಶಿವ ಭಕ್ತರು (Shiva Devotees). ಹಣೆ ಮೇಲೆ ವಿಭೂತಿ. ಬಾಯಲ್ಲಿ ಶಿವ ಪಂಚಾಕ್ಷರಿ ಮಂತ್ರ ಜಪಿಸುತ್ತ ಆರಾಧ್ಯ ದೈವ ಗುರುದ್ವಯರ ರಥವನ್ನ ಎಳೆಯುವ ಸಂಭ್ರಮ ಹೇಳತೀರದು. ಸಾಕ್ಷಾತ್ ಕೈಲಾಸವೇ ಭುವಿಗಿಳಿದ ಅನುಭವ. ಇಷ್ಠಾರ್ಥ ಸಿದ್ಧಿಗಾಗಿ ತೇರಿಗೆ ಹಣ್ಣು, ಉತತ್ತಿ ಎಸೆದು ಸಿದ್ದಾರೂಡರ ರಥವನ್ನು (Siddharoodha Ratha) ಅದ್ಧೂರಿಯಾಗಿ ಭಾನುವಾರ ಎಳೆಯಲಾಯಿತು. ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ಮಠ ಟ್ರಸ್ಟ್ ಕಮಿಟಿ ವತಿಯಿಂದ ಶಿವರಾತ್ರಿ ಮಹೋತ್ಸವದ (Maha Shivaratri …

Read More »

ಜನರಿಂದ ಕಾಂಗ್ರೆಸ್‌ಗೆ ಶಾಶ್ವತ ಹೂ: ಸಿ.ಎಂ

ಹುಬ್ಬಳ್ಳಿ: ‘ಬಿಜೆಪಿ ಯೋಜನೆಗಳನ್ನು ಕಾಂಗ್ರೆಸ್‌ ನಕಲು ಮಾಡುತ್ತಿದೆ. ನಾನು ‘ಗೃಹಿಣಿ ಶಕ್ತಿ’ ಯೋಜನೆ ಜಾರಿಗೆ ತರುವ ಬಗ್ಗೆ ಪ್ರಸ್ತಾಪಿಸಿದ್ದೆ, ಅದನ್ನೇ ಇಟ್ಟುಕೊಂಡು ಅವರು ‘ಗೃಹಲಕ್ಷ್ಮಿ’ ಯೋಜನೆ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ಕಿವಿಯ ಮೇಲೆ ಜನ ಶಾಶ್ವತವಾಗಿ ಹೂ ಇಡಲಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಭ್ರಷ್ಟ ಬಿಜೆಪಿಗೆ ಪ್ರತ್ಯೇಕ ನರಕವನ್ನೇ ಸೃಷ್ಟಿಸಬೇಕು’ ಎಂಬ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ …

Read More »

ಹುಬ್ಬಳ್ಳಿ: ಆನೆ ದಂತ ಕಲಾಕೃತಿ ಮಾರಾಟ ಮಾಡುತ್ತಿದ್ದ 5 ದಂತ ಚೋರರ ಬಂಧನ

ಹುಬ್ಬಳ್ಳಿ: ಆನೆ ದಂತದಿಂದ ಮಾಡಿರುವ ಕಲಾಕೃತಿಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪಿಗಳನ್ನು ವಿಶೇಷ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಐವರು ದಂತ ಚೋರರನ್ನು ವಶಕ್ಕೆ ಪಡೆದಿದ್ದಾರೆ. ಎಡಿಜಿಪಿ ಸಿ.ಐ.ಡಿ ಬೆಂಗಳೂರು ಮತ್ತು ಪ್ರಭಾರ ಡಿ.ಐ.ಜಿ.ಪಿ ಸಿಐಡಿ ಅರಣ್ಯ ಘಟಕ ಬೆಂಗಳೂರು ಹಾಗೂ ಪೊಲೀಸ್ ಉಪಾಧೀಕ್ಷಕರು ಸಿಐಡಿ ಅರಣ್ಯ ಘಟಕ ಹುಬ್ಬಳ್ಳಿ ವಿಭಾಗರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಸಂಚಾರ ಅರಣ್ಯ ಇಲಾಖೆಯು ಐವರನ್ನು …

Read More »

ಬಿಜೆಪಿ ಮತ್ತೆ ಅಧಿಕಾರಕ್ಕೇರಿದರೆ ಸಿವಿಲ್ ವಾರ್ ಶುರು

ಹುಬ್ಬಳ್ಳಿ: ಬಿಜೆಪಿಯನ್ನು ಸೋಲಿಸುವುದೊಂದೇ ನಮ್ಮ ಗುರಿಯಾಗಬೇಕು. ಈ ಸಲ ಮತ್ತೆ ಅವರು ಅಧಿಕಾರಕ್ಕೆ ಬಂದರೆ ಸಿವಿಲ್ ವಾರ್ (ನಾಗರಿಕ ದಂಗೆ) ಶುರುವಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಗುರುವಾರ ಸ್ಥಳೀಯ ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್‌ಗೆ ಬರಮಾಡಿ ಕೊಂಡ ನಂತರ ಮಾತನಾಡಿದರು.   ನೀವು ಜೆಡಿಎಸ್ ಬಿಟ್ಟು ಬಂದಿದ್ದು ಒಳ್ಳೆಯದಾಯಿತು. ಟಿಕೆಟ್ ಯಾರಿಗೇ ಸಿಕ್ಕರೂ ಅವರನ್ನು ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸುವುದು ಮುಖ್ಯ ಎಂದು ಹೇಳಿದರು. ಹೊಡಿ, ಬಡಿ, …

Read More »

ಮಹದಾಯಿ, ಕಳಸಾ-ಬಂಡೂರಿ ಕಾಮಗಾರಿ ಆರಂಭಿಸದೆ ಬಿಜೆಪಿ ರೈತರಿಗೆ ಮೋಸ ಮಾಡಿದೆ: ಎಚ್.ಕೆ.ಪಾಟೀಲ

ಹುಬ್ಬಳ್ಳಿ: ಮಹದಾಯಿ, ಕಳಸಾ-ಬಂಡೂರಿಯಿಂದ ನೀರು ಗ್ರಾಮದಲ್ಲಿ ತಂದೇಬಿಟ್ಟವು ಎಂದು ವಿಜಯೋತ್ಸವ ಆಚರಿಸಿದ್ದ ಬಿಜೆಪಿ ನಾಯಕರು ಕಾಮಗಾರಿ ಆರಂಭಿಸದೆ ರೈತರಿಗೆ ಮೋಸ ಮಾಡಿದ್ದು, ಯೋಜನೆ ಬಗ್ಗೆ ರಾಜ್ಯ ಸರಕಾರ ಕೂಡಲೇ ಶ್ವೇತ ಪತ್ರ ಹೊರಡಿಸಬೇಕು ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ ಒತ್ತಾಯಿಸಿದರು.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಹ್ಲಾದ ಜೋಶಿ ಅವರುಗಳು ಸುಳ್ಳು ಹೇಳಿ ಉತ್ತರ ಕರ್ನಾಟಕದ ರೈತರು, ಜನರಿಗೆ ಮೋಸ ಮಾಡಿದ್ದಾರೆ …

Read More »

ಮಡಿವಾಳೇಶ್ವರ ಕಲ್ಮಠ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ

ಧಾರವಾಡ: ತಾಲ್ಲೂಕಿನ ಐತಿ ಹಾಸಿಕ ಗರಗ ಮಡಿವಾಳೇಶ್ವರ ಕಲ್ಮಠದ ಪೀಠಾ ಧಿಪತಿ ಚನ್ನಬಸವ ಸ್ವಾಮೀಜಿ (88) ಅವರು ಭಾನುವಾರ ಲಿಂಗೈಕ್ಯರಾದರು. ಇವರು ವಯೋಸಹಜ ಕಾಯಿಲೆ ಬಳಲುತ್ತಿದ್ದರು. ಹಲವು ವರ್ಷಗಳಿಂದ ಕಲ್ಮಠದ ಜವಾಬ್ದಾರಿ ಹೊತ್ತಿದ್ದ ಸ್ವಾಮೀಜಿ, ಮಠದ ಏಳಿಗೆಗಾಗಿ ಶ್ರಮಿಸಿದ್ದರು. ಅನ್ನದಾನ, ವಿದ್ಯಾದಾನಕ್ಕೆ ಹೆಚ್ಚಿನ ಒತ್ತು ನೀಡಿದ್ದ ಅವರು, ಸಮಾಜ ಸೇವೆ ಯಲ್ಲಿಯೂ ತೊಡಗಿಸಿಕೊಂಡಿದ್ದರು. ಮಠದ ಆವರಣದಲ್ಲಿ ಮಧ್ಯಾಹ್ನ 12.30ರಿಂದ ಸೋಮವಾರ ಬೆಳಿಗ್ಗೆ 7.30ರವರೆಗೆ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಭಕ್ತರಿಗೆ ಅವಕಾಶ …

Read More »

ಲಿಂಗಾಯತ ‘ಸ್ವತಂತ್ರ ಧರ್ಮ’ ಬೆಂಬಲಿಸುವ ಪಕ್ಷಕ್ಕೆ ಮತ: ಚನ್ನಬಸವಾನಂದ ಸ್ವಾಮೀಜಿ

ಹುಬ್ಬಳ್ಳಿ: ‘ಲಿಂಗಾಯತ ಸ್ವತಂತ್ರ ಧರ್ಮವಾಗಲು ಕೇಂದ್ರಕ್ಕೆ ಶಿಫಾರಸು ಸಲ್ಲಿಸುವುದಾಗಿ ಪ್ರಣಾಳಿಕೆಯಲ್ಲಿ ದಾಖಲಿಸುವ ಪಕ್ಷಕ್ಕೆ ಮತ ಹಾಕುತ್ತೇವೆ’ ಎಂದು ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ಹೇಳಿದರು.   ಶನಿವಾರ ಪತ್ರಿಕಾಗೋಷ್ಠಿಯಲ್ಲಿ, ‘ವೀರಶೈವ ಲಿಂಗಾಯತರು ಮಹಾರಾಷ್ಟ್ರದಲ್ಲಿ ಹೋಗಿ ತಾವು ‘ಹಿಂದೂಗಳು’ ಎಂದು ಹೇಳಿಕೊಳ್ಳುತ್ತಾರೆ. ಆದರೆ ನಾವು ಹಿಂದೂಗಳಲ್ಲ’ ಹಿಂದೂ ಎಂಬುದು ಧರ್ಮ ಅಲ್ಲ, ಜೀವನಶೈಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಪ್ರಧಾನಿ ಮೋದಿಯವರೂ ಹೇಳಿದ್ದಾರೆ. 500 ವರ್ಷಗಳ …

Read More »