Breaking News

ಹುಬ್ಬಳ್ಳಿ

ಸಮಗ್ರ ಲಿಂಗಾಯತ ಸಮಾಜ ಒಂದಾಗಲಿ: C.M. ಬೊಮ್ಮಾಯಿ

ಧಾರವಾಡ: ಸಮಗ್ರ ವೀರಶೈವ ಲಿಂಗಾಯತ ಸಮುದಾಯ ಒಳ ಪಂಗಡಗಳನ್ನು ಮರೆತು ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಲಹೆ ನೀಡಿದರು. ಶ್ರಿ ಲಿಂಗರಾಜ್ ವಿವಿದುದ್ದೇಶ ಸಂಸ್ಥೆ ವತಿಯಿಂದ ನಡೆದ ಶಿರಸಂಗಿ ಲಿಂಗರಾಜರ 162 ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.   ಲಿಂಗರಾಜ್ ಸರದೇಸಾಯಿ ಅವರ ಆದರ್ಶಗಳು ಲಿಂಗಾಯತ ಸಮಗ್ರ ಸಮುದಾಯಕ್ಕೆ ಮಾದರಿಯಾಗಬೇಕಿದೆ. ಲಿಂಗಾಯತ ಸಮುದಾಯದ ಶ್ರೇಷ್ಠರನ್ನು ಒಂದು ಪಂಗಡ ಅಥವಾ ಒಳ ಪಂಗಡಕ್ಕೆ ಸೀಮಿತಗೊಳಿಸುವುದು …

Read More »

ಸ್ಯಾಂಟ್ರೋ ರವಿ ವಿಚಾರಕ್ಕೆ ಹೆಚ್ಚು ಮಹತ್ವ ಕೊಡುವುದು ಬೇಡ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸ್ಯಾಂಟ್ರೋ ರವಿ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದ್ದು, ಆತನ ಎಲ್ಲಾ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅವನಿಗೆ 20 ವರ್ಷದ ಇತಿಹಾಸವಿದೆ. ಈ ಹಿಂದೆ ಆತನೊಂದಿಗೆ ಹಲವರು ಸಂಪರ್ಕದಲ್ಲಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಇಲ್ಲಿನ ಆದರ್ಶ ನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ವಿಚಾರದಲ್ಲಿ ಹೆಚ್ಚು ಮಹತ್ವ ಕೊಡುವುದು ಬೇಡ. ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ ಎಂದರು. ಸ್ಯಾಂಟ್ರೋ ರವಿ …

Read More »

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ ಘೋಷಣೆ

ಧಾರವಾಡ: ಬೆಂಗಳೂರಿನಲ್ಲಿ ಮೆಟ್ರೊ ಮೇಲ್ಸೆತುವೆ ಪಿಲ್ಲರ್ ಕುಸಿತದಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೃತಪಟ್ಟವರು ಧಾರವಾಡ ಮತ್ತು ಗದಗ ಮೂಲದವರೆಂದು ತಿಳಿದಿದೆ. ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಈ ದುರ್ಘಟನೆ ನಡೆದಿದೆ ಎಂದು ಬೇಸರ ವ್ಯಕ್ತ ಪಡಿಸಿದರು. ಮೃತರ ಕುಟುಂಬಕ್ಕೆ ಮೆಟ್ರೋ ಸಂಸ್ಥೆಯೂ ಸಹ ಪರಿಹಾರ ನೀಡಲಿದೆ. ಜೊತೆಗೆ …

Read More »

ಅಂತ್ಯೋದಯ, BPL’ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ : ಪಡಿತರ ಫಲಾನುಭವಿಗಳಿಗೆ ಜನೆವರಿ-2023ನೇ ಮಾಹೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯ ವಿತರಣೆಯನ್ನು ಮಾಡಲಾಗುತ್ತಿದೆ. ಎನ್‍ಎಫ್‍ಎಸ್‍ಎ ಅಡಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 15 ಕೆಜಿ ಅಕ್ಕಿ ಮತ್ತು ಬಿಪಿಎಲ್ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 5 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ.   ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಗೆ ಅನುಗುಣವಾಗಿ ಹಂಚಿಕೆಯಾಗಿರುವ ಆಹಾರಧಾನ್ಯದ ಪ್ರಮಾಣವನ್ನು ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವುದು. …

Read More »

ಪಂಚಮಸಾಲಿ ಮೀಸಲಾತಿ : ಸಿಎಂ ಬೊಮ್ಮಾಯಿ ಶಿಗ್ಗಾವಿಯ ನಿವಾಸದ ಮುಂದೆ ಪ್ರತಿಭಟನೆ

ಹುಬ್ಬಳ್ಳಿ: ಪಂಚಮಸಾಲಿ ಸಮಾಜಕ್ಕೆ ಘೋಷಣೆ ಮಾಡಿರುವ 2ಡಿ ಮೀಸಲಾತಿಯಲ್ಲಿ ಸಾಕಷ್ಟು ಗೊಂಲದಗಳಿದ್ದು, ಕಾನೂನಾತ್ಮಕವಾಗಿ ಇದು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಸರಕಾರದ ಗೆಜೆಟ್ ಅಧಿಸೂಚನೆ ಅಥವಾ ಸ್ಪಷ್ಟ ಆದೇಶವಿಲ್ಲದ ಕಾರಣ ಜ.13 ರಂದು ಶಿಗ್ಗಾವಿಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.   ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಡಿ.29 ಅಂತಿಮ ಹೋರಾಟವಾಗಿತ್ತು. 2ಎ …

Read More »

ಯುವಜನೋತ್ಸವ ಕಾರ್ಯಕ್ರಮಕ್ಕೆ ಮದುವಣಗಿತ್ತಿಯಂತೆ ಸಿದ್ಧವಾದ ವಾಣಿಜ್ಯ ನಗರಿ ಹುಬ್ಬಳ್ಳಿ

ಹುಬ್ಬಳ್ಳಿ, ಜನವರಿ, 08: ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯಲ್ಲಿ ಜನವರಿ 12ರಂದು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಹೀಗಾಗಿ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.   ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಈ …

Read More »

ಕಲಾವಿದನ ಕುಂಚದಲ್ಲಿಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ.

ಧಾರವಾಡದ ಚಿತ್ರಕಲಾವಿದ ಮಂಜುನಾಥ ಹಿರೇಮಠ ಎಂಬುವವರಿಂದ ಅರಳಿದ ಸಿದ್ದೇಶ್ವರ ಶ್ರೀಗಳ ಮೂರ್ತಿ ಕಲಾವಿದನ ಕುಂಚದಲ್ಲಿ ಅರಳಿದ ಎರಡು ಅಡಿ ಇರೋ ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ. ಶ್ರೀಗಳ ನಿಧನಕ್ಕೆ ವಿಶೇಷ ಸಂತಾಪ ಸೂಚಿಸಿದ ಕಲಾವಿದ. ಬಳಿಕ 11ಗಂಟೆಗೆ ಕೆಲಗೇರಿ ಗ್ರಾಮಸ್ಥರಿಂದ ಸಿದ್ದೇಶ್ವರ ಶ್ರೀಗಳ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ.

Read More »

ಮಹದಾಯಿ ಡಿಪಿಆರ್‌ಗೆ ತರಾತುರಿಯಲ್ಲಿ ಅನುಮೋದನೆ: ಸಿದ್ದರಾಮಯ್ಯ

ಹುಬ್ಬಳ್ಳಿ: ‘ಮಹದಾಯಿ ಕುರಿತು ಗೆಜೆಟ್‌ ಹೊರಡಿಸಿ 2 ವರ್ಷ 10 ತಿಂಗಳು ಕಳೆದಿದ್ದರೂ ಸುಮ್ಮನೆ ಕುಳಿತಿದ್ದ ಬಿಜೆಪಿ, ನಾವು ಇವತ್ತು ಇಲ್ಲಿ ಹೋರಾಟ ಆರಂಭಿಸಲಿದ್ದೇವೆ ಎನ್ನುವುದು ಗೊತ್ತಾಗುತ್ತಿದ್ದಂತೆ ತರಾತುರಿಯಿಂದ ಡಿಪಿಆರ್‌ಗೆ (ವಿಸ್ತೃತ ಯೋಜನಾ ವರದಿ) ಅನುಮೋದನೆ ನೀಡಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.   ಇಲ್ಲಿನ ನೆಹರೂ ಮೈದಾನದಲ್ಲಿ ಸೋಮವಾರ ಕಾಂಗ್ರೆಸ್ ಆಯೋಜಿಸಿದ್ದ ಮಹದಾಯಿ: ಜಲ- ಜನ ಆಂದೋಲನ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ‘ಅಧಿಕಾರಕ್ಕೆ ಬಂದರೆ …

Read More »

ದುರುದ್ದೇಶದಿಂದ ದರ್ಗಾ ತೆರವು: ಸಿದ್ದರಾಮಯ್ಯ ಆರೋಪ

ಹುಬ್ಬಳ್ಳಿ: ‘ಮುಸ್ಲಿಮ್ ಸಮುದಾಯಕ್ಕೆ ದೌರ್ಜನ್ಯ ಎಸಗಬೇಕು ಎನ್ನುವ ದುರುದ್ದೇಶದಿಂದ ಬೈರಿದೇವರಕೊಪ್ಪದ ದರ್ಗಾ ಮತ್ತು ಮಸೀದಿಯನ್ನು ತೆರವು ಮಾಡಲಾಗಿದೆ’ ಎಂದು‌ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿ ಏರ್ಪಡಿಸಿರುವ ಮಹದಾಯಿ ಜನಾಂದೋಲನ‌ ಸಮಾವೇಶದಲ್ಲಿ ಪಾಲ್ಗೊಳ್ಳುವ ಪೂರ್ವ, ನಗರದ ಬೈರಿದೇವರಕೊಪ್ಪದಲ್ಲಿ ಇತ್ತೀಚೆಗೆ ದರ್ಗಾ ತೆರವು ಮಾಡಿರುವ ಸ್ಥಳಕ್ಕೆ ಭೇಟಿ ನೀಡಿ, ಮಾಧ್ಯಮದವರೊಂದಿಗೆ ಮಾತನಾಡಿದರು. ‘ಗುಣಮಟ್ಟದ ಸಾಮಗ್ರಿಗಳನ್ನು ಬಳಸಿ ಮಸೀದಿ, ದರ್ಗಾ ನಿರ್ಮಿಸಲಾಗಿತ್ತು. ಅವುಗಳ ತೆರವು ಮಾಡಲು ಅದರ ಆಡಳಿತ ಮಂಡಳಿಗೆ ಸರ್ಕಾರ …

Read More »

ಹುಬ್ಬಳ್ಳಿ: ಕಾಂಗ್ರೆಸ್ ಸಮಾವೇಶಕ್ಕೆ ಬಂದ ವ್ಯಕ್ತಿ ಮೇಲೆ ಬಸ್ ಹರಿದು ಸಾವು

ಹುಬ್ಬಳ್ಳಿ: ನಗರದ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ವ್ಯಕ್ತಿ ಮೇಲೆ ಬಸ್ ಹಾಯ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ, ಜೆಸಿ ನಗರದ ಜೋಶಿ ಪೆಟ್ರೋಲ್ ಬಂಕ್ ಎದುರು ಸೋಮವಾರ ನಡೆದಿದೆ.   ಮೃತಪಟ್ಟವರು ಅಣ್ಣಿಗೇರಿ ನಿವಾಸಿ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್’ಗೆ ದಾಖಲಿಸಲಾಗಿದೆ. ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ತೆರಳುತ್ತಿದ್ದಾಗ ಗದುಗಿನಿಂದ ಗದಗ-ಹುಬ್ಬಳ್ಳಿ ಬಸ್ ಅವರ ಮೇಲೆ ಹಾಯ್ದಿದೆ. ಬಸ್ ಎಡ ಭಾಗದ ಟೈರ್ …

Read More »