ಹುಬ್ಬಳ್ಳಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮದಲ್ಲಿ ವರದಿಗಳಾಗಿದ್ದು, ಈ ಕುರಿತು ಮಾಹಿತಿ ಇಲ್ಲ. ಆದರೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಕ್ತ ಕ್ರಮ ತೆಗೆದುಕೊಳ್ಳತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳುದರು. ನಗರದ ರೈಲ್ವೆ ನಿಲ್ದಾಣದ ಬಳಿಯಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿಯೂ ಸಹ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳು …
Read More »ಹುಬ್ಬಳ್ಳಿ-ಧಾರವಾಡದಲ್ಲಿ ಯುವಜನೋತ್ಸವ ರಂಗು; ಪ್ರಧಾನಿ ಆಗಮನಕ್ಕೆ ವಾಣಿಜ್ಯನಗರಿ ಪುಳಕ
ಹುಬ್ಬಳ್ಳಿ: ಭಾರತೀಯ ಸಂಸ್ಕೃತಿ, ಪರಂಪರೆ, ಆಚರಣೆ, ಕಲೆ ಹಾಗೂ ಸಾಂಸ್ಕೃತಿಕ ಸಿರಿವಂತಿಕೆ ಲೋಕದ ಅನಾವರಣ, ವಿವಿಧತೆಯಲ್ಲಿ ಏಕತೆ ಭಾವದ ಯುವಶಕ್ತಿ ಸಂಗಮ, ದೇಶದ ಸಾಂಸ್ಕೃತಿಕ ರಾಯಭಾರಿಗಳಂತಿರುವ ಯುವ ಪ್ರತಿಭೆಗಳ ದಿಗ್ದರ್ಶನಕ್ಕೆ ವೇದಿಕೆಯಾಗಲು ಹಾಗೂ ಪ್ರೀತಿಯ ಆತಿಥ್ಯ ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರ ಸಜ್ಜಾಗಿದೆ. ರಾಷ್ಟ್ರೀಯ ಯುವಜನೋತ್ಸವ ಸಂಭ್ರಮ ಒಂದು ಕಡೆಯಾದರೆ, ಉತ್ಸವಕ್ಕೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವಿಕೆ ಮಹಾನಗರವನ್ನು ಪುಳಕಿತಗೊಳ್ಳುವಂತೆ ಮಾಡಿದೆ. ದೇಶದ ಯುವ ಸಾಂಸ್ಕೃತಿಕ ಜಗತ್ತು ಹುಬ್ಬಳ್ಳಿ-ಧಾರವಾಡದಲ್ಲಿ …
Read More »ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ಬಜೆಟ್‌ನಲ್ಲೇ ಘೋಷಿಸಲಾಗುವುದು.
ಹುಬ್ಬಳ್ಳಿ: ಫೆ. 17ರಂದು ರಾಜ್ಯದ 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತೇನೆ. ಉತ್ತರ ಕರ್ನಾಟಕಕ್ಕೆ ಕೊಡುಗೆ ಏನೆಂಬುದನ್ನು ಕಾಯ್ದು ನೋಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರೊಂದಿಗೆ ಮಾತನಾಡಿ, ರಾಜ್ಯ ಆಯವ್ಯಯ ಮಂಡನೆಗೆ ಸಿದ್ಧತೆ ನಡೆದಿದೆ. ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆಯನ್ನು ಬಜೆಟ್‌ನಲ್ಲೇ ಘೋಷಿಸಲಾಗುವುದು. ಜ.16ರಂದು ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದೇನೆ. ಈ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವುದಿಲ್ಲ ಎಂದರು
Read More »ಫೆ.17 ರಂದು ರಾಜ್ಯ ಬಜೆಟ್ ಮಂಡನೆ : ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ
ಹುಬ್ಬಳ್ಳಿ : ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮುಂದಿನ ತಿಂಗಳ 3 ನೇ ವಾರ ಬಜೆಟ್ ಮಂಡಿಸಲಾಗುವುದು. ಈಗಾಗಲೇ ಬಜೆಟ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ. ಏಪ್ರಿಲ್,ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬಾರಿ …
Read More »ಫೆ. 17ರಂದು ರಾಜ್ಯ ಬಜೆಟ್: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಫೆ. 17ರಂದು ರಾಜ್ಯದ 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತೇನೆ. ಉತ್ತರ ಕರ್ನಾಟಕಕ್ಕೆ ಕೊಡುಗೆ ಏನೆಂಬುದನ್ನು ಕಾಯ್ದು ನೋಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರೊಂದಿಗೆ ಮಾತನಾಡಿ, ರಾಜ್ಯ ಆಯವ್ಯಯ ಮಂಡನೆಗೆ ಸಿದ್ಧತೆ ನಡೆದಿದೆ. ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆಯನ್ನು ಬಜೆಟ್‌ನಲ್ಲೇ ಘೋಷಿಸಲಾಗುವುದು. ಜ.16ರಂದು ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದೇನೆ. ಈ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವುದಿಲ್ಲ ಎಂದರು.
Read More »ಸಮಗ್ರ ಲಿಂಗಾಯತ ಸಮಾಜ ಒಂದಾಗಲಿ: C.M. ಬೊಮ್ಮಾಯಿ
ಧಾರವಾಡ: ಸಮಗ್ರ ವೀರಶೈವ ಲಿಂಗಾಯತ ಸಮುದಾಯ ಒಳ ಪಂಗಡಗಳನ್ನು ಮರೆತು ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಲಹೆ ನೀಡಿದರು. ಶ್ರಿ ಲಿಂಗರಾಜ್ ವಿವಿದುದ್ದೇಶ ಸಂಸ್ಥೆ ವತಿಯಿಂದ ನಡೆದ ಶಿರಸಂಗಿ ಲಿಂಗರಾಜರ 162 ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಲಿಂಗರಾಜ್ ಸರದೇಸಾಯಿ ಅವರ ಆದರ್ಶಗಳು ಲಿಂಗಾಯತ ಸಮಗ್ರ ಸಮುದಾಯಕ್ಕೆ ಮಾದರಿಯಾಗಬೇಕಿದೆ. ಲಿಂಗಾಯತ ಸಮುದಾಯದ ಶ್ರೇಷ್ಠರನ್ನು ಒಂದು ಪಂಗಡ ಅಥವಾ ಒಳ ಪಂಗಡಕ್ಕೆ ಸೀಮಿತಗೊಳಿಸುವುದು …
Read More »ಸ್ಯಾಂಟ್ರೋ ರವಿ ವಿಚಾರಕ್ಕೆ ಹೆಚ್ಚು ಮಹತ್ವ ಕೊಡುವುದು ಬೇಡ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಸ್ಯಾಂಟ್ರೋ ರವಿ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದ್ದು, ಆತನ ಎಲ್ಲಾ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅವನಿಗೆ 20 ವರ್ಷದ ಇತಿಹಾಸವಿದೆ. ಈ ಹಿಂದೆ ಆತನೊಂದಿಗೆ ಹಲವರು ಸಂಪರ್ಕದಲ್ಲಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಆದರ್ಶ ನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ವಿಚಾರದಲ್ಲಿ ಹೆಚ್ಚು ಮಹತ್ವ ಕೊಡುವುದು ಬೇಡ. ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ ಎಂದರು. ಸ್ಯಾಂಟ್ರೋ ರವಿ …
Read More »ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ ಘೋಷಣೆ
ಧಾರವಾಡ: ಬೆಂಗಳೂರಿನಲ್ಲಿ ಮೆಟ್ರೊ ಮೇಲ್ಸೆತುವೆ ಪಿಲ್ಲರ್ ಕುಸಿತದಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೃತಪಟ್ಟವರು ಧಾರವಾಡ ಮತ್ತು ಗದಗ ಮೂಲದವರೆಂದು ತಿಳಿದಿದೆ. ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಈ ದುರ್ಘಟನೆ ನಡೆದಿದೆ ಎಂದು ಬೇಸರ ವ್ಯಕ್ತ ಪಡಿಸಿದರು. ಮೃತರ ಕುಟುಂಬಕ್ಕೆ ಮೆಟ್ರೋ ಸಂಸ್ಥೆಯೂ ಸಹ ಪರಿಹಾರ ನೀಡಲಿದೆ. ಜೊತೆಗೆ …
Read More »ಅಂತ್ಯೋದಯ, BPL’ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಧಾರವಾಡ : ಪಡಿತರ ಫಲಾನುಭವಿಗಳಿಗೆ ಜನೆವರಿ-2023ನೇ ಮಾಹೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯ ವಿತರಣೆಯನ್ನು ಮಾಡಲಾಗುತ್ತಿದೆ. ಎನ್‍ಎಫ್‍ಎಸ್‍ಎ ಅಡಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 15 ಕೆಜಿ ಅಕ್ಕಿ ಮತ್ತು ಬಿಪಿಎಲ್ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 5 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಗೆ ಅನುಗುಣವಾಗಿ ಹಂಚಿಕೆಯಾಗಿರುವ ಆಹಾರಧಾನ್ಯದ ಪ್ರಮಾಣವನ್ನು ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವುದು. …
Read More »ಪಂಚಮಸಾಲಿ ಮೀಸಲಾತಿ : ಸಿಎಂ ಬೊಮ್ಮಾಯಿ ಶಿಗ್ಗಾವಿಯ ನಿವಾಸದ ಮುಂದೆ ಪ್ರತಿಭಟನೆ
ಹುಬ್ಬಳ್ಳಿ: ಪಂಚಮಸಾಲಿ ಸಮಾಜಕ್ಕೆ ಘೋಷಣೆ ಮಾಡಿರುವ 2ಡಿ ಮೀಸಲಾತಿಯಲ್ಲಿ ಸಾಕಷ್ಟು ಗೊಂಲದಗಳಿದ್ದು, ಕಾನೂನಾತ್ಮಕವಾಗಿ ಇದು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಸರಕಾರದ ಗೆಜೆಟ್ ಅಧಿಸೂಚನೆ ಅಥವಾ ಸ್ಪಷ್ಟ ಆದೇಶವಿಲ್ಲದ ಕಾರಣ ಜ.13 ರಂದು ಶಿಗ್ಗಾವಿಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಡಿ.29 ಅಂತಿಮ ಹೋರಾಟವಾಗಿತ್ತು. 2ಎ …
Read More »
Laxmi News 24×7