ಹುಬ್ಬಳ್ಳಿ: ವಿಆರ್ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ ಸಿನಿಮಾ ನಾಳೆ (ಡಿ. 9) ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಈ ಹಿನ್ನೆಲೆ ಮುನ್ನಾ ದಿನವಾದ ಗುರುವಾರ ಹುಬ್ಬಳ್ಳಿಯಲ್ಲಿ ಅಭಿಮಾನಿಗಳು ಬೈಕ್ ರ‍್ಯಾಲಿ ನಡೆಸಿದರು. ಬೈಕ್ ರ್ಯಾಲಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಗೋವಿಂದ ಜೋಶಿ ಚಾಲನೆ ನೀಡಿದರು. ಕನ್ನಡ ಧ್ವಜ ಹಿಡಿದು ರ‍್ಯಾಲಿಗೆ ಚಾಲನೆ ನೀಡುತ್ತಿದ್ದಂತೆ ವಿಜಯಾನಂದ ಸಿನಿಮಾದ ಪೋಸ್ಟರ್ ಹಿಡಿದು ಅಭಿಮಾನಿಗಳು …
Read More »ಹುಬ್ಬಳ್ಳಿ – ಬೆಂಗಳೂರು ನಡುವೆ ಓಡಲಿದೆ ವಂದೇ ಭಾರತ ರೈಲು
ಹುಬ್ಬಳ್ಳಿ, ಡಿಸೆಂಬರ್, 07: ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನೈಋತ್ಯ ರೈಲ್ವೆಯು ಈಗ ಮತ್ತೊಂದು ಸಾರ್ವಜನಿಕ ಸೇವೆಯೊಂದಿಗೆ ಗುರುತಿಸಿಕೊಳ್ಳಲಿದೆ. ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹುಬ್ಬಳ್ಳಿ – ಬೆಂಗಳೂರು ಮಧ್ಯೆ 2023ರ ಮಾರ್ಚ್‌ನಲ್ಲಿ ಸಂಚಾರ ಪ್ರಾರಂಭಿಸುವ ಸಾಧ್ಯತೆ ಇದ್ದು, ನೈಋತ್ಯ ರೈಲ್ವೆ ವಲಯದಿಂದ ಕೆಲಸ ಭರದಿಂದ ಸಾಗಿದೆ. ಈಗಾಗಲೇ ಚೆನ್ನೈ-ಬೆಂಗಳೂರು ಹಾಗೂ ಮೈಸೂರು ಮಧ್ಯೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ …
Read More »ಧಾರವಾಡ | ಇನ್ನೂ ಬಾರದ ಕರ್ನಾಟಕ ವಿವಿಯ ಎರಡು ಸೆಮಿಸ್ಟರ್‌ಗಳ ಫಲಿತಾಂಶ
ಧಾರವಾಡ: ನೂತನ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸಿದ ಕರ್ನಾಟಕ ವಿಶ್ವವಿದ್ಯಾಲಯವು ಎರಡು ಸೆಮಿಸ್ಟರ್‌ಗಳ ಫಲಿತಾಂಶವನ್ನು ಪ್ರಕಟಿಸಲು ಏದುಸಿರು ಬಿಡುತ್ತಿದೆ. ಕವಿವಿ ಎನ್‌ಇಪಿಯನ್ನು ಅಳವಡಿಸಿಕೊಂಡ ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂದು ಅಧಿಕಾರಿಗಳು ಹೇಳಿಕೊಂಡಿದ್ದರು. ಎನ್‌ಇಪಿ ಅಡಿ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಇದೀಗ ಮೂರನೇ ಸೆಮಿಸ್ಟರ್ ಪೂರ್ಣಗೊಳಿಸುವ ಹಂತದಲ್ಲಿದ್ದಾರೆ. ಆದರೆ, ಈವರೆಗೂ ಮೊದಲ ಹಾಗೂ ಎರಡನೇ ಸೆಮಿಸ್ಟರ್ ಫಲಿತಾಂಶಗಳು ಬಾರದೆ, ಅವರೆಲ್ಲರೂ ಗೊಂದಲದಲ್ಲಿದ್ದಾರೆ. ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ವ್ಯಾಪ್ತಿ …
Read More »ಎಚ್‌ಡಿಕೆ ಕೇಂದ್ರಕ್ಕೆ ಹೋದರೆ ನಾನೇ ಸಿಎಂ ಅಭ್ಯರ್ಥಿ: ಇಬ್ರಾಹಿಂ
ಹುಬ್ಬಳ್ಳಿ: ನನಗೂ ಸಿಎಂ ಆಗಬೇಕು ಎನ್ನುವ ಆಸೆಯಿದೆ. ಆದರೆ, ಮುಂದಿನ ಸಿಎಂ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಎಂದು ನಿರ್ಧಾರವಾಗಿದೆ. ಒಂದು ವೇಳೆ ಎಚ್‌ಡಿಕೆ ಕೇಂದ್ರಕ್ಕೆ ಹೋದರೆ ನಾನೇ ಸಿಎಂ ಅಭ್ಯರ್ಥಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ಕೇಶವ ಕೃಪಾ ಹಾಗೂ ಬಸವ ಕೃಪಾ ನಡುವೆ ಸಿಕ್ಕು ಒದ್ದಾಡುತ್ತಿದ್ದಾರೆ. ಅವರು ಕೂಡ ನಮ್ಮ ಪಕ್ಷದಿಂದ ಹೋದವರು. ಮರಳಿ ಬಂದರೆ ಸ್ವಾಗತಿಸುತ್ತೇವೆ. ತಂದೆ ಮುತ್ಸದ್ಧಿತನ ಮಗ …
Read More »ಧಾರವಾಡದ ಗಿಟಾರ್ ಸಂಗೀತ ಸುಧೆ: ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾದಲ್ಲಿ ದಾಖಲು
ಧಾರವಾಡ : ಧರ್ಮಸ್ಥಳದ ಧರ್ಮಾಧಿಕಾರಿಯಾದ ಜನತಾ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷರು, ರಾಜರ್ಷಿ ಡಾ|ಡಿ. ವೀರೆಂದ್ರ ಹೆಗ್ಗಡೆ ಅವರ 75 ನೇ ಹುಟ್ಟುಹಬ್ಬದ ಪ್ರಯುಕ್ತ ಏಕಕಾಲದಲ್ಲಿ ಗಿಟಾರ್ ಸಂಗೀತ ಸುಧೆಯ ಮೂಲಕ ಶುಭಾಶಯ ಕೋರಿದ್ದು, ಇದೀಗ ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾದಲ್ಲಿ ದಾಖಲಾಗಿದೆ. ಧಾರವಾಡದ ಇಲ್ಲಿಯ ವಿದ್ಯಾಗಿರಿಯ ಜೆಎಸ್‌ಎಸ್ ಸೆಂಟ್ರಲ್ ಶಾಲೆಯ 200 ಮಕ್ಕಳು ನ. 18 ರಂದು ಶುಕ್ರವಾರ ಏಕಕಾಲದಲ್ಲಿ ಗಿಠಾರ ನುಡಿಸಿ, ಸಂಗೀತ ಸುಧೆಯಲ್ಲಿ ಪೂಜ್ಯರಿಗೆ ಹುಟ್ಟು ಹಬ್ಬದ …
Read More »ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆಗುತ್ತಿರೋ ವಿಶ್ವಕರ್ಮ ಜನರು: ಸ್ಫೋಟಕ ಸಂಗತಿ ಬಯಲು!
ಧಾರವಾಡ: ರಾಜ್ಯದಲ್ಲಿ ವಿಶ್ವಕರ್ಮ ಜನಾಂಗದವರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿರೋ ಹಿನ್ನೆಲೆಯಲ್ಲಿ ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆಗುತ್ತಿದ್ದಾರೆ ಎಂಬ ಆಘಾತಕಾರಿ ಅಂಶವನ್ನು ಬಿಜೆಪಿ ಎಂಎಲ್‌ಸಿ ಕೆ.ಪಿ ನಂಜುಂಡಿ ಇಂದು ಬಹಿರಂಗಪಡಿಸಿದ್ದಾರೆ. ವಿಶ್ವಕರ್ಮ ಸಮಾಜಕ್ಕೆ ಹೆಚ್ಚಿನ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಸಮಾಜದಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಧಾರವಾಡಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಷ್ಟೋ ಕಡೆ ನಮ್ಮ ಸಮಾಜದವರು ಬೇರೆ ಬೇರೆ ಧರ್ಮಕ್ಕೆ ಹೋಗುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಹೆಚ್ಚಿಗೆ …
Read More »ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ
ಹುಬ್ಬಳ್ಳಿ: ಕ್ಷುಲ್ಲಕ ವಿಚಾರವಾಗಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ರಾತ್ರಿ ಇಲ್ಲಿನ ಹಳೇಹುಬ್ಬಳ್ಳಿ ಸದರಸೋಫಾ ಕಟಗರ ಓಣಿ ಬಳಿಯ ಮುಖಗಲ್ಲಿಯಲ್ಲಿ ನಡೆದಿದೆ. ಮಹಮ್ಮದ್ ಜಾಫರ್ ಇಮ್ತಿಯಾಜ್ ದಢೇಸೂರ (21 ವ) ಕೊಲೆಯಾಗಿದ ವ್ಯಕ್ತಿ. ಹಳೇಹುಬ್ಬಳ್ಳಿ ಕಸಾಯಿ ಮೊಹಲ್ಲಾದ ಶಾಬಾದ ಎಂಬಾತನೇ ಕೊಲೆ ಮಾಡಿದ್ದವನೆಂದು ಮೃತನ ಸಹೋದರ ಖ್ವಾಜಾಮೈನುದ್ದೀನ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಕ್ಷುಲ್ಲಕ ವಿಷಯವಾಗಿ ಇವರಿಬ್ಬರ ನಡುವೆ ಎರಡು ದಿನಗಳ ಹಿಂದೆ ಮಾತಿನ ಚಕಮಕಿ ನಡೆದಿತ್ತು. ಇದೇ …
Read More »ಯುವತಿಯನ್ನು ಮಾತನಾಡಿಸಿದ ವಿದ್ಯಾರ್ಥಿಯನ್ನೇ ಕಿಡ್ನ್ಯಾಪ್ ಮಾಡಿದ್ರು! ಹುಬ್ಬಳ್ಳಿಯಲ್ಲಿ ಘಟನೆ
ಹುಬ್ಬಳ್ಳಿ: ಯುವತಿಯನ್ನು ಮಾತನಾಡಿಸಿದ ವಿದ್ಯಾರ್ಥಿಯನ್ನು ಅಪಹರಿಸಿದ ಘಟನೆ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೋಕುಲ ರಸ್ತೆ ಅಕ್ಷಯ ಪಾರ್ಕ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಂಜುನಾಥ ಎಂಬಾತ ಯುವತಿಯನ್ನು ಮಾತನಾಡಿಸಿದ್ದ. ಇದೇ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಜಗಳವಾಗಿತ್ತು. ಬಳಿಕ ನಾಲ್ವರು ಯುವಕರ ಗುಂಪು ವಿದ್ಯಾರ್ಥಿ ಮಂಜುನಾಥನನ್ನು ಅಪಹರಿಸಿ ಕುಸುಗಲ್ ರಸ್ತೆಯ ಮಿಡ್ ಮ್ಯಾಕ್ ಹಿಂಬದಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮನಸೋಇಚ್ಛೆ ಹಲ್ಲೆ ನಡೆಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಗೋಕುಲ …
Read More »ದಿಲ್ಲಿ – ಹುಬ್ಬಳ್ಳಿ ನಡುವೆ ನಿತ್ಯ ವಿಮಾನ ಸೇವೆಗೆ ಚಾಲನೆ
ಹುಬ್ಬಳ್ಳಿ: ಬಹು ದಿನಗಳ ಬೇಡಿಕೆಯಾಗಿದ್ದ ದಿಲ್ಲಿ – ಹುಬ್ಬಳ್ಳಿ ವಿಮಾನಯಾನಕ್ಕೆ ಸೋಮವಾರ ಕೇಂದ್ರ ನಾಗರಿಕರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಹಸುರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಇದೇ ವಿಮಾನದಲ್ಲಿ ಪ್ರಹ್ಲಾದ ಜೋಷಿ ದಿಲ್ಲಿಗೆ ತೆರಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನೂತನ ವಿಮಾನಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಹ್ಲಾದ ಜೋಷಿ, ಹುಬ್ಬಳ್ಳಿ-ದಿಲ್ಲಿ ನಡುವೆ ನೇರ ವಿಮಾನ …
Read More »ತಾಯಿ, ಹಸುಗೂಸುಗಳ ʻ ಮರಣ ಮೃದಂಗ ʼ : ಶಾಕಿಂಗ್ ಮಾಹಿತಿ ಬಿಚ್ಚಿಟ್ಟʼ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ʼ | ಇಲ್ಲಿದೆ ಓದಿ
ಹುಬ್ಬಳ್ಳಿ : ತುಮಕೂರು ಜಿಲ್ಲಾಸ್ಪತ್ರೆ ನಿರ್ಲಕ್ಷ್ಯದಿಂದ ನಡೆದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣ ರಾಜ್ಯಾದ್ಯಂತ ಎಲ್ಲರನ್ನೂ ದಂಗು ಬಡಿಸಿತ್ತು. ಈ ಪ್ರಕರಣ ರಾಜ್ಯ ಸರ್ಕಾರ ಹಾಗೂ ರಾಜ್ಯ ಆರೋಗ್ಯ ಇಲಾಖೆಗೆ ಎಚ್ಚರಿಕೆ ಗಂಟೆ ನೀಡಿತ್ತು. ಈ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಆಘಾತಕಾರಿ ವಿಷಯವನ್ನು ಬಹಿರಂಗ ಪಡಿಸಿದೆ. ಕರ್ನಾಟಕದಲ್ಲಿ ಬಾಣಂತಿಯರು ಹಾಗೂ ನವಜಾತ ಮಕ್ಕಳ ಮರಣ ಹೆಚ್ಚಾಗುತ್ತಿದೆ ಎಂಬ ಆತಂಕಕಾರಿ ವಿಷಯವನ್ನು ಕಿಮ್ಸ್ ಆಸ್ಪತ್ರೆ ತಿಳಿಸಿದೆ. …
Read More »