Breaking News
Home / ಹುಬ್ಬಳ್ಳಿ (page 61)

ಹುಬ್ಬಳ್ಳಿ

ನನಗೆ ಯಾವುದೇ ಜಾತಿಯಿಲ್ಲ ನನ್ನದು ರೈತರ ಜಾತಿ – ಮುರುಗೇಶ್ ನಿರಾಣಿ

ಹುಬ್ಬಳ್ಳಿ: ಕಲಘಟಗಿ ತಾಲೂಕಿನ ರೈತರು ಸಹಕಾರ ಕೊಟ್ಟು ಒಪ್ಪುವುದಾದರೆ ಒಂದೂವರೆ ವರ್ಷದಲ್ಲಿ ಕಲಘಟಗಿಯಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡುತ್ತೇನೆ. ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವಲ್ಲಿ ನನ್ನದು ಯಾವುದೇ ಸ್ವಾರ್ಥವಿಲ್ಲ ಉದ್ಯೋಗ ಬೇರೆ ರಾಜಕಾರಣ ಬೇರೆ, ನನಗೆ ಯಾವುದೇ ಜಾತಿಯಿಲ್ಲ ನನ್ನದು ರೈತರ ಜಾತಿ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದ್ದಾರೆ. ನಗರದ ಹನ್ನೆರಡು ಮಠದಲ್ಲಿ ತಾಲೂಕಿನ ರೈತರ ಸಭೆಯಲ್ಲಿ ಮಾತನಾಡಿದ ನಿರಾಣಿ, ತಾಲೂಕಿನ ರೈತರು …

Read More »

ಕೇವಲ 2 ರೂ.ಗೆ ಸರ್ಜಿಕಲ್ ಮಾಸ್ಕ್

ಹುಬ್ಬಳ್ಳಿ: ಇಂದಿನ ಕೊರೊನಾ ಪರಿಸ್ಥಿತಿಯಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ಆದರೆ ಜನ ಮಾತ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಸುಲಭವಾಗಿ ಮಾಸ್ಕ್ ಸಿಗಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಮೊದಲ ಭಾರಿಗೆ ಸ್ವಯಂಚಾಲಿತ ಮಾಸ್ಕ್ ವೆಂಡಿಂಗ್ ಮಷೀನ್ ನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗುತ್ತಿದೆ. ಈ ಮೂಲಕ ಕೇವಲ 2 ರೂ.ಗೆ ಸರ್ಜಿಕಲ್ ಮಾಸ್ಕ್ ಸಿಗಲಿದೆ. ದೇಶದಲ್ಲಿ ಚೆನ್ನೈ ಬಳಿಕ ಇತಂಹದ್ದೊಂದು ಪ್ರಯೋಗವನ್ನು ಹುಬ್ಬಳ್ಳಿಯ ಯಂಗ್ ಇಂಡಿಯಾ ಸಂಸ್ಥೆ ಅನುಷ್ಕಾನಗೊಳಿಸಿದೆ. 20 ಸಾವಿರ ರೂಪಾಯಿ ವೆಚ್ಚದ …

Read More »

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟಪಡಿಸಿದ್ದು, ಆ ಬಗ್ಗೆ ಚರ್ಚೆ ಅಪ್ರಸ್ತುತ, ಕೋವಿಡ್ ಸಂಕಷ್ಟದಲ್ಲಿ ಯಾರು ಸಹ ನಾಯಕತ್ವ ಬದಲಾವಣೆ, ಭಿನ್ನ ಅನಿಸಿಕೆ ಕುರಿತು ಹೇಳಿಕೆ ನೀಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಅರವಿಂದ ಬೆಲ್ಲದ ಅವರು, ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದಾಗಿ ನನಗೆ ತಿಳಿಸಿದ್ದಾರೆ. ಬೇರೆಯವರು ಯಾರು ದೆಹಲಿಗೆ ಹೋಗಿದ್ದಾರೆ, ಯಾಕೆ ಹೋಗಿದ್ದಾರೆ ನನಗೆ …

Read More »

ಹುಬ್ಬಳ್ಳಿಯ ಕಿಮ್ಸ್ನ 11 ಜನ ವೈದ್ಯರು ಸರ್ಕಾರ ನೀಡೋ ಲಕ್ಷ ಲಕ್ಷ ಸಂಬಳ ಎಣಿಸಿ ಖಾಸಗಿ ಕ್ಲಿನಿಕ್ಗಳಲ್ಲಿ ಕಾರ್ಯ ನಿರ್ವಹಿಸುತ್ತಾ ತಮ್ಮ ವೃತ್ತಿಗೆ ದ್ರೋಹ

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ನ 11 ಜನ ವೈದ್ಯರು ಸರ್ಕಾರ ನೀಡೋ ಲಕ್ಷ ಲಕ್ಷ ಸಂಬಳ ಎಣಿಸಿ ಖಾಸಗಿ ಕ್ಲಿನಿಕ್ಗಳಲ್ಲಿ ಕಾರ್ಯ ನಿರ್ವಹಿಸುತ್ತಾ ತಮ್ಮ ವೃತ್ತಿಗೆ ದ್ರೋಹ ಬಗೆಯುತ್ತಿದ್ರು. ಈ ಬಗ್ಗೆ ಟಿವಿ9 ವರದಿ ಮಾಡಿದ್ದು ಎಚ್ಚೆತ್ತ ಕಿಮ್ಸ್ ನಿರ್ದೇಶಕರು 11 ವೈದ್ಯರಿಗೆ ನೋಟಿಸ್ ಜಾರಿಗೊಳಿಸಿ ತಕ್ಷಣವೇ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಿದ್ದರು. ಸದ್ಯ ಹುಬ್ಬಳ್ಳಿಯ ಕಿಮ್ಸ್ ವೈದ್ಯರಿಂದ ನೋಟಿಸ್‌ಗೆ ಉತ್ತರ ಬಂದಿದೆ. 11 ವೈದ್ಯರ ಪೈಕಿ 9 ವೈದ್ಯರಿಂದ ನೋಟಿಸ್‌ಗೆ …

Read More »

ಸಿಎಂ ರಾಜೀನಾಮೆ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಮಾಹಿತಿ

ಹುಬ್ಬಳ್ಳಿ: ಪಕ್ಷದ ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿಯೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಂದ ರಾಜೀನಾಮೆ ಕೊಡಿಸುವ …

Read More »

ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.11 ಇದ್ದು, ಶೇ.5ಕ್ಕೆ ಬಂದರೆ ಅನ್ ಲಾಕ್ : ಸಿಎಂ BSY

ಹುಬ್ಬಳ್ಳಿ: ರಾಜ್ಯದಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದ್ದು, ಸದ್ಯ 11.09 ರಷ್ಟಿದೆ. ಈ ಪಾಸಿಟಿವಿಟಿ ದರ ಶೇ.5ಕ್ಕೆ ಬಂದರೆ ರಾಜ್ಯದಲ್ಲಿ ಅನ್ ಲಾಕ್ ಮಾಡುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಇಲ್ಲಿನ ಸವಾಯಿ ಗಂಧರ್ವ ಹಾಲಿನಲ್ಲಿ ಕೋವಿಡ್ ನಿಯಂತ್ರಣದ ಕುರಿತು ನಡೆದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಜ್ಞರ ಅಭಿಪ್ರಾಯದಂತೆ ಪಾಸಿಟಿವಿಟಿ ದರ ಶೇ.5 ಕ್ಕಿಳಿದರೆ ಅನ್ ಲಾಕ್ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ. ಇದಕ್ಕೆ ಜನರು ಕೂಡ ಕೈ ಜೋಡಿಸಬೇಕು …

Read More »

ಕಪ್ಪು ಶಿಲೀಂಧ್ರ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ: ಹುಬ್ಬಳ್ಳಿಯಲ್ಲಿ ಮೂವರ ಬಂಧನ

ಹುಬ್ಬಳ್ಳಿ: ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಪಿಆರ್ ಒ, ವಾರ್ಡ್ ಬಾಯ್ ಸೇರಿದಂತೆ ಮೂವರನ್ನು ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಆರೋಪದಡಿ, ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.   ಇಲ್ಲಿನ ಕಿಮ್ಸ್ ಆಸ್ಪತ್ರೆ ಹಿಂಭಾಗದ ಬೈಲಪ್ಪನವರ ನಗರದ ಪೈ ಹೊಟೇಲ್ ಬಳಿಯ ಔಷಧ ಅಂಗಡಿಯಲ್ಲಿ ಕಾಳಸಂತೆಯಲ್ಲಿ ಮಾರಾಟ …

Read More »

ಲಾಕ್‌ಡೌನ್‌ ಪರಿಣಾಮ: ಹೊಲದಲ್ಲೇ ಉಳಿದ ಹಣ್ಣು, ತರಕಾರಿ

ಹುಬ್ಬಳ್ಳಿ: ಲಾಕ್‌ಡೌನ್ ಪರಿಣಾಮ ಕೃಷಿ ಉತ್ಪನ್ನಗಳ ಮಾರಾಟದ ಮೇಲೂ ಆಗಿದೆ. ಮಾರುಕಟ್ಟೆ ಕೊರತೆ, ಬೇಡಿಕೆ ಕುಸಿತದ ಕಾರಣ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೆಲವರು ಬೆಳೆಗಳನ್ನು ಹೊಲದಲ್ಲಿಯೇ ಬಿಟ್ಟಿದ್ದರೆ, ಇನ್ನು ಹಲವರು ನಾಶ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ತೆಲಸಂಗ ಭಾಗದಲ್ಲಿ ರೈತರು ಕಲ್ಲಂಗಡಿ ಹಣ್ಣುಗಳನ್ನು ಗಿಡದಲ್ಲೇ‌ ಬಿಟ್ಟಿದ್ದರು. ಕಣಬರ್ಗಿಯಲ್ಲಿ ರೈತರೊಬ್ಬರು ಕೊತ್ತಂಬರಿ ಸೊಪ್ಪು, ಖಾನಾಪುರ ತಾಲ್ಲೂಕಿನ ಪಾರಿಶ್ವಾಡದ ಹೂಕೋಸು, ಮೂಡಲಗಿ ತಾಲ್ಲೂಕಿನ ಹಳ್ಳೂರದಲ್ಲಿ ಮೆಣಸಿನಕಾಯಿ ಬೆಳೆಯನ್ನು ಹಾಗೇ …

Read More »

ಸೋಂಕಿತ ಮಹಿಳೆಯ ಮೇಲೆ ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳ ; ವಾರ್ಡ್‌ ಬಾಯ್‌ ಬಂಧನ

ಹುಬ್ಬಳ್ಳಿ: ಇಲ್ಲಿನ ಬಾಲಾಜಿ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೊಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶ್ವಸಿಯಾಗಿದ್ದಾರೆ.ಬಂಧಿತನನ್ನು ಅಶೋಕ್ ಹಲಗಿ ಎಂದು ಗುರುತಿಸಲಾಗಿದೆ. ಕಳೆದ 23ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಾಲಾಜಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್ ಸೊಂಕಿತ ಮಹಿಳೆಯ ಮೇಲೆ ವಾರ್ಡಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ. ಸೋಂಕಿತ ಮಹಿಳೆ ಪುತ್ರನಿಗೆ ಈ ಕುರಿತು ಮಾಹಿತಿ ನೀಡಿದ್ದಳು. ಘಟನೆ ಬೆಳಕಿಗೆ ಬಂದ ನಂತರ ಸೊಂಕಿತ ಮಹಿಳೆಯ …

Read More »

ರೈತರು ತರಕಾರಿ ಮಾರಲು 2, ಮದ್ಯ ಮಾರಾಟಕ್ಕೆ 4 ಗಂಟೆ ಕಾಲಾವಕಾಶ ನೀಡೋ ಸರ್ಕಾರಕ್ಕೆ ಹೃದಯ ಇಲ್ಲ: ಡಿಕೆಶಿ

ಹುಬ್ಬಳ್ಳಿ: ಕೋವಿಡ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ನೀಡಿದ ಪರಿಹಾರ ಇನ್ನೂ ಸಿಕ್ಕಿಲ್ಲ. ಹೀಗಾಗಿ, ರೈತರ ಸಮಸ್ಯೆಗಳನ್ನು ಕೇಳಲು ಅವರ ಜಮೀನಿಗೆ ಬಂದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು. ಧಾರವಾಡ ರಾಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ತರಕಾರಿ ಮಾರಲು 2 ಗಂಟೆ ಅವಕಾಶ ನೀಡುತ್ತಾರೆ. ಮದ್ಯ ಮಾರಾಟಕ್ಕೆ 4 ಗಂಟೆಗಳ ಕಾಲ ಅವಕಾಶವನ್ನು ನೀಡುತ್ತಾರೆ. ಈ ಸರ್ಕಾರಕ್ಕೆ ಕಣ್ಣು, ಹೃದಯ ಇದ್ಯಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳೇ …

Read More »