ಹುಬ್ಬಳ್ಳಿ: ಸರಳ ವಾಸ್ತು ಕಂಪೆನಿ ಸಂಸ್ಥಾಪಕ, ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿ ತನಿಖಾಧಿಕಾರಿಗಳು ಹಂತಕರಿಬ್ಬರ ವಿರುದ್ಧ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಸುಮಾರು 800ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಗುರೂಜಿ ಹತ್ಯೆಗೆ ಸಂಬಂಧಿಸಿ ಪೊಲೀಸರು ಕಲಘಟಗಿ ತಾಲೂಕು ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಗುರೂಜಿ ಅವರನ್ನು ಹಂತಕರಿಬ್ಬರು ಜು. 5ರಂದು ಇಲ್ಲಿನ ಉಣಕಲ್ಲ ಕೆರೆ ಬಳಿಯ ಹೊಟೇಲೊಂದರಲ್ಲಿ ಚಾಕುವಿನಿಂದ ಇರಿದು …
Read More »ರಾಜ್ಯ ಸರ್ಕಾರ ಅಳಿವು ಉಳಿವು ಬಗ್ಗೆ ಕೋಡಿ ಶ್ರೀ ಭವಿಷ್ಯ.!
ಧಾರವಾಡ; ಮಳೆ, ರೋಗದಿಂದ ಭೂಮಿಯಿಂದ ದೇಶಕ್ಕೆ ತೊಂದರೆಯಾಗುತ್ತದೆ. ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಇದು ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯಲ್ಲಿಂದು ಮಾತನಾಡಿದ ಅವರು, ಪ್ರಾರಂಭದಲ್ಲೇ ನಾನು ಹೇಳಿದಂತೆ ಮಳೆ, ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳಾಗುತ್ತವೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ಕೊರೊನಾ ರೋಗ ಹೆಚ್ಚಾಗುತ್ತವೆ. ಜನ ಅಶಾಂತಿಯಿಂದ ಇರುತ್ತಾರೆ ಎಂದು ಹೇಳಿದ್ದೆ ಇದೆಲ್ಲಾ …
Read More »ಉತ್ತರ ಕರ್ನಾಟಕಕ್ಕೆ ಐಟಿ ಕಂಪೆನಿ ತರಲು ಯತ್ನ: ಅಶ್ವತ್ಥನಾರಾಯಣ
ಹುಬ್ಬಳ್ಳಿ: ಉದ್ಯಮಕ್ಕೆ ಹೂಡಿಕೆ ಮಾಡಲು ಬೇರೆ ಬೇರೆ ರಾಜ್ಯಗಳಿಂದ ಕಂಪೆನಿಗಳು ಬರುತ್ತಿವೆ. ರಾಜ್ಯಕ್ಕೆ ಬರುವ ಐಟಿ ಕಂಪೆನಿಗಳನ್ನು ಉತ್ತರ ಕರ್ನಾಟಕಕ್ಕೆ ತರುವ ಪ್ರಯತ್ನ ಮಾಡಲಾಗುವುದು ಎಂದು ಉನ್ನತ ಶಿಕ್ಷಣ, ಐಟಿ ಬಿಟಿ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಅಶ್ವತ್ಥನಾರಾಯಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳಲ್ಲಿ ತಂತ್ರಜ್ಞಾನ ಹಾಗೂ ಕೌಶಲಾಭಿವೃದ್ಧಿ ಕಲಿಕೆಗೆ ಒತ್ತು ನೀಡಲಾಗಿದೆ. ಆಡ್ಯಮ್ ಪ್ರೋಗ್ರಾಮ್, ಮೈಕ್ರೊಸೈಟ್, ಮೊಡ್ರಿಂಗ್ ಸಹಿತ 1200ಕ್ಕೂ ಹೆಚ್ಚು ಕೋರ್ಸ್‌ಗಳನ್ನು ಅಧ್ಯಯನದಲ್ಲಿ …
Read More »ತಮ್ಮದೇ ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಮಾಜಿ ಸಿಎಂ ಬಹಿರಂಗ ಅಸಮಾಧಾನ
ಹುಬ್ಬಳ್ಳಿ: ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕೈಗಾರಿಕೆಗಳಿಗೆ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಹೇಳಿದ ಅವರು, ಪರೋಕ್ಷವಾಗಿ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಐಟಿಬಿಟಿ ಇಲಾಖೆಯಿಂದ ನಡೆಯುತ್ತಿರುವ ಬೆಂಗಳೂರು ಟೆಕ್ ಉತ್ಸವದಲ್ಲಿ ಬಹಿರಂಗವಾಗಿಯೇ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್, ಕೈಗಾರಿಕೆ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಕೆಲಸ ತೃಪ್ತಿಕರವಾಗಿಲ್ಲ. ಅಧಿಕಾರಿ ವರ್ಗದವರು …
Read More »ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ
ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಬೇಡ ಎಂದಿದ್ದಕ್ಕೆ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋನಿಯಾ ಗಾಂಧಿ ನಗರದ ನಿಜಾಮುದ್ದಿನ್ ಪ್ಲಾಟ್ನಲ್ಲಿ ನಡೆದಿದೆ. ಕಾಂಗ್ರೆಸ್ ಯುವ ಮುಖಂಡ ತೌಸಿಫ್ ಲಕ್ಕುಂಡಿ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿ. ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ನಗರದಲ್ಲಿ ಮನೆ ಮಾಡಿದ್ದ ತೌಸಿಫ್ ಮನೆಯ ಬಳಿ ಪದೇ ಪದೆ ಐದಾರು ಜನರೊಂದಿಗೆ ಬಂದು ನಿಲ್ಲುತ್ತಿದ್ದ ಇಸ್ಮಾಯಿಲ್ ಎಂಬುವರ ನಡುವೆ ವಾಗ್ವಾದ ನಡೆದಿತ್ತು. ಇದನ್ನೇ ಹಗೆ ಸಾಧಿಸಿದ ಇಸ್ಮಾಯಿಲ್ …
Read More »ಭ್ರಷ್ಟಾಚಾರ ಮೊಟ್ಟೆಗೆ ಕಾವು ಕೊಟ್ಟಿದ್ದೇ ಕಾಂಗ್ರೆಸ್: ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದ ಮೊಟ್ಟೆಯಿಟ್ಟು, ಅದಕ್ಕೆ ದಿನವೂ ಕಾವು ಕೊಟ್ಟು, ನೂರಾರು ಮರಿ ಹುಟ್ಟು ಹಾಕಿ ರಕ್ತಬೀಜಾಸುರರಂತೆ ಬೆಳೆಸಿದೆ. ಅದನ್ನು ಎಷ್ಟೇ ತೊಡೆದು ಹಾಕಲು ಪ್ರಯತ್ನಿಸಿದರೂ ಕಾಂಗ್ರೆಸ್ ಕಸ(ಹುಲ್ಲು)ದಂತೆ ಬೆಳೆಯುತ್ತಿದೆ. ಭ್ರಷ್ಟಾಚಾರ ಹುಟ್ಟು ಹಾಕಿದ್ದೆ ಕಾಂಗ್ರೆಸ್. ಈಗ ನಕಲಿ ಗಾಂಧಿ ಪರಿವಾರ ಈ ಬಗ್ಗೆ ಮಾತನಾಡುತ್ತಿರುವುದೇ ದೊಡ್ಡ ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯತೆ …
Read More »ಇತಿಹಾಸ ಬರೆದ ಹು-ಧಾ ಮೇಯರ್: ಬ್ರಿಟಿಷ್ ಕಾಲದ ಸಂಪ್ರದಾಯಕ್ಕೆ ಬೈ ಬೈ- ಹೊಸತನಕ್ಕೆ ಮುನ್ನುಡಿ.
ಧಾರವಾಡ: ತಲೆತರಾಂತರಗಳ ಶಿಷ್ಟಾಚಾರಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ತಿಲಾಂಜಲಿ ಇತ್ತಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದ್ದಾರೆ. ಮೇಯರ್ ಎಂದಾಕ್ಷಣ ನೆನಪಾಗುವುದು, ಗೌನ್. ಬ್ರಿಟಿಷರ ಕಾಲದಿಂದಲೂ ಗೌನ್ ಧರಿಸಿಕೊಂಡು ಮೇಯರ್ ಸಭೆಗೆ ಹಾಜರಾಗುವುದು ಸಂಪ್ರದಾಯ. ಆದರೆ ಇದೇ ಸಂಪ್ರದಾಯಕ್ಕೆ ತಿಲಾಂಜಲಿ ಇತ್ತು ಇತಿಹಾಸ ಸೃಷ್ಟಿಸಿದ್ದಾರೆ ಬಿಜೆಪಿಯ ಮೇಯರ್ ಈರೇಶ ಅಂಚಟಗೇರಿ. ಕಳೆದ ವಾರ ರಾಷ್ಟ್ರಪತಿ, ಮುಖ್ಯಮಂತ್ರಿಗಳು ಆಗಮಿಸಿದ್ದ ವೇಳೆ ಕೂಡ ಈ ಸಂಪ್ರದಾಯವನ್ನು ಮುರಿದು ಗೌನ್ ಧರಿಸದೇ ಅವರನ್ನು ಸ್ವಾಗತಿಸಿದ್ದ ಮೇಯರ್ ಈರೇಶ …
Read More »ಗಂಡನ ಕೊಲೆ, ಹೆಂಡತಿಯ ಆತ್ಮಹತ್ಯೆ, ತಬ್ಬಲಿಯಾದ ಮಕ್ಕಳು; ಪ್ರೇಮಿಗಳ ದುರಂತ ಅಂತ್ಯ
ಹುಬ್ಬಳ್ಳಿ : ಲವ್, ಮರ್ಡರ್, ಸೂಸೈಡ್. ಪ್ರೇಮಿಗಳ (Couple) ದುರಂತ ಅಂತ್ಯ. ತಬ್ಬಲಿಗಳಾದ ಪುಟ್ಟ ಮಕ್ಕಳು. ಇಂಥದ್ದೊಂದು ಮನಕಲುಕುವ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ. ಮನೆಯವರ ವಿರೋಧದ ನಡುವೆಯೇ ಅವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದರು (Love Marriage). ಇಬ್ಬರು ಪುಟ್ಟ ಕಂದಮ್ಮಗಳು, ಮೂರನೇ ಕೂಸು ಹೊಟ್ಟೆಯಲ್ಲಿತ್ತು. ದುಡಿದೋ ಹಾಕೋ ಶಕ್ತಿ ಗಂಡನ (Husband) ರೆಟ್ಟೆಯಲ್ಲಿತ್ತು. ಇಂತಹ ಸುಂದರ ಸಂಸಾರದ ಮೇಲೆ ಬಡಿದ ಬರಸಿಡಿಲು ಲವ್ ಬರ್ಡ್ ಕನಸನ್ನು ನುಚ್ಚು ನೂರು ಮಾಡಿದೆ. …
Read More »ಪಿಎಫ್‌ಐ ನಿಷೇಧದಿಂದ ಕಾಂಗ್ರೆಸ್ ನವರಿಗೆ ಒಳಗೊಳಗೆ ಕುದಿಯುತ್ತಿದೆ; ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ಪಿಎಫ್‌ಐ ಸಂಘಟನೆ ನಿಷೇಧ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನವರಿಗೆ ಒಳಗೊಳಗೆ ಕುದಿಯುತ್ತಿದೆ. ಆದರೆ ಬಹಿರಂಗ ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ವಿನಾಕಾರಣ ಒತ್ತಾಯಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ ನಿಷೇಧ ಕಾಂಗ್ರೆಸ್ ನವರಿಗೆ ನೋವು ತರಿಸಿದೆ. ಆದರೆ ಪಿಎಫ್‌ಐ ವಿರುದ್ಧ ಸಾಕ್ಷ್ಯಗಳು ಎಷ್ಟು ಬಲವಾಗಿವೆ ಎಂದರೆ, ಕಾಂಗ್ರೆಸ್ ನವರು ನಿಷೇಧ ಬಹಿರಂಗ …
Read More »ಪತಿಯ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಮಹಿಳೆ ಮನನೊಂದು ಆತ್ಮಹತ್ಯೆ
ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಅಲೆದಾಡುತ್ತಿದ್ದ ಪತ್ನಿ ಪುಷ್ಪಾ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ರಾಯನಾಳ ಬಳಿ ಜುಲೈ 4 ರಂದು ದೀಪಕ್ ಪಠದಾರಿ ಹತ್ಯೆಯಾಗಿತ್ತು. ದೀಪಕ್ ಮತ್ತು ಪುಷ್ಪಾ ಪ್ರೀತಿಸಿ ವಿವಾಹವಾಗಿದ್ದರು. ಇದರಿಂದ ತಮ್ಮ ಕುಟುಂಬದವರೇ ದೀಪಕ್ ಕೊಲೆ ಮಾಡಿರಬಹುದು ಎಂದು ಆರೋಪಿಸಿ ಪುಷ್ಪಾ, ಕುಟುಂಬದವರ ವಿರುದ್ಧ ಪೊಲೀಸ್ ಠಾಣೆ ದೂರು ನೀಡಿದ್ದರು. ಬಳಿಕ ಪತಿಯ ಹತ್ಯೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ …
Read More »