Breaking News
Home / ಹುಬ್ಬಳ್ಳಿ (page 64)

ಹುಬ್ಬಳ್ಳಿ

ಧಾರವಾಡದ 240 ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ

ಹುಬ್ಬಳ್ಳಿ: ಜಿಲ್ಲೆಯ ಪತ್ರಕರ್ತರ ಭವನದಲ್ಲಿ ಇಂದು 249 ಮಾಧ್ಯಮ ಪ್ರತಿನಿಧಿಗಳು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಫ್ರೆಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಅನುಮತಿಸಿದೆ. ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್‍ರವರ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 240 ಮಾಧ್ಯಮ ಪ್ರತಿನಿಧಿಗಳು ಲಸಿಕೆಯನ್ನು ಸ್ವೀಕರಿಸಿದ್ದಾರೆ. …

Read More »

ಹುಬ್ಬಳ್ಳಿ: ಪತ್ರಕರ್ತರಗೆ ಪ್ರೆಸ್ ಕ್ಲಬ್‌ನಲ್ಲಿ ಕೋವಿಡ್ ಲಸಿಕೆ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್, ಚಿಟಗುಪ್ಪಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಹಾಗೂ ಪತ್ರಕರ್ತರಿಗಾಗಿ ಪ್ರೆಸ್ ಕ್ಲಬ್‌ನಲ್ಲಿ ಕೋವಿಡ್ ಲಸಿಕೆ ನೀಡಲಾಯಿತು. ಕಿಮ್ಸ್‌ನಲ್ಲಿ ಜನದಟ್ಟಣೆ ಹೆಚ್ಚಿತ್ತು. ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು ಬಹುತೇಕ ಕೇಂದ್ರಗಳಲ್ಲಿ ಎರಡನೇ ಡೋಸ್ ಮಾತ್ರ ನೀಡಲಾಗುತ್ತಿದೆ  

Read More »

ಕೋವಿಡ್ ಕರ್ಫ್ಯೂಗೆ ವಾಣಿಜ್ಯ ನಗರಿ ಹುಬ್ಬಳ್ಳಿ ,ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ

ಹುಬ್ಬಳ್ಳಿ ಬೆಳಗಾವಿ: ಎರಡನೇ ಹಂತದ ಕೋವಿಡ್ ಕರ್ಫ್ಯೂಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಾಹನಗಳ ಸಂಚಾರ ಕೂಡ ಕಡಿಮೆಯಾಗಿದೆ. ವಿನಾಕಾರಣ ರಸ್ತೆಗಳಿದ ವಾಹನಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ. ಬೆಳಿಗ್ಗೆ 7:೦೦ ಗಂಟೆಯಿಂದಲೇ ಪೊಲೀಸರು ರಸ್ತೆಗಿಳಿದಿದ್ದು, ಮಾರ್ಗಸೂಚಿ ಉಲ್ಲಂಘಿಸಿ ಅಗತ್ಯ ವಸ್ತುಗಳ ಖರೀದಿಗೆ ತಂದಿದ್ದ ಸುಮಾರು 87 ವಾಹನಗಳನ್ನು ಜಪ್ತಿ ಮಾಡಲಾಗಿದೆ. 10 ಗಂಟೆಯ ನಂತರ ಚೆಕ್ ಪೋಸ್ಟ್ ಗಳನ್ನು ಬಿಗಿಗೊಳಿಸಿ ಪ್ರತಿಯೊಂದು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಕಾಲ್ನಡಿಗೆಯಲ್ಲಿ …

Read More »

ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯಲ್ಲಿ 20ಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ ಪೊಲೀಸರು!

ಹುಬ್ಬಳ್ಳಿ: ರಾಜ್ಯದಲ್ಲಿ ಇಂದಿನಿಂದ ಆರಂಭವಾಗಿರುವ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಲು ಪೊಲೀಸರು ನಸುಕಿನ ಜಾವದಿಂದಲೇ ಕಾರ್ಯಾಚರಣೆಗೆ ಇಳಿದಿದ್ದಾರೆ. ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ 20ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿ ಅನಗತ್ಯವಾಗಿ ಹೊರಗೆ ಬರೋರಿಗೆ ಬಿಸಿ ಮುಟ್ಟಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ವಿವಿಧ ಸರ್ಕಲ್ ಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಪರಿಶೀಲನೆ ನಡೆಸುತ್ತಿದ್ದು ಅನಗತ್ಯವಾಗಿ ಓಡಾಡುವ ವಾಹನಗಳನ್ನ ಸೀಜ್ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ನಲ್ಲಿ ನಸುಕಿನ ಜಾವದಿಂದಲೇ ಪೊಲೀಸರು ಬೈಕ್ ಗಳನ್ನು …

Read More »

ಧಾರವಾಡ ಜಿಲ್ಲೆಯಲ್ಲಿ 4 ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮೋದನೆ

ಹುಬ್ಬಳ್ಳಿ: ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಚಿಕಿತ್ಸೆಗೆ ಆಮ್ಲಜನಕ ಕೊರತೆ ನೀಗಿಸುವುದಕ್ಕಾಗಿ ಕೇಂದ್ರ ಸ್ವಾಮ್ಯದ ಸಾರ್ವಜನಿಕ ಉದ್ಯಮಗಳಿಂದ ಧಾರವಾಡ ಜಿಲ್ಲೆಗೆ 4 ಆಮ್ಲಜನಕ ಉತ್ಪಾದನಾ ಘಟಕಗಳ ಸ್ಪಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಆಮ್ಲಜನಕ ಘಟಕ ಸ್ಥಾಪನೆ ಕುರಿತಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಧಮೇಂದ್ರ ಪ್ರಧಾನ್  ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪತ್ರ ಬರೆದು ಮನವಿ ಮಾಡಿದ್ದರು. ಜೋಶಿ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಸಚಿವ …

Read More »

ಕೆಲಸ ಮಾಡುವ ಮನೆಯಲ್ಲಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು 24 ಗಂಟೆಯಲ್ಲೆ ಬಂಧಿಸಿದ ಪೊಲೀಸರು

ಹುಬ್ಬಳ್ಳಿ: ಕೆಲಸ ಮಾಡುವ ಮನೆಯಲ್ಲಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು 24 ಗಂಟೆಯಲ್ಲೆ ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ಅಪಾರ್ಟ್‍ಮೆಂಟ್‍ನಲ್ಲಿ ಲಕ್ಷಾಂತರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದ ಕಳ್ಳನನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಧರ್ಮರಾಮ್ ಧರ್ಮೆಂದ್ರ ಗೋವರ್ಧನ ರಾಮ್ ಚೌಧರಿ ಎಂಬವನು ಬಂಧಿತ ಆರೋಪಿಯಾಗಿದ್ದಾನೆ. ಹುಬ್ಬಳ್ಳಿ ದೇಶಪಾಂಡೆನಗರದ ಗುರು ಅಪಾರ್ಟ್‍ಮೆಂಟ್‍ನ ಮಹೇಶ ಎಂಬವರ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಜಸ್ಥಾನ ಮೂಲದ …

Read More »

ಹುಬ್ಬಳ್ಳಿಯಲ್ಲಿ ಐವರು ಕೊರೊನಾ ಸೋಂಕಿಗೆ ಬಲಿ; ಆಕ್ಸಿಜನ್ ಕೊರತೆಯೇ ಸಾವಿಗೆ ಕಾರಣ ಎಂದು ಕುಟುಂಬಸ್ಥರ ಆರೋಪ

ಹುಬ್ಬಳ್ಳಿ: ದೇಶದಾದ್ಯಂತ ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಪ್ರಸರಣವಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದೆ. ಇನ್ನು ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕೂಡ ಏರಿಕೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಹೀಗಿರುವಾಗಲೇ ಹಲವೆಡೆ ಆಕ್ಸಿಜನ್ ಕೊರತೆ, ವೆಂಟಿಲೇಟರ್ ಬೆಡ್ ಇಲ್ಲ ಎನ್ನುವ ಕೂಗು ಕೇಳಿ ಬಂದಿದ್ದು. ಹುಬ್ಬಳಿಯಲ್ಲೂ ಕೂಡ ಸದ್ಯ ಇಂತಹದ್ದೆ ಸಮಸ್ಯೆ ಎದುರಾಗಿದೆ. ಈ ಆತಂಕ್ಕೆ ಪ್ರಮುಖ ಕಾರಣ ಹುಬ್ಬಳ್ಳಿಯ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ನಿನ್ನೆ …

Read More »

ಹುಬ್ಬಳ್ಳಿಯಲ್ಲಿ ಐವರು ಕೋವಿಡ್ ಸೋಂಕಿತರ ಸಾವು ! ದುರಂತಕ್ಕೆ ಆಕ್ಸಿಜನ್ ಕೊರತೆ ಆರೋಪ

ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಐವರು ಕೋವಿಡ್ ಸೋಂಕಿತರು ಚಿಕಿತ್ಸೆ ಫಲಿಸದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ. ಮೃತರ ಕುಟುಂದವರು ಆಕ್ಸಿಜನ್ ಕೊರತೆ ಕಾರಣ ಎಂದು ಆರೋಪಿಸಿದ್ದಾರೆ. ಆದರೆ, ಆಸ್ಪತ್ರೆ ಮೂಲಗಳು ಇದನ್ನು ನಿರಾಕರಿಸಿವೆ. ಜಿಲ್ಲಾ ಆರೋಗ್ಯಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಘಟನೆ ಕುರಿತು ಪರಿಶೀಲಿಸಿದರು. ಮೃತರ ಕುಟುಂಬದವರು ಆಕ್ಸಿಜನ್ ಕೊರತೆಯಿಂದಲೇ ಮೃತಪಟ್ಟಿದ್ದಾರೆಂದು ಆರೋಪಿಸಿದರು. ಆದರೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಶವಂತ …

Read More »

ನಮ್ಮವರೇ ನಮ್ಮ ಕಷ್ಟಕ್ಕೆ ಆಗೋದು.. ಕಿಮ್ಸ್​​ಗೆ ನೆರವಿನ ಹಸ್ತ ಚಾಚಿದ ಖಾಸಗಿ ಕಂಪನಿಗಳು..!

ಹುಬ್ಬಳ್ಳಿ: ಕೋವಿಡ್ ವ್ಯಾಪಕಗೊಂಡಿರುವ ಸಂದರ್ಭದಲ್ಲಿ ಸರ್ಕಾರದ ನೆರವಿಗೆ ಖಾಸಗಿ ಕಂಪನಿಗಳು ಮುಂದಾಗಿವೆ. ಸ್ವರ್ಣ ಗ್ರೂಪ್ ಆಪ್ ಕಂಪನಿಸ್, ದೇಶಪಾಂಡೆ ಫೌಂಡೇಶನ್, ಟಾಟಾ ಹಿಟಾಚಿ, ಟಾಟಾ ಮಾರ್ಕೊಪೊಲೊ ಕಂಪನಿಗಳ ಸಾರ್ವಜನಿಕ ಹೊಣೆಗಾರಿಕೆ ನಿಧಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ 570 ಬೆಡ್ ಗಳನ್ನು ನೀಡಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ 100 ಆಕ್ಸಿಜನ್ ಬೆಡ್‌ಗಳ ಕೋವಿಡ್ ಆಸ್ಪತ್ರೆಯನ್ನು ವೇದಾಂತ ಸಂಸ್ಥೆ ಯವರು ಕಿಮ್ಸ್ ಆವರಣದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.‌ ವಿವಿಧ ಜಿಲ್ಲೆಗಳಿಂದ ಆಗಮಿಸುವ …

Read More »

ಕೋವಿಡ್ ಸೋಂಕಿತರಿಗೆ ಬೆಡ್ ಸಿಗದ ಪರಿಸ್ಥಿತಿ; ಐಸೋಲೇಶನ್ ಕೋಚ್ ಸಿದ್ಧಪಡಿಸಿದ ನೈರುತ್ಯ ರೈಲ್ವೆ

ಹುಬ್ಬಳ್ಳಿ(ಮೇ 02): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ತೀವ್ರಗೊಂಡಿದ್ದು, ಕೊರೋನಾ ಎರಡನೇ ಅಲೆಗೆ ಜನ ತತ್ತರಿಸುವಂತಾಗಿದೆ. ರಾಜ್ಯದ ಹಲವೆಡೆ ಬೆಡ್ ಗಳಿಗಾಗಿ ಪರದಾಟ ಮುಂದುವರಿದಿದೆ. ಬೆಡ್, ವೆಂಟಿಲೇಟರ್ ಸಿಗದೆ ರೋಗಿಗಳು ಪರದಾಡುವಂತಾಗಿದೆ. ಆಸ್ಪತ್ರೆ ಎದುರಿನಲ್ಲಿಯೇ ಆಯಂಬುಲೆನ್ಸ್ ಇತ್ಯಾದಿಗಳಲ್ಲಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರ ಸಂಕಷ್ಟಕ್ಕೆ ಸ್ಪಂದಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಹುಬ್ಬಳ್ಳಿ ಕೇಂದ್ರ ಸ್ಥಾನ ಹೊಂದಿರೊ ನೈರುತ್ಯ ರೈಲ್ವೆ ವಿಭಾಗದಿಂದ ರೈಲ್ವೆ ಐಸೋಲೇಷನ್ ಬೋಗಿಗಳನ್ನು ಸ್ಥಾಪನೆ …

Read More »