ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಅವಳಿ ನಗರಗಳಿಗೆ 24/7 ನಿರಂತರ ಕುಡಿಯುವ ನೀರು ಪೂರೈಸುವ ಯೋಜನೆಯ ಕಾಮಗಾರಿ ಚುರುಕುಗೊಳ್ಳಬೇಕು.ಗುತ್ತಿಗೆ ಪಡೆದಿರುವ ಸಂಸ್ಥೆಯು ಸ್ಥಳೀಯ ಜನಪ್ರತಿನಿಧಿಗಳ ಸಲಹೆ,ಸಹಕಾರ ಪಡೆದು ಜಲ ಸಂಗ್ರಹಾಗಾರ ಹಾಗೂ ಕೊಳವೆ ಮಾರ್ಗ ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಡೆನಿಸನ್ಸ್ ಹೋಟೆಲಿನಲ್ಲಿ ಭಾನುವಾರ ಸಂಜೆ ಅವಳಿನಗರದ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆ ಪ್ರಗತಿ ಪರಿಶೀಲನೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, …
Read More »ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಶೀಘ್ರವೇ ‘900 ಪಿಎಸ್‌ಐ ನೇಮಕಾತಿ’ಗೆ ಅರ್ಜಿ
ಹುಬ್ಬಳ್ಳಿ: ಈಗಾಗಲೇ 545 ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ( PSI Recruitment Scam ) ನೇಮಕಾತಿ ರದ್ದಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಖಾಲಿ ಇರುವಂತ 900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ( PSI Recruitment 2022 ) ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಘೋಷಣೆ ಮಾಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, …
Read More »ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ರಾಜ್ಯದ ಪರ ವಾದ ಮಂಡಿಸಲು ನುರಿತ ವಕೀಲರ ನಿಯೋಜನೆ: ಸಿಎಂ
ಹುಬ್ಬಳ್ಳಿ: ಸುಪ್ರೀಂಕೋರ್ಟ್ ನಲ್ಲಿ ನ. 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದ್ದು, ರಾಜ್ಯದ ಪರವಾಗಿ ವಾದ ಮಂಡಿಸಲು ಸಮರ್ಥ ಕಾನೂನು ತಜ್ಞರ ತಂಡ ನೇಮಕ ಮಾಡಲು ಅಡ್ವೋಕೇಟ್ ಜನರಲ್ ರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿವಿವಾದದ ವಿಷಯ ಕುರಿತು ಈಗಾಗಲೇ ಅಡ್ವೋಕೇಟ್ ಜನರಲ್ ಅವರನ್ನು ಸಂಪರ್ಕಿಸಿ, ಅಗತ್ಯ ಸಲಹೆ-ಸೂಚನೆ ನೀಡಲಾಗಿದೆ. ಆ ಕುರಿತು ಸಾಕಷ್ಟು ಅಧ್ಯಯನ ಸಹ …
Read More »ಹಬ್ಬ ಆಚರಿಸಲು ಕೋರ್ಟ್ ಮೊರೆ ಹೋಗುವ ಪರಿಸ್ಥಿತಿ: ಮುತಾಲಿಕ್
ಹುಬ್ಬಳ್ಳಿ: ‘ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭದಲ್ಲಿ ನಾವಿದ್ದರೂ, ನಮ್ಮದೇ ನೆಲದಲ್ಲಿ ಹಬ್ಬ ಆಚರಿಸಲು ಕೋರ್ಟ್ ಕಟ್ಟೆಗೆ ಹೋಗುವ ಪರಿಸ್ಥಿತಿ ಎದುರಾಗುತ್ತಿದೆ’ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದರು. ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಲಾದ ಗಣೇಶ ಮೂರ್ತಿಯ ವಿಸರ್ಜನೆ ಹಿನ್ನೆಲೆಯಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ‘ಇದೀಗ ಹಿಂದೂಗಳೆಲ್ಲರೂ ಒಂದಾಗಿದ್ದಾರೆ. ರಾಣಿ ಚನ್ನಮ್ಮ ಮೈದಾನದಲ್ಲಿ ನಡೆದ ಗಣೇಶೋತ್ಸವವೇ ಇದಕ್ಕೆ ಸಾಕ್ಷಿ. ಪ್ರಥಮ ಬಾರಿಗೆ ಇಲ್ಲಿ …
Read More »ಎಡಿಜಿಪಿ ಅವರೇ ಯಾವ ದೇಶದಲ್ಲಿ ಇದ್ದೀವಿ ನಾವು; ಅಲೋಕ್ ಕುಮಾರ್ ಹೇಳಿಕೆಗೆ ಮುತಾಲಿಕ್ ಖಂಡನೆ
ಹುಬ್ಬಳ್ಳಿ: ಗಣೇಶೋತ್ಸವ ಮಂಟಪದಲ್ಲಿ ಸಾವರ್ಕರ್ ಫೋಟೋ ವಿಚಾರವಾಗಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದು, ಸ್ಥಳೀಯ ಸಂಸ್ಥೆಗಳ ಅನುಮತಿ ಬೇಕು ಎಂದಿದ್ದರು. ಇದಕ್ಕೆ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಡಿಜಿಪಿ ಅವರೇ ಯಾವ ದೇಶದಲ್ಲಿ ಇದ್ದೀವಿ ನಾವು? ೭೫ ವರ್ಷಗಳಾಗಿವೆ ನಮಗೆ ಸ್ವಾತಂತ್ರ್ಯ ಬಂದು. ಸ್ವಾತಂತ್ರ್ಯ ಸಿಗಬೇಕಾದ್ರೆ ತಿಲಕ್, ಸಾವರ್ಕರ್ ಕಾರಣ ಎಂದು ಗೊತ್ತಿಲ್ವಾ? ಎಲ್ಲದಕ್ಕೂ ಪರ್ಮಿಷನ್ ತೆಗೆದುಕೊಳ್ಳಬೇಕಾ? ಎಂದು ಅಲೋಕ್ ಕುಮಾರ್ ಪ್ರಶ್ನೆ …
Read More »ಈದ್ಗಾ ಮೈದಾನದ ಗಣೇಶ ಮೂರ್ತಿ ಬಳಿ ಸಾವರ್ಕರ್,ಭಗತ್ ಸಿಂಗ್,ಶಿವಾಜಿ ಫ್ಲೆಕ್ಸ್: ನಿಯಮ ಉಲ್ಲಂಘನೆ
ಹುಬ್ಬಳ್ಳಿ: ಇಲ್ಲಿನ ಕಿತ್ತೂರು ಚನ್ನಮ್ಮವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಮೂರು ದಿನ ಗಣೇಶೋತ್ಸವ ಆಚರಿಸಲು ಅನುಮತಿ ಪಡೆದಿರುವ ರಾಣಿ ಚನ್ಮಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿಯವರು, ಪೊಲೀಸರ ವಿರೋಧದ ಮಧ್ಯೆಯೇ ಪೆಂಡಾಲ್ ಎದುರಿನ ದ್ವಾರದಲ್ಲಿ ವಿ.ಡಿ. ಸಾವರ್ಕರ್, ಭಗತ್ ಸಿಂಗ್, ಶಿವಾಜಿ ಭಾವಚಿತ್ರವಿರುವ ಫ್ಲೆಕ್ಸ್ ಅಳವಡಿಸಿದರು. ಇದರೊಂದಿಗೆ ಅನುಮತಿ ನೀಡುವಾಗ ಪಾಲಿಕೆ ನೀಡಿದ್ದ ಷರತ್ತನ್ನು ಮಹಾಮಂಡಳಿ ಉಲ್ಲಂಘಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೂ ಮುಂಚೆ ಸಾವರ್ಕರ್ …
Read More »ಈದ್ಗಾ ಮೈದಾನದಲ್ಲಿ ಗಣೇಶ; ಚುನಾವಣೆಗಾಗಿಯೇ ಎಂದು ಒಪ್ಪುವುದಿಲ್ಲ: ಜೋಶಿ
ಹುಬ್ಬಳ್ಳಿ: ”ಚುನಾವಣೆ ಬಂದಾಗ ಸಾಕಷ್ಟು ವಿಚಾರಗಳು ಮುನ್ನೆಲೆಗೆ ಬರುತ್ತವೆ. ಹೋರಾಟಗಳು ಕೂಡ ಹೆಚ್ಚಾಗುತ್ತವೆ. ಈ ನಿಟ್ಟಿನಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಇರಬಹುದೇನೋ ಗೊತ್ತಿಲ್ಲ. ಆದರೆ ಇದು ಚುನಾವಣೆಗಾಗಿಯೇ ಎದ್ದಿದೆ ಎಂದು ನಾನು ಒಪ್ಪುವುದಿಲ್ಲ” ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಸೋಮವಾರ ಇಲ್ಲಿನ ಭವಾನಿ ನಗರದ ಅವರ ನಿವಾಸಕ್ಕೆ ಭೇಟಿ ನೀಡಿದ ಪಾಲಿಕೆ ಮೇಯರ್ ಹಾಗೂ ಸದಸ್ಯರ ಸಭೆ …
Read More »ಮಾಧ್ಯಮಗಳಲ್ಲಿ ಮುರುಘಾ ಶ್ರೀಗಳ ಬಂಧನದ ಕುರಿತು ಮಾಹಿತಿ ಬರುತ್ತಿವೆ. ಬಂಧನವಾಗಿದ್ದರೆ ನನಗೆ ಮಾಹಿತಿ ದೊರೆಯುತ್ತಿತ್ತು.:
ಹುಬ್ಬಳ್ಳಿ: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೊಕ್ಸೊ ಪ್ರಕರಣದ ಅಡಿಯಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ಪೋಷಕರನ್ನು ಸಹ ಸಂಪರ್ಕಿಸಿದ್ದು, ಮಾಹಿತಿಯನ್ನು ಸಂಗ್ರಹಿಸಲು ಮುಂದಾಗಿದ್ದೇವೆ. ಪೊಕ್ಸೊ …
Read More »ಕೈ ದುರಹಂಕಾರಕ್ಕೆ ಹಿರಿಯರು ಪಕ್ಷ ತೊರೆದಿದ್ದಾರೆ : ಸಚಿವ ಜೋಶಿ ವ್ಯಂಗ್ಯ
ಧಾರವಾಡ : ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವದ ದುರಹಂಕಾರ ಮತ್ತು ಭೌದ್ದಿಕ ದಿವಾಳಿಕೋರತನದಿಂದಲೇ ಹಿರಿಯರು ಪಕ್ಷ ತೊರೆಯುವಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ತಾಲೂಕಿನ ಮುಗದ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಗುಲಾಬ್ ನಬೀ ಅಜಾದ್ ಈಗ ಪಕ್ಷ ತೊರೆದಿದ್ದಾರೆ. ಈ ಹಿಂದೆಯೂ ಸಾಕಷ್ಟು ಹಿರಿಯ ನಾಯಕರು ಪಕ್ಷದ ದುರಾಡಳಿತದಿಂದ ಮನನೊಂದು ಹೊರ ಬಂದಿದ್ದಾರೆ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಅನುಭವಿಸಿ …
Read More »ಗಣೇಶ ಪ್ರತಿಷ್ಠಾಪನೆ ವಿರೋಧಿಸಿದರೆ ಜೋಕೆ
ಹುಬ್ಬಳ್ಳಿ: ಚನ್ನಮ್ಮ ವೃತ್ತ ಬಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಪಾಲಿಕೆ ಹಾಗೂ ಸ್ಥಳೀಯ ಶಾಸಕರು ವಿರೋಧ ಮಾಡಿದರೆ, ತೊಂದರೆ ಕೊಟ್ಟರೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ನೀಡುವಂತೆ ಗಣೇಶ ಮೂರ್ತಿ ಹಿಡಿದು ಮನೆ ಮನೆಗೆ ತೆರಳಿ ತಿಳಿವಳಿಕೆಯ ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪಾಲಿಕೆ …
Read More »
Laxmi News 24×7