Breaking News

ಹುಬ್ಬಳ್ಳಿ

ಗುಜರಿ ಬಸ್‌ ಖರೀದಿಗೆ ಮುಂದಾದ NWKRTC: ಉತ್ತರ ಕರ್ನಾಟಕ ಜನತೆಯಿಂದ ಆಕ್ರೋಶ

ಹುಬ್ಬಳ್ಳಿ: ಈಗಾಗಲೇ ಹುಬ್ಬಳ್ಳಿ ನಗರ ವಾಯುಮಾಲಿನ್ಯದಲ್ಲಿ ಅಗ್ರಸ್ಥಾನಕ್ಕೇರಿದೆ. ಹೀಗಿದ್ದರೂ ಸಾರಿಗೆ ಸಂಸ್ಥೆ ಮತ್ತಷ್ಟು ಅವೈಜ್ಞಾನಿಕ ನಿರ್ಧಾರದ ಮೂಲಕ ಜನರ ಜೀವನದ ಜೊತೆಗೆ ಆಟವಾಡಲು ನಿರ್ಧರಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಬಿಎಂಟಿಸಿಯ ಗುಜರಿ ಬಸ್‌ ಖರೀದಿಗೆ NWKRTC ಮುಂದಾಗಿದೆ. ಬೆಂಗಳೂರಲ್ಲಿ ಓಡಿಸಿ ಬಿಟ್ಟಿರುವ 100 ಬಸ್ ಖರೀದಿಗೆ ಸಂಸ್ಥೆ ನಿರ್ಧರಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂರಾರು ಬಸ್‌ಗಳನ್ನು ಗುಜರಿಗೆ ಹಾಕಲು ತೀರ್ಮಾನಿಸಿದ್ದು, ಬಹುತೇಕ ಬಸ್​ಗಳು ಲಕ್ಷಗಟ್ಟಲೆ ಕಿ.ಮೀ ಓಡಾಡಿವೆ ಎಂದು ತಿಳಿದುಬಂದಿದೆ. …

Read More »

ಯುವತಿಗೆ ಚುಡಾಯಿಸಿದ ಯುವಕನಿಗೆ ಸಹೋದರರಿಂದ ಚಾಕು ಇರಿತ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಸಹೋದರಿಯನ್ನು ಚುಡಾಯಿಸಿದ ಎಂಬ ಕಾರಣಕ್ಕೆ ಅಣ್ಣಂದಿರಿಬ್ಬರು ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹಳೇ ಹುಬ್ಬಳ್ಳಿಯ ಧಾರವಾಡ ಕಾಲೋನಿಯಲ್ಲಿ ನಡೆದಿದೆ. ಚಂದ್ರಶೇಖರ್ ಎಂಬಾತನೇ ತೀವ್ರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಯುವತಿಯೊಬ್ಬಳಿಗೆ ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡ ಆಕೆಯ ಸಹೋದರರಾದ ಕಿರಣ್ ಹಾಗೂ ಅಭಿ ಎನ್ನುವವರು ಚಾಕು ಇರಿದಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಗಾಯವಾಗಿರುವ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ …

Read More »

ಮೈಸೂರು-ಬೆಳಗಾವಿ ರೈಲು ಸಂಚಾರ ಭಾಗಶಃ ರದ್ದು

ಹುಬ್ಬಳ್ಳಿ: ಬೆಳಗಾವಿ-ಸುಲಧಾಳ ವಿಭಾಗ ನಡುವೆ ನಡೆಯುತ್ತಿರುವ ಜೋಡು ಮಾರ್ಗ ಕಾಮಗಾರಿ ನಿಮಿತ್ತ ವಿಶ್ವಮಾನವ ನಿತ್ಯ ಸಂಚಾರ ಎಕ್ಸ್‌ಪ್ರೆಸ್‌ ರೈಲು ಭಾಗಶಃ ರದ್ದುಗೊಳಿಸಲಾಗಿದೆ. ಜೂ.22ರಿಂದ 28ರ ವರೆಗೆ ಮೈಸೂರು-ಬೆಳಗಾವಿ ವಿಶ್ವಮಾನವ ನಿತ್ಯ ಸಂಚಾರ ಎಕ್ಸ್‌ಪ್ರೆಸ್‌ (17326) ರೈಲು ಧಾರವಾಡ ಮತ್ತು ಬೆಳಗಾವಿ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಬೆಳಗಾವಿ ಬದಲು ಧಾರವಾಡಕ್ಕೆ ಕೊನೆಗೊಳ್ಳಲಿದೆ.   23ರಿಂದ 29ರ ವರೆಗೆ ಬೆಳಗಾವಿ-ಮೈಸೂರು (17325) ರೈಲು ಬೆಳಗಾವಿ ಮತ್ತು ಧಾರವಾಡ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಬೆಳಗಾವಿ ಬದಲು …

Read More »

ಮೋದಿ ಬಂದಾಗ ಜನ ಸೇರಿಸಿದ್ರೆ ಕೋವಿಡ್ ಹೆಚ್ಚಾಗಲ್ವಾ ಅನ್ನೋ ಪತ್ರಕರ್ತರ ಪ್ರಶ್ನೆಗೆ ಸಿಎಂ ಬೊಮ್ಮಾಯಿ ಸಿಡಿಮಿಡಿ

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ (PM Modi) ಬಂದಾಗ ಜನ ಸೇರಿಸಿದ್ರೆ ಕೋವಿಡ್ (Covid) ಹೆಚ್ಚಾಗಲ್ವಾ ಅನ್ನೋ ಪತ್ರಕರ್ತರ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಸಿಡಿಮಿಡಿಗೊಂಡರು. ಉತ್ತರಿಸದೇ ಹೊರಟು ಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರತಿಭಟನೆ ಮಾಡಿದ್ರೆ ಕೋವಿಡ್ ಹೆಚ್ಚಾಗುತ್ತೆ. ಪ್ರಧಾನಿ ಮೋದಿ ಬಂದಾಗ ಜನ ಸೇರಿದರೆ …

Read More »

ಕರುಳ ಕುಡಿಯನ್ನೇ ಸಾಯಿಸಲು ಹೋಗಿದ್ದಾಕೆ ಅರೆಸ್ಟ್​: ಹತ್ಯೆಗೆ ಸ್ಕೆಚ್​ ಹಾಕಿದ್ದೇಕೆ? ಕೊನೆಗೂ ಬಾಯ್ಬಿಟ್ಟ ಮಹಾತಾಯಿ!

ಹುಬ್ಬಳ್ಳಿ: ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್​) ಆಸ್ಪತ್ರೆಯಲ್ಲಿ ಕಳೆದ ಸೋಮವಾರ ಭಾರಿ ಕೋಲಾಹಲ ಸೃಷ್ಟಿಯಾಗಿತ್ತು. ಇದಕ್ಕೆ ಕಾರಣ ಉಮ್ಮೇ ಜೈನಾಬ್ ಹುಸೇನ್ ಸಾಬ್ ಶೇಖ್ ಮತ್ತು ಸಲ್ಮಾ ದಂಪತಿಯ 40 ದಿನದ ಮಗು ಕಾಣೆಯಾಗಿತ್ತು.   ಸಲ್ಮಾ ಚಿಕಿತ್ಸೆಗೆಂದು ಮಗುವನ್ನು ಕರೆದುಕೊಂಡು ಬಂದಿದ್ದರು. ಕೊನೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗು ಏಕಾಏಕಿ ಕಣ್ಮರೆಯಾಗಿತ್ತು. ಮಗು ಇಲ್ಲದಿದ್ದರಿಂದ ಆಸ್ಪತ್ರೆ ಸಿಬ್ಬಂದಿ ದಿಗಿಲುಗೊಂಡಿದ್ದರು. ಕೂಡಲೇ ಸಿಸಿಟಿವಿ ಪರಿಶೀಲಿಸಲಾಗಿತ್ತು. ವಾರ್ಡ್​ನಿಂದಾಗಲಿ, ಕಾರಿಡಾರ್​ನಿಂದಾಗಲಿ ಮಗು …

Read More »

40 ದಿನದ ಮಗು ರಾತ್ರೋರಾತ್ರಿ ಆಸ್ಪತ್ರೆಯ ಆವರಣದಲ್ಲೇ ಪತ್ತೆ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ತಾಯಿಯ ಮಡಿಲಿನಿಂದ ಅಪಹರಣವಾಗಿದ್ದ 40 ದಿನದ ಮಗು ರಾತ್ರೋರಾತ್ರಿ ಆಸ್ಪತ್ರೆಯ ಆವರಣದಲ್ಲೇ ಪತ್ತೆಯಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಕಪ್ಪು ಬಣ್ಣದ ವ್ಯಕ್ತಿ ಮಡಿಲಿನಲ್ಲಿದ್ದ ಮಗುವನ್ನು ಅಪಹರಿಸಿಕೊಂಡು ಹೋಗಿದ್ದ ಎಂದು ಮಗುವಿನ ತಾಯಿ ದೂರಿದ್ದಳು. ವಿದ್ಯಾನಗರ ಠಾಣೆಯಲ್ಲೂ ಮಗು ಅಪಹರಣ ಪ್ರಕರಣ ದಾಖಲಾಗಿತ್ತು. ಮಗುವಿನ ಪತ್ತೆಗೆ ಮಹಾನಗರ ಪೊಲೀಸ್ ಆಯುಕ್ತರು ಮೂರು ವಿಶೇಷ ತಂಡಗಳನ್ನು ನಿಯೋಜಿಸಿದ್ದರು. ಇದೆಲ್ಲ ಬೆಳವಣಿಗೆ ಕಂಡು ಅಪಹರಣಕಾರರು …

Read More »

ಪೊಲೀಸ್ ಇನ್ಸ್ ಪೆಕ್ಟರ್ ಗೆ ಮ್ಮಂತವರನ್ನ ಬಹಳ ಜನ ನೋಡಿದ್ದೇನೆ.ಬಟ್ಟೆ ಬಿಚ್ಚಿಟ್ಟು ಮನೆಗೆ ಹೋಗಿ ಎಂದ ಹಿಂದೂ ಕಾರ್ಯಕರ್ತ

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಪೊಲೀಸರಿಗೆ ಹಿಂದು ಸಂಘಟನೆಯ ಕಾರ್ಯಕರ್ತನೊಬ್ಬ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಆವಾಜ್‌ ಹಾಕಿದ್ದಾನೆ. ಸದ್ಯ ಮಲ್ಲಿಕಾರ್ಜುನ್ ಸತ್ತಿಗೇರಿ ಎಂಬ ಹಿಂದು ಸಂಘಟನೆಯ ಕಾರ್ಯಕರ್ತ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಇನ್ಸ್‌ ಪೆಕ್ಟರ್‌ ಮಹಾಂತೇಶ ಹೊಳಿಗೆಗೆ ಆವಾಜ್‌ ಹಾಕಿದ್ದಾನೆ.   ಅಂದ ಹಾಗೇ ಹುಬ್ಬಳ್ಳಿ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ವಸತಿ ಗೃಹದಲ್ಲಿ ಸರಣಿ ಕಳ್ಳತನ ನಡೆದಿತ್ತು.ಈ ಸಂಬಂಧ ಇನ್ಸ್‌ ಪೆಕ್ಟರ್‌ …

Read More »

ಈ ಬಸ್ಸಿನಲ್ಲಿ ಚಾಲಕರೇ ಕಂಡಕ್ಟರ್ ಕೂಡ; ಟಿಕೆಟ್ ವಿತರಣೆಗೆ ದೀರ್ಘಕಾಲ ನಿಲುಗಡೆ, ಪ್ರಯಾಣಿಕರ ಪರದಾಟ

ಹುಬ್ಬಳ್ಳಿ: ಕಂಡಕ್ಟರ್ ಇಲ್ಲದ , ಹುಬ್ಬಳ್ಳಿ-ಗದಗ ನಾನ್ ಸ್ಟಾಪ್ ಬಸ್‍ಗಳಲ್ಲಿ (Non Stop Bus) ಚಾಲಕರೇ, ಟಿಕೆಟ್ (Ticket) ಕೊಡುವ ಕೆಲಸವನ್ನು ನಿರ್ವಹಿಸುತ್ತಾರೆ ಮತ್ತು ಅದಕ್ಕಾಗಿ, ರಾಷ್ಟ್ರೀಯ ಹೆದ್ದಾರಿ -67 ರ ಹುಬ್ಬಳ್ಳಿ ಹೊರ ವಲಯದಲ್ಲಿ ಸಾಕಷ್ಟು ಸಮಯ ಬಸ್ ಅನ್ನು ನಿಲ್ಲಿಸಬೇಕಾಗುತ್ತದೆ. ಇದು ಈಗ ಬಸ್‍ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ (Passengers) ಅತ್ಯಂತ ಕಿರಿಕಿರಿಯ ಸಂಗತಿಯಾಗಿ ಪರಿಣಮಿಸಿದೆ. ಈ ರೀತಿಯ ವ್ಯವಸ್ಥೆಯ ಕಾರಣದಿಂದ ಬಸ್ ನಿಗದಿತ ಸಮಯಕ್ಕಿಂತ ವಿಳಂಬವಾಗಿ ತಲುಪಿ, …

Read More »

ಗರೀಬ್ ಕಲ್ಯಾಣ್ ಅನ್ನ ಯೋಜನೆ: ಬಿಪಿಎಲ್ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಧಾರವಾಡ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 15 ಕೆಜಿ ಅಕ್ಕಿ, 20 ಕೆಜಿ ಜೋಳ, ಬಿಪಿಎಲ್ ಕಾರ್ಡಿನ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 3 ಕೆಜಿ ಅಕ್ಕಿ ಹಾಗೂ 2 ಕೆಜಿ ಜೋಳ ಉಚಿತವಾಗಿ ವಿತರಿಸಲಾಗುತ್ತದೆ. ಕಳೆದ ಏಪ್ರಿಲ್ ನಿಂದ ಗೋಧಿ ಹಂಚಿಕೆ ಸ್ಥಗಿತಗೊಳಿಸಲಾಗಿದೆ. ಕೆಲವೆಡೆ ಗೋಧಿ ದಾಸ್ತಾನು ಉಳಿದಿದ್ದು, ಆದ್ಯತೆಯ ಮೇಲೆ ಮೊದಲು …

Read More »

ಮೈಕ್‌ ದಂಗಲ್‌ – ಇಂದು ಬಿಜೆಪಿ ಮುಖಂಡರ ಮನೆ ಮುಂದೆ ಶ್ರೀರಾಮ ಸೇನೆಯಿಂದ ಪ್ರತಿಭಟನೆ

ಧಾರವಾಡ: ರಾಜ್ಯದಲ್ಲಿ ಮೈಕ್ ದಂಗಲ್‍ನ 2ನೇ ಚಾಪ್ಟರ್ ಶುರು ಮಾಡಲು ಶ್ರೀರಾಮಸೇನೆ ಸಜ್ಜಾಗಿದೆ. ಸುಪ್ರೀಂಕೋರ್ಟ್ ಆದೇಶದನ್ವಯ ಮೈಕ್ ತೆರವು ವಿಳಂಬವಾಗಿರೋದ್ರಿಂದ ಇವತ್ತು ಬಿಜೆಪಿ ಮುಖಂಡರ ಮನೆ ಮುಂದೆ ಪ್ರತಿಭಟನೆ ಆಯೋಜಿಸಲಾಗಿದೆ. ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಮನೆ ಮುಂದೆ ಧರಣಿಗೆ ಶ್ರೀರಾಮಸೇನೆ ಕರೆ ಕೊಟ್ಟಿದೆ. ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಪ್ರತಿಭಟನೆಗೆ ಹಲವು ಹಿಂದೂಪರ ಸಂಘಟನೆಗಳು ಬೆಂಬಲ ಕೊಟ್ಟಿವೆ. ಈಗಾಗಲೇ ಸೋಷಿಯಲ್ ಮೀಡಿಯಾ ಮೂಲಕ ಧರಣಿಯಲ್ಲಿ ಭಾಗವಹಿಸುವಂತೆ ಶ್ರೀರಾಮಸೇನೆಯ ಸದಸ್ಯರಿಗೆ, ಪದಾಧಿಕಾರಿಗಳಿಗೆ, …

Read More »