Home / ಹುಬ್ಬಳ್ಳಿ (page 72)

ಹುಬ್ಬಳ್ಳಿ

ಜಿಲ್ಲಾಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐಗೆ ತಗ್ಲಾಕೊಂಡಿರುವ ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಲವಿಲ ಒದ್ದಾಡ್ತಿದ್ದಾರೆ.

ಹುಬ್ಬಳ್ಳಿ: ಧಾರವಾಡ ಜಿಲ್ಲಾಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐಗೆ ತಗ್ಲಾಕೊಂಡಿರುವ ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಲವಿಲ ಒದ್ದಾಡ್ತಿದ್ದಾರೆ. ಇದರ ನಡುವೆ ವಿನಯ್ ಕುಲಕರ್ಣಿಗೆ ಮತ್ತೆ ಕಸ್ಟಡಿನೋ..? ಕಂಬಿಯೋ ಅನ್ನೋದು ಇಂದು ನಿರ್ಧಾರವಾಗಲಿದೆ.ವಿನಯ್ ಕುಲಕರ್ಣಿ ಸಿಬಿಐ ಸುಳಿಯಲ್ಲಿ ಸಿಲಕಿ ಒದ್ದಾಡುತ್ತಿದ್ದಾರೆ. ಕಳೆದೆರಡು ದಿನಗಳಿಂದ ತಮ್ಮ ಕಸ್ಟಡಿಯಲ್ಲಿರುವ ಕುಲಕರ್ಣಿಯನ್ನ ಸಿಬಿಐ ಅಧಿಕಾರಿಗಳು ದಾಖಲೆಗಳನ್ನಿಟ್ಟು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಾಶ, ಸುಳ್ಳು …

Read More »

ಚಿರು-ಮೇಘನಾ ದಂಪತಿ ಮಗುವಿಗೆ ಕಲಘಟಗಿ ತೊಟ್ಟಿಲು ಗಿಫ್ಟ್.ಸ್ತ್ರೀ ಶಕ್ತಿ ಸೇವಾ ಸಂಸ್ಥೆ ಅಧ್ಯಕ್ಷೆ ವನಿತಾ

ಹುಬ್ಬಳ್ಳಿ, ನ.8- ಕಲಘಟಗಿ ಬಣ್ಣದ ತೊಟ್ಟಿಲು ಅಂದ್ರೆ ಎಲ್ಲರಿಗೂ ಅಚ್ಚುಮೆಚ್ಚು. ರಾಜಕಾರಣಿ, ಜನಪ್ರತಿನಿಗಳ ಮಕ್ಕಳು, ಮೊಮ್ಮಕ್ಕಳಿಗೆ ಕಲಘಟಗಿ ತೊಟ್ಟಿಲು ಉಡುಗೊರೆಯಾಗಿ ನೀಡುವುದು ಹೊಸ ಟ್ರೆಂಡ್ ಆಗಿದೆ. ಚಿರು-ಮೇಘನಾ ದಂಪತಿ ಮಗುವಿಗೆ ಕಲಘಟಗಿ ತೊಟ್ಟಿಲು ಗಿಫ್ಟ್. ದಿವಂಗತ ಚಿರಂಜೀವಿ ಸರ್ಜಾ ಮಗುವಿಗೂ ಕೂಡ ಕಲಘಟಗಿಯ ತೊಟ್ಟಿಲನ್ನು ನೀಡಲಾಗಿದ್ದು, ಚಿರಂಜೀವಿ ಸರ್ಜಾ ಅವರ ಮನೆಗೆ ತೊಟ್ಟಿಲು ತಲುಪಿದೆ. ನಟಿ ಮೇಘನಾ ರಾಜ್ ಅಕ್ಟೋಬರ್‍ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆ ಮಗುವಿಗಾಗಿ ಕಲಘಟಗಿಯ …

Read More »

ವಿನಯ್ ಕುಲಕರ್ಣಿಯ c.b.i.ವಿಚಾರಣೆ ಎರಡನೇ ದಿನವೂ ಮುಂದುವರಿದಿದೆ.

ಹುಬ್ಬಳ್ಳಿ: ಜಿಪಂ ಸದಸ್ಯ ಯೊಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯ ವಿಚಾರಣೆ ಎರಡನೇ ದಿನವೂ ಮುಂದುವರಿದಿದೆ. ಹುಬ್ಬಳ್ಳಿಯ ಸಿಎಆರ್ ಮೈದಾನದ ಕಚೇರಿಯಲ್ಲಿ ನಡೆಯುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಚಾರಣೆ ಇಂದು ಎರಡನೇಯ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ಅವರ ಮಾವ ಚಂದ್ರಶೇಖರ್ ಇಂಡಿ ಹಾಗೂ ಮಾಜಿ ಆಪ್ತ ಕಾರ್ಯದರ್ಶಿ ಸೋಮಲಿಂಗ ನ್ಯಾಮೇಗೌಡ ವಿಚಾರಣೆ ಸಹ ಮುಂದುವರಿದಿದೆ. ನ್ಯಾಯಾಂಗ ಬಂಧನದಲ್ಲಿದ್ದ …

Read More »

ನಮ್ಮನ್ನ ರಾಜಕೀಯವಾಗಿ ಮುಗಿಸಲು ಕುತಂತ್ರ:ವಿಜಯ್ ಕುಲಕರ್ಣಿ

ಹುಬ್ಬಳ್ಳಿ: ನಮ್ಮನ್ನು ರಾಜಕೀಯವಾಗಿ ಮುಗಿಸುವುದಕ್ಕೆ ಈ ರೀತಿ ಕುತಂತ್ರ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದಲ್ಲಿ ರಾಜಕೀಯ ಕೈವಾಡವಿದೆ. ಬಿಜೆಪಿ ಅವರದ್ದೇ ಕೈವಾಡವಿದೆ ಎಂದು ನೇರವಾಗಿ ಬಿಜೆಪಿ ಮೇಲೆ ಆರೋಪ …

Read More »

ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರರನ್ನು ಸಿಬಿಐ ಅಧಿಕಾರಿಗಳ ವಶಕ್ಕೆ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ

ಧಾರವಾಡ : ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರರನ್ನು ಸಿಬಿಐ ಅಧಿಕಾರಿಗಳು ಇಂದು ವಶಕ್ಕೆ ಪಡೆದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಧಾರವಾಡದ ಉಪನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್‌ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ …

Read More »

ಡವರ ಪರ ಸರ್ಕಾರ ಎಂದು ಹೇಳಿಕೊಳ್ಳುತ್ತೆ. ಆದರೆ ಅದೇ ಬಡವರಿಗೆ ಒಂದು ಹೊತ್ತಿನ ಅನ್ನ ಹಾಕೋಕೆ ಆಗ್ತಿಲ್ಲ.

ಧಾರವಾಡ: ಒಂದು ಕಡೆ ಬಡವರ ಪರ ಸರ್ಕಾರ ಎಂದು ಹೇಳಿಕೊಳ್ಳುತ್ತೆ. ಆದರೆ ಅದೇ ಬಡವರಿಗೆ ಒಂದು ಹೊತ್ತಿನ ಅನ್ನ ಹಾಕೋಕೆ ಆಗ್ತಿಲ್ಲ. ಹೀಗಾಗಿ ಬಡ ಮಕ್ಕಳು ಈಗ ಬೀದಿಯಲ್ಲಿ ಭಿಕ್ಷೆಗೆ ಇಳಿದು ಬಿಟ್ಟಿದ್ದಾರೆ. ಹೌದು. ವಿದ್ಯಾಕಾಶಿ ಎಂದು ಕರೆಸಿಕೊಳ್ಳುವ ಧಾರವಾಡ ನಗರದಲ್ಲಿ ಹೆಚ್ಚಿನ ವಿದ್ಯಾವಂತರು, ಬುದ್ಧಿವಂತರು ಇದ್ದಾರೆ ಎಂದು ಹೇಳ್ತಾರೆ. ಆದರೆ ಅದೇ ಧಾರವಾಡದಲ್ಲಿ ಈಗ ಮಕ್ಕಳು ಹಸಿವು ನೀಗಿಸಿಕೊಳ್ಳಲು ಎಲ್ಲಿ ನೋಡಿದ್ರಲ್ಲಿ ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ತಿದ್ದಾರೆ. ಧಾರವಾಡ …

Read More »

ಬಾಗಿಲ ಚಿಲಕ ಮೀಟಿ ತೆಗೆದು ಮನೆಯ ಒಳಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿ

ಮುಂಡಗೋಡ – ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದೆರಡು ವರ್ಷಗಳಿಂದ ರಾತ್ರಿ ವೇಳೆಯಲ್ಲಿ  ಮನೆಯ ಜನರು ಮಲಗಿರುವಾಗಲೇ ಮನೆಯ ಹಿಂದಿನ ಬಾಗಿಲ ಚಿಲಕ ಮೀಟಿ  ತೆಗೆದು ಮನೆಯ ಒಳಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಆರೋಪಿಯನ್ನು  ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ತಡಸ್ ಗ್ರಾಮದ ಕಮಲಾನಗರ ತಾಂಡಾದ ಕ್ರಷ್ಣಾ ಲಮಾಣಿ (೩೮) ಬಂಧಿತ ಆರೋಪಿಯಾಗಿದ್ದು ಬಂಧಿತನಿಂದ ಸುಮಾರು ೩.೫ ಲಕ್ಷ ರೂ ಬೆಲೆಯ ೭೦ ಗ್ರಾಂ ತೂಕದ ಬಂಗಾರದ …

Read More »

ಭೀಮಾ ತೀರದ ರಕ್ತಸಿಕ್ತ ಇತಿಹಾಸಕ್ಕೆ ಅಂತ್ಯ ಹಾಡುವೆ : ಐಜಿಪಿ ರಾಘವೇಂದ್ರ ಸುವಾಸ್

ಹುಬ್ಬಳ್ಳಿ,ನ.3- ವಿಜಯಪುರ ಭೀಮಾ ತೀರದಲ್ಲಿನ ಅಪರಾಧ ಕೃತ್ಯಗಳಿಗೆ ತಾತ್ವಿಕ ಅಂತ್ಯ ಹಾಡುವುದಾಗಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುವಾಸ್ ಹೇಳಿದ್ದಾರೆ. ಭೀಮಾ ತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಘಟನೆ ನಡೆದ ರಾಷ್ಟ್ರೀಯ ಹೆದ್ದಾರಿ ಕನ್ನಾಳ ಕ್ರಾಸ್ ಬಳಿ ಸ್ಥಳ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾದೇವ ಸಾಹುಕಾರ ಭೈರಗೊಂಡ ಹತ್ಯೆಗೆ ಸಂಚು ರೂಪಿಸಿ 15-20 ಯುವಕರು ದಾಳಿ ನಡೆಸಿದ್ದಾರೆ. ವಾಹನ …

Read More »

ಹುಬ್ಬಳ್ಳಿ: ಇಬ್ಬರು ಯುವಕರಿಗೆ ಚಾಕು ಇರಿತ

ಹುಬ್ಬಳ್ಳಿ : ನಗರದಲ್ಲಿ ಮಂಗಳವಾರ ಬೆಳಿಗ್ಗೆ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಯುವಕರಿಗೆ ಚಾಕು ಇರಿದು ಗಾಯಗೊಳಿಸಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಶೋಯೆಬ್‌ ಅಬ್ಬನ್ನವರ (24) ಎಂಬುವವರಿಗೆ ಗಾಯಗೊಳಿಸಲಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೇಶ್ವಾಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಧವ ನಗರದಲ್ಲಿ ಮತ್ತೊಂದು ಚಾಕು ಇರಿತ ಘಟನೆ ನಡೆದಿದೆ. ಹಳೆ ವೈಷಮ್ಯದ ಕಾರಣಕ್ಕೆ ಈ‌ ಘಟನೆಗಳು ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಬಂಧನಕ್ಕೆ …

Read More »

ಪಿಪಿಇ ಕಿಟ್ ಧರಿಸಿ ಮತ ಚಲಾಯಿಸಿದ ಕೊರೊನಾ ಸೋಂಕಿತರು

ಧಾರವಾಡ/ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಕೊನೆಯ ಒಂದು ತಾಸು ಮತದಾನ ಅವಧಿಯನ್ನು ಕೋವಿಡ್ ಸೋಂಕಿತರು ತಮ್ಮ ಹಕ್ಕು ಚಲಾಯಿಸಲು ಮೀಸಲಿಡಲಾಗಿತ್ತು. ಈ ವೇಳೆ ಅಣ್ಣಿಗೇರಿ ಪುರಸಭೆಯ ಮತಗಟ್ಟೆ ಸಂಖ್ಯೆ 50ರಲ್ಲಿ ಇಬ್ಬರು ಕೊರೊನಾ ಸೋಂಕಿತರು ಪಿಪಿಇ ಕಿಟ್ ಧರಿಸಿ ಕೋವಿಡ್ ನಿಯಂತ್ರಣದ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಮತ ಚಲಾಯಿಸಿದರು. ಹೋಂ ಐಸೋಲೇಷನ್ ನಲ್ಲಿದ್ದ ಓರ್ವ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿದ್ದ ಓರ್ವ ಪಿಪಿಇ ಕಿಟ್ ಧರಿಸಿ ಮತದಾನ …

Read More »