ಹುಬ್ಬಳ್ಳಿ: ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯದಲ್ಲಿ ವಿಶೇಷವಾಗಿ ಗಡಿಭಾಗಗಳಲ್ಲಿ ಕಠಿಣ ನಿಯಮ ತರುವ ಅನಿವಾರ್ಯತೆಯಿದೆ.ನಾಳೆ ದೆಹಲಿಗೆ ಹೋಗುತ್ತಿದ್ದು ಅಲ್ಲಿ ಆರೋಗ್ಯ ಸಚಿವರ ಜೊತೆ ಮಾತುಕತೆ ನಡೆಸಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ನಿಯಮ ಜಾರಿಗೆ ತರಲಾಗುವುದು. ಎಂದು ಹೇಳುವ ಮೂಲಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ತರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆರೋಗ್ಯ ಇಲಾಖೆ ಮತ್ತು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಗೆ ಬೂಸ್ಟರ್ …
Read More »ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ : ಶಾಲೆಗಳಿಗೆ ರಜೆ
ಹುಬ್ಬಳ್ಳಿ: ಇಲ್ಲಿನ ಆದರ್ಶ ನಗರದ ಜಿ.ವಿ. ಜೋಶಿ ರೋಟರಿ ಶಾಲೆಯ ಒಬ್ಬ ವಿದ್ಯಾರ್ಥಿಗೆ ಬುಧವಾರ ಕೋವಿಡ್ ದೃಢಪಟ್ಟಿದ್ದು, ಡಿ. 5ರ ವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ. ಇತ್ತೀಚೆಗೆ ಎಸ್‌ಡಿಎಂ ಕಾಲೇಜಿನ ಹಲವು ವಿದ್ಯಾರ್ಥಿಗಳಿಗೆ ಕೋವಿಡ್ ಆಗಿತ್ತು. ಜೋಶಿ ಶಾಲೆಯ ವಿದ್ಯಾರ್ಥಿ ಅಲ್ಲಿನವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ‘ಜೋಶಿ ಶಾಲೆಯ ಒಬ್ಬ ವಿದ್ಯಾರ್ಥಿಗೆ ಕೋವಿಡ್ ದೃಢವಾಗಿದ್ದು, ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಶಿಕ್ಷಕರು ಹಾಗೂ ಸಿಬ್ಬಂದಿ ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದ …
Read More »ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸರ ದಾಳಿ
ಧಾರವಾಡ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸರು ನಿನ್ನೆ ರಾತ್ರಿ ಇಲ್ಲಿನ ಹೊಯ್ಸಳ ನಗರದಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ ನಗರ ಠಾಣೆಯ ಇನಸ್ಪೆಕ್ಟರ್ ರಮೇಶ ಹೂಗಾರ,ಮಹಿಳಾ ಠಾಣೆಯ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ಸಂದರ್ಭದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರು ಮತ್ತು ಪುರುಷನೋರ್ವನನ್ನು ಬಂಧಿಸಿದ್ದಾರೆ. ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು …
Read More »ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ
ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿಂದು ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಶಾಫಿಂಗ್ ಮಾಲ್, ಜಿಮ್, ಬಾರ್ ಆಂಡ್ ರೆಸ್ಟೋರೆಂಟ್, ಮಲ್ಟಿಪ್ಲೆಕ್ಸ್, ಸಿನಿಮಾ ಮಂದಿರಗಳ ಮಾಲೀಕರು ಹಾಗೂ ಧಾರ್ಮಿಕ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಎಲ್ಲ ಸಮುದಾಯದ ಮುಖಂಡರ ಜೊತೆ ಕೋವಿಡ್ ಲಸಿಕೆ …
Read More »ಹುಬ್ಬಳ್ಳಿಯಲ್ಲಿ ಮದುವೆಗೆ ಮುಂಚೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ
ಹುಬ್ಬಳ್ಳಿ: ಯುವತಿಯೊಬ್ಬಳು ಮದುವೆಗೆ ಮುಂಚೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೋಷ ನಗರದಲ್ಲಿ ಘಟನೆ ನಡೆದಿದ್ದು, ಇಷ್ಟೆಲ್ಲಕ್ಕೂ ಭಾವಿ ಪತಿರಾಯನ(fiancé) ಕಿರುಕುಳವೇ (Torture) ಕಾರಣ ಎಂದು ಮೃತ ಯುವತಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾವಿ ಪತಿಯ ಕಿರುಕುಳದಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಎಂಗೇಜ್ಮೆಂಟ್ (Engagement) ಆದಾಗಿನಿಂದಲೂ ಯುವತಿಗೆ ಭಾವಿ ಪತಿ ಕಿರುಕುಳ ನೀಡುತ್ತಿದ್ದ ಎಂಬ …
Read More »ಪುನೀತ್ ರಾಜಕುಮಾರ್ ನಿಧನದ ನಂತರ ನೂರಾರು ಜನರು ನೇತ್ರದಾನಕ್ಕೆ ನೋಂದಣಿ
ಹುಬ್ಬಳ್ಳಿ: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (Power Star Puneeth Rajkumar) ಸಾವಿನ ನಂತರ ನೇತ್ರದಾನ (eye donation) ಮಾಡುವವರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದೆ. ಹುಬ್ಬಳ್ಳಿಯ ಎಂಎಂ ಜೋಶಿ ನೇತ್ರ ಚಿಕಿತ್ಸಾಲಯದಲ್ಲಿ (M M Joshi Eye Hospital) ಒಂದೇ ವಾರದಲ್ಲಿ 500 ಜನರಿಂದ ನೇತ್ರದಾನಕ್ಕೆ ನೊಂದಣಿಯಾಗಿದೆ. ನಿತ್ಯ ಕರೆ ಮಾಡಿ ನೂರಾರು ದಾನಿಗಳು ತಮ್ಮ ಹೆಸರು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಪುನೀತ್ ನಿಧನದ ನಂತರವೂ ಸಮಾಜದಲ್ಲಿ ಜನರಿಗೆ ದಾರಿದೀಪವಾಗ್ತಿದ್ದಾರೆ. ಪವರ್ ಸ್ಟಾರ್ …
Read More »ಡಿಮ್ಹಾನ್ಸ್ ಆಸ್ಪತ್ರೆಗೆ ಸೌಕರ್ಯ ಕಲ್ಪಿಸದ ಸರ್ಕಾರ: ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದ ಹೈಕೋರ್ಟ್
ಧಾರವಾಡ: ಧಾರವಾಡದ ಡಿಮ್ಹಾನ್ಸ್ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದೆ. ಧಾರವಾಡದ ಡಿಮ್ಹಾನ್ಸ್ ಆಸ್ಪತ್ರೆಗೆ ಸರ್ಕಾರ ಮೂಲಸೌಕರ್ಯ ಕಲ್ಪಿಸಿಲ್ಲ. ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರೂ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಗೈರು ಹಾಜರಾಗಿದ್ದಾರೆ. ಕ್ಯಾಬಿನೆಟ್ ಮೀಟಿಂಗ್‌ಗೆ ಹಾಜರಾಗಲು ತೆರಳಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ …
Read More »ಪೆಟ್ರೋಲ್ ದರ ಇಳಿಕೆ ರಾಜ್ಯ ಸರಕಾರ ಬೊಕ್ಕಸಕ್ಕೆ ಸುಮಾರು 2100 ಕೋಟಿ ರೂ. ಕೊರತೆಯಾಗಲಿದೆ ; ಬೊಮ್ಮಾಯಿ
ಹುಬ್ಬಳ್ಳಿ: ಕೇಂದ್ರ ಸರಕಾರ ಮಾದರಿಯಲ್ಲಿ, ರಾಜ್ಯ ಸರಕಾರದಿಂದಲೂ ಪೆಟ್ರೋಲ್ ಹಾಗೂ ಡೀಸಲ್ ಮೇಲೆ 7 ರೂ. ತೆರಿಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುರುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ನಿರ್ಧಾರ ಪ್ರಕಟಿಸುತ್ತಿದ್ದಂತೆಯೇ ನಾವು ಸಹ ತೈಲ ದರ ಇಳಿಕೆಗೆ ಕ್ರಮ ಕೈಗೊಂಡಿದ್ದೇವೆ. ಈ ಕುರಿತು ಕೇಂದ್ರ ಗೃಹ ಹಾಗೂ ಹಣಕಾಸು ಸಚಿವರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ. ಎಲ್ಲ ರಾಜ್ಯಗಳು …
Read More »ಹಾನಗಲ್ ನಲ್ಲಿ ಪಕ್ಷ ಸೋಲುತ್ತೆ ಎಂಬುದು ಬೊಮ್ಮಾಯಿಗೂ ಗೊತ್ತು, ನಿರಾಣಿಗೂ ಗೊತ್ತು; ಸುಳ್ಳು ಹೇಳುವುದರಲ್ಲಿ ಬಿಜೆಪಿಗರು ನಿಸ್ಸೀಮರು; ಸಿದ್ದರಾಮಯ್ಯ
ಹುಬ್ಬಳ್ಳಿ: ಹಾನಗಲ್, ಸಿಂದಗಿ ಉಪಚುನಾವಣಾ ಅಖಾಡ ರಂಗೇರಿದ್ದು, ಆಡಳಿತ ಪಕ್ಷ ಬಿಜೆಪಿ, ವಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳು ಎರಡೂ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ. ಬಿಜೆಪಿ ಸೋಲಲಿದೆ ಎಂಬುದು ಸಿಎಂ ಬೊಮ್ಮಾಯಿಗೂ ಗೊತ್ತು, ಸಚಿವ ನಿರಾಣಿಗೂ ಗೊತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಾನಗಲ್ ನಲ್ಲಿ ಬಿಜೆಪಿ ಸೋಲಲಿದೆ. ಹೀಗಾಗಿ ಹಣ …
Read More »ಬೆಳಗ್ಗೆ ಎದ್ದು ದೇವರಿಗೆ ಕೈ ಮುಗಿವ ಮೊದಲು ಗ್ಯಾಸ್ ಸಿಲಿಂಡರ್, ಬೈಕಿಗೆ ಪೂಜೆ ಮಾಡಿ ಇನ್ನೊಂದು ಸ್ವಲ್ಪ ಹೆಚ್ಚು ಮೈಲೇಜ್ ಬರಲಿ ಎನ್ನುವ ಪರಿಸ್ಥಿತಿ ಬಂದಿದೆ : ರಣದೀಪ್ ಸಿಂಗ್ ಸುರ್ಜೇವಾಲಾ
ಹಾವೇರಿ: ಬೆಳಗ್ಗೆ ಎದ್ದು ದೇವರಿಗೆ ಕೈ ಮುಗಿವ ಮೊದಲು ಗ್ಯಾಸ್ ಸಿಲಿಂಡರ್, ಬೈಕಿಗೆ ಪೂಜೆ ಮಾಡಿ ಇನ್ನೊಂದು ಸ್ವಲ್ಪ ಹೆಚ್ಚು ಮೈಲೇಜ್ ಬರಲಿ ಎನ್ನುವ ಪರಿಸ್ಥಿತಿ ಬಂದಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ,ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದರು. ಹಾನಗಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ, ಬೊಮ್ಮಾಯಿ ಕಾರಣದಿಂದ ಬೆಲೆಯೇರಿಕೆಯಿಂದಾಗಿ ದೇಶದ, ರಾಜ್ಯದ ಯುವಜನತೆ ಇಂದು ತೊಂದರೆ ಅನುಭವಿಸುತ್ತಿದ್ದಾರೆ.ಮೋದಿ, ಮೆಹೆಂಗಾಯಿ ಎರಡೂ ದೇಶಕ್ಕೆ ಹಾನಿಕಾರಕವಾಗಿದೆ ಎಂದು …
Read More »