Breaking News
Home / ಹುಬ್ಬಳ್ಳಿ (page 78)

ಹುಬ್ಬಳ್ಳಿ

ಕಳ್ಳತನ ಮಾಡಲು ಹೋಗಿ ಅಪಾರ್ಟ್‍ಮೆಂಟ್‍ನಿಂದ ಬಿದ್ದ ಘಟನೆ ವಿದ್ಯಾನಗರದ ಚನ್ನಮ್ಮ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ.

ತಾರಿಹಾಳ ಗ್ರಾಮದ ಪುಟ್ಟರಾಜ ಕಳ್ಳತನ ಮಾಡುವ ವೇಳೆ ಮೇಲಿಂದ ಬಿದ್ದಿದ್ದಾನೆ. ಈತ ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಕಳ್ಳತನ ಮಾಡಲು ವಿದ್ಯಾನಗರದ ಚನ್ನಮ್ಮ ಅಪಾರ್ಟ್‍ಮೆಂಟ್‍ಗೆ ತೆರಳಿದ್ದ. ಆದರೆ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಕಳ್ಳನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಡಿದ ಅಮಲಿನಲ್ಲಿ ಬಿದ್ದು, ಕಳ್ಳ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳ ಈ ಹಿಂದೆ ಎಲ್ಲೆಲ್ಲಿ ಕಳ್ಳತನ …

Read More »

ಮಳೆಯನ್ನ ಲೆಕ್ಕಿಸದೇ ಕೆಲಸ ನಿರ್ವಹಿಸಿದ ಟ್ರಾಫಿಕ್ ಪೊಲೀಸ್

ಹುಬ್ಬಳ್ಳಿ: ಮಳೆಯನ್ನ ಲೆಕ್ಕಿಸದೇ ಕೆಲಸ ನಿರ್ವಹಿಸಿದ ಟ್ರಾಫಿಕ್ ಪೊಲೀಸ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಶಂಬು ರೆಡ್ಡಿ ಮಳೆಯ ನಡುವೆ ಕರ್ತವ್ಯ ಪಾಲನೆ ಮಾಡಿದ ಟ್ರಾಫಿಕ್ ಪೊಲೀಸ್. ಹುಬ್ಬಳ್ಳಿ ನಗರದ ಚಿಟಗುಪ್ಪಿ ಆಸ್ಪತ್ರೆಯ ಸರ್ಕಲ್ ನಲ್ಲಿ ಕಾರ್ ಮತ್ತು ಟಿಪ್ಪರ್ ನಡುವೆ ಅಪಘಾತ ಉಂಟಾಗಿದ್ದರಿಂದ ಸ್ಥಳದಲ್ಲಿ ಟ್ರಾಫಿಕ್ ಆಗಿತ್ತು. ಜೋರು ಮಳೆ ಸುರಿಯುತ್ತಿದ್ದರೂ ಶಂಬು ರೆಡ್ಡಿ ಟ್ರಾಫಿಕ್ ಕ್ಲಿಯರ್ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.  

Read More »

ಗಣೇಶ ವಿರ್ಸಜನೆ ವೇಳೆ ಹುಬ್ಬಳ್ಳಿಯಲ್ಲಿ ಡಬಲ್ ಮರ್ಡರ್

ಹುಬ್ಬಳ್ಳಿ: ಹಳೇ ವೈಷಮ್ಯದ ವಿಚಾರವಾಗಿ ಸ್ನೇಹಿತರ ಮಧ್ಯೆ ಮಾರಾಮಾರಿ ನಡೆದು, ಇಬ್ಬರು ಕೊಲೆಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗಣೇಶ ವಿರ್ಸಜನೆ ವೇಳೆಯೇ ಡಬಲ್ ಮರ್ಡರ್ ನಡೆದಿರುವ ಪರಿಣಾಮ ಹುಬ್ಬಳ್ಳಿ ಜನರು ಬೆಚ್ಚಿ ಬಿದ್ದಿದ್ದಾರೆ ಹುಬ್ಬಳ್ಳಿಯ ಗೋಪನಕೊಪ್ಪ ಬಳಿ ಘಟನೆ ನಡೆದಿದ್ದು, ಹಳೇ ಸ್ನೇಹಿತರಾಗಿದ್ದ ವಡ್ಡರ ಓಣಿಯ ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಜೋರಮ್ಮನವರ ಕೊಲೆಯಾದ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಕೊಲೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, …

Read More »

ಭಾರತ ಸಮೀಕ್ಷೆಯಲ್ಲಿ ಮೂರನೇ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತೊಂದು ಗರಿಯನ್ನು ಮುಡಿಗೇರಿಸಿಕೊಂಡಿದೆ. ಸ್ವಚ್ಛ ಭಾರತ ಸಮೀಕ್ಷೆಯಲ್ಲಿ ಮೂರನೇ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಕೇಂದ್ರ ಸರ್ಕಾರ ನಡೆಸುವ ಸ್ವಚ್ಛ ಭಾರತ ಸರ್ವೇಕ್ಷಣೆಯಲ್ಲಿ (ಸಮೀಕ್ಷೆಯಲ್ಲಿ) ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಮೂರನೇ ಸ್ಥಾನ ಬಂದಿದೆ. ಗಣೇಶ ಚತುರ್ಥಿಯ ಮೊದಲ ದಿನ ಕೇಂದ್ರ ಸರ್ಕಾರ ಪ್ರಕಟಿಸಿರುವ ಸ್ವಚ್ಛತಾ ವರದಿಯಲ್ಲಿ ಮೈಸೂರಿಗೆ ಮೊದಲ ಸ್ಥಾನ, ತುಮಕೂರಿಗೆ …

Read More »

ಕೊರೊನಾ ಸೋಂಕು ತಗುಲಿದ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಧಾರವಾಡ: ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕು ತಗುಲಿದ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುತ್ತುರಾಜ್ ಶಿವಣ್ಣವರ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮುತ್ತುರಾಜ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ನಿವಾಸಿ. ಪತ್ನಿಗೆ ಸೋಂಕು ತಗುಲಿದ್ದರಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ 9 ಗಂಟೆಗೆ ಪತ್ನಿ ಭೇಟಿಯಾಗಲು ಮುತ್ತುರಾಜ್ ಆಗಮಿಸಿದ್ದರು. ಈ ವೇಳೆ ಮೂರನೇ …

Read More »

ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು- ಬೀದಿಯಲ್ಲಿ ಶವ ಇಟ್ಟ ಸಿಬ್ಬಂದಿ

ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಶತಾಯು ಗತಾಯು ಹೋರಾಟ ನಡೆಸಿರುವ ಕಿಮ್ಸ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, ಕೋವಿಡ್‍ನಿಂದ ಮೃತಪಟ್ಟಿರುವ ವ್ಯಕ್ತಿ ಶವವನ್ನು ಪ್ಯಾಕ್ ಮಾಡಿ ಆಸ್ಪತ್ರೆಯ ಅಂಗಳದ ಬೀದಿಯಲ್ಲೆ ಬಿಟ್ಟು ಅಮಾನವೀಯತೆ ಪ್ರದರ್ಶನ ಮಾಡಿದ್ದಾರೆ. ಹೌದು ಕೊರೊನಾ ವೈರಸ್ ಎಲ್ಲೆಡೆಯೂ ಆತಂಕದ ವಾತಾವರಣ ಸೃಷ್ಟಿಸಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕಿಮ್ಸ್ ಸಿಬ್ಬಂದಿ ಕೊವೀಡ್‍ನಿಂದ ಮೃತಪಟ್ಟಿರುವ ವ್ಯಕ್ತಿ ಶವವನ್ನು ಕಿಮ್ಸ್ ಮಲ್ಟಿಸ್ಪೆಷಾಲಿಟಿ ಕಟ್ಟಡ ಎದುರು ಪ್ಯಾಕ್ ಮಾಡಿ ಸ್ಟ್ರೆಚರ್ ಮೇಲೆ …

Read More »

ಆಗಸ್ಟ್ 22ರಿಂದ ಮದ್ಯ ಮಾರಾಟ ನಿಷೇಧ: d.c…

ಧಾರವಾಡ: ಅಗಸ್ಟ್ 22ರಿಂದ ಸೆಪ್ಟಂಬರ್ 4ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಸಮಾರಂಭ, …

Read More »

ರೌಡಿಶೀಟರ್ ಪ್ರೂಟ್ ಇರ್ಫಾನ್ ಹತ್ಯೆ ಪ್ರಕರಣ- ಭೂಗತ ಪಾತಕಿ ಬಚ್ಚಾಖಾನ್ ಸಹಚರರ ಬಂಧನ

ಹುಬ್ಬಳ್ಳಿ: ರೌಡಿಶೀಟರ್ ಫ್ರೂಟ್ ಇರ್ಫಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ ಏಳಕ್ಕೇರಿದಂತಾಗಿದೆ. ಬಂಧಿತರಿಬ್ಬರು ಬಚ್ಚಾಖಾನ್ ಸಹಚರರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಮೈಸೂರಿನ ಶಿವರಾತ್ರಿ ಶೇಶ್ವನಗರದ ಬನ್ನಿಮಂಟಪ ಲೇಔಟ್ ನ ಶಹಜಾನ ಆಶ್ರಫ್. ಕೆ (24) ಹಾಗೂ ಮೈಸೂರು ಗಾಂಧಿನಗರದ ಸೈಯದ್ ಸೋಹೈಲ್ ಪೀರ್ ಸೈಯದ ಆಜೀಮ್ ಪೀರ್ (22) ಬಂಧಿತರು. ಆರೋಪಿಗಳಿಂದ ಎರಡು ಮೊಬೈಲಗಳನ್ನು ವಶಕ್ಕೆ ಪಡೆಯಲಾಗಿದೆ. …

Read More »

ರೌಡಿಶೀಟರ್ ಇರ್ಫಾನ್ ಹತ್ಯೆ- ಐವರು ಆರೋಪಿಗಳು ಅರೆಸ್ಟ್‌

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯನ್ನು ಬೆಚ್ಚಿಬೀಳಿಸಿದ ಶೂಟೌಟ್ ಪ್ರಕರಣವನ್ನು ಬೆನ್ನಟ್ಟಿದ ಹು-ಧಾ ಮಹಾನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡ ಫ್ರೂಟ್ ಇರ್ಫಾನ್ ಎಂಬುವ ರೌಡಿಶೀಟರ್ ಅನ್ನು ಹಳೇ ಹುಬ್ಬಳ್ಳಿ ಅಲ್ತಾಜ್ ಸಭಾ ಭವನ ಬಳಿ ಆಗಸ್ಟ್ 6ರಂದು ಗುಂಡಿನ ಮಳೆಗೆರೆದು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ಎಸ್ಕೇಪ್ ಆಗಲು ನೆರವಾಗಿದ್ದ ಮತ್ತು ಕೃತ್ಯದಲ್ಲಿ ಭಾಗಿಯಾಗಿದ್ದ ಐವರನ್ನು …

Read More »

ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆಗೆ ಸನ್ಮಾನ

ಹುಬ್ಬಳ್ಳಿ: ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ, ಹುಬ್ಬಳ್ಳಿ ಸಾಯಿನಗರದ ಟೀಚರ್ಸ್ ಕಾಲನಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.     ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯ ಕಾರ್ಡಿನಡಿ ಲಭ್ಯವಾಗುವ ಔಷಧಗಳನ್ನು ಬೆಂಗಳೂರಿನಿಂದ ತೆಗೆದುಕೊಂಡು ಬರುವುದು ಕಷ್ಟವಾಗುತ್ತದೆ. ಕಾರ್ಡನ್ನು ಹುಬ್ಬಳ್ಳಿಗೆ ವರ್ಗಾಯಿಸುವಂತೆ ಇದೇ ವೇಳೆ ಮನವಿ ಮಾಡಿಕೊಂಡರು. ಇದಕ್ಕೆ …

Read More »