Breaking News
Home / ಹುಬ್ಬಳ್ಳಿ (page 79)

ಹುಬ್ಬಳ್ಳಿ

ಕೊರೊನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಅದ್ದೂರಿಯಾಗಿ ಸ್ವಾಗತಿ

ಹುಬ್ಬಳ್ಳಿ: ಕೊರೊನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು. ಪೂರ್ವ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಗೆ ಇತ್ತೀಚಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ  ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊರೊನಾ ವರದಿ ನೆಗಟಿವ್ ಬಂದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸುದ್ದಿ ತಿಳಿದು ಠಾಣೆಯ ಇತರ ಸಿಬ್ಬಂದಿ, ಪೇದೆಗೆ ಶಾಲು, ಹೂವಿನ ಮಾಲೆ ಹಾಕಿ ಸನ್ಮಾನ ಮಾಡಿದರು.

Read More »

5ನೇ ದಿನಕ್ಕೆ ಕಾಲಿಟ್ಟ ಕಿಮ್ಸ್ ವೈದ್ಯಕೀಯ ಸಿಬ್ಬಂದಿಯ ಪ್ರತಿಭಟನೆ

ಹುಬ್ಬಳ್ಳಿ: ಎನ್.ಪಿ.ಎಸ್ ಸೌಲಭ್ಯ ಸೇರಿದಂತೆ ಜ್ಯೋತಿ ಸಂಜೀವಿನಿ ಒದಗಿಸುವಂತೆ ಆಗ್ರಹಿಸಿ ಕಿಮ್ಸ್ ಶುಶ್ರೂಷಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಯಾವುದೇ ದಕ್ಕೆ ಉಂಟಾಗದಂತೆ ಪ್ರತಿಭಟನೆ ನಡೆಸಿದರು.ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಹುಬ್ಬಳ್ಳಿಯ ಕಿಮ್ಸ್ ಆವರಣದ ಎದುರು ಕಪ್ಪು ಪಟ್ಟಿ ಧರಿಸಿ ಕೋವಿಡ್ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದೆ ಕಾರ್ಯ ಮಾಡಿದ್ದೇವೆ. ಪಿಂಚಣಿ ಸೌಲಭ್ಯ ಕುಟುಂಬ ಕಲ್ಯಾಣ …

Read More »

ಕಳ್ಳತನದ ಮೂಲಕ ಆತಂಕ ಸೃಷ್ಟಿಸಿದ್ದ ಫೈರೋಜ್ ಜಫ್ರಿ ಬಂಧನ

  ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳ್ಳತನದ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಿದ್ದ ಖತರ್ನಾಕ್ ಕಳ್ಳ ಫೈರೋಜ್ ಜಫ್ರಿ ಕಳ್ಳನನ್ನು ಬಂಧಿಸುವಲ್ಲಿ ಉಪನಗರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಫೈರೋಜ್ ಜಫ್ರಿ ರಾಜೇಸಾಬ(38) ಬಂಧಿತ ಆರೋಪಿ. ರಾತ್ರಿ ವೇಳೆ ಮಾರುಕಟ್ಟೆಯಲ್ಲಿ ಶಟರ್ ಮುರಿದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸಿರುವ ಪೊಲೀಸರು, ಆತನಿಂದ 30,300 ರೂ ನಗದು, ಕಬ್ಬಿಣದ ರಾಡ್ ವಶಪಡಿಸಿಕೊಂಡಿದ್ದಾರೆ. ಲಬ್ ರಸ್ತೆ ವಿನಾಯಕ ಮೆಡಿಕಲ್ …

Read More »

ಲಾರಿ, ಕಾರು ಡಿಕ್ಕಿ- ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

ಹುಬ್ಬಳ್ಳಿ: ಲಾರಿ ಮತ್ತು ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಸಮೀಪದ ಅದರಗುಂಚಿ ಕ್ರಾಸ್ ಬಳಿ ನಡೆದಿದೆ.ರಸ್ತೆ ಪಕ್ಕ ನಿಲ್ಲಿಸಿದ ಲಾರಿಗೆ ಹಿಂಬದಿಯಿಂದ ಬಂದು ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದ ಅಯ್ಯನಾರ್(35) ಎಂದು ಗುರುತಿಸಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿದ್ದ ಜನರು ನಾಲ್ಕು ಜನರ ಪ್ರಾಣ ಉಳಿಸಿದ್ದಾರೆ. ಕಾರಿನ ಗ್ಲಾಸ್ ಒಡೆದು ಕಾರಿನಲ್ಲಿದ್ದವರ …

Read More »

ಕ್ವಿಟ್ ಇಂಡಿಯಾ ಚಳುವಳಿ ಸ್ಮರಣಾರ್ಥ ಹೋರಾಟಗಾರರಿಗೆ ರಾಷ್ಟ್ರಪತಿಗಳ ಪರವಾಗಿ ಸನ್ಮಾನ

ಧಾರವಾಡ/ಹುಬ್ಬಳ್ಳಿ: ಕ್ವಿಟ್ ಇಂಡಿಯಾ ಚಳುವಳಿ ಸ್ಮರಣಾರ್ಥ ಹೋರಾಟಗಾರರಿಗೆ ರಾಷ್ಟ್ರಪತಿಗಳ ಪರವಾಗಿ ಸನ್ಮಾನ ಮಾಡಲಾಗಿದೆ.ಭಾರತೀಯ ಇತಿಹಾಸದಲ್ಲಿ ಐತಿಹಾಸಿಕ ದಿನವಾಗಿರುವ ಆಗಸ್ಟ್ 9ರ ಕ್ವಿಟ್ ಇಂಡಿಯಾ ಚಳುವಳಿ ಅಂಗವಾಗಿ ಭಾರತದ ರಾಷ್ಟ್ರಪತಿಗಳು ಧಾರವಾಡ ಜಿಲ್ಲೆಯ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಿಗೆ ತಮ್ಮ ಕಚೇರಿಯಿಂದ ಶಾಲು, ಹಾರ ಮತ್ತು ಸಂದೇಶಪತ್ರಗಳನ್ನು ಅವರಿಗೆ ತಲುಪಿಸಿ ಗೌರವಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಿದ್ದರು ರಾಷ್ಟ್ರಪತಿಗಳ ಸಂದೇಶದೊಂದಿಗೆ ಜಿಲ್ಲಾಧಿಕಾರಿಗಳ ಪ್ರತಿನಿಧಿಯಾಗಿ ಉಪವಿಭಾಗಾಧಿಕಾರಿ ಮಹ್ಮದ ಜುಬೇರ್ ಅವರು ಇಂದು ಬೆಳಗ್ಗೆ ಹುಬ್ಬಳ್ಳಿಯ ಉಣಕಲ್ …

Read More »

ರೈಲು ದೇಶದ ಪ್ರಗತಿಯ ಎಂಜಿನ್: ಸಚಿವ ಪಿಯುಷ್ ಗೋಯಲ್

ಬೆಳಗಾವಿ, ಆ.9(ಕರ್ನಾಟಕ ವಾರ್ತೆ): ಹುಬ್ಬಳ್ಳಿಯಲ್ಲಿ ಸ್ಥಾಪಿಸಲಾಗಿರುವ ಉತ್ತರ ಕರ್ನಾಟಕದ ಪ್ರಥಮ ರೈಲು ಮ್ಯೂಸಿಯಂ ಅನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಇಲಾಖೆಯ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಭಾನುವಾರ ದೇಶಕ್ಕೆ ಸಮರ್ಪಿಸಿದರು. ನೈರುತ್ಯ ರೈಲ್ವೆ ವತಿಯಿಂದ ವರ್ಚುವಲ್ ವೇದಿಕೆಯ ಮೂಲಕ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಹುಬ್ಬಳ್ಳಿಯ ರೈಲು ಮ್ಯೂಸಿಯಂ ಅನ್ನು ದೇಶಕ್ಕೆ ಸಮರ್ಪಿಸಲಾಯಿತು. ನಂತರ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ ಅವರು, ಐತಿಹಾಸಿಕ ಮಹತ್ವ ಹೊಂದಿರುವ ಹುಬ್ಬಳ್ಳಿಯಲ್ಲಿ …

Read More »

ಚೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು

ಹುಬ್ಬಳ್ಳಿ: ಚೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು ಜೋರಾಗಿದೆ. ಮೂವರು ಯುವಕರು ಬುಲೆಟ್ ಬೈಕಿನಲ್ಲಿ ಆಗಮಿಸಿ ಮಗನ ಮದುವೆ ಸಂಭ್ರಮದಲ್ಲಿದ್ದ ರೌಡಿ ಶೀಟರ್ ಮೇಲೆ ನಾಲ್ಕು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಮೂರು ಗುಂಡು ರೌಡಿ ಶೀಟರ್ ಫ್ರೋಟ್ ಇರ್ಫಾನ್‍ಗೆ ತಗುಲಿದ ಪರಿಣಾಮ ರೌಡಿ ಶೀಟರ್ ಸ್ಥಿತಿ ಗಂಭೀರವಾಗಿದೆ. ಧಾರವಾಡದ ರೌಡಿಶೀಟರ್ ಇರ್ಫಾನ್ ಮೇಲೆಯೇ ಅಪರಿಚಿತರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಹಳೇ ಹುಬ್ಬಳ್ಳಿಯ ವಿಶಾಲ …

Read More »

ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಪುತ್ರಿ ಬ್ರಹ್ಮಣಿ ಮಗುವಿಗೆ ಕಲಘಟಗಿ ತೊಟ್ಟಿಲು ಸಿದ್ಧವಾಗುತ್ತಿದೆ.

ಹುಬ್ಬಳ್ಳಿ: ದೇಶಾದ್ಯಂತ ಹೆಸರುವಾಸಿಯಾಗಿರುವ ಧಾರವಾಡ ಜಿಲ್ಲೆಯ ಕಲಘಟಗಿ ಬಣ್ಣದ ತೊಟ್ಟಿಲು ತನ್ನದೇ ಆದ ಮಹತ್ವವನ್ನು ಹೊಂದಿದೆ. ಇದೀಗ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಪುತ್ರಿ ಬ್ರಹ್ಮಣಿ ಮಗುವಿಗೆ ಕಲಘಟಗಿ ತೊಟ್ಟಿಲು ಸಿದ್ಧವಾಗುತ್ತಿದೆ. ಕಲಘಟಗಿ ಕಲಾವಿದ ಮಾರುತಿ ಬಳಿಯೇ ಸುಮಾರು ಮೂರು ತಿಂಗಳಿನಿಂದ ತೊಟ್ಟಿಲು ತಯಾರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ತೊಟ್ಟಿಲಿನಲ್ಲಿ ಕೃಷ್ಣನ ಬಾಲ ಲೀಲೆ ಮೂಡಿಬಂದಿರುವುದು ತೊಟ್ಟಿಲಿನ ಮೆರಗನ್ನು ಮತ್ತಷ್ಟು ಹೆಚ್ಚಿಸಿದೆ. ಕಲಘಟಗಿ ತೊಟ್ಟಿಲು ಕಲಾವಿದನ ಕೈ ಚಳಕದಿಂದ ನೋಡುಗರ …

Read More »

ಆ.16ರಿಂದ ಬೆಂಗಳೂರು-ಹುಬ್ಬಳ್ಳಿ-ದೆಹಲಿ ವಿಮಾನ ಸಂಚಾರ ಪುನರಾರಂಭ

ಹುಬ್ಬಳ್ಳಿ, – ಲಾಕ್‍ಡೌನ್ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ಸ್ಥಗಿತಗೊಳಿಸಿದ್ದ ಸ್ಟಾರ್ ಏರ್ ವಿಮಾನ ಆಗಸ್ಟ್ 16ರಿಂದ ಬೆಂಗಳೂರು- ಹುಬ್ಬಳ್ಳಿ- ದೆಹಲಿ (ಹಿಂಡಾನ್) ನಡುವೆ ಸಂಚಾರ ಪುನರಾರಂಭಿಸಲಿದೆ. ವಾರದಲ್ಲಿ ನಾಲ್ಕು ದಿನ ಸೋಮವಾರ, ಮಂಗಳವಾರ, ಶುಕ್ರವಾರ ಹಾಗೂ ಭಾನುವಾರ ವಿಮಾನ ಸಂಚರಿಸಲಿದೆ. ಈಗಾಗಲೇ ಆನ್‍ಲೈನ್ ಬುಕ್ಕಿಂಗ್ ಶುರು ಮಾಡಲಾಗಿದೆ. ಶೀಘ್ರದಲ್ಲೇ ಮುಂಬೈ, ಅಹಮದಾಬಾದ್ ಸಂಚಾರ ಆರಂಭಿಸುವ ಸಾಧ್ಯತೆ ಇದೆ. ಲಾಕ್‍ಡೌನ್‍ಗೂ ಮುನ್ನ ನಿತ್ಯ 14 ವಿಮಾನ ಹಾರಾಡುತ್ತಿದ್ದವು. ಬಳಿಕ ಎಲ್ಲ ಸ್ಥಗಿತಗೊಂಡಿದ್ದವು. …

Read More »

ಬಸ್‌ನಲ್ಲಿ ಕಲ್ಲು ತುಂಬಿ ಸಾಗಿಸಿದರು!

ಹುಬ್ಬಳ್ಳಿ: ಕುಂದಗೋಳ-ಹುಬ್ಬಳ್ಳಿ ನಡುವೆ ಸಂಚರಿಸುವ ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ, ಸಿಬ್ಬಂದಿ ಗುರುವಾರ ಕಲ್ಲು ಸಾಗಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸೂರು ರಸ್ತೆ ಬಳಿ ರಸ್ತೆ ವಿಭಜಕ ಕಾಮಗಾರಿ ನಡೆಯುತ್ತಿದ್ದು, ಮೊದಲು ರಸ್ತೆಗೆ ಹಾಕಲಾಗಿದ್ದ ಕಲ್ಲುಗಳನ್ನು ತೆಗೆಯಲಾಗಿದೆ. ಗೋಕುಲ ರಸ್ತೆಯ ಬಸ್‌ ಡಿಪೊದಲ್ಲಿ ಉದ್ಯಾನ ಕಾಮಗಾರಿ ನಡೆಯುತ್ತಿರುವುದರಿಂದ, ಅಲ್ಲಿಗೆ ಈ ಕಲ್ಲುಗಳನ್ನು ಸಾಗಿಸಲು ಸಿಬ್ಬಂದಿ ಬಸ್‌ ಬಳಕೆ ಮಾಡಿಕೊಂಡಿದ್ದಾರೆ. ರಸ್ತೆ ಮೇಲಿದ್ದ ಕಲ್ಲುಗಳನ್ನು ಐದಾರು ಸಿಬ್ಬಂದಿ ಸೇರಿ ಬಸ್‌ಗೆ ತುಂಬಿದ್ದಾರೆ. 50ಕ್ಕಿಂತಲೂ …

Read More »