ಹುಬ್ಬಳ್ಳಿ: ನಗರದ ಕಾಲೇಜೊಂದರಲ್ಲಿ ಡಿಪ್ಲೋಮಾ ಓದುತ್ತಿದ್ದ ವಿದ್ಯಾರ್ಥಿನಿಗೆ ಯುವಕನೊಬ್ಬ ಪ್ರೀತಿಸದಿದ್ದರೆ ಮುಖಕ್ಕೆ ಆ್ಯಸಿಡ್ ಎರಚುವುದಾಗಿ ಬೆದರಿಸಿ, ಜೀವ ಬೆದರಿಕೆ ಹಾಕಿದ ಪ್ರಕರಣ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವಿನೋದರಾಜ್ ಎಂಬಾತನ ವಿರುದ್ಧ ವಿದ್ಯಾರ್ಥಿನಿಯ ಪಾಲಕರು ದೂರು ನೀಡಿದ್ದಾರೆ. ಮೂರು–ನಾಲ್ಕು ವರ್ಷಗಳಿಂದ ವಿನೋದರಾಜ ಜೊತೆ ವಿದ್ಯಾರ್ಥಿನಿಗೆ ಸ್ನೇಹವಿತ್ತು. ಕೆಲ ತಿಂಗಳಿನಿಂದ ಅವನ ವರ್ತನೆಯಲ್ಲಿ ಬದಲಾವಣೆ ಕಂಡು ಬಂದ ಕಾರಣ, ಅವನ ಮೊಬೈಲ್ ನಂಬರ್ನ್ನು ಬ್ಲಾಕ್ ಮಾಡಿದ್ದಳು. ಇದರಿಂದ ಕೋಪಗೊಂಡ ವಿನೋದರಾಜ್ “ನಿನ್ನನ್ನು ಪ್ರೀತಿಸುತ್ತಿದ್ದೇನೆ. …
Read More »ಸುಮಾರು 25 ವರ್ಷಗಳ ಬಳಿಕ ಡೋರಿ ಗ್ರಾಮದ ಗ್ರಾಮದೇವಿ ಜಾತ್ರೆ ಡೋಲಿ ಹೊತ್ತ ಮುಸ್ಲಿಂ ಬಾಂಧವರು:
ಧಾರವಾಡ: ಜಾತ್ರಾ ಮಹೋತ್ಸವಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಿರುವ ಬೆನ್ನಲ್ಲೇ ಜಿಲ್ಲೆಯ ಅಳ್ನಾವರ ತಾಲೂಕಿನ ಡೋರಿ ಗ್ರಾಮದಲ್ಲಿ ಗ್ರಾಮಸ್ಥರೆಲ್ಲರೂ ಭಾವೈಕ್ಯತೆ ಮೆರೆದಿದ್ದಾರೆ. ಗ್ರಾಮದೇವಿಯ ಜಾತ್ರೆಯಲ್ಲಿ ಮುಸ್ಲಿಂ ಬಾಂಧವರು ಹೊನ್ನಾಟ ಆಡುವ ಮೂಲಕ ಸಾಮರಸ್ಯ ಸಾರಿದ್ದಾರೆ. ಕಳೆದ 8 ದಿನಗಳಿಂದ ನಡೆದಿರುವ ಗ್ರಾಮದೇವಿ ಜಾತ್ರೆಯಲ್ಲಿ ಮೂರು ದಿನಗಳಿಂದ ಹೊನ್ನಾಟ ನಡೆದಿದೆ. ಸುಮಾರು 25 ವರ್ಷಗಳ ಬಳಿಕ ಡೋರಿ ಗ್ರಾಮದ ಗ್ರಾಮದೇವಿ ಜಾತ್ರೆ ಮಾಡುತ್ತಿದ್ದಾರೆ. ಇವತ್ತು ಇಡೀ ದಿನ ಮುಸ್ಲಿಂ ಬಾಂಧವರು ಹೊನ್ನಾಟ ಆಡಿದ್ದಾರೆ. …
Read More »ನವಲಗುಂದ ಪಟ್ಟಣದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್:ಜೋಶಿ
ನವಲಗುಂದ ಪಟ್ಟಣದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್… ರಾಜ್ಯ ಸರ್ಕಾರ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಕೇಂದ್ರ ಸಚಿವ ಜೋಶಿ ಅಗ್ರಹ ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆಯೇ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಲಾದ ಜೋಶಿ ತಿಳಿಸಿದ್ದಾರೆ. ಈ …
Read More »ಹುಬ್ಬಳ್ಳಿ- ಹೈದರಾಬಾದ್ ನಡುವೆ “ಐರಾವತ” ವೋಲ್ವೊ
ಹುಬ್ಬಳ್ಳಿ: ಜಿಲ್ಲೆಯಿಂದ ಹೈದರಾಬಾದ್ಗೆ ಹೋಗಿ ಬರುವ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹುಬ್ಬಳ್ಳಿ ಹಾಗೂ ಹೈದರಾಬಾದ್ ನಡುವೆ ಐರಾವತ ವೋಲ್ವೊ ಎಸಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಗೋಕುಲ ರಸ್ತೆ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು, ಸಾರ್ವಜನಿಕರ ಸಮಕ್ಷಮದಲ್ಲಿ ಬಸ್ಗೆ ಪೂಜೆ ಸಲ್ಲಿಸಿ ನೂತನ ಮಾರ್ಗಕ್ಕೆ ಶುಭ ಹಾರೈಸಿ ಮಾತನಾಡಿದ ಅವರು, ವಾಣಿಜ್ಯ, …
Read More »ಮೇ 13 ರಿಂದ ಮೇ 22 ರ ವರೆಗೆ ನವಿಲುತೀರ್ಥ ಜಲಾಶಯದಿಂದ ನೀರನ್ನು ಮಲಪ್ರಭಾ ಬಲದಂಡೆ ಕಾಲುವೆಯ ಮುಖಾಂತರ ಬಿಡುಗಡೆ
ಧಾರವಾಡ – ಮಲಪ್ರಭಾ ಬಲದಂಡೆ ಕಾಲುವೆ ಅಡಿ ಬರುವ ಧಾರವಾಡ ಜಿಲ್ಲೆಯಲ್ಲಿನ ನವಲಗುಂದ, ಅಣ್ಣಿಗೇರಿ ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕಿನ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕೆರೆಗಳಿಗೆ ನೀರನ್ನು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು, ಮೇ 13 ರಿಂದ ಮೇ 22 ರ ವರೆಗೆ ನವಿಲುತೀರ್ಥ ಜಲಾಶಯದಿಂದ ನೀರನ್ನು ಮಲಪ್ರಭಾ ಬಲದಂಡೆ ಕಾಲುವೆಯ ಮುಖಾಂತರ ಬಿಡುಗಡೆ ಮಾಡಲು ಆದೇಶಿಸಿದ್ದು, ನೀರು ಸದ್ಬಳಕೆ ಆಗುವಂತೆ ನಿಗಾವಹಿಸಲು ಜಿಲ್ಲಾಮಟ್ಟದ ಹಿರಿಯ …
Read More »ಹುಬ್ಬಳ್ಳಿಯಲ್ಲಿ 1,700 ರೌಡಿ ಶೀಟರ್ಗಳ ಪರೇಡ್
ಹುಬ್ಬಳ್ಳಿ : ಸಾರ್ವಜನಿಕ ಶಾಂತಿ, ನೆಮ್ಮದಿ ಭಂಗ ಆಗದಂತೆ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಲಾಗುತ್ತೆ. ವೈಲೆಂಟ್ ಆರೋಪಿಗಳ ಮೇಲೆ ರೌಡಿ ಶೀಟರ್ ಹಾಕಲಾಗುವುದು. ಗಡಿಪಾರು, ಗುಂಡಾ ಆಕ್ಟ್ ಮಾಡುವ ಕೆಲಸ ಮಾಡ್ತಾ ಬಂದಿದ್ದೇವೆ. ರಾಜ್ಯದಲ್ಲಿ ರೌಡಿ ಶೀಟರ್ಗಳು ಸಾರ್ವಜನಿಕರ ಮೇಲೆ ಹಲ್ಲೆ, ಕೊಲೆ ಮಾಡಿರುವ ಹಿನ್ನೆಲೆ ನಮ್ಮ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿ ಪರೇಡ್ ಮಾಡಲಾಗುತ್ತಿದೆ ಎಂದು ಹು -ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಇಂದು ರೌಡಿಪರೇಡ್ ನಡೆಸಿ …
Read More »ಉಗ್ರರ ನೆಲೆಗಳ ಮೇಲೆ ನಡೆಸಿದ ಸೇನಾ ದಾಳಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ವಿಜಯೋತ್ಸವ
ಜಮ್ಮು ಕಾಶ್ಮೀರದ ಪೆಹಲ್ಗಾಮ್’ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಮಾಡಿದ ಉಗ್ರರ ದಾಳಿಯ ಪ್ರತಿಕಾರವಾಗಿ, ಭಾರತ ಆಪರೇಷನ್ ಸಿಂಧೂರ ಹೆಸರಿನಲ್ಲಿ ಉಗ್ರರ ನೆಲೆಗಳ ಮೇಲೆ ನಡೆಸಿದ ಸೇನಾ ದಾಳಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ವಿಜಯೋತ್ಸವ ಆಚರಿಸಿ, ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಆಗ್ರಹಿಸಿದರು. ಈ ವೇಳೆ ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮಾತನಾಡಿ, ನರೇಂದ್ರ ಮೋದಿ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಮೂಲಕ …
Read More »ಕಾರು ಹಾಗೂ ಲಾರಿ ನಡುವೆ ಅಪಘಾತ ಒಂದೇ ಕುಟುಂಬದ 5 ಜನ ದುರ್ಮರಣ
ಹುಬ್ಬಳ್ಳಿ: ಕಾರು ಹಾಗೂ ಲಾರಿ ನಡುವೆ ಅಪಘಾತ ಒಂದೇ ಕುಟುಂಬದ 5 ಜನ ದುರ್ಮರಣ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿಯ ಇಂಗಳಹಳ್ಳಿ ಕ್ರಾಸ್ ಬಳಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಶ್ವೇತಾ (29), ಅಂಜಲಿ (26),ಸಂದೀಪ್ (26), ವಿಠ್ಠಲ್ (55), ಶಶಿಕಲಾ (40) ಮೃತ ದುರ್ದೈವಿಗಳು. ಬಾಗಲಕೋಟದಿಂದ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ …
Read More »ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ
ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಧ್ಯಮಗೋಷ್ಟಿಯಲ್ಲಿ ಸಿಎಂ ಸಿದ್ಧರಾಮಯ್ಯ ಮಾಹಿತಿ ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಕರೆದ ಮಾಧ್ಯಮಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿಯನ್ನು …
Read More »ದ್ಯಾಮವ್ವ-ದುರ್ಗವ್ವ ಮೂರ್ತಿಗಳನ್ನು ಹೊತ್ತು ಹೊನ್ನಾಟ ಗ್ರಾಮಕ್ಕೆ ಗ್ರಾಮವೇ ಭಂಡಾರಮಯ
ಧಾರವಾಡ: ಉತ್ತರ ಕರ್ನಾಟಕದಲ್ಲಿ ಜಾತ್ರಾ ಸಂಭ್ರಮವಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಗ್ರಾಮದೇವಿಯರ ಜಾತ್ರೆಗಳು ಅದ್ಧೂರಿಯಾಗಿ ನಡೆಯುತ್ತಿವೆ. ಧಾರವಾಡದ ತಾಲೂಕಿನ ಯಾದವಾಡ ಗ್ರಾಮದಲ್ಲಿ 21 ವರ್ಷಗಳ ಬಳಿಕ ಜಾತ್ರೆ ನಡೆಯುತ್ತಿದೆ. ಗ್ರಾಮದೇವತೆಗಳ ಜಾತ್ರೋತ್ಸವದ ಸಂಭ್ರಮ ಮನೆಮಾಡಿದ್ದು, ಇಂದು ಬೀದಿಬೀದಿಗಳಲ್ಲಿ ನಡೆದ ಹೊನ್ನಾಟ ಇಡೀ ಗ್ರಾಮವನ್ನೇ ಭಂಡಾರಮಯಗೊಳಿಸಿತು. ಯಾವುದೇ ರೀತಿಯ ಭೇದಭಾವವಿಲ್ಲದೆ ಗ್ರಾಮಸ್ಥರೆಲ್ಲರೂ ಸಡಗರದಲ್ಲಿ ಪಾಲ್ಗೊಂಡು ಗಮನ ಸೆಳೆದರು. 21 ವರ್ಷಗಳ ಗ್ರಾಮದೇವತೆಗಳಾದ ದ್ಯಾಮವ್ವ-ದುರ್ಗವ್ವ ದೇವತೆಗಳ ಜಾತ್ರೆ ನಡೆಯುತ್ತಿರುವುದರಿಂದ ಗ್ರಾಮದಲ್ಲಿ ವಿಶೇಷ ಸಂಭ್ರಮ …
Read More »
Laxmi News 24×7