Breaking News

ಹುಬ್ಬಳ್ಳಿ

ಹುಬ್ಬಳ್ಳಿ: ಒಂದೇ ಕಾಲಿನ ಅಪರೂಪದ ಮಗು ಜನನ

ಹುಬ್ಬಳ್ಳಿ, ಜೂನ್ 21: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಅಪರೂಪದ ಮಗುವಿನ ಜನನವಾಗಿದೆ. ಈ ಮಗುವಿನ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರದಾಡಿದ್ದು, ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದೆ. ಹಳೇ ಹುಬ್ಬಳ್ಳಿಯ ಮಹಿಳೆ ಒಬ್ಬರು ಹೆರಿಗೆ ನೋವು ಕಾಣಿಕೊಂಡ ಕಾರಣ ಕಿಮ್ಸ್ ಆಸ್ಪತ್ರೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಿಸಲಾಗಿತ್ತು. ವಿಚಿತ್ರ ರೀತಿಯಲ್ಲಿ ಒಂಟಿ ಕಾಲಿನ ಮಗು ಜನಿಸಿದ್ದು, ಆಸ್ಪತ್ರೆಯ ವೈದ್ಯರಿಗೂ ಸಹ ಅಚ್ಚರಿ ಮೂಡುವಂತೆ ಮಾಡಿದೆ. ಆದರೆ, ಕೆಲವೇ ಹೊತ್ತಿನ …

Read More »

ಬಿಎಸ್​ವೈರನ್ನ ಸಿಎಂ ಮಾಡಿದ್ದು ನಾನೇ..?-ಚಂದ್ರಕಾಂತ ‌ಬೆಲ್ಲದ್​

ಹುಬ್ಬಳ್ಳಿ: ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು ಎಂದು ಮಾಜಿ ಶಾಸಕ ಚಂದ್ರಕಾಂತ ‌ಬೆಲ್ಲದ್​​ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಐದು ಬಾರಿ ಶಾಸಕನಾಗಿದ್ದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಟ್ಟು ಮಾಡಿ ಅಂದು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು. ಯಡಿಯೂರಪ್ಪನವರ ಬೆಳವಣಿಗೆಗೆ ಯಾರು ಕಾರಣರು ಎಂಬುದನ್ನು ಅವರೇ ತಿಳಿದುಕೊಳ್ಳಬೇಕು. ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದ ನಾನೂ ಕೂಡ ಅಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದ್ರೆ, ಸಚಿವ ಸ್ಥಾನ …

Read More »

ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಇಂಡಿಗೋ ವಿಮಾನದ ಟೈರ್ ಸ್ಫೋಟ

ಹುಬ್ಬಳ್ಳಿ:ಕಣ್ಣೂರುನಿಂದ ಆಗಮಿಸಿದ್ದ ಇಂಡಿಗೋ ವಿಮಾನ, ಇಲ್ಲಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವೇಳೆ ಟೈರ್ ಸ್ಫೋಟ ಗೊಂಡ ಘಟನೆ, ಸೋಮವಾರ ರಾತ್ರಿ8:30ರ ಸುಮಾರಿಗೆ ನಡೆದಿದೆ, ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ. 15 ಪ್ರಯಾಣಿಕರನ್ನು ಹೊತ್ತುಕೊಂಡು ಬಂದಿದ್ದ ವಿಮಾನವನ್ನು, ಪೈಲಟ್‌ ಮೊದಲು ರನ್ ವೇ ದಲ್ಲಿ ಇಳಿಸಲು ಪ್ರಯತ್ನಿಸಿದ್ದಾನೆ. ಆಗದಿಂದಾಗ ಎರಡನೇ ಬಾರಿ ಇಳಿಸಲು ಯತ್ನಿಸಿದಾಗ ಟಾಯರ್ ಬ್ಲಾಸ್ಟ್ ಆಗಿದೆ ಎಂದು ಮೂಲಗಳು ತಿಳಿಸಿವೆ. ಕಣ್ಣೂರಿನಿಂದ ಆಗಮಿಸಿದ್ದ ವಿಮಾನ ನಂತರ ಬೆಂಗಳೂರಿಗೆ …

Read More »

ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಕೊರೊನಾ ಸೋಂಕಿತ ಆತ್ಮಹತ್ಯೆ

ಹುಬ್ಬಳ್ಳಿ: ಕೊರೊನಾದಿಂದ ಅದೆಷ್ಟೋ ಕುಟುಂಬಗಳು ಬೀದಿಗೆ ಬಂದಿವೆ. ರಾಜ್ಯದಲ್ಲಿ ಸಾವು, ನೋವು ಹೆಚ್ಚಾಗುತ್ತಿದೆ. ಕೊರೊನಾ ಸೋಂಕು ತಗುಲುತ್ತಿದ್ದಂತೆ ಆತ್ಮಸ್ಥೈರ್ಯ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಹುಬ್ಬಳ್ಳಿಯ ಕಿಮ್ಸ್ನಲ್ಲಿ ಕೊರೊನಾ ಸೋಂಕಿತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿಮ್ಸ್ ಕೊವಿಡ್ ವಾಡ್೯ ನಂ.303ರ ಬಾತ್ರೂಮ್ನಲ್ಲಿ ಸೋಂಕಿತ ನೇಣಿಗೆ ಶರಣಾಗಿದ್ದಾರೆ. ಸೋಂಕಿತ ವ್ಯಕ್ತಿ ಕಳೆದ ಕೆಲ ದಿನಗಳಿಂದ ಕಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಸ್ಪತ್ರೆಯಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. …

Read More »

ನನಗೆ ಯಾವುದೇ ಜಾತಿಯಿಲ್ಲ ನನ್ನದು ರೈತರ ಜಾತಿ – ಮುರುಗೇಶ್ ನಿರಾಣಿ

ಹುಬ್ಬಳ್ಳಿ: ಕಲಘಟಗಿ ತಾಲೂಕಿನ ರೈತರು ಸಹಕಾರ ಕೊಟ್ಟು ಒಪ್ಪುವುದಾದರೆ ಒಂದೂವರೆ ವರ್ಷದಲ್ಲಿ ಕಲಘಟಗಿಯಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡುತ್ತೇನೆ. ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವಲ್ಲಿ ನನ್ನದು ಯಾವುದೇ ಸ್ವಾರ್ಥವಿಲ್ಲ ಉದ್ಯೋಗ ಬೇರೆ ರಾಜಕಾರಣ ಬೇರೆ, ನನಗೆ ಯಾವುದೇ ಜಾತಿಯಿಲ್ಲ ನನ್ನದು ರೈತರ ಜಾತಿ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದ್ದಾರೆ. ನಗರದ ಹನ್ನೆರಡು ಮಠದಲ್ಲಿ ತಾಲೂಕಿನ ರೈತರ ಸಭೆಯಲ್ಲಿ ಮಾತನಾಡಿದ ನಿರಾಣಿ, ತಾಲೂಕಿನ ರೈತರು …

Read More »

ಕೇವಲ 2 ರೂ.ಗೆ ಸರ್ಜಿಕಲ್ ಮಾಸ್ಕ್

ಹುಬ್ಬಳ್ಳಿ: ಇಂದಿನ ಕೊರೊನಾ ಪರಿಸ್ಥಿತಿಯಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ಆದರೆ ಜನ ಮಾತ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಸುಲಭವಾಗಿ ಮಾಸ್ಕ್ ಸಿಗಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಮೊದಲ ಭಾರಿಗೆ ಸ್ವಯಂಚಾಲಿತ ಮಾಸ್ಕ್ ವೆಂಡಿಂಗ್ ಮಷೀನ್ ನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗುತ್ತಿದೆ. ಈ ಮೂಲಕ ಕೇವಲ 2 ರೂ.ಗೆ ಸರ್ಜಿಕಲ್ ಮಾಸ್ಕ್ ಸಿಗಲಿದೆ. ದೇಶದಲ್ಲಿ ಚೆನ್ನೈ ಬಳಿಕ ಇತಂಹದ್ದೊಂದು ಪ್ರಯೋಗವನ್ನು ಹುಬ್ಬಳ್ಳಿಯ ಯಂಗ್ ಇಂಡಿಯಾ ಸಂಸ್ಥೆ ಅನುಷ್ಕಾನಗೊಳಿಸಿದೆ. 20 ಸಾವಿರ ರೂಪಾಯಿ ವೆಚ್ಚದ …

Read More »

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟಪಡಿಸಿದ್ದು, ಆ ಬಗ್ಗೆ ಚರ್ಚೆ ಅಪ್ರಸ್ತುತ, ಕೋವಿಡ್ ಸಂಕಷ್ಟದಲ್ಲಿ ಯಾರು ಸಹ ನಾಯಕತ್ವ ಬದಲಾವಣೆ, ಭಿನ್ನ ಅನಿಸಿಕೆ ಕುರಿತು ಹೇಳಿಕೆ ನೀಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಅರವಿಂದ ಬೆಲ್ಲದ ಅವರು, ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದಾಗಿ ನನಗೆ ತಿಳಿಸಿದ್ದಾರೆ. ಬೇರೆಯವರು ಯಾರು ದೆಹಲಿಗೆ ಹೋಗಿದ್ದಾರೆ, ಯಾಕೆ ಹೋಗಿದ್ದಾರೆ ನನಗೆ …

Read More »

ಹುಬ್ಬಳ್ಳಿಯ ಕಿಮ್ಸ್ನ 11 ಜನ ವೈದ್ಯರು ಸರ್ಕಾರ ನೀಡೋ ಲಕ್ಷ ಲಕ್ಷ ಸಂಬಳ ಎಣಿಸಿ ಖಾಸಗಿ ಕ್ಲಿನಿಕ್ಗಳಲ್ಲಿ ಕಾರ್ಯ ನಿರ್ವಹಿಸುತ್ತಾ ತಮ್ಮ ವೃತ್ತಿಗೆ ದ್ರೋಹ

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ನ 11 ಜನ ವೈದ್ಯರು ಸರ್ಕಾರ ನೀಡೋ ಲಕ್ಷ ಲಕ್ಷ ಸಂಬಳ ಎಣಿಸಿ ಖಾಸಗಿ ಕ್ಲಿನಿಕ್ಗಳಲ್ಲಿ ಕಾರ್ಯ ನಿರ್ವಹಿಸುತ್ತಾ ತಮ್ಮ ವೃತ್ತಿಗೆ ದ್ರೋಹ ಬಗೆಯುತ್ತಿದ್ರು. ಈ ಬಗ್ಗೆ ಟಿವಿ9 ವರದಿ ಮಾಡಿದ್ದು ಎಚ್ಚೆತ್ತ ಕಿಮ್ಸ್ ನಿರ್ದೇಶಕರು 11 ವೈದ್ಯರಿಗೆ ನೋಟಿಸ್ ಜಾರಿಗೊಳಿಸಿ ತಕ್ಷಣವೇ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಿದ್ದರು. ಸದ್ಯ ಹುಬ್ಬಳ್ಳಿಯ ಕಿಮ್ಸ್ ವೈದ್ಯರಿಂದ ನೋಟಿಸ್‌ಗೆ ಉತ್ತರ ಬಂದಿದೆ. 11 ವೈದ್ಯರ ಪೈಕಿ 9 ವೈದ್ಯರಿಂದ ನೋಟಿಸ್‌ಗೆ …

Read More »

ಸಿಎಂ ರಾಜೀನಾಮೆ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಮಾಹಿತಿ

ಹುಬ್ಬಳ್ಳಿ: ಪಕ್ಷದ ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿಯೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಂದ ರಾಜೀನಾಮೆ ಕೊಡಿಸುವ …

Read More »

ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.11 ಇದ್ದು, ಶೇ.5ಕ್ಕೆ ಬಂದರೆ ಅನ್ ಲಾಕ್ : ಸಿಎಂ BSY

ಹುಬ್ಬಳ್ಳಿ: ರಾಜ್ಯದಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದ್ದು, ಸದ್ಯ 11.09 ರಷ್ಟಿದೆ. ಈ ಪಾಸಿಟಿವಿಟಿ ದರ ಶೇ.5ಕ್ಕೆ ಬಂದರೆ ರಾಜ್ಯದಲ್ಲಿ ಅನ್ ಲಾಕ್ ಮಾಡುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಇಲ್ಲಿನ ಸವಾಯಿ ಗಂಧರ್ವ ಹಾಲಿನಲ್ಲಿ ಕೋವಿಡ್ ನಿಯಂತ್ರಣದ ಕುರಿತು ನಡೆದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಜ್ಞರ ಅಭಿಪ್ರಾಯದಂತೆ ಪಾಸಿಟಿವಿಟಿ ದರ ಶೇ.5 ಕ್ಕಿಳಿದರೆ ಅನ್ ಲಾಕ್ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ. ಇದಕ್ಕೆ ಜನರು ಕೂಡ ಕೈ ಜೋಡಿಸಬೇಕು …

Read More »