Breaking News

ಹುಬ್ಬಳ್ಳಿ

ಧಾರವಾಡದಲ್ಲಿ ಪುಂಡರಿಗೆ ಕ್ಲಾಸ್, ಬಿಸಿ ಮುಟ್ಟಿಸಿದ ವಿದ್ಯಾಗಿರಿ ಪೊಲೀಸರು

ಧಾರವಾಡದಲ್ಲಿ ಪುಂಡರಿಗೆ ಕ್ಲಾಸ್, ಬಿಸಿ ಮುಟ್ಟಿಸಿದ ವಿದ್ಯಾಗಿರಿ ಪೊಲೀಸರು…….ದಂಡಾಸ್ತ್ರ ಮೂಲಕ ಖಡಕ್ ಎಚ್ಚರಿಕೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಸಾರ್ವಜನಿಕರಿಗೆ ತೊಂದರೆಯುಂಟು ಮಾಡುತ್ತಿದ್ದ, ಸುಮಾರು 70ಕ್ಕೂ ಹೆಚ್ಚು ಯುವಕರನ್ನು ಧಾರವಾಡ ವಿದ್ಯಾಗಿರಿ ಠಾಣೆಗೆ ಕರೆತಂದ ಪೊಲೀಸರು ಅವರಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದ ತೇಜಸ್ವಿ ನಗರ ಮಾಳಮಡ್ಡಿ ಸೇರಿದಂತೆ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ನಂಬರ್ ಪ್ಲೇಟ್ ಇಲ್ಲದೇ ಸುತ್ತಾಡುತ್ತಿದ್ದ 15 ಬೈಕ್‌ಗಳನ್ನು ವಶಕ್ಕೆ ಪಡೆದ ಪೊಲೀಸರು, ಪುಡಾರಿಗಳಿಗೆ ಬುದ್ಧಿವಾದ ಹೇಳಿದರು. ತ್ರಿಬಲ್ ರೈಡಿಂಗ್ …

Read More »

ಪ್ರಸಕ್ತ ವರ್ಷದ ರಾಜ್ಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಹುಬ್ಬಳ್ಳಿ ಕೆಎಂಸಿಆರ್​ಐ?

ಹುಬ್ಬಳ್ಳಿ: ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್‌ಐ) ಉತ್ತರ ಕರ್ನಾಟಕ ಭಾಗದ ಸಂಜೀವಿನಿ. ಎಂಟತ್ತು ಜಿಲ್ಲೆಗಳ ರೋಗಿಗಳು ಹೆಚ್ಚಿನ ಚಿಕಿತ್ಸೆಗೆ ಕೆಎಂಸಿಆರ್​ಐಯನ್ನು ಆಶ್ರಯಿಸಿದ್ದಾರೆ. ಆದರೆ, ಸರ್ಕಾರದಿಂದ ಸಿಗಬೇಕಾದ ಅನುದಾನದ ಕೊರತೆ ಸಂಸ್ಥೆಗೆ ಕಾಡುತ್ತಿದೆ. ಹೀಗಾಗಿ ಪ್ರಸಕ್ತ ವರ್ಷದ ರಾಜ್ಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದು, 515 ಕೋಟಿ ರೂ. ಅಗತ್ಯ ಆರ್ಥಿಕತೆಯ ಬೇಡಿಕೆ ಮಂಡಿಸಿದೆ. ರಾಜ್ಯ ಸರ್ಕಾರಕ್ಕೆ ಅನುದಾನ ಸೇರಿ ಹಲವು ಯೋಜನೆಗಳ ಪ್ರಸ್ತಾವನೆ ರವಾನಿಸಿದ್ದು, …

Read More »

ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯ ಚಿಕಿತ್ಸಾ ಶುಲ್ಕ ಏರಿಕೆ, ಸಾರ್ವಜನಿಕರ ಆಕ್ರೋಶ

ಹುಬ್ಬಳ್ಳಿ, ಮಾರ್ಚ್​ 04: ಹುಬ್ಬಳ್ಳಿಯ (Hubballi) ಕಿಮ್ಸ್​ (KIMS) ಆಸ್ಪತ್ರೆ ಉತ್ತರ ಕರ್ನಾಟಕ ಜನರ ಸಂಜೀವಿನಿಯಾಗಿದೆ. ನಿತ್ಯ ನೂರಾರು ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಇದೀಗ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸಾ ಶುಲ್ಕ ಏರಿಕೆಯಾಗಿದೆ. ಹೊರ ರೋಗಿಗಳ ನೊಂದಣಿ ವಿಭಾಗದ ಶುಲ್ಕ 10 ರೂಪಾಯಿಂದ 20 ರೂಪಾಯಿಗೆ ಏರಿಕೆಯಾಗೊದೆ. ಒಳ ರೋಗಿಗಳ ನೊಂದಣಿ ವಿಭಾಗದ ಶುಲ್ಕ 30 ರೂಪಾಯಿಂದ 50 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಜೊತೆಗೆ ಎಕ್ಸರೇ, ಸ್ಕ್ಯಾನಿಂಗ್, ಜನನ, ಮರಣ ಪ್ರಮಾಣ …

Read More »

ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತ

ಹುಬ್ಬಳ್ಳಿ, ಫೆಬ್ರವರಿ 27: ಹುಬ್ಬಳ್ಳಿಯ ಕಂಚಗಾರ ಗಲ್ಲಿಯಲ್ಲಿರುವ ಎನ್​ಆರ್ ಸಾರಿ ಸೆಂಟರ್​ನಲ್ಲೊಂದು ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಬಟ್ಟೆ ಅಂಗಡಿ ಸಿಬ್ಬಂದಿಗೆ ಹೃದಯಾಘಾತವಾಗಿದೆ. ಪರಿಣಾಮವಾಗಿ ಆ ಸಿಬ್ಬಂದಿ ಮೃತಪಟ್ಟಿದ್ದಾರೆ. ಸಿಬ್ಬಂದಿ ಹೃದಯಾಘಾತದಿಂದ ನರಳಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತರನ್ನು 43 ವರ್ಷ ವಯಸ್ಸಿನ ಭವರ್ ಸಿಂಗ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ರಾಜಸ್ಥಾನದವರಾಗಿದ್ದಾರೆ. ಇದೇ ತಿಂಗಳು 22 ರಂದು ಘಟನೆ ಸಂಭವಿಸಿದ್ದು, ಸದ್ಯ ಅದಕ್ಕೆ ಸಂಬಂಧಿಸಿದ …

Read More »

ಹುಬ್ಬಳ್ಳಿಯಲ್ಲಿ ಇಂದು ಸಿದ್ಧಾರೂಢ ಸ್ವಾಮೀಜಿ ರಥೋತ್ಸವ,

ಹುಬ್ಬಳ್ಳಿ: ಮಹಾಶಿವರಾತ್ರಿ ಪ್ರಯಕ್ತ ಇಂದು ಸಂಜೆ 5 ಗಂಟೆಗೆ ನೆರವೇರಲಿರುವ ಸಿದ್ಧಾರೂಢ ಸ್ವಾಮೀಜಿಗಳ ಅದ್ಧೂರಿ ರಥೋತ್ಸಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಥೋತ್ಸವಕ್ಕೆ ಸಾಕ್ಷಿಯಾಗಲು ಸಹಸ್ರಾರು ಭಕ್ತರು ವಿವಿಧೆಡೆಯಿಂದ ಹುಬ್ಬಳ್ಳಿಯತ್ತ ಆಗಮಿಸುತ್ತಿದ್ದಾರೆ. ರಥೋತ್ಸವಕ್ಕೆ ಆಗಮಿಸುವ ಭಕ್ತರಿಗಾಗಿ ವಿಶೇಷ ಬಸ್: ಸಿದ್ಧಾರೂಢ ಸ್ವಾಮೀಜಿಯ ರಥೋತ್ಸವ ಸಂಜೆ ವೇಳೆ ನಡೆಯಲಿದೆ. ಆದ್ದರಿಂದ ರಥೋತ್ಸವದಲ್ಲಿ ಭಾಗವಹಿಸಿ ಹಿಂದಿರುಗುವ ಭಕ್ತರು ಹಾಗೂ ಇತರ ಪ್ರಯಾಣಿಕರ ಅನುಕೂಲಕ್ಕಾಗಿ ಇಂದು ರಾತ್ರಿ ಹುಬ್ಬಳ್ಳಿಯಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ …

Read More »

ಅಧಿಕಾರಿಗಳ ದಾಳಿ ವೇಳೆ ಗೋಡೌನ್​ನಲ್ಲಿ ಪತ್ತೆಯಾದ ಪೌಷ್ಟಿಕ ಆಹಾರದ ಚೀಲಗಳು

ಹುಬ್ಬಳ್ಳಿ, ಫೆಬ್ರವರಿ 26: ಹುಬ್ಬಳ್ಳಿಯ ಗಬ್ಬೂರಿನಲ್ಲಿರುವ ಗೋದಾಮಿನೊಂದರ ಮೇಲೆ ಫೆ. 15ರಂದು ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ, ಬಡ ಮಕ್ಕಳಿಗೆ, ಬಾಣಂತಿಯರಿಗೆ ಮತ್ತು ಗರ್ಭಿಣಿಯರಿಗೆ ವಿತರಣೆ ಮಾಡಬೇಕಾದ ಲಕ್ಷಾಂತರ ರೂ. ಮೌಲ್ಯದ ಪೌಷ್ಟಿಕ ಆಹಾರದ ಪಾಕೇಟ್‌ಗಳು ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿತ್ತು. ಇದೇ ಪ್ರಕರಣದಲ್ಲಿ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸರು 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನರನ್ನು ಬಂಧಿಸಿದ್ದರು. ಆದರೆ, ಪ್ರಕರಣದ ಮುಖ್ಯ ಕಿಂಗ್‌ಪಿನ್‌ಗಳು ದಾಳಿ ನಡೆದು 13 ದಿನವಾದರೂ …

Read More »

ಬೆಳಗಾವಿ-ಮಿರಜ್ ರೈಲು ಸಂಚಾರ ಭಾಗಶಃ ರದ್ದು

ಹುಬ್ಬಳ್ಳಿ, ಫೆಬ್ರವರಿ 26: ವಿವಿಧ ಕಾರ್ಯಾಚರಣೆಯ ಕಾರಣಗಳಿಂದಾಗಿ, ಈಗಾಗಲೇ ತಾತ್ಕಾಲಿಕವಾಗಿ ರದ್ದುಗೊಂಡಿರುವ ಕೆಲವು ರೈಲು (Train) ಸೇವೆಗಳ ರದ್ದತಿಯನ್ನು ಮತ್ತು ಭಾಗಶಃ ರದ್ದತಿಯನ್ನು ವಿಸ್ತರಲಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ (South Western Railway zone) ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಮಿರಜ್-ಕ್ಯಾಸಲ್ ರಾಕ್ ರೈಲುಗಳ ಭಾಗಶಃ ರದ್ದತಿ ವಿಸ್ತರಣೆ ಹುಬ್ಬಳ್ಳಿ ರೈಲ್ವೆ ವಿಭಾಗದ ಕ್ಯಾಸಲ್ ರಾಕ್-ಲೋಂಡಾ ಭಾಗದಲ್ಲಿ ನಡೆಯ ತಿರುವ ರೈಲ್ವೆ ವಿದ್ಯುದೀಕರಣ ಮತ್ತು ಎಂಜಿನಿಯರಿಂಗ್ ಕಾಮಗಾರಿಗಳಿಂದಾಗಿ, ಈ ಕೆಳಗಿನ …

Read More »

ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಖಾತ್ರಿ ಸೇರಿ ಸಂಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳ‌ ಮುಚ್ಚುವ ನಿರ್ಧಾರ ಕೈಬೀಡುವಂತೆ ಎಐಡಿಎಸ್‌ಓ ಮನವಿ

ಧಾರವಾಡ- ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಖಾತ್ರಿ ಪಡಿಸಬೇಕು‌ ಹಾಗೂ ರಾಜ್ಯದಲ್ಲಿನ 4,200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಸಂಯೋಜನೆಯ ಹೆಸರಿನಲ್ಲಿ ಮುಚ್ಚುವು ನಿರ್ಧಾರದಿಂದ ಹಿಂದೆ ಸರಿಯಲು ಆಗ್ರಹಿಸಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಎಐಡಿಎಸ್‌ಓ ಸಂಘನೆ ಮನವಿ ಮಾಡಿತ್ತು‌. ಎಐಡಿಎಸ್‌ಓ ಸಂಘಟನೆ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಸಂಘಟನೆ ಪದಾಧಿಕಾರಿಗಳು ಮನವಿ ನೀಡಿದರು. ‌ಬಳಿಕ‌ ಮಾತನಾಡಿದ …

Read More »

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ 4 ಲಕ್ಷ ರೂ. ಮೌಲ್ಯದ ಗಾಂಜಾ ಪತ್ತೆ

ಹುಬ್ಬಳ್ಳಿ, ಫೆಬ್ರವರಿ 23: ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ (Hubballi Railway Station) 4ನೇ ಪ್ಲಾಟ್​ಫಾರ್ಮ್​ನಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ (Ganja) ಪತ್ತೆಯಾಗಿದೆ. ವಾರಸುದಾರರಿಲ್ಲದ ಬ್ಯಾಗ್​ವೊಂದರಲ್ಲಿ 4 ಕೆಜಿ ಗಾಂಜಾ ಪತ್ತೆಯಾಗಿದ್ದು, ಅಬಕಾರಿ ಉಪನಿರೀಕ್ಷಕ ಐ.ಡಿ.ಕಿತ್ತೂರು ಗಾಂಜಾ ಜಪ್ತಿ ಮಾಡಿದ್ದಾರೆ. ರೈಲಿನ ಮೂಲಕ ಹುಬ್ಬಳ್ಳಿಗೆ ಗಾಂಜಾ ತಂದಿರುವ ಶಂಕೆ ವ್ಯಕ್ತವಾಗಿದೆ. ಗಾಂಜಾ ತಂದಿದ್ದ ಅಪರಿಚಿತ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹುಬ್ಬಳ್ಳಿ ರೈಲ್ವೆ ಪೊಲೀಸ್ …

Read More »

ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲ

ಧಾರವಾಡ : ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದವ್ವ ಹನುಮಂತಪ್ಪ ದಾನಪ್ಪನವರ ಎಂಬುವರ ಮನೆ ಅಗ್ನಿಗಾಹುತಿಯಾಗಿದೆ. ಮಧ್ಯಾಹ್ನ ಅಡುಗೆ ಮಾಡುವಾಗ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಹೊರಗೆ ಬರುತ್ತಿದ್ದಂತೆಯೇ ಇಡೀ ಮನೆಗೆ ಬೆಂಕಿ ಆವರಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಇದರಿಂದ ಮನೆಯೊಳಗಿನ ಸಾಮಗ್ರಿಗಳೆಲ್ಲ …

Read More »