Breaking News
Home / ಹುಬ್ಬಳ್ಳಿ (page 9)

ಹುಬ್ಬಳ್ಳಿ

ಯುವತಿಯರಿಂದ ನಗ್ನ ವಿಡಿಯೋ ಕಾಲ್ ಮಾಡಿ ವಂಚಿಸುವ ಗ್ಯಾಂಗ್ ಆಯಕ್ಟಿವ್

ಹುಬ್ಬಳ್ಳಿ: ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಸಾಮಾಜಿಕ ಜಾಲತಾಣವನ್ನು ಸದ್ಬಳಕೆ ಮಾಡಿಕೊಂಡು ವಂಚನೆ ಮಾಡುವ ವಂಚಕರ ಜಾಲ ಸದ್ಯ ನಗರದಲ್ಲಿ ಫುಲ್​ ಆಯಕ್ಟಿವ್​​ ಆಗಿದೆ.‌ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಯುವಕನೊಬ್ಬ ವಂಚಕ ಜಾಲದಲ್ಲಿ ಸಿಲುಕಿ ಒದ್ದಾಡಿದ್ದಾರೆ. ವಿಡಿಯೋ ಕಾಲ್ ಮೂಲಕ ಸ್ಕ್ರೀನ್​ ಶಾಟ್​ ತೆಗೆದುಕೊಂಡು ಸಂತ್ರಸ್ತರನ್ನು ಬ್ಲಾಕ್​ಮೇಲ್ ಮಾಡುವ ಮೂಲಕ ಆರೋಪಿಗಳು ವಂಚಿಸುತ್ತಿದ್ದಾರೆ. ವ್ಯಕ್ತಿಯೊಬ್ಬರಿಗೆ ಅಪರಿಚಿತ ಮಹಿಳೆಯೊಬ್ಬಳು ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡಿದ್ದಾರೆ. ಬಳಿಕ ಇವರ …

Read More »

ಆಸ್ತಿ ವಿಚಾರಕ್ಕೆ ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರವಾಗಿ ಹತ್ಯೆ

ಹುಬ್ಬಳ್ಳಿ: ಆಸ್ತಿ ವಿಚಾರವಾಗಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದೆ. ಬಗಡಗೇರಿ ಗ್ರಾಮ ಪಂಚಾಯಿತಿ ಸದಸ್ಯ ನಿಂಗಪ್ಪ ದಾಸಪ್ಪನವರ ಹತ್ಯೆಯಾದವರು. ಆಸ್ತಿ ವಿಚಾರವಾಗಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಆಸ್ತಿಗಾಗಿ ಪತ್ನಿಯನ್ನೇ ಕೊಲೆಗೈದ ಪತಿ: ಇತ್ತೀಚಿಗೆ, ಪತ್ನಿ ಹೆಸರಿನಲ್ಲಿದ್ದ ಕೋಟ್ಯಂತರ ರೂ. ವೌಲ್ಯದ ಆಸ್ತಿಗಾಗಿ …

Read More »

ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ರದ್ದು

ಹುಬ್ಬಳ್ಳಿ: ಉತ್ತರ ಕರ್ನಾಟಕ ಜನರ ಅಚ್ಚುಮೆಚ್ಚಿನ ರೈಲು ಎಂದೇ ಖ್ಯಾತಿ ಗಳಿಸಿದ್ದ ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ರೈಲಿನ ಸಂಚಾರ ರದ್ದು ಮಾಡಲಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ವೇಗದೂತದಂತೆ ಬರುತ್ತಿದ್ದ ಈ ರೈಲು ಅಂದರೆ ಎಲ್ಲರಿಗೂ ಅಚ್ಚು-ಮೆಚ್ಚು. ಆದರೆ, ಏಕಾಏಕಿ ಈ ರೈಲು ಸಂಚಾರವನ್ನು ರದ್ದು ಮಾಡಿ ನೈರುತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರು-ಹುಬ್ಬಳಿ ಸೂಪರ್ ಫಾಸ್ಟ್ ರೈಲು ಉತ್ತರ ಕರ್ನಾಟಕ ಮಂದಿಗೆ ಅತಿ ವೇಗದ ರೈಲು. ಈ ರೈಲು ಅಂದ್ರೆ ಈ …

Read More »

ನಾನು ಕಾಂಗ್ರೆಸ್ ಪಕ್ಷದ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ; ಶರಣಪ್ಪ ಕೊಟಗಿ

ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಟಿಕೆಟ್​ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದು, ನಾನೂ ಕೂಡಾ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಕೆಪಿಸಿಸಿ ಸಂಯೋಜಕ ಶರಣಪ್ಪ ಕೊಟಗಿ ಅವರು ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಮೊದಲು ಹಲವು ಬಾರಿ ಧಾರವಾಡ ಪಶ್ಚಿಮ ವಿಧಾನ ಸಭಾದ ಎಲ್ಲ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳನ್ನು ಅತೀ ಹತ್ತಿರದಿಂದ ನೋಡಿದ್ದೇನೆ ಎಂದರು. ಕ್ಷೇತ್ರದ …

Read More »

ಯಾವುದೇ ಯೋಜನೆಗೆ ಅನುದಾನದ ಕೊರತೆ ಇಲ್ಲ ಗೃಹ ಲಕ್ಷ್ಮಿ ಯೋಜನೆ ಗೊಂದಲ ವಿಚಾರ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ​ಹೇಳೋದೇನು

ಧಾರವಾಡ : ಗೃಹಲಕ್ಷ್ಮಿ ಯೋಜನೆ ಗೊಂದಲ ವಿಚಾರ ಈಗ ಎಲ್ಲವೂ ಸರಳ ಮಾಡಿದ್ದೇವೆ. ಈಗಾಗಲೇ 1.9 ಕೋಟಿ ಜನರಿಗೆ ತಲುಪಿದ್ದೇವೆ. ಇನ್ನಾದರೂ ಐದಾರು ಲಕ್ಷ ಜನರದ್ದು ಕ್ಲಿಯರ್ ಆಗಬೇಕಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಅನುದಾನದ ಕೊರತೆ ಇಲ್ಲ. ಆದರೆ ತಾಂತ್ರಿಕ ತೊಂದರೆ ಕಾರಣಕ್ಕೆ ವಿಳಂಬ ಆಗಿದೆ. 15 ಲಕ್ಷ ಜನ ಆಧಾರ್ ಲಿಂಕ್ ಇಲ್ಲದ ಬ್ಯಾಂಕ್ ಖಾತೆ ನೀಡಿದ್ದರು. …

Read More »

ಎರಡು – ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ’: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಡಿ.ಕೆ. ಶಿವಕುಮಾರ್​ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಎರಡು – ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ’: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಗರದ ತಮ್ಮ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇದೊಂದು ನೆಗೆಟಿವ್​​ ಸರ್ಕಾರವಾಗಿ ಪರಿವರ್ತನೆಯಾಗಿದೆ. ಹಳ್ಳಿಗಳಿಗೆ, ರೈತರಿಗೆ ಸಮರ್ಪಕ …

Read More »

ರಾಜ್ಯಾಧ್ಯಕ್ಷರ ಆಯ್ಕೆ ಮಾಡುವ ವಿಚಾರದಲ್ಲಿ ಬಿಜೆಪಿ‌ ಫೇಲ್: ಜಗದೀಶ್ ಶೆಟ್ಟರ್​

ಹುಬ್ಬಳ್ಳಿ: ”ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯು ಅತ್ತು ಕರೆದು ಮಾಡಿರೋ ತರಹ ಕಾಣುತ್ತಿದೆ. ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಆದ್ರೆ, ಇವಗ್ಯಾಕೆ ಆಯ್ಕೆ ಮಾಡಿದ್ರು” ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಪ್ರಶ್ನಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ರಾಜಕೀಯ ಪಕ್ಷ ಆಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಆದ್ರೆ ಬಿಜೆಪಿ‌ ಈ ವಿಚಾರದಲ್ಲಿ ಸಂಪೂರ್ಣ ಫೇಲ್ ಆಗಿದೆ” ಎಂದರು. ಲಿಂಗಾಯತ ನಾಯಕರಿಗೆ ಮಣೆ ಹಾಕಿರುವ ವಿಚಾರಕ್ಕೆ …

Read More »

ಹುಬ್ಬಳ್ಳಿ ಧಾರವಾಡ ಅವಳಿ ನಗರ ಧೂಳಿನಿಂದ ಮುಕ್ತ ಮಾಡಲು ಮಹಾನಗರ ಪಾಲಿಕೆ ದಿಟ್ಟ ಹೆಜ್ಜೆ..!

ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಗಳಿಸಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರ ಬೆಳೆಯುತ್ತಲೇ ಇದೆ. ಆದ್ರೆ ನಗರದಲ್ಲಿ ಉಸಿರಾಡಲು ಸ್ವಚ್ಛ ಗಾಳಿ ಸಿಗದಂತಾಗಿದೆ. ಅವಳಿ ನಗರದಲ್ಲಿ ಧೂಳಿನ ಸಮಸ್ಯೆಯಿಂದ ಜನರು ಹೈರಾಣ ಆಗಿದ್ದಾರೆ. ಅವಳಿ ನಗರದಲ್ಲಿ ಧೂಳು ಹೆಚ್ಚಾಗಿರುವ ಹಿನ್ನೆಲೆ ಹುಬ್ಬಳ್ಳಿ ಧಾರವಾಡ ಜನರಿಗೆ ವಿವಿಧ ಅಲರ್ಜಿಗಳು ಕಾಡುತ್ತಿವೆ. ಹೀಗಾಗಿ ಅವಳಿ‌ನಗರ ಧೂಳುಮುಕ್ತ ಮಾಡಲು ಹಾಗೂ ಧೂಳು ತೆಗೆಯಲು ಈಗ ಪಾಲಿಕೆ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಧೂಳು …

Read More »

ನಿಖಿಲ್ ಕುಂದಗೋಳ ಆತ್ಮಹತ್ಯೆ ಪ್ರಕರಣದಲ್ಲಿ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಕುಟುಂಬಸ್ಥರ ಆಗ್ರಹ

ಹುಬ್ಬಳ್ಳಿ: ನಿಖಿಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಮಗೆ ಸೂಕ್ತ ನ್ಯಾಯ‌ ಒದಗಿಸಬೇಕು.‌ ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಾದ ಸಾತೇನಹಳ್ಳಿ, ಜಯಶ್ರೀ ಅವರನ್ನು ಅಮಾನತು ಮಾಡಬೇಕು ಹಾಗೂ ನಿಖಿ‌ಲ್ ಪತ್ನಿ ಮನೆಯವರನ್ನು ಕೂಡಲೇ ಬಂಧಿಸಬೇಕು ಎಂದು ನಿಖಿಲ್ ಕುಂದಗೋಳ ಕುಟುಂಬಸ್ಥರು ಒತ್ತಾಯಿಸಿದರು.   ನಗರಲ್ಲಿಂದು ನಿಖಿಲ್ ತಾಯಿ ಗೀತಾ ಕುಂದಗೋಳ, ಸಹೋದರ ರಘುವೀರ್ ಕುಂದಗೋಳ ಹಾಗೂ ತಂದೆ ಮೋಹನ್ ಕುಂದಗೋಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೌಟುಂಬಿಕ ಜಗಳವನ್ನು ನಾವು ಹಿರಿಯ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳುತ್ತಿದ್ದೆವು . ಆದರೆ …

Read More »

ಹುಬ್ಬಳ್ಳಿಯಲ್ಲಿ ಮಳೆ ರಗಳೆ: ಜಲಾವೃತಗೊಂಡ ರಸ್ತೆಗಳು

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿದ ಮಳೆಗೆ ರಸ್ತೆಗಳೆಲ್ಲ ಕೆರೆಯಂತಾಗಿದ್ದವು. ನಗರದ ಬಹುತೇಕ ರಸ್ತೆಗಳಲ್ಲಿ ಮಳೆ‌ ನೀರು ನಿಂತು ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.‌ ಹುಬ್ಬಳ್ಳಿಯ ಗಣೇಶನಗರದ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಶಾಲಾ‌ ಮಕ್ಕಳು, ಸಾರ್ವಜನಿಕರು ನೀರಿನಲ್ಲಿಯೇ ಓಡಾಡುವ ದೃಶ್ಯ ಸಾಮಾನ್ಯವಾಗಿತ್ತು. ಹೀಗಾಗಿ ಸ್ಥಳೀಯ ಆಡಳಿತದ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕಿದ್ದಾರೆ. ಅಲ್ಲದೇ ಪ್ರತಿಬಾರಿ ಮಳೆ ಬಂದಾಗಲೂ ಇಂತಹ ಅವ್ಯವಸ್ಥೆ ಸರ್ವೇ ಸಾಮಾನ್ಯವಾಗಿದೆ. ಹುಬ್ಬಳ್ಳಿಯ ಚನ್ನಪೇಟೆಯಲ್ಲಿ ಬಹುತೇಕ ಮನೆಗಳಿಗೆ ನೀರು …

Read More »