ಧಾರವಾಡ: ಅವರು ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸಹೋದರರು. ಆದರೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇನಾಮ್‌ಹೊಂಗಲ್ ಗ್ರಾಮದಲ್ಲಿ ಜೀವನೋಪಾಯಕ್ಕೆ ಪಾತ್ರೆ ಅಂಗಡಿ ಇಟ್ಟಿದ್ದರು. ಕೌದಿ ಹೊಲೆಯೋ ಕೆಲಸ ಸಹ ಮಾಡುತ್ತಿದ್ದರು. ಅದರಿಂದಲೇ ಜೀವನದಲ್ಲಿ ಮುಂದೆ ಬಂದು ಕೋಟ್ಯಾಧೀಶರಾಗಿದ್ದರು. ಸುಮಾರು 80 ಎಕರೆ ಭೂಮಿಯ ಒಡೆಯರಾಗಿದ್ದರು. ಬದುಕು ಸುಂದರವಾಗಿ ನಡೆದಿದೆ ಅಂದುಕೊಳ್ಳುತ್ತರುವ ಹೊತ್ತಿನಲ್ಲೇ ಬಾಗಲೆ ಮನೆಯ ಬಾಗಿಲಿಗೆ ಕೊರೊನಾ ಮಾರಿ ವಕ್ಕರಿಸಿಬಿಟ್ಟಿದೆ. ಮೊದಲು ಆ ಮನೆಯಲ್ಲಿ ನಾಲ್ಕು ದಿನಗಳ ಅಂತರದಲ್ಲಿ …
Read More »ಡಿಸಿಪಿ ಕೈಗೆ ಸಿಕ್ಕಿಬಿದ್ದ ನಕಲಿ ಪತ್ರಕರ್ತ- ಬೈಕ್ ಸೀಜ್, ಕೇಸ್ ದಾಖಲು
ಹುಬ್ಬಳ್ಳಿ: ಲಾಕಡೌನ್ ವೇಳೆ ಬಂದ್ ಆಗಿರುವ ಟಿವಿ ಚಾನಲ್ ಐಡಿ ಕಾರ್ಡ ಬಳಸಿ ಪೊಲೀಸರನ್ನ ಯಮಾರಿಸುತ್ತಿದ್ದ ನಕಲಿ ಪತ್ರಕರ್ತನನ್ನ ಹುಬ್ಬಳ್ಳಿಯಲ್ಲಿ ಪೊಲೀಸರು ವಶಕ್ಕೆ ಪಡೆದು ಬೈಕ್ ಸೀಜ್ ಮಾಡಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ ಡಿಸಿಪಿ ರಾಮರಾಜನ್ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಇಂದು ಮುಂಜಾನೆ ಅನಗತ್ಯವಾಗಿ ಓಡಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಹಿಡಿದು ಬೈಕ್ ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಜಾನ್ ನಿಕೋಲಸ್ ಹಲವು ವರ್ಷಗಳ ಹಿಂದೇಯೇ ಬಂದ್ …
Read More »ಧಾರವಾಡ: ಕೋವಿಡ್-19 ರ ಎರಡನೇ ಅಲೆ : ಪಿ.ಎಚ್.ಸಿ ಗಳಲ್ಲಿ RAT ಟೆಸ್ಟ್ ಆರಂಭಿಸಲು ಕ್ರಮ
ಧಾರವಾಡ: ಕೋವಿಡ್-19 ರ ಎರಡನೇ ಅಲೆ ಆರಂಭವಾದಾಗ ಕೊರೊನಾ ಸೋಂಕು ನಗರ ಪ್ರದೇಶದಲ್ಲಿ ಹೆಚ್ಚಿಗೆ ಇದ್ದು, ಗ್ರಾಮೀಣ ಭಾಗದಲ್ಲಿ ಕಡಿಮೆ ಪ್ರಮಾಣದಲ್ಲಿತ್ತು. ಆದರೆ ಈಗ ದಿನದಿಂದ ದಿನಕ್ಕೆ ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದ್ದರಿಂದ ತಕ್ಷಣವೇ ಕೋವಿಡ್ ಪ್ರಕರಣಗಳನ್ನು ಗುರುತಿಸಲು ಅನುಕೂಲವಾಗಲು ಜಿಲ್ಲೆಯ ಎಲ್ಲ 52 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ RAT (RAPID ಆಯಂಟಿಜನ್ ಟೆಸ್ಟ್) ಟೆಸ್ಟ್ ಆರಂಭಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ …
Read More »ಜುಲೈ ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಲಭ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಹುಬ್ಬಳ್ಳಿ: ದೇಶದ ವಿವಿಧ ರಾಜ್ಯಗಳಲ್ಲಿ ಉಂಟಾಗಿರುವ ಕೊರೊನಾ ಲಸಿಕೆ ಅಭಾವದ ಕುರಿತಂತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಇದಕ್ಕೆ ವಿರೋಧಿಗಳೇ ಕಾರಣ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವ್ರು ಭಾರತದಲ್ಲಿ ಲಸಿಕೆಗಳನ್ನ ತಯಾರು ಮಾಡಲಾಗುತ್ತಿತ್ತು. ಆದರೆ ಎಷ್ಟೋ ಮಂದಿ ಲಸಿಕೆಯ ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡಿದರು. ನಕಾರಾತ್ಮಕ ಅಭಿಪ್ರಾಯ ಹೆಚ್ಚಾಗಿ ಬಂದಿದ್ದರಿಂದ ಕಂಪನಿಗಳು ಲಸಿಕೆ ಉತ್ಪಾದನೆಯನ್ನ ಕಡಿಮೆ ಮಾಡಿದವು. ಲಸಿಕೆ ಕುರಿತಾದ ತಪ್ಪು ತಿಳುವಳಿಕೆಯಿಂದಾಗಿ ಉತ್ಪಾದನೆ ಕುಂಠಿತವಾಯ್ತು ಎಂದು ಹೇಳಿದರು. …
Read More »ಧಾರವಾಡದ 240 ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ
ಹುಬ್ಬಳ್ಳಿ: ಜಿಲ್ಲೆಯ ಪತ್ರಕರ್ತರ ಭವನದಲ್ಲಿ ಇಂದು 249 ಮಾಧ್ಯಮ ಪ್ರತಿನಿಧಿಗಳು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಫ್ರೆಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಅನುಮತಿಸಿದೆ. ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್‍ರವರ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 240 ಮಾಧ್ಯಮ ಪ್ರತಿನಿಧಿಗಳು ಲಸಿಕೆಯನ್ನು ಸ್ವೀಕರಿಸಿದ್ದಾರೆ. …
Read More »ಹುಬ್ಬಳ್ಳಿ: ಪತ್ರಕರ್ತರಗೆ ಪ್ರೆಸ್ ಕ್ಲಬ್‌ನಲ್ಲಿ ಕೋವಿಡ್ ಲಸಿಕೆ
ಹುಬ್ಬಳ್ಳಿ: ಇಲ್ಲಿನ ಕಿಮ್ಸ್, ಚಿಟಗುಪ್ಪಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಹಾಗೂ ಪತ್ರಕರ್ತರಿಗಾಗಿ ಪ್ರೆಸ್ ಕ್ಲಬ್‌ನಲ್ಲಿ ಕೋವಿಡ್ ಲಸಿಕೆ ನೀಡಲಾಯಿತು. ಕಿಮ್ಸ್‌ನಲ್ಲಿ ಜನದಟ್ಟಣೆ ಹೆಚ್ಚಿತ್ತು. ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು ಬಹುತೇಕ ಕೇಂದ್ರಗಳಲ್ಲಿ ಎರಡನೇ ಡೋಸ್ ಮಾತ್ರ ನೀಡಲಾಗುತ್ತಿದೆ
Read More »ಕೋವಿಡ್ ಕರ್ಫ್ಯೂಗೆ ವಾಣಿಜ್ಯ ನಗರಿ ಹುಬ್ಬಳ್ಳಿ ,ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ
ಹುಬ್ಬಳ್ಳಿ ಬೆಳಗಾವಿ: ಎರಡನೇ ಹಂತದ ಕೋವಿಡ್ ಕರ್ಫ್ಯೂಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಾಹನಗಳ ಸಂಚಾರ ಕೂಡ ಕಡಿಮೆಯಾಗಿದೆ. ವಿನಾಕಾರಣ ರಸ್ತೆಗಳಿದ ವಾಹನಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ. ಬೆಳಿಗ್ಗೆ 7:೦೦ ಗಂಟೆಯಿಂದಲೇ ಪೊಲೀಸರು ರಸ್ತೆಗಿಳಿದಿದ್ದು, ಮಾರ್ಗಸೂಚಿ ಉಲ್ಲಂಘಿಸಿ ಅಗತ್ಯ ವಸ್ತುಗಳ ಖರೀದಿಗೆ ತಂದಿದ್ದ ಸುಮಾರು 87 ವಾಹನಗಳನ್ನು ಜಪ್ತಿ ಮಾಡಲಾಗಿದೆ. 10 ಗಂಟೆಯ ನಂತರ ಚೆಕ್ ಪೋಸ್ಟ್ ಗಳನ್ನು ಬಿಗಿಗೊಳಿಸಿ ಪ್ರತಿಯೊಂದು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಕಾಲ್ನಡಿಗೆಯಲ್ಲಿ …
Read More »ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯಲ್ಲಿ 20ಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ ಪೊಲೀಸರು!
ಹುಬ್ಬಳ್ಳಿ: ರಾಜ್ಯದಲ್ಲಿ ಇಂದಿನಿಂದ ಆರಂಭವಾಗಿರುವ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಲು ಪೊಲೀಸರು ನಸುಕಿನ ಜಾವದಿಂದಲೇ ಕಾರ್ಯಾಚರಣೆಗೆ ಇಳಿದಿದ್ದಾರೆ. ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ 20ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿ ಅನಗತ್ಯವಾಗಿ ಹೊರಗೆ ಬರೋರಿಗೆ ಬಿಸಿ ಮುಟ್ಟಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ವಿವಿಧ ಸರ್ಕಲ್ ಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಪರಿಶೀಲನೆ ನಡೆಸುತ್ತಿದ್ದು ಅನಗತ್ಯವಾಗಿ ಓಡಾಡುವ ವಾಹನಗಳನ್ನ ಸೀಜ್ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ನಲ್ಲಿ ನಸುಕಿನ ಜಾವದಿಂದಲೇ ಪೊಲೀಸರು ಬೈಕ್ ಗಳನ್ನು …
Read More »ಧಾರವಾಡ ಜಿಲ್ಲೆಯಲ್ಲಿ 4 ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮೋದನೆ
ಹುಬ್ಬಳ್ಳಿ: ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಚಿಕಿತ್ಸೆಗೆ ಆಮ್ಲಜನಕ ಕೊರತೆ ನೀಗಿಸುವುದಕ್ಕಾಗಿ ಕೇಂದ್ರ ಸ್ವಾಮ್ಯದ ಸಾರ್ವಜನಿಕ ಉದ್ಯಮಗಳಿಂದ ಧಾರವಾಡ ಜಿಲ್ಲೆಗೆ 4 ಆಮ್ಲಜನಕ ಉತ್ಪಾದನಾ ಘಟಕಗಳ ಸ್ಪಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಆಮ್ಲಜನಕ ಘಟಕ ಸ್ಥಾಪನೆ ಕುರಿತಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಧಮೇಂದ್ರ ಪ್ರಧಾನ್ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪತ್ರ ಬರೆದು ಮನವಿ ಮಾಡಿದ್ದರು. ಜೋಶಿ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಸಚಿವ …
Read More »ಕೆಲಸ ಮಾಡುವ ಮನೆಯಲ್ಲಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು 24 ಗಂಟೆಯಲ್ಲೆ ಬಂಧಿಸಿದ ಪೊಲೀಸರು
ಹುಬ್ಬಳ್ಳಿ: ಕೆಲಸ ಮಾಡುವ ಮನೆಯಲ್ಲಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು 24 ಗಂಟೆಯಲ್ಲೆ ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ಅಪಾರ್ಟ್‍ಮೆಂಟ್‍ನಲ್ಲಿ ಲಕ್ಷಾಂತರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದ ಕಳ್ಳನನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಧರ್ಮರಾಮ್ ಧರ್ಮೆಂದ್ರ ಗೋವರ್ಧನ ರಾಮ್ ಚೌಧರಿ ಎಂಬವನು ಬಂಧಿತ ಆರೋಪಿಯಾಗಿದ್ದಾನೆ. ಹುಬ್ಬಳ್ಳಿ ದೇಶಪಾಂಡೆನಗರದ ಗುರು ಅಪಾರ್ಟ್‍ಮೆಂಟ್‍ನ ಮಹೇಶ ಎಂಬವರ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಜಸ್ಥಾನ ಮೂಲದ …
Read More »