Breaking News

ಹುಬ್ಬಳ್ಳಿ

ಬ್ಲಾಕ್ ಫಂಗಸ್ ಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ವ್ಯವಸ್ಥೆ: ಆರೋಗ್ಯ ಸಚಿವ ಸುಧಾಕರ್

ಹುಬ್ಬಳ್ಳಿ: ಕಪ್ಪು ಶಿಲೀಂಧ್ರ ಸೋಂಕು ಕಡಿಮೆಯಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತರಿಗೆ ಉಚಿತವಾಗಿ ಸರಿಯಾದ ಚಿಕಿತ್ಸೆ ಕೊಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಲ್ಯಾಕ್ ಫಂಗಸ್ ನಿಂದ ಸಾವಿನ ಪ್ರಮಾಣ ಜಾಸ್ತಿ ಆಗಿಲ್ಲ. ವರ್ಷಕ್ಕೆ 10 ಜನ ಇರುತ್ತಾ ಇದ್ದರು. ಆದರೆ ಈಗ 250 ಜನ ಸೋಂಕಿತರು ರಾಜ್ಯದಲ್ಲಿ ಇದ್ದಾರೆ. ಹೀಗಾಗಿ ಅವರಿಗೆಲ್ಲ ಎಷ್ಟು ಔಷಧಿ ಬೇಕೋ ಇವೆಲ್ಲವನ್ನು ಸರ್ಕಾರ ನೀಡಲಿದೆ …

Read More »

ಕೊರೊನಾ ಗೆದ್ದ ಒಂದೇ ಕುಟುಂಬದ 16 ಮಂದಿ

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೆಮ್ಮಾರಿ ವೈರಸ್‍ಗೆ ಸಾಕಷ್ಟು ಜನರು ಬಲಿಯಾಗುತ್ತಿದ್ದಾರೆ. ಇದರ ನಡುವೆಯೇ ಅದೃಷ್ಟಶಾಲಿಗಳೆಂಬಂತೆ ವೈರಸ್ ವಿರುದ್ಧ ಹೋರಾಡಿ ಒಂದೇ ಕುಟುಂಬದ 16 ಜನರು ಗುಣಮುಖರಾಗುವ ಮೂಲಕ ಇತರಿಗೂ ಮಾದರಿಯಾಗಿದ್ದಾರೆ. ಸುಳ್ಳ ಗ್ರಾಮದ ಶಿವಳ್ಳಿ ಮಠ ಕುಟುಂಬದ 16 ಜನಕ್ಕೆ ಕೊರೊನಾ ಸೋಂಕು ತಗುಲಿತ್ತು. ಮೇ 3 ರಿಂದ ಎಲ್ಲರೂ ಹೋಮ್ ಐಸೋಲೇಷನ್‍ನಲ್ಲಿ ಇದ್ದುಕೊಂಡು ಚೇತರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಇದರಲ್ಲಿ ಮೂರು ವರ್ಷದ …

Read More »

ಸಾಮಾನ್ಯ ಜನರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೆ ಇನ್ನೊಂದು ನ್ಯಾಯ, ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಶೆಟ್ಟರ್ ಆಪ್ತ..!

ಹುಬ್ಬಳ್ಳಿ: ಅವಳಿ ನಗರಿಯಲ್ಲಿ ಸಾಮಾನ್ಯ ಜನರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೆ ಇನ್ನೊಂದು ನ್ಯಾಯ ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಸಚಿವ ಜಗದೀಶ್ ಶೆಟ್ಟರ್ ಆಪ್ತ ಹಾಗೂ ಬಿಜೆಪಿ ಮುಖಂಡ ಆಗಿರುವ ಮಲ್ಲಿಕಾರ್ಜುನ ಸಾಹುಕಾರ್ ಕೋವಿಡ್ ನಿಯಮವನ್ನು ಗಾಳಿಗೆ ತೂರಿದ್ದಾರೆ. ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಸಾಹುಕಾರ್ ತಮ್ಮ 25ನೇ ಮದುವೆ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನೂ ಕಾಪಾಡಿಕೊಂಡಿಲ್ಲ. ನಿಯಮಗಳ ಉಲ್ಲಂಘಿಸಿ ಅದ್ಧೂರಿಯಾಗಿ ವಿವಾಹ ವಾರ್ಷಿಕೋತ್ಸವ ಸಮಾರಂಭ ಮಾಡಿದ್ದಾರೆ. ಮೇ 18 ರಿಂದ …

Read More »

ಮೋದಿ ಟೀಕಿಸುವ ಭರದಲ್ಲಿ ಭಾರತಕ್ಕೆ ಅಪಮಾನ- ಜೋಶಿ ಆಕ್ರೋಶ

ಹುಬ್ಬಳ್ಳಿ: ಕಾಂಗ್ರೆಸ್ ದೇಶದ ಜನತೆಯ ಆತ್ಮಬಲ ಕುಗ್ಗಿಸುವ ಹಾಗೂ ದೇಶಕ್ಕೆ ಅಪಮಾನ ಮಾಡುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಾಂಗ್ರೆಸ್ ಮಾಡಿರುವ ಟೂಲ್ ಕಿಟ್ ವಿಚಾರಕ್ಕೆ ನಗರದಲ್ಲಿಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಜೋಶಿ, ಕೊರೊನಾ ವೈರಸ್ ಹುಟ್ಟಿದ್ದೇ ಚೀನಾದಲ್ಲಿ. ಆದರೆ ಕಾಂಗ್ರೆಸ್ ನಾಯಕರಾಗಲಿ, ಕಮ್ಯುನಿಸ್ಟ್ ನವರಾಗಲಿ ಅದನ್ನು ಚೀನಾ ವೈರಸ್ ಎನ್ನಲಿಲ್ಲ. ಬದಲಿಗೆ ಮೋದಿ ವೈರಸ್ ಎಂದು …

Read More »

ಖಾಸಗಿ ವಾಹಿನಿ ನಕಲಿ ಗುರುತಿನಚೀಟಿ ತೋರಿಸಿ ಸಿಕ್ಕಿಬಿದ್ದ ಕದೀಮ

ಹುಬ್ಬಳ್ಳಿ: ಕೊರೊನಾ ಕರ್ಫ್ಯೂ ಬಿಗಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೆಲವರು ನಕಲಿ ಐಡಿ ಕಾರ್ಡ್‌ಗಳನ್ನು ತೋರಿಸಿ ಓಡಾಡುತ್ತಿರುವುದನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಮಂಗಳವಾರ ಚನ್ನಮ್ಮ ವೃತ್ತದಲ್ಲಿ ಖಾಸಗಿ ವಾಹಿನಿಯೊಂದರ ನಕಲಿ ಗುರುತಿನ ಚೀಟಿ ತೋರಿಸಿ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ಫ್ಯೂ ಬಿಗಿಗೊಳಿ ಸಲಾಗುತ್ತಿದೆ. ಚೆಕ್‌ಪೋಸ್ಟ್‌ ಗಳನ್ನು ಬಿಗಿಗೊಳಿಸಲಾಗುತ್ತಿದೆ. ಅನಗತ್ಯ ಸಂಚಾರ ಎಂದು ಕಂಡುಬಂದರೆ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ. ಹೀಗಾಗಿ ಪೊಲೀಸರ ಕಣ್ಣು …

Read More »

ಕೊರೊನಾ ರುದ್ರನರ್ತನಕ್ಕೆ ಕೋಟ್ಯಾಧಿಪತಿ ಅಣ್ತಾಮ್ಮಾಸ್​ ಬಲಿ; ದೊಡ್ಡಣ್ಣ ಸಾವು-ಬದುಕಿನ ನಡುವೆ ಹೋರಾಟ

ಧಾರವಾಡ: ಅವರು ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸಹೋದರರು. ಆದರೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇನಾಮ್‌ಹೊಂಗಲ್ ಗ್ರಾಮದಲ್ಲಿ ಜೀವನೋಪಾಯಕ್ಕೆ ಪಾತ್ರೆ ಅಂಗಡಿ ಇಟ್ಟಿದ್ದರು. ಕೌದಿ ಹೊಲೆಯೋ ಕೆಲಸ ಸಹ ಮಾಡುತ್ತಿದ್ದರು. ಅದರಿಂದಲೇ ಜೀವನದಲ್ಲಿ ಮುಂದೆ ಬಂದು ಕೋಟ್ಯಾಧೀಶರಾಗಿದ್ದರು. ಸುಮಾರು 80 ಎಕರೆ ಭೂಮಿಯ ಒಡೆಯರಾಗಿದ್ದರು. ಬದುಕು ಸುಂದರವಾಗಿ ನಡೆದಿದೆ ಅಂದುಕೊಳ್ಳುತ್ತರುವ ಹೊತ್ತಿನಲ್ಲೇ ಬಾಗಲೆ ಮನೆಯ ಬಾಗಿಲಿಗೆ ಕೊರೊನಾ ಮಾರಿ ವಕ್ಕರಿಸಿಬಿಟ್ಟಿದೆ. ಮೊದಲು ಆ ಮನೆಯಲ್ಲಿ ನಾಲ್ಕು ದಿನಗಳ ಅಂತರದಲ್ಲಿ …

Read More »

ಡಿಸಿಪಿ ಕೈಗೆ ಸಿಕ್ಕಿಬಿದ್ದ ನಕಲಿ ಪತ್ರಕರ್ತ- ಬೈಕ್ ಸೀಜ್, ಕೇಸ್ ದಾಖಲು

ಹುಬ್ಬಳ್ಳಿ: ಲಾಕಡೌನ್ ವೇಳೆ ಬಂದ್ ಆಗಿರುವ ಟಿವಿ ಚಾನಲ್ ಐಡಿ ಕಾರ್ಡ ಬಳಸಿ ಪೊಲೀಸರನ್ನ ಯಮಾರಿಸುತ್ತಿದ್ದ ನಕಲಿ ಪತ್ರಕರ್ತನನ್ನ ಹುಬ್ಬಳ್ಳಿಯಲ್ಲಿ ಪೊಲೀಸರು ವಶಕ್ಕೆ ಪಡೆದು ಬೈಕ್ ಸೀಜ್ ಮಾಡಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ  ಡಿಸಿಪಿ ರಾಮರಾಜನ್ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಇಂದು ಮುಂಜಾನೆ ಅನಗತ್ಯವಾಗಿ ಓಡಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಹಿಡಿದು ಬೈಕ್ ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಜಾನ್ ನಿಕೋಲಸ್ ಹಲವು ವರ್ಷಗಳ ಹಿಂದೇಯೇ ಬಂದ್ …

Read More »

ಧಾರವಾಡ: ಕೋವಿಡ್-19 ರ ಎರಡನೇ ಅಲೆ : ಪಿ.ಎಚ್.ಸಿ ಗಳಲ್ಲಿ RAT ಟೆಸ್ಟ್ ಆರಂಭಿಸಲು ಕ್ರಮ

ಧಾರವಾಡ: ಕೋವಿಡ್-19 ರ ಎರಡನೇ ಅಲೆ ಆರಂಭವಾದಾಗ ಕೊರೊನಾ ಸೋಂಕು ನಗರ ಪ್ರದೇಶದಲ್ಲಿ ಹೆಚ್ಚಿಗೆ ಇದ್ದು, ಗ್ರಾಮೀಣ ಭಾಗದಲ್ಲಿ ಕಡಿಮೆ ಪ್ರಮಾಣದಲ್ಲಿತ್ತು. ಆದರೆ ಈಗ ದಿನದಿಂದ ದಿನಕ್ಕೆ ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದ್ದರಿಂದ ತಕ್ಷಣವೇ ಕೋವಿಡ್ ಪ್ರಕರಣಗಳನ್ನು ಗುರುತಿಸಲು ಅನುಕೂಲವಾಗಲು ಜಿಲ್ಲೆಯ ಎಲ್ಲ 52 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ RAT (RAPID ಆಯಂಟಿಜನ್ ಟೆಸ್ಟ್) ಟೆಸ್ಟ್ ಆರಂಭಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ …

Read More »

ಜುಲೈ ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಲಭ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ದೇಶದ ವಿವಿಧ ರಾಜ್ಯಗಳಲ್ಲಿ ಉಂಟಾಗಿರುವ ಕೊರೊನಾ ಲಸಿಕೆ ಅಭಾವದ ಕುರಿತಂತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಷಿ ಇದಕ್ಕೆ ವಿರೋಧಿಗಳೇ ಕಾರಣ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವ್ರು ಭಾರತದಲ್ಲಿ ಲಸಿಕೆಗಳನ್ನ ತಯಾರು ಮಾಡಲಾಗುತ್ತಿತ್ತು. ಆದರೆ ಎಷ್ಟೋ ಮಂದಿ ಲಸಿಕೆಯ ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡಿದರು. ನಕಾರಾತ್ಮಕ ಅಭಿಪ್ರಾಯ ಹೆಚ್ಚಾಗಿ ಬಂದಿದ್ದರಿಂದ ಕಂಪನಿಗಳು ಲಸಿಕೆ ಉತ್ಪಾದನೆಯನ್ನ ಕಡಿಮೆ ಮಾಡಿದವು. ಲಸಿಕೆ ಕುರಿತಾದ ತಪ್ಪು ತಿಳುವಳಿಕೆಯಿಂದಾಗಿ ಉತ್ಪಾದನೆ ಕುಂಠಿತವಾಯ್ತು ಎಂದು ಹೇಳಿದರು. …

Read More »

ಧಾರವಾಡದ 240 ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ

ಹುಬ್ಬಳ್ಳಿ: ಜಿಲ್ಲೆಯ ಪತ್ರಕರ್ತರ ಭವನದಲ್ಲಿ ಇಂದು 249 ಮಾಧ್ಯಮ ಪ್ರತಿನಿಧಿಗಳು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಫ್ರೆಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಅನುಮತಿಸಿದೆ. ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್‍ರವರ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 240 ಮಾಧ್ಯಮ ಪ್ರತಿನಿಧಿಗಳು ಲಸಿಕೆಯನ್ನು ಸ್ವೀಕರಿಸಿದ್ದಾರೆ. …

Read More »