Breaking News

ಅಂತರಾಷ್ಟ್ರೀಯ

Pro Kabaddi | ಕಬಡ್ಡಿ: ಯೋಧಾಸ್‌ಗೆ ಗೆಲುವು

ಪುಣೆ : ಪ್ರದೀಪ್‌ ನರ್ವಾಲ್‌ (22 ಪಾಯಿಂಟ್ಸ್‌) ಅವರ ಮಿಂಚಿನ ಆಟದ ನೆರವಿನಿಂದ ಯು.ಪಿ.ಯೋಧಾಸ್ ತಂಡ ಪ್ರೊ ಕಬಡ್ಡಿ ಲೀಗ್‌ನಲ್ಲಿ ಸುಲಭ ಗೆಲುವು ಪಡೆಯಿತು. ಬಾಳೇವಾಡಿಯ ಶಿವಛತ್ರಪತಿ ಕ್ರೀಡಾ ಸಂಕೀರ್ಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಯೋಧಾಸ್‌ 50-31 ರಲ್ಲಿ ದಬಾಂಗ್‌ ಡೆಲ್ಲಿ ತಂಡವನ್ನು ಮಣಿಸಿತು.   ವಿಜಯಿ ತಂಡ ವಿರಾಮದ ವೇಳೆಗೆ 29-14 ರಲ್ಲಿ ಮುನ್ನಡೆಯಲ್ಲಿತ್ತು.   ಪೈರೇಟ್ಸ್‌- ತಲೈವಾಸ್‌ ಪಂದ್ಯ ಟೈ: ಪಟ್ನಾ ಪೈರೇಟ್ಸ್‌ ಮತ್ತು ತಮಿಳ್ ತಲೈವಾಸ್‌ …

Read More »

ದೆಹಲಿ ವಿಮಾನ ನಿಲ್ದಾಣದಲ್ಲಿ ಮಗುವಿಗೆ ಜನ್ಮವಿತ್ತ ಹುಬ್ಬಳ್ಳಿ ಮಹಿಳೆ

ನವದೆಹಲಿ: ಕರ್ನಾಟಕದ ಹುಬ್ಬಳ್ಳಿಗೆ ತೆರಳಬೇಕಾಗಿದ್ದ ಮಹಿಳೆ ರಾಷ್ಟ್ರ ರಾಜಧಾನಿ ನವದೆಹಲಿ ವಿಮಾನ ನಿಲ್ದಾಣದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಂಗಳವಾರ ವಿಮಾನ ನಿಲ್ದಾಣದ ಟರ್ಮಿನಲ್‌ 3ರಲ್ಲಿ ಈ ಘಟನೆ ನಡೆದಿದೆ. ಈ ಮೂಲಕ ನವದೆಹಲಿ ವಿಮಾನ ನಿಲ್ದಾಣಕ್ಕೆ ಅತ್ಯಂತ ಯುವ ಪ್ರಯಾಣಿಕರೊಬ್ಬರು ಆಗಮಿಸಿದಂತೆ ಆಗಿದೆ. ವಿಮಾನಕ್ಕಾಗಿ ಮಹಿಳೆ ಪತಿಯ ಜತೆಗೆ ಕಾಯುತ್ತಿದ್ದರು. ತುಂಬು ಗರ್ಭಿಣಿಯಾಗಿದ್ದ ಅವರು ಶೌಚಾಲಯಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿಯೇ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಸಮೀಪದಲ್ಲಿಯೇ …

Read More »

ದಿನಕ್ಕೆ 10 ಲೀ. ಹಾಲು, ಪ್ರತಿ ಊಟಕ್ಕೆ 1200 ರೂ. ಮೌಲ್ಯದ ತರಕಾರಿ; 72 ಸದಸ್ಯರನ್ನು ಹೊಂದಿರುವ ಅವಿಭಕ್ತ ಕುಟುಂಬ

ಇಡೀ ಜಗತ್ತೇ ವಿಭಕ್ತ ಕುಟುಂಬ ಮಾರ್ಗದತ್ತ ಸಾಗುತ್ತಿರುವಾಗ ಮಹಾರಾಷ್ಟ್ರದ ಸೊಲ್ಲಾಪುರದ ಅಪರೂಪದ ಕುಟುಂಬವೊಂದು ಒಂದೇ ಸೂರಿನಡಿ 72 ಸದಸ್ಯರನ್ನು ಹೊಂದಿದ್ದು ಕಣ್ಮನ ಸೆಳೆಯುತ್ತಿದೆ. ಹಿರಿಯರು, ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮಹಾರಾಷ್ಟ್ರದ ಕುಟುಂಬದ ನಾಲ್ಕು ತಲೆಮಾರುಗಳು ಒಂದೇ ಸೂರಿನಡಿ ವಾಸಿಸುತ್ತಿವೆ. ಇದು ಸುಂದರವಾದ ಭಾರತೀಯ ಅವಿಭಕ್ತ ಕುಟುಂಬದ ಉದಾಹರಣೆಯಾಗಿದೆ. ವ್ಯಾಪಾರ ವಹಿವಾಟು ನಡೆಸುತ್ತಿರುವ ಡೊಯಿಜೋಡೆ ಕುಟುಂಬದಲ್ಲಿ 72 ಜನರಿಗೆ ಪ್ರತಿದಿನ 10 ಲೀಟರ್ ಹಾಲು ಬೇಕಾಗುತ್ತದೆ. ಪ್ರತಿ ಊಟಕ್ಕೆ …

Read More »

ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು

ಹುಬ್ಬಳ್ಳಿ ನವೆಂಬರ್ 16: ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಒದಗಿಸಲು ಯೋಜನೆ ರೂಪಸಲಾಗುತ್ತಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ ಮುಂದೊಂದು ದಿನ ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಅದರಲ್ಲೂ ಉತ್ತರ ಕರ್ನಾಟಕದ ಕಡೆಗೆ ಪ್ರಯಾಣಿಸಲಿದೆ. ಕರ್ನಾಟಕದ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲು ನೈಋತ್ಯ ರೈಲ್ವೆ (SWR) ರೈಲ್ವೇ …

Read More »

ಇಂದು ರಾಜ್ಯಕ್ಕೆ ‘AICC’ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಆಗಮನ : ಅದ್ದೂರಿ ಸ್ವಾಗತಕ್ಕೆ ‘ಕೈ’ ನಾಯಕರು ಸಜ್ಜು

ಬೆಂಗಳೂರು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಜೊತೆಗೆ ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ.   ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ.   ಖರ್ಗೆ …

Read More »

ಅಲೋಕ್ ಕುಮಾರ್ ಯಾರು?.. ಪೊಲೀಸರ ಜೊತೆಗೆ ಶಾಸಕ ರೇಣುಕಾಚಾರ್ಯ ವಾಗ್ವಾದ … ವಿಡಿಯೋ!

ದಾವಣಗೆರೆ: ಸಹೋದರ ಮಗ ಚಂದ್ರು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂಪಿ ರೇಣುಕಾಚಾರ್ಯ ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಇದೇ ವೇಳೆ ರೇಣುಕಾಚಾರ್ಯ ಹೊನ್ನಾಳಿ ಪೊಲೀಸ್​ ಠಾಣೆಯ ಸಿಪಿಐ ಸಿದ್ದನಗೌಡರವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.   ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಸೊರಟೂರು ಬಳಿಯ ತುಂಗಾ ಕಾಲುವೆಯಲ್ಲಿ ಮೃತ ಚಂದ್ರು ಶವದೊಂದಿಗೆ ಪತ್ತೆಯಾದ ಕಾರನ್ನು ಈಗಾಗಲೇ ಪೋಲಿಸರ ವಶದಲ್ಲಿದೆ. ಚಂದ್ರು ಶವವಾಗಿ ಪತ್ತೆಯಾದ ಕಾರನ್ನು ಹೊನ್ನಾಳಿ ಪೋಲಿಸ್ ಠಾಣೆ ಬಳಿ ನಿಲ್ಲಿಸಲಾಗಿದ್ದು, …

Read More »

ಹುಕ್ಕೇರಿ, ಸವದತ್ತಿ ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ಇಲ್ಲ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಸವದತ್ತಿ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ಘೋಷಣೆ ಮಾಡಿಲ್ಲ. ವಿಧಾನಸಭಾ ಚುನಾವಣೆಗೆ ಏಳು ತಿಂಗಳುಗಳು ಬಾಕಿ ಇರುವುದರಿಂದ ಉಪಚುನಾವಣೆ ಘೋಷಣೆ ಮಾಡಿಲ್ಲ ಎಂದು ಹೇಳಲಾಗಿದೆ.   ಬೆಂಗಳೂರು : ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಸವದತ್ತಿ ಯಲ್ಲಮ್ಮ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸದಿರಲು ಕೇಂದ್ರ ಚುನಾವಣೆ ಆಯೋಗ ನಿರ್ಧರಿಸಿದಂತಿದೆ. ಬರುವ ವರ್ಷದ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ” ಸಾರ್ವತ್ರಿಕ …

Read More »

ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಿ

ಬೆಳಗಾವಿ : ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಕೇಂದ್ರೀಯ ಬಸ್‌ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಸೈಕಲ್‌ ರ್‍ಯಾಲಿ ನಡೆಸಿದ ಸಾರಿಗೆ ನೌಕರರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕೂಟದ ಅಧ್ಯಕ್ಷ ಆರ್‌. …

Read More »

ಹವಾಮಾನ ಪ್ರತಿಕೂಲ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

ನವದೆಹಲಿ: ರಾಷ್ಟ್ರದ ರಾಜಧಾನಿಯ ಹವಾಮಾನ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಸಾಗಿದೆ. ಗಾಳಿಯ ಗುಣಮಟ್ಟ ಅಪಾಯಕಾರಿ ಹಂತ ತಲುಪಿರುವ ಹಿನ್ನೆಲೆಯಲ್ಲಿ 8 ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಸ್ತುತ ದೆಹಲಿಯ ಹವಾಮಾನ ಸಿಗರೇಟ್ ಹೊಗೆಗಿಂತ ಮಾರಕವಾಗಿದೆ ಎಂದು ಏಮ್ಸ್ ಮಾಜಿ ನಿರ್ದೇಶಕ ರಣದೀಪ್ ಗುಲೇರಿಯಾ ಹೇಳಿದ್ದಾರೆ. ತಂಬಾಕಿನ ಹೊಗೆಯಷ್ಟೇ ಅಪಾಯಕಾರಿಯಾಗಿರುವ ಈ ಹವೆ ಸೇವನೆ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುವ ಎಚ್ಚರಿಕೆಯನ್ನು ಅವರು ನೀಡಿದ್ದಾರೆ. ವಿಶ್ವದ ಅತ್ಯಂತ ಮಾಲಿನ್ಯ …

Read More »

1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಕಾಮಗಾರಿಗೆ ಗುದ್ದಲಿ ಪೂಜೆ ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ನಾಗನೂರ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಾಗನೂರ ಪಟ್ಟಣದ ಹೊರವಲಯದ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು 1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ(ಹಂತ-4)ಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.   ನಾಗನೂರ ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು …

Read More »