ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಸಾಹುಕಾರ್ ಪಡೆ ಕರ್ನಾಟಕ ಜಾಲತಣವನ್ನು ಉದ್ಘಾಟನೆ ಮಾಡಿದ ನಮ್ಮ ರಮೇಶ್ ಅಣ್ಣ ಜಾರಕಿಹೊಳಿ ಸಾಹುಕಾರ್ ಹಾಗು ಅಮರನಾಥ್ ಜಾರಕಿಹೊಳಿ ಸಾಹುಕಾರ್ ರವರು ಉದ್ಘಾಟನೆ ಈ ಸಂದರ್ಭದಲ್ಲಿ ಸಾಹುಕಾರ ಪಡೆ ಕರ್ನಾಟಕ ಗೌರವ ಅಧ್ಯಕ್ಷರು ದೋಡ್ಡಯ್ಯ ಎಮ್. ಎಚ್. ಹಾಗೂ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರು ಶೇಖರ.ಎಸ್ ರಾಜ್ಯ ಕಾರ್ಯದರ್ಶಿಗಳು ದೀಪು.ಎಮ್. ಮತ್ತು ಚೇತನ ಹಾಗೂ ಸಾಗರ್ …
Read More »ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ ಕುಮಾರ್
ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಕ್ರಿಯ ರಾಜಕಾರಣದಿಂದ ಹೊರ ಬರುತ್ತೇನೆ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಸೇರಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಅಧಿಕಾರದ ದುರಾಸೆಯಾಗಿ ಅನೈತಿಕ ರಾಜಕೀಯ ಮಾಡುತ್ತಿದ್ದಾರೆ. …
Read More »ರೈತರಿಗೆ ಬೆಂಬಲ; ದಿಲ್ಲಿ ಸಿಎಂ ಕೇಜ್ರಿವಾಲ್ ಗೆ ಗೃಹ ಬಂಧನ: ಆಪ್ ಆರೋಪ
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಪೆÇಲೀಸರು ಗೃಹ ಬಂಧನದಲ್ಲಿರಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ವಕ್ತಾರ ಸೌರಭ್ ಭಾರದ್ವಾಜ್, ದೆಹಲಿ ಪೆÇಲೀಸರು ಕೇಜ್ರೀವಾಲ್ ಅವರನ್ನು ಗೃಹಬಂಧನದಲ್ಲಿ ಇರಿಸಿದೆ. ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ದೆಹಲಿ ಪೆÇಲೀಸರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಂಗ್ಯೂ ಬಾರ್ಡರ್ ನಲ್ಲಿ ರೈತರನ್ನು ಭೇಟಿ ಮಾಡಿದ ನಂತರ ಗೃಹ ಬಂಧನದಲ್ಲಿರಿಸಲಾಗಿದೆ. ಅವರ ನಿವಾಸಕ್ಕೆ ತೆರಳಲು …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ: ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ
ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ …
Read More »ಗೋಕಾಕದಲ್ಲಿ ಮರಾಠಿ ಪ್ರಾದಿಕಾರ ಅಬಿವೃದ್ದಿ ವಿರೋದಿಸಿ ಪ್ರತಿಭಟನೆ
ಗೋಕಾಕ: ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮತ್ತು ಕನ್ನಡಪರ ಸಂಘಟನೆಗಳು ಒಕ್ಕೂಟ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಗೋಕಾಕದ ಬಸವೇಶ್ವರ ವೃತ್ತದಲ್ಲಿ ತಾಲೂಕಾ ಕನ್ನಡಪರ ಸಂಘಟನೆಯ ಒಕ್ಕೂಟದಿಂದ ಪ್ರತಿಬಟನೆ ಮಾಡಲಾಯಿತು. ಈ ಪ್ರತಿಬಟನೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡರಾದ ಕಿರಣ ಡಮಾಮಗರ, ಸಂತೋಷ ಖಂಡ್ರಿ, ಮಲಿಕ್ ತಳವಾರ.ಯಲ್ಲಪ್ಪ ಗೌಡರ, ಅರುಣ ರಂಗಸುಭೆ, ಅಜೀಜ ಮೊಕಾಶಿ, ಅಮಿತ ಗುಡವಾಲೆ, ಮುಬಾರಕ ಬಾಳೆಕುಂದ್ರಿ, ಕಲ್ಲಯ್ಯಾ ಮಠಪತಿ ಸೇರಿದಂತೆ ಅನೇಕರು …
Read More »7.5 ಕೋಟಿ ಪ್ರಶಸ್ತಿ ಗೆದ್ದ ಶಿಕ್ಷಕ..!
ಲಂಡನ್, ಡಿ.4- ವಾರ್ಕಿ ಫೌಂಡೇಷನ್ ನೀಡುವ ಜಾಗತಿಕ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಮಹಾರಾಷ್ಟ್ರದ ಶಿಕ್ಷಕ ರಣಜಿತ್‍ಸಿನ್ಹಾ ದಿಸಾಲೆ ಪಾತ್ರರಾಗುವ ಮೂಲಕ 7.5 ಕೋಟಿ ರೂ.ಗಳನ್ನು ಪ್ರಶಸ್ತಿ ರೂಪದಲ್ಲಿ ಗೆದ್ದಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿಟೆವಾಡಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ರಣಜಿತ್, ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಸಿಗಬೇಕೆಂದು ಹೋರಾಟ ನಡೆಸಿದ್ದರಲ್ಲದೆ ಗ್ರಾಮೀಣ ಪ್ರದೇಶಗಳಲ್ಲೂ ಕ್ಯು ಆರ್ ಕೋಡ್ ಮೂಲಕ ಸುಲಭ ರೀತಿಯಲ್ಲಿ ಪಠ್ಯಗಳನ್ನು ಪರಿಚಯಿಸಿದ ಖ್ಯಾತಿ ಹೊಂದಿದ್ದಾರೆ. …
Read More »ಪಲ್ಟಿ ಹೊಡೆದ ಲಾರಿ: ಭೀಕರ ಅಪಘಾತದಲ್ಲಿ ಚಾಲಕ ಸಾವು
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ರಸ್ತೆ ಪಕ್ಕ ನಿಂತಿದ್ದ ಓಮ್ನಿ ಚಾಲಕ ಬಲಿ ಪಡೆದಿದೆ. ಜಿಲ್ಲೆಯ ವಿರಾಜಪೇಟೆ ಮಡಿಕೇರಿ ರಸ್ತೆಯ ಭೇತ್ರಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತನನ್ನು ಮೂರ್ನಾಡುವಿನ ಹರೀಶ್ ಎಂದು ಗುರುತಿಸಲಾಗಿದೆ. ಲಾರಿ ಮುಗುಚಿಬಿದ್ದು, ನಾಲ್ಕೈದು ಬಾರಿ ಪಲ್ಟಿ ಹೊಡೆದಿದೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬಿದ್ದ ಪರಿಣಾಮ ಓಮ್ನಿ ವಾಹನ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಮೂರ್ನಾಡು ಪೋಲಿಸರು …
Read More »ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ
ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಇಂದು ಬೆಳಗ್ಗೆ 10.30ಕ್ಕೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಕೊರೊನಾ ಕುರಿತು ಚರ್ಚಿಸಲು ಕರೆಯಲಾಗಿರುವ ಎರಡನೇ ಸರ್ವಪಕ್ಷ ಸಭೆ ಇದು. ಮೊದಲ ಸಭೆಯನ್ನು ಏಪ್ರಿಲ್ 20ರಂದು ದೇಶವ್ಯಾಪಿ ಲಾಕ್ಡೌನ್ ಬಗ್ಗೆ ಮಾತನಾಡಲು ಕರೆಯಲಾಗಿತ್ತು. ದೀಪಾವಳಿ ನಂತರ ಕೊರೊನಾ ಪ್ರಕರಣಗಳಲ್ಲಿ ಉಂಟಾಗಿರುವ ಏರಿಳಿತ, ಚಳಿಗಾಲದ ಪರಿಣಾಮ, ಹೊಸವರ್ಷ, ಕ್ರಿಸ್ಮಸ್ ಸಂದರ್ಭದಲ್ಲಿ ರೂಪಿಸಬೇಕಾದ ನಿಯಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ …
Read More »ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.
ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. 150 ಸ್ಥಾನಗಳ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಮತ ಎಣಿಕೆಯಲ್ಲಿ ಬಿಜೆಪಿ 73 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. ಇದೇ ವೇಳೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) 28 ಸೀಟುಗಳಲ್ಲಿ ಮತ್ತು ಕಾಂಗ್ರೆಸ್ 2 ವಾರ್ಡ್ ನಲ್ಲಿ ಮುನ್ನಡೆಯಲ್ಲಿದೆ @10.06 AM. ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದ್ರೆ ಮ್ಯಾಜಿಕ್ ನಂಬರ್ 76 ಅಗತ್ಯವಿದೆ. 2023ರ …
Read More »ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ.
ಧಾರವಾಡ: ಜಿಲ್ಲಾ ಪಂಜಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ. ಹುಟ್ಟುಹಬ್ಬವನ್ನು ಕೂಡ ಜೈಲಿನಲ್ಲಿಯೇ ಆಚರಿಸಿಕೊಂಡಿದ್ದ ವಿನಯ್, ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 24 ವರ್ಷ ಕಳೆಯಿತು. 2016 ಜೂನ್ 15ರಂದು ನಡೆದ ಹತ್ಯೆಗೆ ಸಂಬಂಧಿಸಿ ಇದೇ ನವೆಂಬರ್ 5 ರಂದು ಬಂಧನಕ್ಕೊಳಗಾಗಿರೊ ವಿನಯ್ಗೆ ಸ್ನೇಹಿತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಿವಾಹ ವಾರ್ಷಿಕೋತ್ಸವದ ಶುಭ ಕೋರಿದ್ದಾರೆ. ನವೆಂಬರ್ …
Read More »
Laxmi News 24×7