ವಾಷಿಂಗ್ಟನ್, ನ.18- ಅಮೆರಿಕದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಜೋಬಿಡೆನ್ ನೇತೃತ್ವದ ಸರ್ಕಾರದಲ್ಲಿ ಮಂಡ್ಯದ ಡಾ.ವಿವೇಕ್ ಮೂರ್ತಿ ಆರೋಗ್ಯ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಅಮೆರಿಕದ ಮಾಜಿ ಸರ್ಜನ್ ಜನರಲ್ ಆಗಿರುವ 43 ವರ್ಷದ ಡಾ.ವಿವೇಕ್ ಮೂರ್ತಿ ಮೊದಲಿನಿಂದಲೂ ಜೋಬಿಡೆನ್ ಅವರಿಗೆ ಪರಮಾಪ್ತರು. ಅಲ್ಲದೆ ಅಮೆರಿಕದ ಚುನಾಯಿತ ಅಧ್ಯಕ್ಷ ಬಿಡೆನ್ ಅವರಿಗೆ ಆಪ್ತ ಸಲಹೆಗಾರರಾಗಿರುವ ಅಗ್ರಮಾನ್ಯರಲ್ಲಿ ಡಾ.ಮೂರ್ತಿ ಅವರು ಸಹ ಒಬ್ಬರು. ಅಲ್ಲದೆ ಪ್ರಸ್ತುತ ಕೋವಿಡ್ ನಿಯಂತ್ರಣಕ್ಕಾಗಿ ಬಿಡೆನ್ ರಚಿಸಿರುವ ಸಲಹಾ ಸಮಿತಿಯ …
Read More »ಮಹೀಂದ್ರ ಸ್ಕಾರ್ಪಿಯೋ ಕಾರನ್ನು ಮರಕ್ಕೆ ಕಬ್ಬಿಣದ ಚೈನ್ ಮೂಲಕ ಕಟ್ಟಿ ಹಾಕಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಮುಂಬೈ: ಸೋಶಿಯಲ್ ಮೀಡಿಯಾದಲ್ಲಿ ಮಹೀಂದ್ರ ಮುಖ್ಯಸ್ಥ ಆನಂದ್ ಮಹೀಂದ್ರ ಇದೀಗ ಸ್ವಾರಸ್ಯಕರ ಮಾಹಿತಿ ಹಂಚಿಕೊಂಡಿದ್ದಾರೆ. ಮಾಲೀಕನೋರ್ವ ತನ್ನ ಮಹೀಂದ್ರ ಸ್ಕಾರ್ಪಿಯೋ ಕಾರನ್ನು ಮರಕ್ಕೆ ಕಬ್ಬಿಣದ ಚೈನ್ ಮೂಲಕ ಕಟ್ಟಿ ಹಾಕಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋ ಗಮನಿಸಿದ ಆನಂದ್ ಮಹೀಂದ್ರ ವಿವರಣೆಯೊಂದಿಗೆ ಟ್ವೀಟ್ ಮಾಡಿದ್ದಾರೆ. ಇದು ಹೈಟೆಕ್ ಲಾಕಿಂಗ್ ಸಿಸ್ಟಮ್ ಅಲ್ಲ, ಇದರಲ್ಲಿ ಮಾಲೀಕರ ಪೊಸೆಸೀವ್‌ನೆಸ್ ಎದ್ದುಕಾಣುತ್ತಿದೆ. ನನಗೆ ಈ ಚಿತ್ರ ಕೆಲ ನೆನಪನ್ನು ಬಿಚ್ಚಿಡುತ್ತಿದೆ. …
Read More »ಕೋವಿಡ್ 19 ಕುರಿತಂತೆ ಏಕಾಏಕಿ ವರದಿ ಮಾಡಿದ್ದಕ್ಕಾಗಿ ಚೀನಾದ ಪತ್ರಕರ್ತೆ ಐದು ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಿದೆ
ಲಂಡನ್: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಚೀನಾದ ಮುಖ ಮತ್ತೊಮ್ಮೆ ಬಯಲಾಗಿದ್ದು ವುಹಾನ್‌ನಿಂದ ಕೋವಿಡ್ 19 ಕುರಿತಂತೆ ಏಕಾಏಕಿ ವರದಿ ಮಾಡಿದ್ದಕ್ಕಾಗಿ ಚೀನಾದ ಪತ್ರಕರ್ತೆ ಐದು ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಿದೆ. ಸುಳ್ಳು ಮಾಹಿತಿಯನ್ನು ಹರಡಿದ ಆರೋಪದ ಮೇಲೆ ಮಾಜಿ ವಕೀಲೆ, ಪತ್ರಕರ್ತೆ ಜಾಂಗ್ ಝಾನ್ ಅವರನ್ನು ಕಳೆದ 6 ತಿಂಗಳಿನಿಂದ ಶಾಂಫೈ ಬಂಧಿಖಾನೆಯಲ್ಲಿ ಇರಿಸಲಾಗಿದ್ದು ಇದೀಗ ಆಕೆಗೆ 5 ವರ್ಷ ಜೈಲು ಶಿಕ್ಷೆಯನ್ನು ಎದುರಿಸಬೇಕಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. …
Read More »ಉತ್ತರ ಪ್ರದೇಶದಲ್ಲಿ ಮುಂದುವರಿದ ಪೈಶಾಚಿಕ ಕೃತ್ಯ
ಫತೇಪುರ್: ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಅಶೋಧರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ. 12 ಹಾಗೂ 8 ವರ್ಷದ ಬಾಲಕಿಯರನ್ನು ಹತ್ಯೆ ಮಾಡಲಾಗಿದ್ದು, ಅವರ ದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿವೆ. ಗ್ರಾಮದ ಹೊರವಲಯದಲ್ಲಿರುವ ಕೊಳದಲ್ಲಿ ಬಾಲಕಿಯರ ಮೃತದೇಹಗಳು ಕಂಡುಬಂದಿವೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ರಾಜೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ ಮಾಡಲಾಗಿದೆ ಎಂದು …
Read More »ಆಟೋ ಮೇಲೆ ಪ್ರೆಸ್, ಶರ್ಟ್ ಮೇಲೆ ಕೆಎಸ್ಆರ್ ಟಿಸಿ ಲೋಗೋ! ವಿಜಯಪುರದಲ್ಲೊಬ್ಬ ‘ಬಹುಕಂಪನಿ ನೌಕರ’
ಆಟೋ ಮೇಲೆ ಪ್ರೆಸ್, ಶರ್ಟ್ ಮೇಲೆ ಕೆಎಸ್ಆರ್ ಟಿಸಿ ಲೋಗೋ! ವಿಜಯಪುರದಲ್ಲೊಬ್ಬ ‘ಬಹುಕಂಪನಿ ನೌಕರ’ ವಿಜಯಪುರ: ಮಾಧ್ಯಮ ಕ್ಷೇತ್ರದಲ್ಲಿ ದುಡಿಯುವ ಜನರು ತಮ್ಮ ಕಾರು, ಬೈಕ್ ಗಳ ಮೇಲೆ ಪ್ರೆಸ್ ಎಂದು ಬರೆಸುವುದು ಸಾಮಾನ್ಯ. ಆದರೆ ವಿಜಯಪುರ ಜಿಲ್ಲೆಯಲ್ಲಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಂಬಂಧ ಇಲ್ಲದವರೂ ಟಂಟಂ, ಆಟೋಗಳ ಮೇಲೂ ಪ್ರೆಸ್ ಸ್ಟಿಕ್ಕರ್ ಬಳಕೆ ಮಾಡುವುದು ಕಂಡುಬರುತ್ತಿದೆ. ವಿಜಯಪುರ ನಗರದಲ್ಲಿ ಆಟೋ ಮೇಲೆ ತ್ರಿಟಿವಿ ಬಂಜಾರಾ- ಪ್ರೆಸ್ (3 TV Banjara …
Read More »66 ಮಂದಿಯನ್ನು ಬಂಧಿಸಿ, ₹ 1 ಲಕ್ಷಕ್ಕೂ ಅಧಿಕ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಕೂಡ್ಲಿಗಿ: ಎರಡು ಪ್ರತ್ಯೇಕ ಸ್ಥಳಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ ಕೂಡ್ಲಿಗಿ ಪೊಲೀಸರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 66 ಮಂದಿಯನ್ನು ಬಂಧಿಸಿ, ₹ 1 ಲಕ್ಷಕ್ಕೂ ಅಧಿಕ ಹಣವನ್ನು ವಶಪಡಿಸಿಕೊಂಡಿದ್ದಾರೆ. ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿ ಜೂಜಾಟ ನಡೆದಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಬಳಿಕ ಕೂಡ್ಲಿಗಿ ಸಿಪಿಐ ಪಂಪನಗೌಡ ಹಾಗೂ ಪಿಎಸ್‍ಐ ತಿಮ್ಮಣ್ಣ ಎಸ್. ಚಮನೂರು ಸಿಬ್ಬಂದಿಯೊಂದಿಗೆ ದಾಳಿ ಕಾರ್ಯಾಚರಣೆ ನಡೆಸಿದರು. ಅಲ್ಲಿ 60 ಮಂದಿಯನ್ನು ಬಂಧಿಸಿ …
Read More »ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ದೊಡ್ಡ ದಾಳಿಯನ್ನು ವಿಫಲಗೊಳಿಸಿದ್ದಾರೆ.
ನವದೆಹಲಿ : ದೆಹಲಿ ಪೊಲೀಸರು ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ದೊಡ್ಡ ದಾಳಿಯನ್ನು ವಿಫಲಗೊಳಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿದ್ದ ದೊಡ್ಡ ಭಯೋತ್ಪಾದಕ ದಾಳಿಯನ್ನು ತಡೆಗಟ್ಟಲು ದೆಹಲಿ ಪೊಲೀಸ್ ವಿಶೇಷ ಕೋಶ ಉಗ್ರರನ್ನು ಬಂಧಿಸಿದೆ. ದೆಹಲಿಯ ಸರಾಯ್ ಕೇಲ್ ಖಾನ್ ನಿಂದ ಬಂಧಿಸಲ್ಪಟ್ಟ ಇಬ್ಬರು ಭಯೋತ್ಪಾದಕರನ್ನು ಅಧಿಕಾರಿಗಳು ಈಗ ಪ್ರಶ್ನಿಸುತ್ತಿದ್ದಾರೆ. ದೆಹಲಿ ಪೊಲೀಸ್ ಅಧಿಕಾರಿಗಳ ಪ್ರಕಾರ, ಸೋಮವಾರ ರಾತ್ರಿ 10.15 ರ ಸುಮಾರಿಗೆ ಸರೈ ಕೇಲ್ ಖಾನ್‌ನ …
Read More »ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು.
ಚಿಕ್ಕೋಡಿ: ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು. ಹಾಗಾಗಿಯೇ ಜನ ಇವರನ್ನ ಜಿಲ್ಲೆಯ ಸಾಹುಕಾರರು ಎಂದೇ ಕರೆಯುತ್ತಾರೆ. ಜಿಲ್ಲೆಯಲ್ಲಿ ತಮ್ಮದೆ ಆದ ಹಿಡಿತ ಹೊಂದಿರುವ ಈ ಮೂವರು ನಾಯಕರು ತಮ್ಮದೆ ರಾಜಕೀಯ ಲೆಕ್ಕಾಚಾರಗಳನ್ನ ಹಾಕಿ ರಾಜಕೀಯ ಮಾಡುತ್ತ ಬಂದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯೂ ಅಷ್ಟೇ. ಈ ಮೂವರು ನಾಯಕರು ಒಂದೇ ಪಕ್ಷದಲ್ಲಿ ಇದ್ದರೂ …
Read More »ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.
ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 …
Read More »ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.
ಬೆಳಗಾವಿ : ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದಂದು ಕತ್ತಲಲ್ಲಿದ್ದೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾರಿಗೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿರುವುದು ಗಮನಕ್ಕೆ ಬಂದಿದೆ. ಹಬ್ಬದ ಸಂದರ್ಭದಲ್ಲಿ ಅವರಿಗೆ ಮುಂಚಿತವಾಗಿ ಹಣ ನೀಡಬೇಕಾಗಿತ್ತು. ಸಾರಿಗೆ ಇಲಾಖೆ ಸಿಬ್ಬಂದಿ ಸಾಮಾನ್ಯ ಕುಟುಂಬದಿಂದ ಬಂದವರು. ಮುಂಚಿತವಾಗಿ ಸಂಬಳ ನೀಡದಕ್ಕೆ ವಿಷಾದ …
Read More »