Breaking News

ಅಂತರಾಷ್ಟ್ರೀಯ

ಕೊರೊನಾ ವಾರಿಯರ್ಸ್‍ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ.

ಬೆಂಗಳೂರು,- ಕೋವಿಡ್ -19 ಸಂದರ್ಭದಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಇಲ್ಲವೇ ಅಪಘಾತಕ್ಕೆ ತುತ್ತಾದ ಕೊರೊನಾ ವಾರಿಯರ್ಸ್‍ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಈ ಯೋಜನೆಯ ಸೌಲಭ್ಯ ಒದಗಿಸಲಾಗಿದ್ದು, ಮತ್ತೆ ಈ ಸೌಲಭ್ಯವನ್ನು 6 ತಿಂಗಳಿಗೆ ವಿಸ್ತರಿಸಲಾಗಿದೆ. ರೋಗಿಗಳೊಂದಿಗೆ ನೇರ ಸಂಪರ್ಕ …

Read More »

ಈ ನಿರ್ಧಾರವನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರು : ಬೊಂಬೆ ತಯಾರಕರಿಗೆ ಬಿಐಎಸ್ (ಭಾರತೀಯ ಮಾನಕ ಬ್ಯೂರೋ) ಸಂಸ್ಥೆ ನೀಡುವ ಐಎಸ್‌ಐ ಮಾರ್ಕ್ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ ಸಾಂಪ್ರದಾಯಿಕ ಕಲೆ ಅವಲಂಬಿಸಿರುವ ಬೊಂಬೆ ತಯಾರಕರ ಮೇಲೆ ಗದಾಪ್ರಹಾರ ಮಾಡಿದ್ದು, ಈ ನಿರ್ಧಾರವನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬಿಐಎಸ್‌ ಪ್ರಮಾಣಪತ್ರ ಪಡೆಯಲು ಸಾವಿರಾರು ರೂ. ವೆಚ್ಚ ಸಣ್ಣ ಬೊಂಬೆಗಳ ತಯಾರಕರಿಗೆ ದುಬಾರಿ ಆಗಲಿದ್ದು, ದೇಶೀಯ ಬೊಂಬೆ ಉತ್ಪಾದಕರ ಭವಿಷ್ಯಕ್ಕೆ ಮಾರಕವಾಗಲಿದೆ. ಕೇಂದ್ರದ ಈ …

Read More »

ಸಾವಿರ ಜನರು ಪರಿಹಾರ ಕೇಂದ್ರದಲ್ಲಿದ್ದಾರೆ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು.

ಬೆಳಗಾವಿ : ಕಳೆದ ನಾಲ್ಕೈದು ದಿನದ ವರದಿ ಪ್ರಕಾರ ರಾಜ್ಯದಲ್ಲಿ ಮಳೆಯಿಂದ ಸುಮಾರು 3000 ಕೋಟಿ ರು. ಹಾನಿಯಾಗಿದೆ. 10 ಜನ, ನೂರಕ್ಕೂ ಹೆಚ್ಚು ಜಾನುವಾರು ಮೃತಪಟ್ಟಿದ್ದು, ಸುಮಾರು 8 ಸಾವಿರ ಜನರು ಪರಿಹಾರ ಕೇಂದ್ರದಲ್ಲಿದ್ದಾರೆ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೊರೋನಾ ಇರುವುದರಿಂದ ಅಲ್ಲಿರುವವರಿಗೆ ಮಾಸ್ಕ್‌, ಸ್ಯಾನಿಟೈಸರ್‌ ನೀಡಬೇಕೆಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಕೊರೋನಾ ಹಾಗೂ ಪ್ರವಾಹ …

Read More »

ಕಂದಾಯ ಸಚಿವ ಆರ್. ಅಶೋಕ್ ಅವರು ರೈತರ ಸಮಸ್ಯೆ ಆಲಿಸದೆ ಕೃಷ್ಣಾ ನದಿಯಲ್ಲಿ ಬೋಟಿನಲ್ಲಿ ಸುತ್ತಾಡಿ ಹೋದರು.

ಬೆಳಗಾವಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಚಿಕ್ಕೋಡಿ ತಾಲ್ಲೂಕಿಗೆ ಸೋಮವಾರ ಭೇಟಿ ನೀಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ರೈತರ ಸಮಸ್ಯೆ ಆಲಿಸದೆ ಕೃಷ್ಣಾ ನದಿಯಲ್ಲಿ ಬೋಟಿನಲ್ಲಿ ಸುತ್ತಾಡಿ ಹೋದರು. ಇದು ಸಂತ್ರಸ್ತರು ಹಾಗೂ ರೈತರ ಅಸಮಾಧಾನಕ್ಕೆ ಕಾರಣವಾಯಿತು. ಯಡೂರ, ಯಡೂರವಾಡಿ, ಮಾಂಜರಿ, ಇಂಗಳಿ ಗ್ರಾಮಗಳಲ್ಲಿ ಬೆಳೆ ಹಾನಿ ಪರಿಶೀಲನೆ ನಡೆಸುತ್ತಾರೆಂದು ರೈತರು ನಿರೀಕ್ಷಿಸಿದ್ದರು. ತಮ್ಮ ಸಮಸ್ಯೆ ಆಲಿಸುತ್ತಾರೆಂದು ಕಾದಿದ್ದರು. ಆದರೆ, ಸಚಿವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಚಿಕ್ಕೋಡಿ ಸಂಸದ …

Read More »

ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ವಿಜಯಪುರ: ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ವಿಜಯಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಯತ್ನಾಳ್ ಸಿಎಂ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಕೇಂದ್ರ ಸರ್ಕಾರದವರಿಗೂ ಬಿಎಸ್‌ವೈ ಸಾಕಾಗಿ ಹೋಗಿದ್ದಾರೆ. ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು. ಉತ್ತರ ಕರ್ನಾಟಕದವರು 100 ಶಾಸಕರನ್ನ ಗೆಲ್ಲಿಸಿ ಕಳಿಸುತ್ತಾರೆ. …

Read More »

ಅದಕ್ಕಾಗಿಯೇ ಅವರನ್ನು ಕ್ಷೇತ್ರದ ಜನ ಅಂಜಲಿ “ತಾಯಿ’ ಅಂತಾರೆ…!!!

ಬೆಳಗಾವಿ- ಖಾನಾಪೂರ ಶಾಸಕಿ ಡಾ ಅಂಜಲಿ ಹೇಮಂತ್ ನಿಂಬಾಳ್ಕರ್ ಅವರು ಜಗನ್ಮಾತೆ ದುರ್ಗಾ ದೇವಿಗೆ ಹರಕೆ ಹೊತ್ತಿದ್ದಾರೆ. ಕ್ಷೇತ್ರದ ಜನತೆಯ ಸಕಲ ಶ್ರೇಯಸ್ಸಿಗೆ ವಿಶೇಷವಾದ,ವಿಶಿಷ್ಟವಾದ ,ಕಠಿಣ ಆಚರಣೆಯ ಹರಕೆ ಹೊತ್ತಿರುವ ಅವರು ನವರಾತ್ರಿಯ 9 ದಿನಗಳ ಕಾಲ ಬರಿಗಾಲಿನಲ್ಲಿದ್ದು 9 ದಿನಗಳ ಕಾಲ ಊಟ ಮಾಡದೇ ಕೇವಲ ಹಣ್ಣು ಹಂಪಲಗಳನ್ನ ಮಾತ್ರ ಸೇವಿಸುವ ಹರಕೆ ಹೊತ್ತ ಸೇವಾ ಶಾರದೆಯ ಜನಪರ ಕಾಳಜಿ ಪ್ರಶಂಸಾರ್ಹ. ಈ ಹಿಂದೆಯೂ ಶಾಸಕಿ ಅಂಜಲಿ ನಿಂಬಾಳ್ಕರ್ …

Read More »

ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು. ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ …

Read More »

ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು: ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಲಕ್ಷ ಮೌಲ್ಯದ 17 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಸ್ಕೂಟರ್ ಮೆಕ್ಯಾನಿಕ್ ಮಹಮದ್ ಶುಹೇಬ್ (19) ಬಂಧಿತ ಆರೋಪಿ. ಹಾಗೂ ಕಳ್ಳತನಕ್ಕೆ ಸಾಥ್ ನೀಡಿದ್ದ 17 ವರ್ಷದ ಬಾಲಕ ಹಾಗೂ 15 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕಳುವು ಮಾಡಿದ ದ್ವಿಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಿದ್ದರು. ಅದರಲ್ಲೂ ಸಿಲ್ವರ್ ಕಲರ್ ದ್ವಿಚಕ್ರ …

Read More »

13 ವರ್ಷಗಳ ಬಳಿಕ ರಾಜಸ್ಥಾನದ ಅಪರೂಪದ ಸಾಧನೆ- ಅಂಕಪಟ್ಟಿಯಲ್ಲಿ ಕೊನೆ ಸ್ಥಾನಕ್ಕೆ ಜಾರಿದ CSK

ಅಬುಧಾಬಿ: 2020ರ ಐಪಿಎಲ್ ಆವೃತ್ತಿಯಲ್ಲಿ ಪ್ಲೇ ಆಫ್ ಪ್ರವೇಶ ಮಾಡಲು ಗೆಲುವು ಪಡೆಯಲೇ ಬೇಕಿದ್ದ ಪಂದ್ಯದಲ್ಲಿ ಚೆನ್ನೈ ತಂಡ ಸೋಲುಂಡಿದೆ. ಧೋನಿ ಬಳಗದ ವಿರುದ್ಧ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಉತ್ತಮ ಪ್ರದರ್ಶನ ತೋರಿದ ರಾಜಸ್ಥಾನ ರಾಯಲ್ಸ್ ತಂಡ 15 ಎಸೆತ ಬಾಕಿ ಇರುವಂತೆ 7 ವಿಕೆಟ್‍ಗಳ ಭರ್ಜರಿ ಗೆಲುವು ಪಡೆದುಕೊಂಡಿದೆ. 126 ರನ್ ಗಳ ಸುಲಭ ಗುರಿ ಬೆನ್ನಟ್ಟಿದ್ದ ರಾಜಸ್ಥಾನ ತಂಡ ಉತ್ತಮ ಆರಂಭವನ್ನು ಪಡೆಯಲಿಲ್ಲ. ತಂಡ 26 …

Read More »

ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.

ಲಡಾಖ್: ಲಡಾಖ್‌ನ ಚುಮಾರ್-ಡೆಮ್‌ಚೋಕ್ ಪ್ರದೇಶದಲ್ಲಿ ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ. ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕ ಅಜಾಗರೂಕತೆಯಿಂದ ಭಾರತೀಯ ಭೂಪ್ರದೇಶವನ್ನು ಪ್ರವೇಶಿಸಿರಬಹುದು ಎನ್ನಲಾಗಿದ್ದು ವಶಕ್ಕೆ ಪಡೆದ ಸೈನಿಕನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ಮುಗಿದ ನಂತರ ಪ್ರೋಟೋಕಾಲ್ ಪ್ರಕಾರ ಅವನನ್ನು ಚೀನಾಗೆ ವಾಪಾಸ್ ಕಳಿಸಲಾಗುತ್ತದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.ಲಡಾಖ್ ನಲ್ಲಿ ನಡೆಯುತ್ತಿರುವ ಗಡಿ ಸಂಘರ್ಷದ ನಡುವೆ …

Read More »