Breaking News

ಅಂತರಾಷ್ಟ್ರೀಯ

75 ರೂಪಾಯಿಗೆ ಸಿಗಲಿದೆಯಾ ಕೊರೊನಾ ಲಸಿಕೆ?

ರಷ್ಯಾ ಹೊರತುಪಡಿಸಿದರೆ ಜಗತ್ತಿನ ಬೇರೆ ಯಾವ ದೇಶದಲ್ಲೂ ಕೊರೊನಾಗೆ ಸೂಕ್ತ ಲಸಿಕೆ ಸಿಕ್ಕಿಲ್ಲ. ಭಾರತದಲ್ಲೂ 3 ಪ್ರಮುಖ ಕಂಪನಿಗಳು ಕೊರೊನಾ ಲಸಿಕೆಗೆ ಸಂಶೋಧನೆ ನಡೆಸುತ್ತಿವೆ. ಆದ್ರೆ ಭಾರತದಲ್ಲಿ ಲಸಿಕೆಗೆ ಸಾಮಾನ್ಯ ಜನರು ಎಷ್ಟು ಹಣ ತೆರಬೇಕಾಗುತ್ತೆ, ಲಸಿಕೆ ದುಬಾರಿಯಾಗುತ್ತಾ, ಇಲ್ಲ ಅಗ್ಗವಾಗುತ್ತಾ, ಸರ್ಕಾರವೇ ಖರೀದಿಸಿ ಉಚಿತ ಲಸಿಕೆ ನೀಡುತ್ತಾ ಎನ್ನುವ ಕುತೂಹಲ ಇದ್ದು, ಇದಕ್ಕೆಲ್ಲಾ ಉತ್ತರ ಇಲ್ಲಿದೆ. ಕೊರೊನಾ ಮಹಾಮಾರಿಗೆ ವ್ಯಾಕ್ಸಿನ್ ಇನ್ನೂ ಕನ್ಫರ್ಮ್ ಆಗಿಲ್ಲ. ಸೆರಮ್ ಇನ್ಸ್​ಟಿಟ್ಯೂಟ್ ಆಫ್ …

Read More »

ಉತ್ತರ ಕನ್ನಡ ಹಾಗೂ ದಕ್ಷಿಣ ಜಿಲ್ಲೆಗೆ ‘ರೆಡ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು  : ರಾಜ್ಯದಲ್ಲಿ ಮುಂಗಾರಿನ ಆರ್ಭಟ ಉತ್ತರ ಒಳನಾಡಿನ ಜೊತೆಗೆ ಕರಾವಳಿ ಭಾಗಕ್ಕೂ ಆವರಿಸಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಜಿಲ್ಲೆಗೆ ‘ರೆಡ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಗುಡುಗು ಸಹಿತ ಅತ್ಯಂತ ಹೆಚ್ಚು ಮಳೆ ಸುರಿಯುವುದರಿಂದ ಅ.15ರಂದು ಕರಾವಳಿ ಜಿಲ್ಲೆಗಳು ಹಾಗೂ ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’. ಅತಿ ಹೆಚ್ಚು ಮಳೆ ಸುರಿಯುವ ಸಂಭವ ಇರುವುದರಿಂದ ಧಾರವಾಡ, ಗದಗ, ಕಲಬುರ್ಗಿ ಸೇರಿದಂತೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, …

Read More »

ಕೊವಿಡ್-19: ಕರ್ನಾಟಕದಲ್ಲಿ ಮತ್ತೆ ಹೆಚ್ಚಿದ ಸೋಂಕಿತರು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಇಂದು ಸಾಯಂಕಾಲ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕರ್ನಾಕದಲ್ಲಿ ಇಂದು ಕೊರೊನಾ ಸೋಂಕಿನಿಂದ 75 ಜನ ಮರಣವನ್ನಪ್ಪಿದ್ದಾರೆ ಮತ್ತು ಹೊಸದಾಗಿ 9,265 ಜನರಲ್ಲಿ ಸೋಂಕು ದೃಢಪಟ್ಟಿದೆ . ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,35,371 ಕ್ಕೇರಿದ್ದು ಇದುವರೆಗೆ ಬಲಿಯಾದವರ ಸಂಖ್ಯೆ 10,198 ತಲುಪಿದೆ. ಸೋಂಕಿತರ ಪೈಕಿ 6,11,167 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ 1,13,987 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ …

Read More »

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ. ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. …

Read More »

ದಿನಕ್ಕೆ 50 ಕೇಸ್​ನಂತೆ ಟಾರ್ಗೆಟ್: ಸಿಕ್ಕ ಸಿಕ್ಕವರ ಬಳಿ ದಂಡ ವಸೂಲಿ, ಪೊಲೀಸರ ನಡೆಗೆ ಸ್ಥಳೀಯರ ಕಿಡಿ

ನೆಲಮಂಗಲ: ಕೊರೊನಾ ಸೋಂಕು ಹರಡದಂತೆ ತಡೆಯಲು ಮಾಸ್ಕ್ ಧರಿಸದವರಿಂದ ದಂಡ ವಸೂಲಿ ಮಾಡಲು ಸರ್ಕಾರ ನಿರ್ಧರಿಸಿದ್ದು ನಗರ ಪ್ರದೇಶಗಳಲ್ಲಿ 250 ರುಪಾಯಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 100 ರುಪಾಯಿ ದಂಡ ವಸೂಲಿ ಮಾಡಲು ಪೊಲೀಸರಿಗೂ ಸಹ ಸೂಚನೆ ನೀಡಲಾಗಿದೆ. ಆದ್ರೆ ಸೂಚನೆ ನೀಡಿದ ಬೆನ್ನಲ್ಲಿ ಪೊಲೀಸರಿಗೆ ಪ್ರತಿದಿನಕ್ಕೆ 50 ಕೇಸ್ ಮಾಡುವಂತೆ ಟಾರ್ಗೆಟ್ ಸಹ ನೀಡಲಾಗಿದೆ.     ಸರ್ಕಾರದ ದಂಡಕ್ಕೆ ಜನ ಭಯಭೀತರಾಗಿದ್ದು, ಮಾಸ್ಕ್ ಹಾಕಿಕೊಂಡು ಓಡಾಡುವವರ ಸಂಖ್ಯೆ …

Read More »

ಕಲಬುರಗಿ ಮಹಾಮಳೆ: ಪ್ರವಾಹದಲ್ಲಿ ಸಿಲುಕಿದ್ದ 6 ಶಾಲಾ ಸಿಬ್ಬಂದಿ ರಕ್ಷಣೆ..

ಕಲಬುರಗಿ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಕಷ್ಟ ಪಡುತ್ತಿದೆ. ಪ್ರವಾಹಕ್ಕೆ ಸಿಲುಕಿ ನರಳುತ್ತಿದೆ. ಕಾಗಿಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಶಾಲೆ ಸಿಬ್ಬಂದಿಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಸೇಡಂ ತಾಲೂಕಿನ ಮಳಖೇಡ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ಜನ ಸಿಬ್ಬಂದಿ ಸಿಲುಕಿದ್ದರು. ಅವರನ್ನು NDRF ತಂಡ ರಕ್ಷಿಸಿದೆ. ನಿನ್ನೆ ಬೆಳಗ್ಗೆ ಶಾಲೆಗೆ ಕಾಗಿಣಾ ನದಿಯ ನೀರು ನುಗ್ಗಿ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿ ಪರದಾಡುತ್ತಿದ್ದರು. ವಸತಿ ಶಾಲೆಯಿಂದ …

Read More »

ಎರಡು ಅಫ್ಘಾನ್ ಸೇನೆಯ ಹೆಲಿಕಾಪ್ಟರ್‍ಗಳು ಅಪಘಾತಕ್ಕೀಡಾಗಿ ಸುಮಾರು 15 ಮಂದಿ ಸಾವನ್ನಪ್ಪಿರುವ ಘಟನೆ

ಅಫ್ಘಾನಿಸ್ತಾನ,ಅ.14- ಎರಡು ಅಫ್ಘಾನ್ ಸೇನೆಯ ಹೆಲಿಕಾಪ್ಟರ್‍ಗಳು ಅಪಘಾತಕ್ಕೀಡಾಗಿ ಸುಮಾರು 15 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಹೆಲ್ಮಾಂಡ್ ಪ್ರಾಂತ್ಯದಲ್ಲಿ ನಡೆದಿದೆ. ಪ್ರಾಂತೀಯ ರಾಜಧಾನಿ ಲಷ್ಕರ್ ಗಹ್‍ನ ನೈರುತ್ಯ ದಿಕ್ಕಿನಲ್ಲಿರುವ ನಾವಾ-ಎ-ಬರಾಕಜಾಯಿ ಜಿಲ್ಲೆಯಲ್ಲಿ ಮಧ್ಯರಾತ್ರಿ ಈ ದುರ್ಘಟನೆ ಸಂಭವಿಸಿದೆ. ಸುಮಾರು 15 ಮಂದಿ ಸಾವನ್ನಪ್ಪಿರಬಹುದೆಂದು ಎಂದು ತಿಳಿದುಬಂದಿದೆ.ಇದಕ್ಕೂ ಮುನ್ನ ಸೆಪ್ಟೆಂಬರ್ 24 ರಂದು ಉತ್ತರ ಬಾಗ್ಲಾನ್ ಪ್ರಾಂತ್ಯದಲ್ಲಿ ಅಫಘಾನ್ ವಾಯುಪಡೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ತಾಂತ್ರಿಕ ದೋಷದಿಂದಾಗಿ ಇಬ್ಬರು ಪೈಲಟ್‍ಗಳು ಸಾವನ್ನಪ್ಪಿದ್ದರು.

Read More »

ಇನ್ನೂ ನಾಲ್ಕು ದಿನ ಮಳೆ : ಉತ್ತರ ಕರ್ನಾಟಕಕ್ಕೆ ಜಲಕಂಟಕ

ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಬೀಳುತ್ತಿರುವ ನಿರಂತರ ಮಳೆ ಇನ್ನೂ ನಾಲ್ಕು ದಿನ ಮುಂದುವರೆಯುವ ಸಾಧ್ಯತೆಗಳಿವೆ.ನಿನ್ನೆ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾದ ವರದಿಯಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಬೀದರ್, ಗುಲ್ಬರ್ಗ ಭಾಗದಲ್ಲಿ ಅಕ ಪ್ರಮಾಣದ ಮಳೆಯಾದ ವರದಿಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು. ಮುಂಗಾರು ಮಳೆ ಮರಳುವಿಕೆ ಸಂದರ್ಭದಲ್ಲಿ ರಾಜ್ಯದಲ್ಲಿ ಉತ್ತಮ ಪ್ರಮಾಣದ …

Read More »

ನಂದಿ ಗಿರಿಧಾಮ ತೋಟಗಾರಿಕಾ ಇಲಾಖೆಯ ಕೈಜಾರುತ್ತದಾ? ಮುಂದೇನು?

ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತ್ಯವ್ಯ ಹೂಡಿದ್ದ ತೋಟಗಾರಿಕೆ ಸಚಿವ ನಾರಾಯಣ ಗೌಡ, ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ್ರು. ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ ಸಚಿವ ನಾರಾಯಣ ಗೌಡ ರಾತ್ರಿಯೇ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತವ್ಯ ಹೂಡಿದ್ದ ಸಚಿವರು, ಬೆಳ್ಳಂ‌ಬೆಳಿಗ್ಗೆ ಎದ್ದು ನಂದಿ ಗಿರಿಧಾಮದ ರಸ್ತೆಗಳಲ್ಲಿ ರೌಂಡ್ಸ್ ಹಾಕಿದರು. ಇದೇ ಮೊದಲ‌ ಬಾರಿಗೆ ನಾನು ಸಚಿವನಾದ ನಂತರ ನಂದಿ ಗಿರಿಧಾಮಕ್ಕೆ ಆಗಮಿಸಿದ್ದೇನೆ. …

Read More »

ರಾಜ್ಯ-ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಲು ಈ ಚುನಾವಣೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಈ ಬಾರಿಯ ಉಪಚುನಾವಣೆಯನ್ನು ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯ ಸರ್ಕಾರವನ್ನು ಅಥವಾ ಮೋದಿ ಅವರ ಕೇಂದ್ರ ಸರ್ಕಾರ ಬೀಳಿಸಲು ಎದುರಿಸುತ್ತಿಲ್ಲ. ಬದಲಿಗೆ ಎರಡೂ ಸರ್ಕಾರಗಳಿಗೆ ಸಂದೇಶ ರವಾನಿಸಲು ಈ ಚುನಾವಣೆ ಎದುರಿಸುತ್ತೇದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು: ‘ರಾಜರಾಜೇಶ್ವರಿ …

Read More »