Breaking News

ಅಂತರಾಷ್ಟ್ರೀಯ

ವಿರೋಧ ಪಕ್ಷ 8 ಮಂದಿ ‘ರಾಜ್ಯ ಸಭಾ’ಸದ್ಯಸರು ಒಂದು ವಾರ ಅಮಾನತ್ತು. ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಆದೇಶ

ನವದೆಹಲಿ: ಸೋಮವಾರ ಬೆಳಗ್ಗೆ ರಾಜ್ಯಸಭೆಯಲ್ಲಿ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಗದ್ದಲದಿಂದ ತೀವ್ರ ನೋವಾಗಿದೆ ಎಂದು ಹೇಳಿದ ನಂತರ ರಾಜ್ಯಸಭೆಯಲ್ಲಿ ಸೋಮವಾರ ಬೆಳಗ್ಗೆ ಪ್ರತಿಭಟನೆ ಗಳು ಭುಗಿಲೆದ್ದಿದ್ದು, ಎಂಟು ಮಂದಿ ವಿರೋಧ ಪಕ್ಷಗಳ ಸಂಸದರ ವಿರುದ್ಧ ಅಮಾನತು ನಿರ್ಣಯ ವನ್ನು ಅಂಗೀಕರಿಸಲಾಯಿತು. ನಿನ್ನೆ ಗದ್ದಲದ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಹರಿವಂಶ್ ವಿರುದ್ಧ ವಿರೋಧ ಪಕ್ಷದ ಅವಿಶ್ವಾಸ ನಿರ್ಣಯವನ್ನು ನಾಯ್ಡು ಅವರು ತಿರಸ್ಕರಿಸಿದ್ದಾರೆ. ‘ನಿನ್ನೆ ನನಗೆ ತುಂಬಾ ನೋವಾಯಿತು. ನಿನ್ನೆ ಸಾಮಾಜಿಕ ದೂರಮತ್ತು …

Read More »

ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿ ಅಂತ್ಯಕ್ರಿಯೆಗೆ ನಿವಾಸಿಗಳ ವಿರೋಧ

ಬೆಳಗಾವಿ: ಇಲ್ಲಿನ ಸದಾಶಿವ ನಗರದ ಲಿಂಗಾಯತ ರುದ್ರಭೂಮಿಯಲ್ಲಿ ಕೋವಿಡ್-19ನಿಂದ ಮೃತರಾದ ವ್ಯಕ್ತಿಯ ಅಂತ್ಯಕ್ರಿಯೆಗೆ ಅವಕಾಶ ಕೊಡುವುದಿಲ್ಲ ಎಂದು ನಿವಾಸಿಗಳು ಭಾನುವಾರ ಪ್ರತಿಭಟನೆ ನಡೆಸಿ, ಗುಂಡಿ ತೋಡಲು ಜೆಸಿಬಿಯೊಂದಿಗೆ ಬಂದಿದ್ದ ಕುಟುಂಬದವರನ್ನು ಮತ್ತು ಪಾಲಿಕೆ ಸಿಬ್ಬಂದಿಯನ್ನು ವಾಪಸ್‌ ಕಳುಹಿಸಿದರು. ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ವ್ಯಕ್ತಿಯ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲು ಅವರು ಬಂದಿದ್ದರು. ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಸಮಾಜಸೇವಕಿ ಸರಳಾ ಹೆರೇಕರ್‌ ಅವರಿಗೆ ವಿಷಯ ತಿಳಿಸಿದ್ದರು. ಅವರು ಬಂದ ಬಳಿಕ ನಿವಾಸಿಗಳು, …

Read More »

ಕೊರೋನಾ : ರಾಜ್ಯದಲ್ಲಿ ಈಗೇಲ್ಲಿಗೆ ತಲುಪಿದೆ ಮಹಾಮಾರಿ ಹಂತ?

ಬೆಂಗಳೂರು : ರಾಜ್ಯದಲ್ಲಿ ಭಾನುವಾರ ಹೊಸದಾಗಿ 8,445 ಮಂದಿಯಲ್ಲಿ ಕೊರೋನಾ ಕಾಣಿಸಿಕೊಂಡಿದ್ದು, 8,611 ಮಂದಿ ಗುಣಮುಖರಾಗಿದ್ದಾರೆ. ಇದೇ ದಿನ 101 ಮಂದಿ ಮೃತಪಟ್ಟಿದ್ದು ಈವರೆಗೆ ಸಾವಿಗೀಡಾದವರ ಸಂಖ್ಯೆ ಸಂಖ್ಯೆ 8 ಸಾವಿ​ರದ ಸಂಖ್ಯೆ ದಾಟಿ 8023ಕ್ಕೆ ಏರಿದೆ. ಸೆಪ್ಟೆಂಬರ್‌ 11ರಂದು ಸಾವಿನ ಸಂಖ್ಯೆ 7 ಸಾವಿರ ದಾಟಿತ್ತು. ಆ ನಂತ​ರದ 10 ದಿನ​ದಲ್ಲಿ 1000 ಸೋಂಕಿ​ತರು ಸಾವ​ನ್ನ​ಪ್ಪಿ​ದ್ದಾ​ರೆ. ಈ ನಡುವೆ, 8,611 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗುವುದರೊಂದಿಗೆ ಈವರೆಗೆ 4.13 ಲಕ್ಷ ಜನರು …

Read More »

ಕನ್ನಡಿಗ ಅಗರ್ವಾಲ್ ಸ್ಫೋಟಕ ಆಟ – ಸೂಪರ್ ಓವರ್‌ನಲ್ಲಿ ಡೆಲ್ಲಿಗೆ ಜಯ

ದುಬೈ: ಕನ್ನಡಿಗ ಮಯಾಂಕ್ ಅಗರ್ವಾಲ್ ಸ್ಫೋಟಕವಾಗಿ ಆಡಿದ್ದರೂ ವಿಜಯ ಲಕ್ಷ್ಮಿ ಪಂಜಾಬ್ ತಂಡದ ಕೈ ಹಿಡಿಯಲಿಲ್ಲ. ಸೂಪರ್ ಓವರಿನಲ್ಲಿ  ಡೆಲ್ಲಿ ತಂಡ ಪಂಜಾಬ್ ತಂಡವನ್ನು ಸೋಲಿಸಿ ಶುಭಾರಂಭ ಮಾಡಿದೆ. ಗೆಲ್ಲಲು 157 ರನ್‍ಗಳ ಸುಲಭ ಸವಾಲನ್ನು ಪಡೆದಿದ್ದರೂ ಪಂಜಾಬ್ ತಂಡ ಬೇಗನೇ ವಿಕೆಟ್ ಕಳೆದುಕೊಂಡಿತ್ತು. ಆದರೆ ಒಂದು ಕಡೆ ಮಾಯಾಂಕ್ ಅಗರ್ವಾಲ್ ಬಂಡೆಯಂತೆ ನಿಂತು 89 ರನ್(60 ಎಸೆತ, 7 ಬೌಂಡರಿ, 4 ಸಿಕ್ಸರ್) ಹೊಡೆದು ತಂಡವನ್ನು ವಿಜಯದ ಬಾಗಿಲ …

Read More »

ಕೆಟ್ಟು ಹೋದ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಪಂಚಾಯಿತಿಗೆ ಬೀಗ ಮುತ್ತಿಗೆ ಹಿರಿಯರ ಮಧ್ಯಸ್ಥಿಕೆ ನಡುವೆ ಬೀಗ ತೆರವು

  ಅಥಣಿ : ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಮಾಯನಟ್ಟಿಯಿಂದ   ಶಿವನೂರು ಗ್ರಾಮದವರೆಗೆ  6 ಕಿಲೋ ಮೀಟರ್  ರಸ್ತೆ ಕೆಟ್ಟು ಗಿಡಗಂಟಿ ಮುಳ್ಳುಗಳು ಬೆಳೆದು ರಸ್ತೆ ಸಂಚಾರಕ್ಕೆ ಅವಕಾಶವಿಲ್ಲದಂತೆ ತುಂಬಾ ಕೆಟ್ಟು ಹೋಗಿದೆ ಎಂದು ಆರೋಪಿಸಿ ರಿಪೆರಿಗೆ ಒತ್ತಾಯಿಸಿ ಪಾರ್ಥನಹಳ್ಳಿ ಗ್ರಾಮ ಪಂಚಾಯಿತಿಗೆ ಶ್ರೀಶೈಲ್  ಕೆಂಪವಾಡ ನೇತೃತ್ವದಲ್ಲಿ  ಗ್ರಾಮಸ್ಥರು  ಬೀಗ ಜಡಿದು ಪ್ರತಿಭಟನೆ ವ್ಯಕ್ತಪಡಿಸಿದರು . ಗ್ರಾಮಸ್ಥ ಶ್ರೀಶೈಲ್  ಕೆಂಪವಾಡ ಮಾತನಾಡುತ್ತಾ  ಕಳೆದ ಎರಡು ಮೂರು ವರ್ಷಗಳಿಂದ ಮಾಯನಟ್ಟಿಯಿಂದ ಶಿವನೂರು ವರೆಗೆ ರಸ್ತೆ ತುಂಬಾ …

Read More »

130.00 ಲಕ್ಷಗಳಡಿ ಇಂದು ಗೋಕಾಕ ನಗರದಲ್ಲಿ ಪೌರಕಾರ್ಮಿಕರ ವಸತಿ ಸಮುಚ್ಚಯ ಕಟ್ಟಡಗಳ ಉದ್ಘಾಟನೆ.

ಗೋಕಾಕ : ಇಲ್ಲಿಯ ನಗರಸಭೆ ಅನುದಾನದಡಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ಅಂದಾಜು ರೂ.130.00 ಲಕ್ಷಗಳಡಿ G+2ಮಾದರಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಜುಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ರವಿವಾರದಂದು ನಗರದ ಮೆಳವಂಕಿ ರಸ್ತೆ, ಅಡಿಬಟ್ಟಿ ಕಾಲೋನಿಯ ನಾಕಾ ನಂಬರ್ 01ರಲ್ಲಿ ನಿರ್ಮಾಣವಾದ ಪೌರಕಾರ್ಮಿಕರ ವಸತಿ ಸಮುಚ್ಛಯ ಉದ್ಘಾಟಿಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪೌರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು …

Read More »

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರದಲ್ಲಿ ಪ್ರವಾಹ ಭೀತಿ

ವಿಜಯಪುರ,  ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬಸವನಾಡಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಉಗಮವಾಗುವ ಮೂರು ನದಿಗಳು ವಿಜಯಪುರ ಜಿಲ್ಲೆಯಲ್ಲಿ ಹರಿಯುತ್ತಿದ್ದೂ, ಮೂರೂ ನದಿಗಳು ಉಕ್ಕಿ ಹರಿಯುತ್ತಿವೆ. ಭೀಮಾ ನದಿಗೆ ಮಹಾರಾಷ್ಟ್ರ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರದ ಸಮಾನಾಂತರ ನಿರ್ಮಿಸಿರುವ ಎಲ್ಲ 8 ಬ್ಯಾರೇಜುಗಳೂ ಮುಳುಗಡೆಯಾಗಿವೆ. ಭೀಮಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಪಾರ ಪ್ರಮಾಮದ …

Read More »

ಎಡಬಿಡಂಗಿ, ಅವಕಾಶವಾದಿಯಿಂದ ನಾವು ಸ್ವಾಭಿಮಾನದ ಪಾಠ ಕಲಿಯಬೇಕಾಗಿಲ್ಲ; ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು : ಆತ್ಮವಂಚನೆಯ ರಾಜಕಾರಣಿಯಾದ ನಿಮ್ಮಿಂದ ಜೆಡಿಎಸ್​ ಪಕ್ಷದವರು ಕಲಿಯಬೇಕಾಗಿದ್ದು ಏನೂ ಇಲ್ಲ. ಅಧಿಕಾರದ ಆಸೆಗಾಗಿ ಬೇರೆ ಪಕ್ಷಕ್ಕೆ ಜಿಗಿದವರು ನೀವು. ನಿಮ್ಮಿಂದ ನಾವು ಕಲಿಯಬೇಕಾಗಿಲ್ಲ. ಈಗ ನಮ್ಮನ್ನು ಅವಕಾಶವಾದಿ ಪಕ್ಷ ಎಂದು ಹೇಳುತ್ತಿದ್ದೀರಿ. ಈ ಮೂಲಕ ನಿಮ್ಮ ಊಸರವಳ್ಳಿ ರಾಜಕಾರಣದ ಬಣ್ಣ ಬಯಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಸರಣಿ ಟ್ವೀಟ್​ಗಳನ್ನು ಮಾಡಿರುವ ಮಾಜಿ ಸಿಎಂ …

Read More »

ಮಕ್ಕಳಿಗೆ ಸಿಗಬೇಕಾದ ಪೌಷ್ಟಿಕ ಆಹಾರ ಅಂಗನವಾಡಿ ಕಾರ್ಯಕರ್ತೆಯರ ಮನೆಗೆ

ಬೀದರ್ : ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗಬೇಕು ಎಂಬ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ಮುಖಾಂತರ ಸರ್ಕಾರ‌ ಅಂಗನವಾಡಿಗಳ ಮೂಲಕ ಪೌಷ್ಠಿಕ ಆಹಾರ ನೀಡುತ್ತಿದೆ. ಆದರೆ ಗಡಿ ಜಿಲ್ಲೆ ಬೀದರನಲ್ಲಿ ಗರ್ಭಿಣಿಯರು, ಮಕ್ಕಳ ಹೊಟ್ಟೆ ಸೇರಬೇಕಾದ ಪೌಷ್ಠಿಕ ಆಹಾರ ಧಾನ್ಯ ಅಂಗನವಾಡಿ ಕಾರ್ಯಕರ್ತೆಯರ ಹೊಟ್ಟೆ ಪಾಲಾಗುತ್ತಿದೆ. ಪಾಲಕರ ತಿಳುವಳಿಕೆ ಕೊರತೆಯಿಂದ ಬೀದರ್ ಜಿಲ್ಲೆಯಲ್ಲಿ ಅಪೌಷ್ಟಿಕತೆ ಮಕ್ಕಳ ಪ್ರಮಾಣ ಗಣನೀಯವಾಗಿದೆ. ಈ ಸಮಸ್ಯೆಯನ್ನು ಕೇಂದ್ರ …

Read More »

ಅಕ್ರಮ ಸಂಬಂಧದ ಹಿನ್ನಲೆಯಲ್ಲಿ ಕೊಲೆ : ಆರು ಮಂದಿ ಆರೋಪಿಗಳ ಸೆರೆ

ಟಿ.ನರಸೀಪುರ, -ತಾಲೂಕಿನ ಕೇತುಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಬನ್ನೂರು ಪೋಲೀಸರು ಯಶಸ್ವಿಯಾಗಿದ್ದು ಘಟನೆಯ ಸಂಬಂಧ 7 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೇತುಪುರ ಗ್ರಾಮದ ಕೆ.ಆರ್.ಸುಭಾಷ್ (23),ಚಂದನ್(22),ಸಂಜಯ (24),ಪುನೀತ್ (22), ವಿನಯ (30),ರವಿ(24) ಹಾಗು ಚಂದ್ರು(25) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಸೆ.12 ರಂದು ಬನ್ನೂರು ಪೋಲೀಸ್ ಠಾಣಾ ವ್ಯಾಪ್ತಿಯ ಕೇತುಪುರ ಗ್ರಾಮದಲ್ಲಿ ಕೃಷ್ಣೇಗೌಡ ಎಂಬುವರ ಪುತ್ರ ಸಿದ್ದರಾಜು ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. …

Read More »