ಬೆಳಗಾವಿ- ಬೆಳಗಾವಿಯ ಕಾನೂನು ಮತ್ತು ಸುವ್ಯೆವಸ್ಥೆ ವಿಭಾಗದ ಡಿಸಿಪಿ ಯನ್ನಾಗಿ ವಿಕ್ರಂ ಆಮಟೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ವಿಕ್ರಂ ಆಮಟೆ ಅವರನ್ನು ಡಿಸಿಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಬೆಳಗಾವಿಯ ಪೋಲೀಸ್ ಇಲಾಖೆಯಲ್ಲಿ ವರ್ಗಾವಣೆಯ ಪರ್ವ ಆರಂಭವಾಗಿದ್ದು, ಇತ್ತೀಚಿಗಷ್ಟೆ ಡಿಸಿಪಿ,ಸೀಮಾ ಲಾಟ್ಕರ್, ಮತ್ತು ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆ ಆಗಿತ್ತು ವಿಕ್ರಂ ಆಮಟೆ …
Read More »ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ
ಶಿವಮೊಗ್ಗ :ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು ಗ್ರಾ.ಪಂಚಾಯತ್ ನ ಶಿವಪ್ಪ ಎಸಿಬಿ ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಶಿವಪ್ಪ ಅವರು ನರೇಗಾದ 2.10 ಲಕ್ಷ ಹಣ ಬಿಡುಗಡೆಗೆ 8 ಸಾವಿರ ರೂಪಾಯಿ ಲಂಚ ನೀಡುವಂತೆ ಗುತ್ತಿಗೆದಾರ ಮಂಜುನಾಥ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಈ ಕುರಿತು …
Read More »ಸ್ಮಶಾನಕ್ಕೆ ತೆರಳಲು ದಾರಿ ನೀಡಲು ಆಗ್ರಹ
ಹುಬ್ಬಳ್ಳಿ :ಶವ ಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದೇ ತೊಂದರೆ ಅನುಭವಿಸುತ್ತಿರುವ ತಾಲೂಕಿನ ಸೊಟಕನಾಳ ಗ್ರಾಮಸ್ಥರು ಸೂಕ್ತ ದಾರಿ ಕಲ್ಪಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ಸೊಟಕನಾಳ ಗ್ರಾಮದ ಮುಖಂಡ ಚನ್ನಪ್ಪ ಹಾಲವಾರ ಮಾತನಾಡಿ, ಸೊಟಕನಾಳದಲ್ಲಿ 1997ರಲ್ಲಿ ಅಂದಿನ ತಹಸೀಲ್ದಾರ್ರು ರಿಸನಂ 2ರಲ್ಲಿ 20 ಗುಂಟೆ ಜಾಗವನ್ನು ಸ್ಮಶಾನಕ್ಕೆ ನೀಡಿದ್ದರು. ಆದರೆ, ಸ್ಮಶಾನಕ್ಕೆ ತೆರಳಲು ಜಾಗ ಇಲ್ಲದ್ದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತ ಬಂದಿದ್ದಾರೆ. …
Read More »ದೇವಸ್ಥಾನದಲ್ಲಿ ಅರ್ಚಕರ ಹತ್ಯೆ; ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ
ಮಂಡ್ಯ: ಜಿಲ್ಲೆಯಲ್ಲಿ 3 ಕೊಲೆ ಮಾಡಿ, ದೇವಸ್ಥಾನ ದೋಚಿರುವ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಅರ್ಕೇಶ್ವರ ದೇವಸ್ಥಾನ ದೋಚಿದ ಕದೀಮರು, ಇಬ್ಬರು ಕಾವಲುಗಾರರು ಹಾಗೂ ಒಬ್ಬ ಆರ್ಚಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. …
Read More »ರಾಜ್ಯದಲ್ಲೀಗ ಸಕ್ರಿಯ ಕೊರೋನಾ ಸೋಂಕಿತರು 1 ಲಕ್ಷ!
ಬೆಂಗಳೂರು : ರಾಜ್ಯದಲ್ಲಿ ಗುರುವಾರ ಹೊಸದಾಗಿ 9,217 ಜನರಲ್ಲಿ ಸೋಂಕು ಕಾಣಿಸಿಕೊಳ್ಳುವುದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ಒಂದು ಲಕ್ಷ (1,01,537) ದಾಟಿದೆ. ಇದರೊಂದಿಗೆ ಈವರೆಗೆ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 4.30 ಲಕ್ಷ ಮುಟ್ಟಿದೆ. ಇದೇ ವೇಳೆ 129 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 6,937ಕ್ಕೆ ತಲುಪಿದೆ. ಸದ್ಯ ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದಲ್ಲಿ ಮಾತ್ರ ಸಕ್ರಿಯ ಪ್ರಕರಣಗಳ ಸಂಖ್ಯೆ ಲಕ್ಷದ ಮೇಲಿದೆ. ದೇಶದ ಒಟ್ಟು ಕೊರೋನಾ ಸೋಂಕಿತರಲ್ಲಿ ಶೇ. …
Read More »ಚೀನಾ ಆತಿಕ್ರಮಣ ಮಾಡಿದ ಭೂಮಿ ಹಿಂಪಡೆಯುವಿರಾ? ಅಥವಾ ‘ದೇವರ ಆಟ’ಎಂದು ಸುಮ್ಮನಾಗುವಿರಾ: ಕೇಂದ್ರಕ್ಕೆ ರಾಹುಲ್ ಗಾಂಧಿ ಪ್ರಶ್ನೆ
ನವದೆಹಲಿ: ‘ಚೀನಾ ಅತಿಕ್ರಮಣ ಮಾಡಿರುವ ಭೂಮಿಯನ್ನು’ ಹಿಂಪಡೆಯಲು ಯಾವುದೇ ಯೋಜನೆ ರೂಪಿಸುತ್ತಿದ್ದೀರಾ ಅಥವಾ ಅದನ್ನೂ ‘ದೇವರ ಆಟ’ ಎಂದು ಸುಮ್ಮನಿರುವಿರಾ? ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. “ಚೀನಿಯರು ನಮ್ಮ ಭೂಮಿಯನ್ನು ಕಬಳಿಸಿದ್ದಾರೆ.ಅದನ್ನು ಮರಳಿ ಪಡೆಯಲು ಭಾರತ ಸರ್ಕಾರ ಏನು ತಯಾರಿ ನಡೆಸಿದೆ? ಅಥವಾ ಇದನ್ನೂ’ ದೇವರ ಆಟ’ ಎಂದು ಕೈಬಿಡುತ್ತೀರಾ?” ಕಾಂಗ್ರೆಸ್ ನಾಯಕ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ. ಭಾರತವು ಇತ್ತೀಚೆಗೆ ಪ್ಯಾಂಗೊಂಗ್ ಸರೋವರದ …
Read More »ಇನ್ನೂ ಹಲವರ ಬಣ್ಣ ಬಯಲಾಗಲಿದೆ : ಸಿಎಂ ವಾರ್ನಿಂಗ್!
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸುತ್ತಿದ್ದೇವೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಾವು ಆಳವಾದ ತನಿಖೆಗೆ ಇಳಿದಿದ್ದು, ಈಗಾಗಲೇ ಕೆಲವರ ಬಣ್ಣ ಬಯಲಾಗಿದೆ. ಇನ್ನೂ ಹಲವರ ಬಣ್ಣ ಬಯಲಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಗುರವಾರ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಡ್ರಗ್ಸ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಸದ್ಯ ದಂಧೆ ಬಗ್ಗೆ …
Read More »ಅತಿವೃಷ್ಟಿಯಿಂದ ಬೆಳೆ ಹಾನಿ: ಪರಿಹಾರಕ್ಕೆ ಆಗ್ರಹ
ಸವದತ್ತಿ: ‘ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದ್ದು, ಕಂಗಾಲಾಗಿರುವ ರೈತರಿಗೆ ಕೂಡಲೇ ಸಮರ್ಪಕ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ರೈತ ಸಂಘದವರು ಉಪ ತಹಶೀಲ್ದಾರ್ ಆರ್.ಎಸ್. ನೇಸರಗಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಿಜ್ಜೂರ ಮಾತನಾಡಿ, ‘ಬರ, ನೆರೆ, ಅತಿವೃಷ್ಟಿ ಹೀಗೆ ಒಂದಿಲ್ಲೊಂದು ತೊಂದರೆಗೆ ರೈತರು ಪ್ರತಿ ವರ್ಷವೂ ಸಿಲುಕುತ್ತಿದ್ದೇವೆ. ಕಷ್ಟಪಟ್ಟು ಬೆಳೆದ ಬೆಳೆ ನಮ್ಮ ಕೈ ಸೇರುತ್ತಿಲ್ಲ. ಈ ಬಾರಿ ಅತಿವೃಷ್ಟಿಯಿಂದ ಹೆಸರು, ಮೆಕ್ಕೆಜೋಳ, …
Read More »ಮೂರ್ನಾಲ್ಕು ವರ್ಷಗಳಿಂದ ಶೀತಿಲಗೊಂಡ ಸರ್ಕಾರಿ ಶಾಲೆ
ರಾಯಬಾಗ : ಮೂರ್ನಾಲ್ಕು ವರ್ಷಗಳಿಂದ ಶೀತಿಲಗೊಂಡ ಸರ್ಕಾರಿ ಶಾಲೆ ಮೂರ್ನಾಲ್ಕು ವರ್ಷಗಳಿಂದ ಶಾಲೆ ಶೀತಿಲಗೊಂಡಿದ್ದು ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು ಈ ಬಗ್ಗೆ ಹಲವಾರು ಬಾರಿ ಶಾಸಕರಿಗೆ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕೂಡಾ ಕ್ಯಾರೆ ಎನ್ನದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು. ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ದಿಗ್ಗೇವಾಡಿ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಪೂರ್ಣ ಶೀತಲ ಗೊಂಡಿದ್ದು ಸುಮಾರು ಮೂರ್ನಾಲ್ಕು ವರ್ಷಗಳಿಂದ ಹಂಚುಗಳು ಒಡೆದ …
Read More »ಕೆಪಿಎಸ್‌ಸಿಯ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ದಿನಾಂಕ ಪ್ರಕಟ
ಬೆಂಗಳೂರು, : ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. ಇದೇ ತಿಂಗಳ 17ರಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ‘ಎ’ ವೃಂದದ ಸಹಾಯಕ ನಿಯಂತ್ರಕರ 54 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಬೆಂಗಳೂರು ಕೇಂದ್ರ ಹಾಗೂ ಆಯೋಗದ ವಿಭಾಗೀಯ ಕೇಂದ್ರಗಳಾದ …
Read More »
Laxmi News 24×7