Breaking News

ಅಂತರಾಷ್ಟ್ರೀಯ

ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಾಗಿನ

ಮೈಸೂರು : ಜಿಲ್ಲೆಯ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಇದೇ ವೇಳೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರುಗಳು ಭಾಗಿಯಾಗಿದ್ದರು. ಬಳಿಕ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಗುದ್ದಲಿಪೂಜೆ ನೆರವೇರಿಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಸೋಮಶೇಖರ್, ರಮೇಶ್ ಜಾರಕಿಹೊಳಿ, ಶಾಸಕರಾದ ಎಸ್.ಎ.ರಾಮದಾಸ್, …

Read More »

ಘಟಪ್ರಭಾ, ಮಲಪ್ರಭಾ ಜಲಾಶಯಗಳ ಹೊರಹರಿವು ಇಳಿಕೆ

ಬೆಳಗಾವಿ: ಜಿಲ್ಲೆಯಂತೆ ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲೂ ಶುಕ್ರವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಅಲ್ಲಿಂದ ಕೃಷ್ಣಾ ನದಿಗೆ ಹರಿದು ಬರುತ್ತಿದ್ದ ಒಳಹರಿವು ತೀವ್ರ ಗತಿಯಲ್ಲಿ ಕಡಿಮೆಯಾಗಿದೆ. 1.73 ಲಕ್ಷ ಕ್ಯುಸೆಕ್‌ ನೀರು ಹರಿದು ಬಂದಿದ್ದು, ಹಿಂದಿನ ದಿನಕ್ಕೆ ಹೋಲಿಸಿದರೆ 25 ಸಾವಿರ ಕ್ಯುಸೆಕ್‌ ಕಡಿಮೆಯಾಗಿದೆ. ಇದೇ ರೀತಿ, ಘಟಪ್ರಭಾ ಹರಿವು ಕೂಡ ಕಡಿಮೆಯಾಗಿದೆ. 19,775 ಕ್ಯುಸೆಕ್‌ ಒಳಹರಿವು ಇದೆ. ಹಿಂದಿನ ದಿನ 31,627 ಕ್ಯುಸೆಕ್‌ ಇತ್ತು. ಹಿಡಕಲ್‌ ಬಳಿಯ ಜಲಾಶಯದಿಂದ ಹೊರಬಿಡುವ ನೀರಿನ …

Read More »

ಕೊರೊನಾ ನಡುವೆ ಸೆ.21 ರಿಂದ ವಿಧಾನಮಂಡಲ ಅಧಿವೇಶನ

ಬೆಂಗಳೂರು: ಸೆಪ್ಟೆಂಬರ್ 21 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಲಾಪ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.   ಸೆ. 21 ರಿಂದ 30 ರವರೆಗೆ ಬೆಂಗಳೂರಿನಲ್ಲಿ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನದ ನಡುವೆ ಆರು ತಿಂಗಳಿಗಿಂತ ಹೆಚ್ಚು ಅಂತರ ಇರಬಾರದು ಎಂದು …

Read More »

ಇಂದು ಕಾವೇರಿಗೆ ಯಡಿಯೂರಪ್ಪ ಬಾಗಿನ – ಎರಡೆರಡು ದಾಖಲೆ ಬರೆಯಲಿದ್ದಾರೆ ಸಿಎಂ ಇವರಿಂದ ಪ್ರಕಟಿಸಲಾಗಿದೆ

ಮಂಡ್ಯ : ಒಡಲು ತುಂಬಿರುವ ಕನ್ನಂಬಾಡಿ ಕಟ್ಟೆಯಲ್ಲಿ ಕಾವೇರಿ ಮಾತೆಗೆ ಸಿಎಂ ಯಡಿಯೂರಪ್ಪ ಇಂದು ಬಾಗಿಲ ಅರ್ಪಿಸಲಿದ್ದಾರೆ. ಕೆಆರ್‌ಎಸ್‌ ಜಲಾಶಯದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಕಾವೇರಿಗೆ ಬಾಗಿನ ಸಲ್ಲಿಸುವ ಭಾಗ್ಯ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೊರೆತಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ಕಾವೇರಿ ತಾಯಿಗೆ ನಾಲ್ಕು ಬಾರಿ ಬಾಗಿನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದು ಐದನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ.ಈ ಮೂಲಕ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಬಾರಿ ಬಾಗಿನ …

Read More »

ಡ್ಯಾಂಗಳಿಂದ ಕೃಷ್ಣೆಗೆ ಹರಿದುಬಂತು ಅಪಾರ ನೀರು

ಬೆಳಗಾವಿ : ರಾಜ್ಯದಲ್ಲಿ ಮಳೆ ಇಳಿಮುಖವಾದ ಬೆನ್ನಲ್ಲೇ ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲೂ ಮಳೆ ಸಂಪೂರ್ಣ ತಗ್ಗಿರುವುದರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಎದುರುಸುತ್ತಿರುವ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಪಾತ್ರದ ನಿವಾಸಿಗಳು ನಿರಾಳವಾಗಿದ್ದಾರೆ. ಆದರೆ ಮಹಾರಾಷ್ಟ್ರದ ಜಲಾಶಯಗಳಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಹರಿದು ಬರುವ ನೀರಿನ ಪ್ರಮಾಣ 2.17 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿರುವುದರಿಂದ ನದಿ ಅಪಾಯದ ಮಟ್ಟದಲ್ಲೇ ಹರಿಯುತ್ತಿದೆ. ಇದೇ ವೇಳೆ ತುಂಗಭದ್ರಾ ಮತ್ತು ಮಲಪ್ರಭಾ ಜಲಾನಯನ ಪ್ರದೇಶದಲ್ಲೂ ಮಳೆ …

Read More »

ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಸಾವು, ಸೋಂಕು ವರದಿ : ಗುರುವಾರದ ರಿಪೋರ್ಟ್ ಎಷ್ಟು..?

ಬೆಂಗಳೂರು : ರಾಜ್ಯದಲ್ಲಿ ಗುರುವಾರ 7,385 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಂದೂವರೆ ತಿಂಗಳ ಮಗು ಸೇರಿ 102 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದೇ ದಿನ 6231 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ 2.56 ಲಕ್ಷಕ್ಕೆ ಏರಿಕೆಯಾಗಿದ್ದರೆ, ಮೃತಪಟ್ಟವರ ಸಂಖ್ಯೆ ನಾಲ್ಕೂವರೆ ಸಾವಿರ ಗಡಿ (4,429) (ಆತ್ಮಹತ್ಯೆ ಸೇರಿದಂತೆ 16 ಅನ್ಯ ಕಾರಣದ ಸಾವು ಪ್ರಕರಣ ಹೊರತುಪಡಿಸಿ) ತಲುಪಿದೆ. ಇದರ ನಡುವೆ …

Read More »

ಜಾರಕಿಹೊಳಿ ತಂಡದಿಂದ ಲಾಬಿ; ಬಿಜೆಪಿ ರಾಷ್ಟ್ರ ನಾಯಕರ ಮೇಲೆ ಒತ್ತಡ; ಲಕ್ಷ್ಮಣ ಸವದಿ ಡಿಸಿಎಂ ಸ್ಥಾನಕ್ಕೆ ಕುತ್ತು?

ಬೆಳಗಾವಿ: ಎರಡು ವರ್ಷಗಳ ರಾಜಕೀಯ ವನವಾಸದ ಬಳಿಕ ಕಷ್ಟಪಟ್ಟು ಪರಿಷತ್‌ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್‌, ಈಗ ಸಚಿವ ಪಟ್ಟಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಜೊತೆಗೆ ರಮೇಶ್ ಜಾರಕಿಹೊಳಿ ಕೂಡ ಡಿಸಿಎಂ ಸ್ಥಾನಕ್ಕಾಗಿ ಹಪಹಪಿಸುತ್ತಿದ್ದು ಇದಕ್ಕಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಮುಂಚೂಣಿಯಲ್ಲಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಈಗ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿಪಿ ಯೊಗೇಶ್ವರ್‌ ಸಚಿವ ಸ್ಥಾನಕ್ಕೆ ಲಾಬಿಗೆ …

Read More »

ಘಟಪ್ರಭಾ ಅಟ್ಟಹಾಸದಿಂದ ಸಂಕಷ್ಟಕ್ಕೆ ಒಳಗಾದ ಬಾಣಂತಿ, ಗರ್ಭಿಣಿ!

ಬೆಳಗಾವಿ: ಘಟಪ್ರಭಾ ಅಟ್ಟಹಾಸಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಜನ ತಮ್ಮ ಮನೆಗಳನ್ನು ಬಿಟ್ಟು ಪರಿಹಾರ ಕೇಂದ್ರಗಳಲ್ಲಿ ಜೀವನ ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಳವಂಕಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ತಮ್ಮ ಪರಿಸ್ಥಿತಿ ನೆನೆದು ಬಾಣಂತಿ ಮತ್ತು ಗರ್ಭಿಣಿ ಕಣ್ಣೀರು ಹಾಕಿದ್ದಾರೆ. ಮೇಳವಂಕಿ ಗ್ರಾಮಕ್ಕೆ ಘಟಪ್ರಭಾ ನದಿ‌ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಮಗುವನ್ನ ಕರೆದುಕೊಂಡು ಬಾಣಂತಿ …

Read More »

ನೆರೆ ಹಾಗೂ ಅತಿವೃಷ್ಟಿಯ ಪರಿಣಾಮ, 43,300 ಹೆಕ್ಟೇರ್‌ ಬೆಳೆ ‘ಆಹುತಿ’

ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಮಂಗಳವಾರದವರೆಗೆ 43,300 ಹೆಕ್ಟೇರ್ ಬೆಳೆಗಳು ಮುಳುಗಿವೆ. 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ, ದೂಧ್‌ಗಂಗಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ, ಮಲಪ್ರಭಾ ನದಿಗಳಲ್ಲಿ ಮಹಾಪೂರ ಉಂಟಾಗಿದೆ. ತೀರಕ್ಕೆ ಹೊಂದಿಕೊಂಡಿರುವ ಜಮೀನುಗಳಿಗೆ ನೀರು ವ್ಯಾಪಿಸಿದೆ. ಇದರೊಂದಿಗೆ ಬೆಳಗಾವಿ ತಾಲ್ಲೂಕಿನಲ್ಲಿ ಬಳ್ಳಾರಿ ನಾಲಾ ಪ್ರವಾಹವೂ ಉಂಟಾಗಿದೆ. ಇದರಿಂದಲೂ ಸಾವಿರಾರು ಎಕರೆ ವಿವಿಧ ಬೆಳೆಗಳು ಜಲಾವೃತವಾಗಿವೆ. ಅಲ್ಲಲ್ಲಿ ಮಳೆ ಹಾಗೂ ಪ್ರವಾಹದ ಪರಿಸ್ಥಿತಿ ಮುಂದುವರಿದಿದ್ದು, ಬೆಳೆಗಳ ಹಾನಿ …

Read More »

ಬೆಳಗಾವಿ: 379 ಮಂದಿಗೆ ಕೋವಿಡ್ ದೃಢ

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 379 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪುರುಷ. ಎಲ್ಲರೂ ಬೆಳಗಾವಿ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ. 267 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

Read More »