Breaking News

ಅಂತರಾಷ್ಟ್ರೀಯ

ಕೊಯ್ನಾ, ನವಿಲುತೀರ್ಥ ಡ್ಯಾಂಗಳಿಂದ ನೀರು ಬಿಡುಗಡೆ: ನದಿ ತೀರದ ಜನರಿಗೆ ಎಚ್ಚರಿಕೆ

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಕೊಯ್ನಾ ಜಲಾಶಯ ಭರ್ತಿಯಾಗಿದ್ದು ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಒಟ್ಟು 105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 86.93 ಟಿಎಂಸಿ ನೀರು ಸಂಗ್ರಹವಾಗಿದೆ. ಕೊಯ್ನಾ ಜಲಾಶಯದ 6 ಗೇಟ್​​​ಗಳ ಮೂಲಕ 9,360 ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹಾಗೂ ವಿದ್ಯುತ್ ಉತ್ಪಾದನೆಗೆ 1050 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಈ ನೀರಿನಿಂದ ಕರ್ನಾಟಕದಲ್ಲಿ ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳವಾಗುವ ಸಾಧ್ಯತೆ …

Read More »

ಬೆಳಗಾವಿ | ಕುಸಿದ ಹಳೆ ಮನೆ: 12 ಮಂದಿ ರಕ್ಷಣೆ

ಬೆಳಗಾವಿ: ಇಲ್ಲಿನ ಗೊಂದಳಿ ಗಲ್ಲಿಯಲ್ಲಿ ಶನಿವಾರ ರಾತ್ರಿ ಹಳೆ ಮನೆಯೊಂದು ಪಕ್ಕದ ಮನೆಯ ಮೇಲೆ ದಿಢೀರ್‌ ಕುಸಿದು ಬಿದ್ದಿದ್ದರಿಂದ, ಒಳಗೆ ಸಿಲುಕಿದ್ದ ಬಾಲಕ ಮತ್ತು ಬಾಲಕಿ ಸೇರಿದಂತೆ 12 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಿಂದಾಗಿ ಸುತ್ತಮುತ್ತಲಿನ ಮನೆಗಳವರು ಆತಂಕಗೊಂಡಿದ್ದರು. ಡಾ.ಕೋಟೂರು ಎನ್ನುವವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಹಳೆಯದಾಗಿದ್ದ ಆ ಕಟ್ಟಡ ಸತತ ಮಳೆಯಿಂದಾಗಿ ಮತ್ತಷ್ಟು ಶಿಥಿಲಗೊಂಡಿತ್ತು. ಅದಕ್ಕೆ ಹೊಂದಿಕೊಂಡಂತೆ ಇದ್ದ ಗೋಡೆಯು ನಗರಪಾಲಿಕೆ ಮಾಜಿ ಸದಸ್ಯೆ ಶಶಿಕಲಾ ಸುರೇಕರ ಅವರ ಮನೆಯ …

Read More »

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಮಹೇಂದ್ರ ಸಿಂಗ್‌ ಧೋನಿ ನೀವೃತ್ತಿ

ಭಾರತದ ಕ್ರಿಕೆಟ್‌ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲೊಬ್ಬರಾದ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನೀವೃತ್ತಿಯಾಗಿದ್ದಾರೆ. 90 ಟೆಸ್ಟ್‌, 350 ಏಕದಿನ ಪಂದ್ಯಗಳು ಮತ್ತು 98 ಟಿ20 ಪಂದ್ಯಗಳನ್ನಾಡಿರುವ ಮಾಹೀ, ತಮ್ಮ ನಾಯಕತ್ವದಲ್ಲಿ ಟಿ20 ವಿಶ್ವಕಪ್‌, ಏಕದಿನ ವಿಶ್ವಕಪ್‌ ಹಾಗೂ ಚಾಂಪಿಯನ್ಸ್‌ ಟ್ರೋಫಿ ಗೆದ್ದಿದ್ದಾರೆ. ಟೆಸ್ಟ್‌ನಲ್ಲೂ ಭಾರತ ನಂಬರ್‌ ಒನ್‌ ಱಂಕ್‌ ಆದಾಗ ಧೋನಿಯೇ ನಾಯಕರಾಗಿದ್ದರು. ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕನಾಗಿ ಮೂರು ಬಾರಿ ಐಪಿಎಲ್‌ ಟ್ರೋಫಿ …

Read More »

‘ಲಾಕ್‌ಡೌನ್‌ನಿಂದ ಜನರ ಪ್ರಾಣ ರಕ್ಷಣೆ’

ಸವದತ್ತಿ: ‘ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಲಾಕ್‌ಡೌನ್ ಘೋಷಿಸಿದ್ದರಿಂದಾಗಿ ಜನರ ಜೀವ ರಕ್ಷಿಸಲು ಸಾಧ್ಯವಾಯಿತು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು. ತಾಲ್ಲೂಕು ಆಡಳಿತದಿಂದ ಇಲ್ಲಿನ ಎಸ್‌ಕೆ ಪ್ರೌಢಶಾಲೆ ಮೈದಾನದಲ್ಲಿ ಶನಿವಾರ ನಡೆದ 74ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ಲಾಕ್‌ಡೌನ್‌ದಿಂದ ಜನಸಾಮಾನ್ಯರು ಸೇರಿದಂತೆ ಸರ್ಕಾರದ ರಾಜಸ್ವ ಸಂಗ್ರಹಕ್ಕೂ ತೊಂದರೆಯಾಗಿದೆ. ಆದರೂ ಸರ್ಕಾರಗಳು ಎದೆಗುಂದಿಲ್ಲ. ನಿರಂತರ ಸಭೆ ನಡೆಸಿ ಕೋವಿಡ್ ಹತೋಟಿಯಲ್ಲಿಡಲಾಗಿತ್ತು. ದುರ್ದೈವದಿಂದ ಸಮುದಾಯಕ್ಕೆ ಹರಡಿದ್ದು …

Read More »

ತನ್ನ ಬೊಜ್ಜು ಹೊಟ್ಟೆಯಿಂದ ಕೊಳವೆ ಬಾವಿಯಲ್ಲಿ ಮುಳುಗಿ ಸಾವಪ್ಪುವುದನ್ನು ತಪ್ಪಿಸಿಕೊಂಡ

ವ್ಯಕ್ತಿಯೊಬ್ಬ ತನ್ನ ಬೊಜ್ಜು ಹೊಟ್ಟೆಯಿಂದಾಗಿ ಚಿಕ್ಕ ಕೊಳವೆ ಬಾವಿಯಲ್ಲಿ ಮುಳುಗಿ ಸಾವಪ್ಪುವುದನ್ನು ತಪ್ಪಿಸಿಕೊಂಡ ಘಟನೆ ಚೀನಾದಲ್ಲಿ ನಡೆದಿದೆ. 28 ವರ್ಷದ ಲಿಯು ಎಂಬ ವ್ಯಕ್ತಿ ಚೀನಾದ ಹೆನಾನ್ ಪ್ರಾಂತದ ಫುಲಿಯುಡಿಯನ್ ಗ್ರಾಮದಲ್ಲಿ ತನ್ನ ಕುಟುಂಬದೊಂದಿಗೆ ನೆಲೆಸಿದ್ದಾನೆ. ಮನೆಯ ಮುಂದೆ ಇದ್ದ ಬಾವಿಯ ಮೇಲೆ ಹೊದಿಸಲಾಗಿದ್ದ ಸಣ್ಣ ಮರದ ಹಲಗೆ ಮುರಿದ ಕಾರಣದಿಂದಾಗಿ ಆ ಯುವಕ ಬಾವಿಯೊಳಗೆ ಸಿಲುಕಿಕೊಂಡಿದ್ದಾನೆ. ಅದೃಷ್ಟವಶಾತ್ ಬಾವಿಯ ಅಗಲ ಚಿಕ್ಕದಿದ್ದು ಯುವಕನ ಹೊಟ್ಟೆ ಬಾವಿ ಅಗಲಕ್ಕಿಂತ ದೊಡ್ಡದಾಗಿದ್ದರಿಂದ …

Read More »

ಇಲ್ಲಿದೆ ‘ರಾಷ್ಟ್ರ ಧ್ವಜ’ದ ಇತಿಹಾಸ ಮತ್ತದರ ಮಹತ್ವ

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲ ತಯಾರಿ ನಡೆಯುತ್ತಿದೆ. ಈ ಬಾರಿ 74 ನೇ ಸ್ವಾತಂತ್ರ್ಯ ದಿನವನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುವುದು. 1947, ಆಗಸ್ಟ್ 15 ರಂದು 200 ವರ್ಷಗಳ ಬ್ರಿಟಿಷ್ ಗುಲಾಮಗಿರಿಯಿಂದ ಭಾರತೀಯರಿಗೆ ಸ್ವಾತಂತ್ರ್ಯ ಸಿಕ್ಕಿತ್ತು. ಬ್ರಿಟಿಷರ ವಿರುದ್ಧ ಹೋರಾಡಲು, ದೇಶದ ಜನರನ್ನು ಒಂದು ಮಾಡಲು ಧ್ವಜದ ಅಗತ್ಯವುಂಟಾಗಿತ್ತು. ಈ ಧ್ವಜ ಈಗ ರಾಷ್ಟ್ರೀಯತೆಯ ಸಂಕೇತವಾಗಿದೆ. ದೇಶದ ಏಕತೆ, ಸಮಗ್ರತೆ ಮತ್ತು ರಾಷ್ಟ್ರದ ಗುರುತು ಧ್ವಜವಾಗಿದೆ. ಇಡೀ …

Read More »

ವರ್ಷ ಕಳೆದರೂ ತಪ್ಪಿಲ್ಲ ಬೆಳಗಾವಿ ಪ್ರವಾಹ ಸಂತ್ರಸ್ತರ ಸಂಕಟ!

ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್‌ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …

Read More »

ಬುಡರಕಟ್ಟಿಯಲ್ಲಿ ಬಸವೇಶ್ವರ ಮೂರ್ತಿ ಲೋಕಾರ್ಪಣೆ

ಬೈಲಹೊಂಗಲ: ಬುಡರಕಟ್ಟಿ ಗ್ರಾಮದಲ್ಲಿ ಗುರುವಾರ ಜಗಜ್ಯೋತಿ ಬಸವೇಶ್ವರರ ಆಶ್ವಾರೂಢ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಶ್ವಾರೂಢ ಬಸವೇಶ್ವರರ ಮೂರ್ತಿ ಮೆರವಣಿಗೆ ಮಾಡಿ ಗ್ರಾಮದ ಬಸವ ವೃತ್ತದಲ್ಲಿ ನಾಡಿನ ಹಲವು ಶ್ರೀಗಳು, ಗಣ್ಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಗದಗ-ಡಂಬಳದ ತೋಂಟದಾರ್ಯ ಮಠದ ತೋಂಟದ ಡಾ. ಸಿದ್ಧರಾಮ ಶ್ರೀಗಳು ಮಾತನಾಡಿ, ಅಸಮಾನತೆ, ಮೌಡ್ಯತೆ, ಶೋಷಣೆಯಿಂದ ನಲುಗಿದ್ದ ಸಮಾಜಕ್ಕೆ ಬೆಳಕಾಗಿ ಬಂದವರು ಬಸವೇಶ್ವರರು. …

Read More »

ಕೃಷಿ ಇಲಾಖೆಯಿಂದ ಮೊಬೈಲ್‌ ಆಯಪ್ | ಬೆಳೆ ಸಮೀಕ್ಷೆ; ರೈತರಿಗೇ ಜವಾಬ್ದಾರಿ

ಚಾಮರಾಜನಗರ: ಕೃಷಿ ಇಲಾಖೆಯು 2020-21ನೇ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಮಾಡುವ ಜಾವಾಬ್ದಾರಿಯನ್ನು ರೈತರಿಗೇ ನೀಡಿದೆ. ಇದೇ ಉದ್ದೇಶಕ್ಕಾಗಿ ಕೃಷಿ ಇಲಾಖೆಯು ಬೆಳೆ ‘ಸಮೀಕ್ಷೆ ಆಯಪ್‌ (farmers crop survey app 2020-21) ಅನ್ನು ಅಭಿವೃದ್ಧಿ ಪಡಿಸಿದ್ದು, ಆಯಂಡ್ರಾಯ್ಡ್‌ ಸ್ಮಾರ್ಟ್‌ಗಳಲ್ಲಿ ಲಭ್ಯವಿದೆ. ಈ ಯೋಜನೆ ಅಡಿಯಲ್ಲಿ ರೈತರು, ಈ ಆಯಪ್‌ ಮೂಲಕ ತಾವು ಬೆಳೆದಿರುವ ಬೆಳೆಗಳ ಮಾಹಿತಿ, ಚಿತ್ರಗಳನ್ನು ಅಪ್‌ಲೋಡ್‌ ಮಾಡಬೇಕು. ಆಗಸ್ಟ್‌ 10ರಂದು ಈ ಯೋಜನೆಗೆ ಚಾಲನೆ ಸಿಕ್ಕಿದ್ದು, ಸಮೀಕ್ಷೆ …

Read More »

ಚಾಮರಾಜನಗರ | ಕೊರೊನಾ ಸೈನಿಕ ಎಎಸ್‌ಐ ಸಾವು

ಚಾಮರಾಜನಗರ: ಜಿಲ್ಲೆಯ ಠಾಣೆಯೊಂದರ ಎಎಸ್‌ಐಯೊಬ್ಬರು ಸೇರಿದಂತೆ ಇಬ್ಬರು ಕೋವಿಡ್‌ ಸೋಂಕಿತರು ಗುರುವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೈನಿಕರೊಬ್ಬರು ಮೃತಪಟ್ಟ ಮೊದಲ ಪ್ರಕರಣ ಇದು. ಗುರುವಾರ ವರದಿಯಾದ ಎರಡೂ ಸಾವಿನ ಪ್ರಕರಣಗಳನ್ನು ಜಿಲ್ಲಾಡಳಿತವು ಕೋವಿಡ್‌ಯೇತರ ಕಾರಣದಿಂದ ಮೃತಪಟ್ಟವರ ಪಟ್ಟಿಗೆ ಸೇರಿಸಿದೆ. 56 ವರ್ಷದ ಎಎಸ್‌ಐ ಅವರು (ರೋಗಿಸಂಖ್ಯೆ 1,35,728) ಜುಲೈ 30ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಟೈಫಾಯ್ಡ್‌ನಿಂದಲೂ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಐಸಿಯುನಲ್ಲಿ …

Read More »