Breaking News

ಅಂತರಾಷ್ಟ್ರೀಯ

ಬೆಳಗಾವಿ | 575 ಮಂದಿಗೆ ಕೋವಿಡ್ ದೃಢ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 575 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಇದರೊಂದಿಗೆ ಇಲ್ಲಿನ ಸೋಂಕಿತರ ಸಂಖ್ಯೆ 6ಸಾವಿರದ ಗಡಿ ದಾಟಿದೆ. ಈ ಸೋಂಕಿನ ಕಾರಣದಿಂದ ಬಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. 444 ಮಂದಿ ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Read More »

ದಲಿತ ಸಂಘಟನೆಗಳ ಬೃಹತ್‌ ಪ್ರತಿಭಟನೆ

ಹಾಸನ: ದಲಿತರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಹಾಸನ ಜಿಲ್ಲಾಡಳಿತ ವಿಫ‌ಲವಾಗಿದೆ ಎಂದು ಆಗ್ರಹಿಸಿದಲಿತ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಮಹಾವೀರ ವೃತ್ತ, ಕಸ್ತೂರಬಾ ರಸ್ತೆ ಮೂಲಕ ಸಾಗಿ ಎನ್‌.ಆರ್‌. ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ಹಾಸನ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಪ್ರತಿಭಟನಾಕಾರರು ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ …

Read More »

ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲು ಸೂಚನೆ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್‌ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಸರಕಾರದ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಶಿಕಲಾ ಜೊಲ್ಲೆ ಹೇಳಿದರು. ಕೋವಿಡ್‌-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಆವರು, ರ್ಯಾಪಿಡ್‌ ಟೆಸ್ಟ್‌ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ತಕ್ಷಣ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ …

Read More »

ಬೆಂಗಳೂರು ಹಿಂಸಾಚಾರ: ಕೋಲಾರ ಸೇರಿ 6 ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ- ಐಜಿಪಿ ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆ ಬಳಿಕ ಕೋಲಾರ ಸೇರಿದಂತೆ ಒಟ್ಟು 6 ಪ್ರದೇಶಗಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ ಎಂದು ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. ಕೋಲಾರ, ರಾಮನಗರ, ತುಮಕೂರು, ಕೆಜಿಎಪ್, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ದಲ್ಲಿ ಹೈಅಲರ್ಟ್ ಆಗಿರುವಂತೆ ಹಾಗೂ ರಾತ್ರಿ ವೇಳೆ ಗಸ್ತು ತಿರುಗುವಂತೆ ಸೂಚಿಸಲಾಗಿದೆ. ಇನ್ನೂ ಎರಡೂ ದಿನಗಳ ಕಾಲ ಇದೇ ರೀತಿ ಭದ್ರತೆಯೊದಗಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. …

Read More »

ಪತ್ರಕರ್ತರ ಮೇಲೆ ಹಲ್ಲೆ ಜಿಲ್ಲಾಧಿಕಾರಿಗಳಿಗೆ ಮನವಿ

ಚಿತ್ರದುರ್ಗ,ಆ12(ಹಿಸ): ಬೆಂಗಳೂರಿನ ಡಿ.ಜಿ ಹಳ್ಳಿ ಮತ್ತು ಕೆ.ಆರ್.ಹಳ್ಳಿಗಳಲ್ಲಿ ನಡೆದಿರುವ ಗಲಭೆಯ ಸಂದರ್ಭದಲ್ಲಿ ಸುದ್ದಿ ಮಾಧ್ಯಮದ ಪ್ರತಿನಿಧಿಗಳ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಹಲ್ಲೆಗೊಳಗಾದ ಪತ್ರಕರ್ತರಿಗೆ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಬೇಕು ಮತ್ತು ಪತ್ರಕರ್ತರಿಗೆ ರಕ್ಷಣೆ ನೀಡಬೇಕು ಹಾಗೆಯೇ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ ಕೊಡ ಪತ್ರಕರ್ತರಿಗೆ ರಕ್ಷಣೆ ನೀಡುವಂತಹ ಸುರಕ್ಷಣಾ ಕಾನೂನು ಜಾರಿ ಮಾಡಬೇಕು ಎಂದು …

Read More »

ಶಿವಸೇನೆ ಷಡ್ಯಂತ್ರಕ್ಕೆ ಗ್ರಾಮಸ್ಥರ ಮಂಗಳಾರತಿ; ಮಣಗುತ್ತಿ ಶಿವಾಜಿ ಮೂರ್ತಿ ವಿವಾದ ಇತ್ಯರ್ಥ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ನಡೆದ ಶಿವಾಜಿ ಮೂರ್ತಿ ಪ್ರತಿ ಸ್ಥಾಪನೆ ಪ್ರಕರಣ ಕೊನೆಗೆ ಅಂತ್ಯ ಕಂಡಿದೆ. ಶಿವಾಜಿ ಮೂರ್ತಿ ವಿಚಾರವನ್ನೆ ಮುಂದಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದ ಎಂ.ಇ.ಎಸ್. ಹಾಗೂ ಶಿವಸೇನೆಗೆ ತೀವ್ರ ಮುಖ ಭಂಗವಾಗಿದೆ. ಹೌದು, ಕಳೆದ ಒಂದು ವಾರದಿಂದಲೂ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿ ಸ್ಥಾಪನೆ ಮಾಡುವ ವಿಚಾರವಾಗಿ ಹಲವಾರು ಗಲಾಟೆಗಳು ನಡೆದಿದ್ದವು. ಶಿವಸೇನೆಯ ಕುಮ್ಮಕ್ಕಿನಿಂದ ಸುಳ್ಳು ಪ್ರಚಾರ ಪಡೆದಿದ್ದ …

Read More »

ಘಟಪ್ರಭಾ-ಮಣಗುತ್ತಿ ವಿವಾದ ಸೌಹಾರ್ದತೆ ಕಾಪಾಡುವಂತೆ ಪೋಲಿಸ್ ಕಮೀಶನರ್ ಗೆ ಕನ್ನಡ ಸೇನೆ ವತಿಯಿಂದ ಮನವಿ

ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮತ್ತು ಸ್ಥಳಾಂತರ ಪ್ರಕರಣವನ್ನು ಶಿವಸೇನೆ ಮತ್ತು ಹೊರಗಿನಿಂದ ಬಂದ ಇತರೆ ಸಂಘಟನೆಗಳು ವಿವಾದ ಸೃಷ್ಟಿ ಮಾಡಿ ಸೌಹಾರ್ದತೆ ಹಾಳು ಮಾಡಲು ಪ್ರಯತ್ನಿಸುತ್ತಿರುವ ಕಿಡಗೇಡಿಗಳನ್ನು ಕೂಡಲೇ ಅವರನ್ನು ಬಂದಿಸಬೇಕು. ಅದರಂತೆ ಅಲ್ಲಿಯ ಜನರಿಗೆ ಸೌಹಾರ್ದತೆಯಿಂದ ಬಾಳಲು ಅನುಮಾಡಿ ಕೊಡಬೇಕು ಎಂದು ಕನ್ನಡ ಸೇನೆ ಮತ್ತು ಕರವೇ ಸಂಘಟನೆ ವತಿಯಿಂದ ಪೋಲಿಸ್ ಕಮೀಶನರ್ ಮನವಿ ಸಲ್ಲಿಸಲಾಯಿತು. ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ …

Read More »

ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ.

ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗೋಕಾಕ ನಗರಸಭೆಗೆ 8 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಂಜುಮನ್ ಇಸ್ಲಾಂ ಕಮಿಟಿ ಗೋಕಾಕ ಮತ್ತು ತಂಜೀಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ‌ ಮತ್ತು ಗ್ರಾಮ ದೇವತೆ …

Read More »

ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಸಚಿವ ರಮೇಶ ಜಾರಕಿಹೊಳಿ ಸಂತಾಪ.

ನನ್ನ ಹಿರಿಯ ಸ್ನೇಹಿತ, ಗೋಕಾಕ್ ನಗರಸಭೆಯ ಸದಸ್ಯರಾಗಿದ್ದ *ಶ್ರೀಯುತ ಜನಾಬ್ ಶೇಖ್ ಫತೇವುಲ್ಲಾ ಕೋತ್ವಾಲ್* ಅವರ ಅಕಾಲಿಕ ಮರಣದಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. *ನನ್ನ ಬಾಲ್ಯದ ಗೆಳೆಯನಾಗಿದ್ದ ಕೋತ್ವಾಲ್* ನನ್ನ ರಾಜಕೀಯ ಪ್ರಗತಿಯಲ್ಲಿ ಹೆಜ್ಜೆ ಹೆಜ್ಜೆಗೂ ನನ್ನೊಂದಿಗೆ ನಿಂತು ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದ್ದರು. ಗೋಕಾಕ್ ನಗರಸಭೆಗೆ ಸತತ *ಆರನೇ ಬಾರಿ ಆಯ್ಕೆ* ಯಾಗಿದ್ದರು ಮತ್ತು ನಗರಸಭೆಯ ಅಧ್ಯಕ್ಷರಾಗಿ ನಗರದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು. ಜಾತ್ಯಾತೀತ ವ್ಯಕ್ತಿಯಾಗಿದ್ದ ಕೋತ್ವಾಲ್, ಗೋಕಾಕ್ ನಗರದ *ಅಂಜುಮನ್ …

Read More »

ಕೋವಿಡ್‌: ಸೋಂಕಿತರಿಗಿಂತ ಗುಣಮುಖರಾದವರ ಹೆಚ್ಚಳ

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 312 ಜನರಿಗೆ ಕೋವಿಡ್‌-19 ದೃಢಪಟ್ಟಿದೆ. ಇದೇ ವೇಳೆ, 378 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದುವರೆಗೆ ಸೋಂಕು ತಗುಲಿದವರ ಸಂಖ್ಯೆ 5,174ಕ್ಕೆ ತಲುಪಿದೆ. ಇವರಲ್ಲಿ 3,431 ಸಕ್ರಿಯ ಪ್ರಕರಣಗಳಿವೆ. ಬೆಳಗಾವಿ, ಗೋಕಾಕ, ಖಾನಾಪುರ, ಸವದತ್ತಿ, ಚಿಕ್ಕೋಡಿ, ರಾಮದುರ್ಗ, ಹುಕ್ಕೇರಿ, ರಾಯಬಾಗ ಸೇರಿದಂತೆ ಬಹುತೇಕ ಜಿಲ್ಲೆಯ ಎಲ್ಲ ಭಾಗಗಳಲ್ಲೂ ಸೋಂಕು ಕಂಡುಬಂದಿದೆ. ಬೆಳಗಾವಿಯ 60 ವರ್ಷದ ವೃದ್ಧೆಯೊಬ್ಬರು …

Read More »