Breaking News

ಅಂತರಾಷ್ಟ್ರೀಯ

ಇಂದು ಹಾಪ್ ಸೆಂಚುರಿ ಬಾರಿಸಿದ ಕೊರೋನಾ: ನಗರದ ಒಂದೇ ಕುಟುಂಬದ ಹತ್ತು ಜನರಿಗೆ ತಗುಲಿದ ಸೋಂಕು

ಗೋಕಾಕ: ಗೋಕಾಕ ತಾಲೂಕಿನಲ್ಲಿ ಮಾರಣಾಂತಿಕ ಕೊರೋನಾ ಸೋಂಕು ಪ್ರಥಮ ಬಾರಿಗೆ ಹಾಪ್ ಸೆಂಚುರಿ ಬಾರಿಸಿದ್ದು ಒಂದೇ ಕುಟುಂಬದ 10 ಜನರಿಗೆ ಕೊರೋನಾ ಧೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ.   ಗೋಕಾಕ ತಾಲೂಕಿನಲ್ಲಿ ಇಂದು ಒಟ್ಟು 57 ಪ್ರಕರಣಗಳು ವರದಿಯಾಗಿದ್ದು ಗೋಕಾಕ ನಗರದಲ್ಲಿಯೆ 24 ಸೋಂಕಿತರು ಪತ್ತೆಯಾಗಿದ್ದಾರೆ. ನಗರದ ವಿದ್ಯಾನಗರದ ಒಂದೇ ಕುಟುಂಬದ 10 ಜನರಿಗೆ ಕೊರೋನಾ ತಗುಲಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಗೋಕಾಕ …

Read More »

ಸಂಜಯ್‌ ದತ್‌ ವಿರುದ್ಧ ಹೈಕೋರ್ಟ್‌ಗೆ ಹೋದ ರಾಜೀವ್‌ಗಾಂಧಿ ಹಂತಕ!

ಮುಂಬೈ: ಬಾಲಿವುಡ್‌ ನಟ ಸಂಜಯ್‌ ದತ್‌ಗೆ ನಾಳೆ  60ನೇ ಹುಟ್ಟುಹಬ್ಬದ ಸಂಭ್ರಮ. ಆದರೆ ಅದರ ಮುನ್ನಾದಿನವೇ ಅವರಿಗೆ ಶಾಕ್‌ ಆಗುವಂಥ ವಿಚಾರವೊಂದು ನಡೆದಿದೆ. ಅದೇನೆಂದರೆ ಅವರ ವಿರುದ್ಧ ಇಂದು ಬಾಂಬೆ ಹೈಕೋರ್ಟ್‌ಗೆ ಕೇಸೊಂದು ದಾಖಲಾಗಿದೆ. ಈ ಕೇಸ್‌ ದಾಖಲು ಮಾಡಿರುವವರು ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜಿ ಪೆರರಿವಾಲನ್‌. ಅಷ್ಟಕ್ಕೂ ಈತನಿಗೂ, ಸಂಜಯ್‌ ದತ್‌ಗೂ ಸಂಬಂಧ ಏನೆಂದರೆ, ರಾಜೀವಗಾಂಧಿ ಹತ್ಯೆ ಪ್ರಕರಣದಲ್ಲಿ ಅವರನ್ನು ಹತ್ಯೆ ಮಾಡಲು …

Read More »

ನಾಲ್ಕು ಜಿಲ್ಲೆಗಳಿಗೆ ಸಚಿವ ಸ್ಥಾನ ಮರೀಚಿಕೆ?

ಕಲಬುರ್ಗಿ: ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿದ್ದ ಮೂವರೂ ಸೇರಿದಂತೆ ಕಲ್ಯಾಣ ಕರ್ನಾಟಕದ ಐವರು ಶಾಸಕರನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನಿಗಮ-ಮಂಡಳಿಗೆ ನೇಮಕ ಮಾಡಿದ್ದಾರೆ. ಆ ಮೂಲಕ ಈ ಜಿಲ್ಲೆಗಳಿಗೆ ಸದ್ಯ ಸಚಿವ ಸ್ಥಾನ ದೊರೆಯುವುದಿಲ್ಲ ಎಂಬ ಸಂದೇಶವೂ ರವಾನೆಯಾದಂತಾಗಿದೆ. ಬಳ್ಳಾರಿ ಜಿಲ್ಲೆಯ ಆನಂದ ಸಿಂಗ್‌ ಹಾಗೂ ಬೀದರ್‌ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಪ್ರಭು ಚವ್ಹಾಣ್‌ ಅವರು ಸಚಿವರಾಗಿದ್ದಾರೆ. ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ …

Read More »

ಜೈಲಿನಲ್ಲೇ ಮರ್ಡರ್​ಗೆ ಸ್ಕೆಚ್; ₹1 ಕೋಟಿ ಸುಪಾರಿ ಪಡೆದಿದ್ದ ಆರೋಪಿಗಳು ಅರೆಸ್ಟ್​​

ಬೆಂಗಳೂರು: ಜೈಲಿನಲ್ಲೇ ಇದ್ದು ಮರ್ಡರ್ ಮಾಡೋಕೆ ಸ್ಕೆಚ್ ಹಾಕಿದ್ದ ಖತರ್ನಾಕ್ ಗ್ಯಾಂಗ್​ನ ಒಂಬತ್ತು ಜನ ಆರೋಪಿಗಳನ್ನು ಪೊಲೀಸರು ಹೆರೆಮುರಿ ಕಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ನಿವಾಸಿ ವರಲಕ್ಷ್ಮೀ ಎಂಬುವವರ ಪತಿ ಗೋವಿಂದೇ ಗೌಡನ ಹತ್ಯೆಯ ಪ್ರತೀಕಾರವಾಗಿ ಕೊಲೆ ಮಾಡಿದ ಆರೋಪಿಗಳ ಹತ್ಯೆಗೆ ವರಲಕ್ಷ್ಮೀ ಸುಪಾರಿ ನೀಡಿದ್ದರು ಎನ್ನಲಾಗಿದೆ. ವರಲಕ್ಷ್ಮೀ ಹಾಗೂ ಗೋವಿಂದೇಗೌಡನಿಗೆ ಆತ್ಮೀಯನಾಗಿದ್ದ ಚಿಕ್ಕತಿಮ್ಮೇಗೌಡ, ತಾನು ಬೆಳೆಯುತ್ತಿದ್ದಂತೆ ಇಬ್ಬರನ್ನ ದೂರ ಮಾಡಿದ್ದ. ವರಲಕ್ಷ್ಮೀ ದಂಪತಿಗೆ ಮಕ್ಕಳಿಲ್ಲದ ಕಾರಣ ಚಿಕ್ಕತಿಮ್ಮೇಗೌಡನನ್ನು ಬೆಳೆಸಿ, ಆತನಿಗೆ ಒಳ್ಳೆಯ …

Read More »

ಹೋಟೆಲ್​​ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಮೂವರು ಅರೆಸ್ಟ್​

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೌರವ್, ಹೀನಾ ಹಾಗೂ ಅಣ್ಣಪ್ಪ ಬಂಧಿತರು. ಆರೋಪಿಗಳು ಲಾಡ್ಜ್ ನಡೆಸಲು ಪರವಾನಗಿ ಪಡೆದು ಅನಧಿಕೃತವಾಗಿ ವೇಶ್ಯಾವಾಟಿಕೆಗೆ ಇಳಿದಿದ್ದರು. ಕೆಲಸದ ಆಮಿಷವೊಡ್ಡಿ ಹೊರರಾಜ್ಯದಿಂದ ಹುಡುಗಿಯರನ್ನು ಕರೆಯಿಸಿ ಕಂಫರ್ಟ್ ಹೋಟೆಲ್​​​ನಲ್ಲಿ ದಂಧೆ ನಡೆಸುತ್ತಿದ್ದರು. ಆನ್​ಲೈನ್​​ನಲ್ಲಿ ಮೊಬೈಲ್ ನಂಬರ್ ಹಾಕಿಕೊಂಡು, ಟೆಲಿಕಾಲರ್ ಮೂಲಕ ಗಿರಾಕಿಗಳನ್ನ ಕರೆಸುತ್ತಿದ್ದರು. ಇದು ಯಾರಿಗೂ ಗೊತ್ತಾಗದಂತೆ ಒಂದೊಂದು ನಂಬರ್ ಯ್ಯೂಸ್ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ …

Read More »

ವಿಡಿಯೋ ಕಾಲ್ ಮಾಡಿ ವೈದ್ಯರ ಸಲಹೆ ಪಡೆದು ಹೆರಿಗೆ ಮಾಡಿಸಿದ ಮಹಿಳೆಯರು

ಹಾವೇರಿ : ವಿಡಿಯೋ ಕಾಲ್ ಮೂಲಕ ವೈದ್ಯರ ಸಲಹೆ ಪಡೆದು ಮಹಿಳೆಯರು ಹೆರಿಗೆ ಮಾಡಿಸಿರುವ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ 2:30ರ ಸುಮಾರಿಗೆ ವಾಸವಿ ಪತ್ತೆಪೂರ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆದ್ರೆ ಸಂಡೇ ಲಾಕ್ ಡೌನ್ ಇದ್ದ ಕಾರಣ ಇಡೀ ನಗರವೇ ಸ್ತಬ್ಧವಾಗಿತ್ತು. ಹೀಗಾಗಿ ವಾಸವಿ ಪತ್ತೆಪೂರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗಿರಲ್ಲಿಲ್ಲ. ಇತ್ತ ಮಹಿಳೆಯ ಆಕ್ರಂದನ ಮತ್ತು ಕಿರುಚುವುದನ್ನ ಕಂಡ ಸ್ಥಳೀಯ …

Read More »

24 ಗಂಟೆಯಲ್ಲಿ 654 ಜನರು ಸಾವು ಇಂದು ವಿಶ್ವದಲ್ಲೇ ಅತಿ ಹೆಚ್ಚು.

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷದ ಹತ್ತಿರ ಬಂದಿದೆ. ಸಾವಿನ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 47,704 ಹೊಸ ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ. 24 ಗಂಟೆಯಲ್ಲಿ 654 ಜನರು ಸಾವನ್ನಪ್ಪಿದ್ದಾರೆ.   ಈ ಸಾವುಗಳು ಇಂದು ವಿಶ್ವದಲ್ಲೇ ಅತಿ ಹೆಚ್ಚು. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ ಭಾರತಕ್ಕಿಂತ ಕಡಿಮೆಯಿದೆ. ಯುಎಸ್ ಮತ್ತು ಬ್ರೆಜಿಲ್ ನಲ್ಲಿ ಕಳೆದ …

Read More »

ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹದಿಂದ ಸುಮಾರು 46ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗುವಾಹಟಿ/ಪಟ್ನಾ : ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹದಿಂದ ಸುಮಾರು 46ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಕೊಂಚ ಸುಧಾರಿಸಿದೆ. 22 ಜಿಲ್ಲೆಗಳ 22.34 ಲಕ್ಷ ಜನ ಪ್ರವಾಹದಿಂದ ಬಾಧಿತರಾಗಿದ್ದು, ಸೋಮವಾರ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯು ಗೋಲಾಘಾಟ್‌ ಜಿಲ್ಲೆಯ ಬೋಕಾಖಾಟ್‌ನಲ್ಲಿ ನೆಲೆಸಿದ್ದರು. ಇದರೊಂದಿಗೆ ಅಸ್ಸಾಂನಲ್ಲಿ ಪ್ರಕೃತಿ ವಿಕೋಪದಿಂದ ಸತ್ತವರ ಸಂಖ್ಯೆಯು 129ಕ್ಕೆ ಏರಿಕೆಯಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (ಎಎಸ್‌ಡಿಎಂಎ) ತಿಳಿಸಿದೆ. …

Read More »

ಚಿಕಿತ್ಸೆಗೆ ತಡ ಮಾಡಿದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ: ಸುಧಾಕರ್

ಬೆಂಗಳೂರು: ನಟಿ ಸುಧಾರಣಿ ಅವರಿಗೆ ಚಿಕಿತ್ಸೆ ನೀಡಲು ತಡಮಾಡಿದ ಶೇಷಾದ್ರಿಪುರಂ ಅಪೊಲೊ ಆಸ್ಪತ್ರೆ ವಿರುದ್ಧ ಕ್ರಮವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ‘ನಟಿ ಸುಧಾರಣಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ನೋಡಿದೆ. ಅವರಷ್ಟೇ ಅಲ್ಲ, ಯಾರೊಬ್ಬರೂ ಚಿಕಿತ್ಸೆ ಸಿಗದೆ ಪರದಾಡಬಾರದು’ ಎಂದು ಸಚಿವರು ಹೇಳಿದ್ದಾರೆ. ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ತಗುಲಿದ್ದು ಅವರು ಮತ್ತೊಮ್ಮೆ ಕ್ವಾರಂಟೈನ್ ಆಗಬೇಕಿದೆ ಎಂಬ …

Read More »

ಆಗಸ್ಟ್ 1 ರಿಂದ ಕಾರ್, ಬೈಕ್ ಕೊಳ್ಳುವವರಿಗೆ ಸಿಹಿ ಸುದ್ದಿ

ಆಗಸ್ಟ್ 1 ರಿಂದ ಹೊಸ ಕಾರ್, ದ್ವಿಚಕ್ರ ವಾಹನವನ್ನು ಖರೀದಿಸುವುದು ಸುಲಭವಾಗಲಿದೆ. ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಐಆರ್‌ಡಿಎಐ) ಪರಿಣಾಮವಾಗಿ ಹೊಸ ವಾಹನಗಳಿಗೆ ಆನ್-ರೋಡ್ ಬೆಲೆಗಳು ಸ್ವಲ್ಪ ಕಡಿಮೆಯಾಗುತ್ತವೆ. ಏಕೆಂದರೆ ಮೂರು ಅಥವಾ ಐದು ವರ್ಷಗಳವರೆಗೆ ದೀರ್ಘಕಾಲೀನ ಮೋಟಾರು ವಾಹನ ವಿಮೆಯನ್ನು ಕಡ್ಡಾಯಗೊಳಿಸುವ ನಿಯಮವನ್ನು ತೆಗೆದುಹಾಕಲಾಗಿದೆ. ಉದ್ಯಮವು ಈಗ ಹೊಸ ವಾಹನವನ್ನು ಖರೀದಿಸುವಾಗ ಅಗತ್ಯವಾದ ಕಡ್ಡಾಯವಾದ ಒಂದು ವರ್ಷದ, ಸ್ವಂತ-ಹಾನಿ ವಿಮಾ ರಕ್ಷಣೆಗೆ ಮರಳಿದೆ. ಹೊಸ ವಾಹನ ಮಾಲೀಕರು …

Read More »