ನವದೆಹಲಿ: ನನ್ನ ಪತಿ ಕೊರೊನಾ ಸೋಂಕಿತರಿಗಾಗಿ ಮೂರು ತಿಂಗಳು ರಜೆ ಪಡೆಯದೇ ಕೆಲಸ ಮಾಡಿದ್ದರಿಂದ ಅವರಿಗೂ ಸೋಂಕು ತಗುಲಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಪತಿ ನಿಧನರಾದರು. ಆದರೆ ಇಲ್ಲಿಯವರೆಗೆ ನಮಗೆ ಸರ್ಕಾರದಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಮೃತ ವೈದ್ಯನ ಪತ್ನಿ ಡಾ.ಹೀನಾ ಅಲಿ ಬೇಸರ ವ್ಯಕ್ತಪಡಿಸಿದ್ದಾರೆ. ಖಾಸಗಿ ಪತ್ರಿಕೆ ಜೊತೆ ಮಾತನಾಡಿರುವ ಹೀನಾ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಪತಿ ಡಾ.ಜಾವೇದ್ ಅಲಿ ಮಾರ್ಚ್ ನಿಂದ ಜೂನ್ ವರೆಗೆ ನಿರಂತರವಾಗಿ …
Read More »ಆಟಿಕೆ ಗನ್ ಬಳಸಿ ಬ್ಯಾಂಕ್ ದರೋಡೆಗೆ ಯತ್ನ………..
ಶ್ರೀನಗರ: ಆಟಿಕೆ ಗನ್ ಬಳಸಿ ಬ್ಯಾಂಕ್ ದರೋಡೆಗೆ ಯತ್ನಿಸಿದ ಇಬ್ಬರನ್ನು ಬಂಧಿಸಿರುವ ಘಟನೆ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದರೋಡೆಗೆ ಯತ್ನಿಸಿದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಇಬ್ಬರು ಯುವಕರು ಆಟಿಕೆ ಬಂದೂಕು ಹಿಡಿದು ನಾಥನುಸಾ ಗ್ರಾಮದ ಗ್ರಾಮೀಣ ಬ್ಯಾಂಕ್ ಪ್ರವೇಶ ಮಾಡಿದ್ದಾರೆ. ಬ್ಯಾಂಕ್ ಸಿಬ್ಬಂದಿಗೆ ಗನ್ ತೋರಿಸಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ ಬ್ಯಾಂಕಿನಲ್ಲಿದ್ದ ಗ್ರಾಹಕರಿಗೆ ಕೈಯಲ್ಲಿರುವ ಗನ್ ಆಟಿಕೆ ಎಂದು …
Read More »ಶಾರುಖ್ ಬಂಗಲೆಗೆ ಪ್ಲಾಸ್ಟಿಕ್ ಹೊದಿಕೆ
ಮುಂಬೈ: ರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಕೋವಿಡ್-19 ಪಿಡುಗಿನ ಭರಾಟೆ ಜೋರಾಗಿದೆ. ಬಾಲಿವುಡ್ನ ಹಿರಿಯ ನಟ ಅಮಿತಾಭ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಕೂಡ ಕರೊನಾ ಸೋಂಕಿಗೆ ತುತ್ತಾದ ಮೇಲಂತೂ ಬಾಲಿವುಡ್ನ ಮಂದಿಗೆ ಕರೊನಾ ಭಾರಿ ನಡುಕವನ್ನೇ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕಿನಿಂದ ದೂರವುಳಿಯಲು ಅವರೆಲ್ಲರೂ ವಿವಿಧ ರೀತಿಯ ತಂತ್ರಗಾರಿಕೆಯನ್ನೂ ಅನುಸರಿಸುತ್ತಿದ್ದಾರೆ. ಇಂತಿಪ್ಪ, ಬಾಲಿವುಡ್ನಲ್ಲಿ ವಿಶಿಷ್ಟ …
Read More »ದ್ರೋಣ ಪ್ರತಾಪ್ ಈಗ ಪೊಲೀಸ್ ರ ವಶಕ್ಕೆ
ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್‍ನನ್ನು ಬಿಬಿಎಂಪಿ ಅಧಿಕಾರಿಗಳು ಮತ್ತು ತಲಘಟ್ಟಪುರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಡ್ರೋನ್ ಪ್ರತಾಪ್ ತಲೆಮರೆಸಿಕೊಂಡಿದ್ದ. ಅಧಿಕಾರಿಗಳು ಅವನ ಹುಡುಕಾಟದಲ್ಲಿ ತೊಡಗಿದ್ದರು. ಇದೀಗ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರತಾಪ್‍ನನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಕೆಂಗೇರಿ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ …
Read More »ಕೊನೆಯ ರೈತರ ತಲುಪದ ಕೃಷ್ಣೆ……?
ಹುಣಸಗಿ: ‘ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನೀರಾವರಿ ವ್ಯಾಪ್ತಿಯ ಎಲ್ಲ ರೈತರಿಗೂ ನೀರು ಸಿಗಬೇಕು. ರೈತರು ಸ್ವಾವಲಂಬಿಗಳಾಗಬೇಕು’ ಎನ್ನುವ ಮೂಲ ಉದ್ದೇಶವೇ ಮಾಯವಾಗಿದೆ. ಕಾಲುವೆ ಗೇಟ್ ಬಳಿ ಇರುವ ರೈತರು ಮಾತ್ರ ನೀರು ಪಡೆಯುತ್ತಿದ್ದು, ಇಂದಿಗೂ ಕಾಲುವೆ ಅಂಚಿನ ರೈತರು ನೀರಾವರಿಯಿಂದ ವಂಚಿತರಾಗಿದ್ದಾರೆ. ಇದರಿಂದಾಗಿ ಕಾಲುವೆ, ಜಾಲ ಕಾಲುವೆ, ರಸ್ತೆ ಇದ್ದರೂ ಒಣ ಬೇಸಾಯವನ್ನೇ ಮಾಡಿಕೊಂಡಿದ್ದು, ನೀರಾವರಿ ಮರೀಚಿಕೆಯಂತಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ವಿತರಣಾ ಕಾಲುವೆ 6 ಇದ್ದು, ಶೇ 50ರಷ್ಟು …
Read More »ರಾತ್ರೋ ರಾತ್ರಿ ಸುರಿದ ಮಳೆಯಿಂದ ತುಂಬಿದ ರೈತರ ಕೆರೆ
ತುಮಕೂರು: ಭಾನುವಾರ ರಾತ್ರಿ ಮಧುಗಿರಿ ತಾಲ್ಲೂಕಿನಲ್ಲಿ ಸುರಿದ ಮಳೆಯಿಂದಾಗಿ ಮಾವಿನ ಕೃಷಿಕ ಅಂಜಿನಪ್ಪ ಅವರ ಭವಿಷ್ಯವೇ ಬದಲಾಯಿತು. 1 ಕೋಟಿ ಲೀಟರ್ ಸಾಮರ್ಥ್ಯದ ಅವರ ಬೃಹತ್ ಕೃಷಿ ಕೊಳವು ತುಂಬಿದೆ, , ಬೆಂಗಳೂರು ಗ್ರಾಮೀಣ ಜಿಲ್ಲೆಯ ದೇವನಹಳ್ಳಿ ಮೂಲದ ಬಿ.ಇ (ಸಿವಿಲ್) ಎಂಜಿನೀಯರ್ ಅಂಜಿನಪ್ಪ ಹಲವು ವರ್ಷಗಳ ಹಿಂದೆ ಕೆರೆ ನಿರ್ಮಿಸಿದ್ದರು. ಅವರು ಕೊರೆಸಿದ್ದ ಮೂರು ಬೋರ್ ವೆಲ್ ಗಳ ನೀರು ಬತ್ತಿ ಹೋದ ಹಿನ್ನೆಲೆಯಲ್ಲಿ ತಮ್ಮ 40 ಎಕರೆ …
Read More »ರಾಜ್ಯದಲ್ಲಿ ಒಂದೇ ದಿನ 61 ಜನರ ಬಲಿ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 61 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1464ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 22 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 61 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ …
Read More »ಸಿಗರೇಟ್ ಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟ ಭೂಪ
ನಾಲ್ಕು ಪ್ಯಾಕ್ ಸಿಗರೇಟಿಗೆ ತನ್ನ ಜೀವವನ್ನೇ ಪಣಕ್ಕಿಟ್ಟ ವ್ಯಕ್ತಿಯೊಬ್ಬ ನೆಟ್‌ನಲ್ಲಿ ಸುದ್ದಿಯಾಗಿದ್ದಾನೆ. ಸಮುದ್ರದ ನೀರಿನಲ್ಲಿ ಮುಳುಗಿಹೋಗಿದ್ದ ತನ್ನ ವ್ಯಾನ್‌ನಲ್ಲಿ ನಾಲ್ಕು ಪ್ಯಾಕ್ ಸಿಗರೇಟ್ ಇದ್ದ ಕಾರಣ, ಆ ನೀರಿನಲ್ಲೇ ಈಜಿಕೊಂಡು ಹೋದ ಆತ ಕೊನೆಗೂ ಸಿಗರೇಟ್‌ನೊಂದಿಗೆ ಸುರಕ್ಷಿತವಾಗಿ ಹಿಂದಿರುಗಿದ್ದಾನೆ. ಈ ಪ್ರಸಂಗವನ್ನು ಫೋಟೋಗ್ರಾಫರ್‌ಗಳು ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡಿದ್ದಾರೆ. ಈ ಘಟನೆಯು ಬ್ರಿಟನ್‌ನ ಟೀಸೈಡ್ ಬಳಿಯ ರೆಡ್‌ಕಾರ್ ಬೀಚ್‌ನಲ್ಲಿ ಸಂಭವಿಸಿದೆ. ಸಮುದ್ರದಲ್ಲಿ ಮುಳುಗಿದ್ದ ವ್ಯಾನ್ ಅನ್ನು ಟ್ರಾಕ್ಟರ್ ನೆರವಿನಿಂದ ತೀರಕ್ಕೆ ಎಳೆಯುವ …
Read More »ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷ : ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಬೆಂಗಳೂರು: ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಒಂದು ವರ್ಷದ ಬಿಜೆಪಿ ಸರ್ಕಾರದ ಆಡಳಿತ , ಕಾರ್ಯವೈಖರಿ ಬಗ್ಗೆ ಸಂವಾದ ನಡೆಸಲಿದ್ದು, ಕುಮಾರಸ್ವಾಮಿ ಸಾರ್ವಜನಿಕರ ಜೊತೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಪ್ರಸ್ತುತ ಕೊರೋನಾ ಪರಿಸ್ಥಿತಿ ಯನ್ನು ಸರ್ಕಾರ ನಿಭಾಯಿಸುತ್ತಿರುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಮಧ್ಯರಾತ್ರಿ ನಡು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ..! ಈಗಾಗಲೇ ಕುಮಾರಸ್ವಾಮಿಗೆ ಮೋಸ ಮಾಡಿ ಒಂದು …
Read More »ಲಾಕ್ ಡೌನ್ ವಿಸ್ತರಣೆ ಬಗ್ಗೆ ಮುಖ್ಯ ಮಂತ್ರಿಗಳ ಹೇಳಿಕೆ
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜ್ಯದ ಜನತೆಯನ್ನ ಉದ್ದೇಶಿಸಿ ಇಂದು (ಮಂಗಳವಾರ) ಸಂಜೆ ಭಾಷಣ ಮಾಡಿದರು. ಇದೇ ಮೊದಲ ಬಾರಿ ಸಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕದ ಜನರನ್ನು ಉದ್ದೇಶಿಸಿ ಮಾತನಾಡಿದ್ದು, ನಿರೀಕ್ಷೆಯಂತೆ ಕೊರೋನಾ ವೈರಸ್ ಬಗ್ಗೆ ಮಾತನಾಡಿದರು. ಈ ವೇಳೆ ಕರ್ನಾಟಕ ಜನತೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ದೇಶದೆಲ್ಲೆಡೆ ಕೊರೋನಾ ವೈರಸ್ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕೋವಿಡ್ ನಿಯಂತ್ರಣ ಮಾಡುವುದರಲ್ಲಿ ಪ್ರಾರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದ್ರೆ, ಇತ್ತೀಚಿನ ದಿನಗಳಲ್ಲಿ …
Read More »
Laxmi News 24×7