ಹೊಸದಿಲ್ಲಿ: ರಾಕೆಟ್‍ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ. ದೆಹಲಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್, ನಮ್ಮ ಸಂಸ್ಥೆಯ ಬಾಹ್ಯಾಕಾಶ ಯೋಜನೆಗಳಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲು ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ನಿನ್ನೆಯಷ್ಟೆ ಕೇಂದ್ರ ಸಚಿವ ಸಂಪುಟ ಇಸ್ರೋದ ಬಾಹ್ಯಾಕಾಶ ಯೋಜನೆಗಳು ಮತ್ತು ಇತರ ಚಟುವಟಿಕೆಗಳಲ್ಲಿ ಖಾಸಗಿ ಸಂಸ್ಥೆಗಳು ಸಹಭಾಗಿತ್ವ …
Read More »ಸರ್ಕಾರ ವಿದೇಶೀಯರ ಆಗಮನಕ್ಕೆ ಬ್ರೇಕ್ ಹಾಕಿದೆ. ಆದ್ದರಿಂದಲೇ ವರ್ಕಿಂಗ್ ವೀಸಾಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ.
ವಾಷಿಂಗ್ಟನ್: ತೀವ್ರ ಕೋವಿಡ್-19 ಸೋಂಕಿನಿಂದ ತತ್ತರಿಸಿರುವ ಅಮೆರಿಕದಲ್ಲಿ ಈಗ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಹೀಗಾಗಿ ಅಮೆರಿಕ ಸರ್ಕಾರ ವಿದೇಶೀಯರ ಆಗಮನಕ್ಕೆ ಬ್ರೇಕ್ ಹಾಕಿದೆ. ಆದ್ದರಿಂದಲೇ ವರ್ಕಿಂಗ್ ವೀಸಾಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ. ಈ ವರ್ಷದ ಕೊನೆವರೆಗೂ ವರ್ಕಿಂಗ್ ವೀಸಾಗಳ ಮೇಲೆ ನಿರ್ಬಂಧ ಹೇರಿದ್ದಾರೆ. ತಮ್ಮ ದೇಶಕ್ಕೆ ಬರದಂತೆ ವಿದೇಶೀಯರಿಗೆ ಎಚ್- 1ಬಿ ವೀಸಾ ಸೇರಿದಂತೆ ತಾತ್ಕಾಲಿಕ ಉದ್ಯೋಗ ವೀಸಾಗಳ ಮೇಲೆ ಈ ವರ್ಷಾಂತ್ಯದವರೆಗೂ ನಿರ್ಬಂಧ ಹೇರಿ …
Read More »ಇಎಂಐ ಪಾವತಿಯಿಂದ ವಿನಾಯಿತಿ ಪಡೆದವರಿಗೆ ಸಾಲ ಸೌಲಭ್ಯ?
ಲಾಕ್ಡೌನ್ ಘೋಷಣೆ ಆದ ನಂತರ ಅನೇಕರು ಆರ್ಥಿಕ ಬಿಕ್ಕಟ್ಟು ಎದುರುಸಿದ್ದರು. ಈ ವೇಳೆ ಸಾಮಾನ್ಯರಿಗೆ ಸಹಕಾರಿಯಾಗಲಿ ಎನ್ನುವ ಕಾರಣಕ್ಕೆ ಆರ್ಬಿಐ ಇಎಂಐ ಪಾವತಿ ಮಾಡುವುದರ ಮೇಲೆ ವಿನಾಯಿತಿ ನೀಡಿತ್ತು. ಶಾಂಕಿಂಗ್ ವಿಚಾರ ಏನೆಂದರೆ, ಇಎಂಐ ಪಾವತಿ ಮಾಡದೆ ಇರುವವರಿಗೆ ಈಗ ಸಾಲ ಸೀಗೋದು ಕಷ್ಟವಾಗುತ್ತದೆ ಎನ್ನುವ ಮಾತು ಕೇಳಿ ಬಂದಿದೆ. ಅದು ಹೇಗೆ ಅಂತೀರಾ? ಇಲ್ಲಿದೆ ನೋಡಿ ಮಾಹಿತಿ. ಸಾಲ ನೀಡುವುದಕ್ಕೂ ಮೊದಲು ಬ್ಯಾಂಕ್ನವರು ಸಿಬಿಲ್ ಸ್ಕೋರ್ ನೋಡುತ್ತಾರೆ. ಸರಿಯಾದ …
Read More »ಭಾರತೀಯ ವ್ಯವಹಾರಗಳ ಮೇಲೆ ಚೀನಾ ಹ್ಯಾಕರ್ಸ್ ಗುರಿ!,ಮುಂದಿನ ಹತ್ತು ದಿನಗಳು ಹುಷಾರ್!
ನವದೆಹಲಿ: ಲಡಾಕ್ ಗಡಿಯಲ್ಲಿನ ಉದ್ವಿಗ್ನತೆ ಕಡಿಮೆಯಾಗ್ತಿಲ್ಲ. ಮಾತುಕತೆ ನಡುವೆ ಯುದ್ಧ ಸಿದ್ದತೆಗಳು ನಡೆದಿದ್ದು ಗಾಲ್ವಾನ್ ಗಡಿಯಲ್ಲಿ ಕದನ ಕಾರ್ಮೋಡ ಕವಿದಿದೆ. ಡ್ರ್ಯಾಗನ್ ದೇಶ ದಾಳಿಯ ಆತಂಕ ನಡುವೆ ಈಗ ಭಾರತದಲ್ಲಿ ಚೀನಾ ಮತ್ತೊಂದು ಕೃತ್ಯ ಎಸೆಸಲು ಪ್ಲ್ಯಾನ್ ನಡೆಯುತ್ತಿದೆ ಎನ್ನಲಾಗುತ್ತಿದೆ. ಜೂನ್ 15ರಂದು ಗಾಲ್ವಾನ್ ಗಡಿ ಪ್ರದೇಶದಲ್ಲಿ ಚೀನಾ ಮತ್ತು ಭಾರತೀಯ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟ ಮೇಲೆ ಚೀನಾ ವಿರುದ್ಧ ಆಕ್ರೋಶ ಹೆಚ್ಚಾಗಿದೆ. ಎಲ್ಲೆಡೆ ಚೀನಾ ವಸ್ತುಗಳು ಮತ್ತು …
Read More »ಕೆರೆಗೆ ಕಾರು ಉರುಳಿದರೂ ಪವಾಡ ಸದೃಶವಾಗಿ ಯುವತಿ ಪಾರು ; ಜೀವದಾನ ಮಾಡಿದ ಬಾಲಕಿಯ ವೀಡಿಯೋ ವೈರಲ್
ಉಡುಪಿ: ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಬಿದ್ದು ಸ್ಥಳೀಯ ಉದ್ಯಮಿ ಸಂತೋಷ್ ಶೆಟ್ಟಿ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರ ಜೊತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ಅಪಘಾತದಿಂದ ಬಚಾವಾಗಿದ್ದೇ ಒಂದು ಪವಾಡ. ಆದರೆ, ಈ ಪವಾಡ ನಡೆದದ್ದು ಹೇಗೆ ಅನ್ನೋದು ತಡವಾಗಿ ಬೆಳಕಿಗೆ ಬಂದಿದೆ. ನೀರು ತುಂಬಿದ್ದ ಕೆರೆಗೆ ಕಾರು ಬಿದ್ದಾಗ ಇಬ್ಬರೂ ಮುಳುಗಿದ್ದರು. ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಯುವತಿಯ ಪ್ರಾಣವಾಯು ಇನ್ನೂ ಉಳಿದಿತ್ತು. ಬಾಲಕಿಯೊಬ್ಬಳ ಸಮಯ ಪ್ರಜ್ಞೆಯಿಂದ ಶ್ವೇತಾ ಬದುಕಿ …
Read More »ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು !
ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು ! ಇಗಾ ಮುಂಗಾರು ತುಂತುರು ಮಳೆ ಬಿಟ್ಟು ಬಿಟ್ಟು ಬರುತ್ತಿದ್ದರು ಸಹ ಗ್ರಾಮದ ರೈತ್ ಬಾಂಧವರು ಭೂಮಿ ಸ್ವಚತೆ ಕಾರ್ಯದಲ್ಲಿ ಹಾಗೂ ಬಿತ್ತನೆಯ ಕಾರ್ಯದಲ್ಲಿ ತೊಡಗಿದ್ದು ! ಕೋರೋನಾ ರೋಗದ ಸಂಧರ್ಭದಲ್ಲಿ ಗ್ರಾಮಸ್ಥರು ಮುಖಕ್ಕೆ ಕವಚ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು! ಮುಂಗಾರಾಗಿ ರೈತರು ತಮ್ಮ ತಮ್ಮ ಹೊಲದಲ್ಲಿ …
Read More »ನಾನು ಕ್ರಿಕೆಟಿಗ, ರಾಜಕಾರಣಿ ಅಲ್ಲ: ಸಾನಿಯಾ ಮದುವೆ ಬಗ್ಗೆ ಶೋಯೆಬ್ ಮಲಿಕ್ ಮಾತು!
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದ ಬಳಿಕ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸುತ್ತಲೇ ಬಂದಿದ್ದಾರೆ. ಇದಕ್ಕೆ ಸಾನಿಯ ಕೂಡ ತಕ್ಕ ಉತ್ತರವನ್ನೇ ನೀಡುತ್ತಾ ಇದ್ದಾರೆ. 10 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರೂ ಈಗಲೂ ಎರಡೂ ದೇಶಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತದೆ. ಸದ್ಯ ಈ ಕುರಿತು ಮಾತನಾಡಿರುವ ಮಲಿಕ್, ನಾನು ಸಾನಿಯಾ ಮದುವೆಯಾಗಲು ನಿರ್ಧರಿಸಿದಾಗ ಮೊದಲು ಪ್ರೀತಿಯನ್ನು …
Read More »ಜಗದ್ವಿಖ್ಯಾತಿಯ ಪುರಿ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಅನುಮತಿ
ನವದೆಹಲಿ: ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ. ರಥಯಾತ್ರೆ”ಸೂಕ್ಷ್ಮವಾಗಿ ನಿರ್ವಹಿಸಲು” ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ದೇವಾಲಯ ರಥಯಾತ್ರೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಮತ್ತು ದೇವಾಲಯ ನಿರ್ವಹಣೆ ಮಂಡಳಿಗೆ ವಹಿಸಿದೆ. ಇದರೊಡನೆ ಸುಪ್ರಸಿದ್ದ ಪುರಿ ಜಗನ್ನಾಥ ರಥ ಯಾತ್ರೆಗೆ ಹಾದಿ ಸುಗಮವಾಗಿದೆ. ಆದರೆ ನ್ಯಾಯಾಲಯ ಕೆಲ ಷರತ್ತು ಸಹ ವಿಧಿಸಿದೆ ಭಕ್ತರು ಇಲ್ಲದೆಯೇ ರಥಯಾತ್ರೆ ನಡೆಸಬೇಕು, ರಥಯಾತ್ರೆ ಕೈಂಕರ್ಯದ …
Read More »ಮೊಬೈಲ್ ಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ…..?
ಮೈಸೂರು: ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಬಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ. ಆದಿತ್ಯ(15 )ವರ್ಷದ ಆತ್ಮಹತ್ಯೆಗೆ ಶರಣಾದ ಬಾಲಕ. ಪೋಷಕರು ಆತನ ಅಕ್ಕನಿಗೆ ಹೆಚ್ಚಿನ ಬೆಲೆ ಮೊಬೈಲ್ ಕೊಡಿಸಿದ್ರು. ಇದರಿಂದ ಕೋಪಗೊಂಡ ಆದಿತ್ಯ, ನನಗೂ ಹೊಸ ಪೋನ್ ಕೊಡಿಸುವಂತೆ ಹಠ ಮಾಡಿದ್ದನು. ಪೋಷಕರು ಕೊಡಿಸುವುದಕ್ಕೆ ಹಿಂದೇಟು ಹಾಕಿರುವುದರಿಂದ ವಿಷ ಸೇವಿಸಿದ್ದಾನೆ. ಬಾಲಕನನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ …
Read More »ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್,….
ನವದೆಹಲಿ: ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತನ್ನ ಸ್ಥಾನದ ಸಮರ್ಥನೆ ಮಾಡಿಕೊಳ್ಳಲು ಚೀನಾಕ್ಕೆ ಬಿಡಬಾರದು ಎಂದು ಹೇಳಿದ್ದಾರೆ. ತಪ್ಪು ಮಾಹಿತಿ ಕೊಡುವುದು ರಾಜತಾಂತ್ರಿಕತೆ ಅಥವಾ ನಿರ್ಣಾಯಕ ನಾಯಕತ್ವಕ್ಕೆ ಪರ್ಯಾಯವಲ್ಲ ಎಂದು ಹೇಳಿರುವ ಮಾಜಿ ಪ್ರಧಾನಿ, ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಿಕೊಂಡು ಗಡಿಭಾಗದಲ್ಲಿ ಮೊನ್ನೆ …
Read More »
Laxmi News 24×7