ಇಸ್ಲಾಮಾಬಾದ್: ಹೆಮ್ಮಾರಿ ಕೊರೊನಾ ವೈರಸ್‍ಗೆ ಪಾಕಿಸ್ತಾನದ ಮಾಜಿ ಕ್ರಿಕೆಟರ್ ರಿಯಾಝ್ ಶೇಖ್ (51) ಬಲಿಯಾಗಿದ್ದಾರೆ. ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ನಾಯಕ, ವಿಕೆಟ್‍ಕೀಪರ್ ರಶೀದ್ ಲತೀಪ್ ಅವರು ಟ್ವಿಟ್ ಮೂಲಕ ರಿಯಾಝ್ ಶೇಖ್ ನಿಧನವನ್ನು ಖಚಿತಪಡಿಸಿದ್ದಾರೆ. ಕೋವಿಡ್-19 ಸೋಂಕು ತಗುಲಿದ್ದ ರಿಯಾಝ್ ಶೇಖ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ. ರಿಯಾಝ್ 1987ರಿಂದ 2005ರವರೆಗೆ 43 ಪ್ರಥಮದರ್ಜೆ ಪಂದ್ಯಗಳನ್ನು ಆಡಿದ್ದು, ದೇಶಿ ಟೂರ್ನಿಗಳಲ್ಲಿ …
Read More »ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್‍ವಿತರಣೆ .
ಪಾಟ್ನಾ: 14 ದಿನಗಳ ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್‍ಗಳನ್ನು ಉಚಿತವಾಗಿ ವಿತರಣೆ ಮಾಡಿದೆ. ಕುಟುಂಬ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿ ಬಿಹಾರ ಸರ್ಕಾರ ಈ ಕಾರ್ಯವನ್ನು ಮಾಡುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಬಿಹಾರದಲ್ಲಿ ಕುಟುಂಬ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರ ಹೊಸ ಯೋಜನೆ ಜಾರಿ ಮಾಡಿದೆ. ಅಲ್ಲದೇ ಕೋವಿಡ್-19ಗೂ ಸರ್ಕಾರದ ಹೊಸ ಕಾರ್ಯಕ್ರಮಕ್ಕೂ …
Read More »ಇಂಡೋನೇಷ್ಯಾದ ರಕ್ಷಣಾ ಸಚಿವರು ಕೊರೊನಾ ವೈರಸ್ ಅನ್ನು ಪತ್ನಿಗೆ ಹೋಲಿಕೆ ಮಾಡಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಜಕಾರ್ತಾ: ಇಡೀ ವಿಶ್ವವೇ ಕೊರೊನಾ ವೈರಸ್‍ಗೆ ಬೆಚ್ಚಿಬಿದ್ದಿದೆ. ಆದರೆ ಈ ನಡುವೆ ಇಂಡೋನೇಷ್ಯಾದ ರಕ್ಷಣಾ ಸಚಿವರು ಕೊರೊನಾ ವೈರಸ್ ಅನ್ನು ಪತ್ನಿಗೆ ಹೋಲಿಕೆ ಮಾಡಿ ಹೇಳಿಕೆಯೊಂದನ್ನು ನೀಡಿದ್ದಾರೆ. ಇದೀಗ ಇವರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಇಂಡೋನೇಷ್ಯಾದ ಸಚಿವ ಮೊಹಮ್ಮದ್ ಮಹಫೂದ್ ಎಂ.ಡಿ ಕೊರೊನಾ ವೈರಸ್ ಅನ್ನು ಪತ್ನಿಗೆ ಹೋಲಿಕೆ ಮಾಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಇತ್ತೀಚೆಗೆ ಜಕಾರ್ತದ ಸ್ಥಳೀಯ ವಿಶ್ವವಿದ್ಯಾಲಯವೊಂದು ಆಯೋಜಿಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಎಡವಟ್ಟು ಹೇಳಿಕೆ ನೀಡಿದ್ದಾರೆ. …
Read More »ಇನ್ಮುಂದೆ ನಮಗೂ,(ಡಬ್ಲ್ಯೂಹೆಚ್‍ಒ) ಅದಕ್ಕೂ ಸಂಬಂಧವೇ ಇಲ್ಲ: ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಹೆಚ್‍ಒ) ಜೊತೆಗಿನ ಸಂಬಂಧವನ್ನು ಅಮೆರಿಕ ಕಡಿದುಕೊಂಡಿದ್ದು, ಇನ್ಮುಂದೆ ನಮಗೂ ಅದಕ್ಕೂ ಸಂಬಂಧವೇ ಇಲ್ಲವೆಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ನಾವು ಮನವಿ ಮಾಡಿದ್ದ ಹಾಗೂ ನಮಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಾವು ಅದರ ಜೊತೆಗಿನ ಸಂಬಂಧವನನ್ನು ಕಡಿತಗೊಳಿಸುವುದಾಗಿ ಮಾಧ್ಯಮಗಳ ಮುಂದೆ ಟ್ರಂಪ್ ಹೇಳಿಕೆ ನೀಡಿದ್ದಾರೆ.ಕೊರೊನಾ ತಡೆಗೆ ವಿಶ್ವ ಆರೋಗ್ಯ ಸಂಸ್ಥೆ ವಿಫಲವಾಗಿದೆ …
Read More »ನ್ಯೂಜಿಲೆಂಡ್ ಈಗ ಜಗತ್ತಿನ ಕೊರೊನಾ ಮುಕ್ತವಾದ ಮೊದಲ ದೇಶ…….
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಈಗ ಜಗತ್ತಿನ ಕೊರೊನಾ ಮುಕ್ತವಾದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನ್ಯೂಜಿಲೆಂಡಿನಲ್ಲಿ 1,504 ಪ್ರಕರಣಗಳು(836 ಹೆಂಗಸರು, 668 ಗಂಡಸರು) ಬೆಳಕಿಗೆ ಬಂದಿದ್ದು 22 ಮಂದಿ ಸಾವನ್ನಪ್ಪಿದ್ದಾರೆ. ಇಂದು ಕೊನೆಯ ರೋಗಿ ಆಸ್ಪತ್ರೆಯಿಂದ ಗುಣಮುಖವಾಗುವ ಮೂಲಕ ಕೊರೊನಾ ಮುಕ್ತ ದೇಶವಾಗಿ ಹೊರಹೊಮ್ಮಿದೆ. ಮುಕ್ತವಾಗಿದ್ದು ಹೇಗೆ? ಕೊರೊನಾ ವೈರಸ್ ಹಾವಳಿ ವ್ಯಾಪಕವಾಗಲಿದೆ ಎಂಬುದನ್ನು ಮೊದಲೇ ತಿಳಿದು ಮಾರ್ಚ್ 14ರಂದು ವಿದೇಶದಿಂದ ಬಂದವರು ಕಡ್ಡಾಯವಾಗಿ ಹೋಮ್ ಕ್ವಾರಂಟೈನ್‍ನಲ್ಲಿರಬೇಕೆಂದು ಸರ್ಕಾರ ಸೂಚಿಸಿತ್ತು. …
Read More »ಸೋಮವಾರದಿಂದ ವಿಮಾನ ಟೇಕಾಫ್- ಪ್ರಯಾಣಿಕರ ಕ್ವಾರಂಟೈನ್ ಹೇಗೆ?
ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಕೊರೋನಾ ಅಟ್ಟಹಾಸದ ನಡುವೆ ಸೋಮವಾರದಿಂದ ದೇಶದಲ್ಲಿ ದೇಶಿಯ ವಿಮಾನಗಳ ಹಾರಾಟ ಆರಂಭ ಆಗುತ್ತಿದೆ. ಸರಿಸುಮಾರು 2 ತಿಂಗಳ ಬಳಿಕ ವಿಮಾನಗಳು ಗರಿಬಿಚ್ಚಿ ಹಾರಲಿವೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇ 25ರಿಂದ ಜೂನ್ 30ರವರೆಗೂ ವಿಮಾನಗಳ ಹಾರಾಟಕ್ಕೆ ಮೊದಲ ಹಂತದ ಅನುಮತಿ ನೀಡಲಾಗಿದೆ. ನಾಳೆಯಿಂದ ನಿತ್ಯವೂ 215 ವಿಮಾನಗಳ ಟೇಕ್ ಆಫ್, ಲ್ಯಾಂಡಿಂಗ್ ನಡೆಯಲಿದೆ. ಪ್ರತಿ 10 ನಿಮಿಷಕ್ಕೆ ಒಂದರಂತೆ ವಿಮಾನಗಳು ಟೆಕ್‍ಆಫ್ …
Read More »ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ
ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್ ಸಂದರ್ಭದಲ್ಲಿ ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಂಭತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 152 ಮಂದಿ ಅನಿವಾಸಿ ಭಾರತೀಯರು ಶುಕ್ರವಾರ ಸಂಜೆ 6.50ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಟ್ಟು 152 ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿಯರು, ಹತ್ತು ವರ್ಷದೊಳಗಿನ …
Read More »ಇನ್ಮುಂದೆ 1 ಸೆಕೆಂಡ್‍ಗೆ 1 ಸಾವಿರ ಎಚ್‍ಡಿ ಸಿನಿಮಾ ಡೌನ್‍ಲೋಡ್ ಮಾಡಬಹುದು……
ಸಿಡ್ನಿ: ವಿಡಿಯೋಗಳನ್ನು ಡೌನ್‍ಲೋಡ್ ಮಾಡುವುದೇ ಕಷ್ಟ. ಅದರಲ್ಲೂ ಎಚ್‍ಡಿ ಗುಣಮಟ್ಟದ ವಿಡಿಯೋ ಮತ್ತಷ್ಟು ಕಷ್ಟ. ಆದರೆ ಇನ್ನು ಮುಂದೆ ಒಂದು ಸೆಕೆಂಡಿಗೆ 1 ಸಾವಿರ ಎಚ್‍ಡಿ ಸಿನಿಮಾ ಡೌನ್‍ಲೋಡ್ ಆದರೂ ಅಚ್ಚರಿ ಇಲ್ಲ. ಆಸ್ಟ್ರೇಲಿಯಾದ ಸಂಶೋಧಕರು ಪ್ರತಿ ಸೆಕೆಂಡಿಗೆ 44.2 ಟೆರಾಬೈಟ್ ಡೇಟಾ ಡೌನ್‍ಲೋಡ್ ಮಾಡುವ ಸಾಮಥ್ರ್ಯ ಇರುವ ವಿಶ್ವ ದಾಖಲೆಯ ಇಂಟರ್ನೆಟ್ ವೇಗವನ್ನು ಸಂಶೋಧಿಸಿದ್ದಾರೆ. ಈ ವೇಗದ ಬ್ರಾಡ್‍ಬ್ಯಾಂಡ್ ಸೌಲಭ್ಯ ಲಭ್ಯವಾದರೆ ಬಳಕೆದಾರರಿಗೆ ಒಂದೇ ಸೆಕೆಂಡಿನಲ್ಲಿ 1 ಸಾವಿರ …
Read More »ವಿಮಾನ ಪ್ರಯಾಣಕ್ಕೆ ದರ ನಿಗದಿ – ಬೆಂಗಳೂರಿನಿಂದ ಎಲ್ಲೆಲ್ಲಿಗೆ ಎಷ್ಟು ರೂ.? – ದರಪಟ್ಟಿ ಓದಿ
ನವದೆಹಲಿ: ಕೋವಿಡ್ 19 ನಿಂದಾಗಿ ಆಗಿರುವ ನಷ್ಟವನ್ನು ತುಂಬಲು ವಿಮಾನಯಾನ ಕಂಪನಿಗಳು ದುಬಾರಿ ಟಿಕೆಟ್ ದರವನ್ನು ವಿಧಿಸುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ನಾಗರಿಕ ವಿಮಾನಯಾನ ನಿರ್ದೇಶನಾಲಯ ದರವನ್ನು ನಿಗದಿ ಪಡಿಸಿದೆ. ಲಾಕ್‍ಡೌನ್ ಘೋಷಣೆಯಾದ ಬಳಿಕ ದೇಶಿಯ ವಿಮಾನ ಸಂಚಾರ ಮೇ 25ರಿಂದ ಆರಂಭವಾಗಲಿದೆ. ವಿಮಾನ ಸೇವೆಗೆ ವಿಮಾನಯಾನ ಸಚಿವಾಲಯ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಕಂಪನಿಗಳು ವಿಮಾನದ ಒಳಗಡೆ ಸಾಮಾಜಿಕ ಆಂತರ ಕಾಪಾಡುವ ನಿಟ್ಟಿನಲ್ಲಿ ದುಬಾರಿ ಟಿಕೆಟ್ ದರ …
Read More »ಪಿಒಕೆ ಭಾರತದ ಭಾಗವೆಂದ ಪಾಕ್………….
ಇಸ್ಲಾಮಾಬಾದ್: ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶ ತನಗೆ ಸೇರಿದ್ದು ಎಂದು ಮೊಂಡುತನ ತೋರುತ್ತಿದ್ದ ಪಾಕಿಸ್ತಾನವು ಸದ್ಯ ಭಾರತದ ಭಾಗವೆಂದು ಘೋಷಿಸಿದೆ. ಇತ್ತೀಚೆಗೆ ಭಾರತದ ಹವಾಮಾನ ಬುಲೆಟಿನ್‍ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನವನ್ನು ಸೇರಿಸಿದಾಗ ಪಾಕಿಸ್ತಾನ ಸಾಕಷ್ಟು ಆಘಾತಕ್ಕೊಳಗಾಗಿತ್ತು. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಕುರಿತ ತನ್ನ ಹೇಳಿಕೆಯನ್ನು ಅವರು ಪುನರಾವರ್ತಿಸಲು ಪ್ರಾರಂಭಿಸಿತ್ತು. ಜೊತೆಗೆ ಪಾಕ್ ತಮ್ಮ ಹವಾಮಾನ ಬುಲೆಟಿನ್‍ನಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಕ್ ತಾಪಮಾನವನ್ನು ಹೇಳುವ ಮೂಲಕ ಆಕ್ರೋಶ ಹೊರ ಹಾಕಿತ್ತು. ಆದರೆ ಈಗ ತಾಂತ್ರಿಕ ದೋಷದಿಂದಾಗಿ …
Read More »
Laxmi News 24×7