Breaking News
Home / ಅಂತರಾಷ್ಟ್ರೀಯ (page 30)

ಅಂತರಾಷ್ಟ್ರೀಯ

ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

    ಮೂಡಲಗಿ* ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ಶಿವಬೋಧರಂಗ ಮಠದಂತೆಯೇ ಪ್ರಸಿದ್ಧಿಯಾಗಿದೆ. ಸಿದ್ಧ ಸಂಸ್ಥಾನಮಠದ ಮೂಲ ಪೀಠಾಧಿಪತಿಗಳು ಮೂಡಲಗಿಯಲ್ಲಿ …

Read More »

ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

      *ಮೂಡಲಗಿ:* ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ …

Read More »

ಕೌಜಲಗಿಯಲ್ಲಿಂದು ಜರುಗಿದ ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ*

ಗೋಕಾಕ್- 2019ಮತ್ತು 2021ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ್ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರ ಅಹವಾಲುಗಳಿಗೆ ಸ್ಪಂದಿಸಿ …

Read More »

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ನಿವಾಸದ ಮೇಲೆ CBI ದಾಳಿ

ಜೈಪುರ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್‌ಪುರ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ. ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಅವರನ್ನು ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.   ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ಮತ್ತು ಬಿಜೆಪಿ ನಾಯಕ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.   2007 …

Read More »

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ನಿವಾಸದ ಮೇಲೆ CBI ದಾಳಿ

ಜೈಪುರ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್‌ಪುರ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ. ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಅವರನ್ನು ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು. ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ಮತ್ತು ಬಿಜೆಪಿ ನಾಯಕ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 2007 ಮತ್ತು 2009 …

Read More »

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು.

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು.   ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ವತಿಯಿಂದ ಹಮ್ಮಿಕೊಂಡ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತತ್ವ ಸಿದ್ದಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು …

Read More »

ಸೋನಿಯಾ-ರಾಹುಲ್‌ಗೆ ಸಮನ್ಸ್‌; ಬೆಳಗಾವಿಯಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಯಾದ ಇಡಿಯನ್ನು ದುರ್ಬಳಕೆ ಮಾಡಿಕೊಂಡು ಕೃತಕವಾಗಿ ಸೃಷ್ಟಿಸಿದ ಕೇಸ್‌ ನಲ್ಲಿ ತನಿಖೆ ಕೈಗೆತ್ತಿಕೊಂಡು ಕಾಂಗ್ರೆಸ್‌ ಪಕ್ಷದ ಗೌರವಾನ್ವಿತ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಭೂತಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿ ವಿನಾಕಾರಣ ಕಿರುಕುಳ ನೀಡುತ್ತಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ಆರ್.‌ ಬಿ. ತಿಮ್ಮಾಪುರ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ನಗರ …

Read More »

ಬೆಳಗಾವಿ: ‌ಹುಕ್ಕೇರಿ ಹಿರೇಮಠದಲ್ಲಿ ಉಚಿತ ಯೋಗ ಶಿಬಿರ

ಬೆಳಗಾವಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಬೆಳಗಾವಿ ‌ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಶ್ರೀ ಗುರುಶಾಂತೇಶ್ವರ ಕಲ್ಯಾಣ ಪ್ರತಿಷ್ಠಾನ ಹಿರೇಮಠ ಹುಕ್ಕೇರಿ, ಚಿರಾಯು ಪ್ರಕೃತಿ ಮತ್ತು ಯೋಗ ಚಿಕಿತ್ಸಾಲಯ ಬೆಳಗಾವಿ ‌ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಯೋಗ ಶಿಬಿರ ಹಾಗೂ ಆರೋಗ್ಯ ಸಲಹಾ ಕಾರ್ಯಕ್ರಮ‌ ಶುಕ್ರವಾರದಿಂದ ಐದು‌ ದಿನಗಳ ಕಾಲ ನಡೆಯಲಿದೆ.   ಜೂ.17 ರಿಂದ‌ 21 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಡಾ. ಪದ್ಮನಾಭ ದರ್ಬಾರೆ ಅವರು …

Read More »

ಭರಮಾಪುರಕ್ಕೆ ಬೆಳಕು ನೀಡಿದ ಶಾಸಕ ಸತೀಶ್ ಜಾರಕಿಹೊಳಿ

    ಹುಕ್ಕೇರಿ: ಕಳೆದ ಎಂಟು ವರ್ಷಗಳ ಸತತ ಪ್ರಯತ್ನದಿಂದ ಇಂದು ಭರಮಾಪುರ ಗ್ರಾಮಕ್ಕೆ ವಿದ್ಯುತ್‌ ಸೌಲಭ್ಯ ದೊರಕಿದ್ದು ಸಂತಸ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ತಾಲೂಕಿನ ಭರಮಾಪುರ ಗ್ರಾಮದಲ್ಲಿ ರಾಜೀವ ಗಾಂಧಿ ಗ್ರಾಮೀಣ ವಿದ್ಯುತೀಕರಣ ಮತ್ತು ಬೆಳಕು ಯೋಜನೆಯಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಕೆಲವರಿಗೆ ವಿದ್ಯುತ್‌ ದೊರಕಿದ್ದು, ಇನ್ನೂ …

Read More »

ರಾಹುಲ್ ಗಾಂಧಿ ಮೇಲೆ ಅತ್ಯಾಚಾರ ಮಾಡ್ತಿದ್ದಾರೆ- ನಲಪಾಡ್

ಬೆಂಗಳೂರು: ರಾಹುಲ್ ಗಾಂಧಿ ಅತ್ಯಾಚಾರ ಮಾಡ್ತಿದ್ದಾರೆ ಎಂದು ಕರ್ನಾಟಕ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್​​ ಗಂಭೀರ ಆರೋಪ ಮಾಡಿದ್ದಾರೆ. ಇ.ಡಿ ಅಧಿಕಾರಿಗಳು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿ ಕಾಂಗ್ರೆಸ್ ನಾಯಕರು ಬೃಹತ್ ಜಾಥಾವನ್ನು ನಗರದಲ್ಲಿ ನಡೆಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ ಆಕ್ರೋಶ ಹೊರಹಾಕಿದ ನಲಪಾಡ್​​, ರಾಹುಲ್​​ ಮೇಲೆ ಅತ್ಯಾಚಾರ ಮಾಡ್ತಿದ್ದಾರೆ. ಅತ್ಯಾಚಾರ ಎಂದರೇ ರೇಪ್​​ ಅಲ್ಲ ದೌರ್ಜನ್ಯ. ನಮ್ಮ ಮಾಜಿ ಅಧ್ಯಕ್ಷರ ಮೇಲೆ ದೌರ್ಜನ್ಯ …

Read More »