ಬೆಂಗಳೂರು: ವಿದ್ಯಾರ್ಥಿಗಳು ಬಹಳ ಕಾತರದಿಂದ ನಿರೀಕ್ಷಿಸುತ್ತಿದ್ದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪರೀಕ್ಷೆಯ ದಿನಾಂಕಗಳನ್ನು ಇಂದು ಘೋಷಣೆ ಮಾಡಿದೆ. ಪರೀಕ್ಷೆ – 1ರ ವೇಳಾಪಟ್ಟಿ ಇದಾಗಿದ್ದು, 10ನೇ ತರಗತಿ ಪರೀಕ್ಷೆ ಮಾರ್ಚ್ 21 ರಿಂದ ಆರಂಭಗೊಂಡು ಏಪ್ರಿಲ್ 4 ಕ್ಕೆ ಅಂತ್ಯಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 …
Read More »ಬಿಬಿಎಂಪಿ ಕಚೇರಿಯಲ್ಲಿ ಉಪ ಲೋಕಾಯುಕ್ತರಿಂದ ಪರಿಶೀಲನೆ
ಬೆಂಗಳೂರು: ರಾಜಧಾನಿಯ ಬಿಬಿಎಂಪಿಯ ಬಹುತೇಕ ಆರ್‌ಓ ಮತ್ತು ಎಆರ್‌ಓ ಕಚೇರಿಗಳಲ್ಲಿ ಕಾರ್ಯನಿರ್ವಹಣೆಯಲ್ಲಿ ಲೋಪಗಳು ಕಂಡುಬಂದ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿಯ 54 ಕಚೇರಿಗಳ ಮೇಲೆ ಶುಕ್ರವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ಇಬ್ಬರು ಉಪ ಲೋಕಾಯುಕ್ತರು ದಾಳಿಯಲ್ಲಿ ಭಾಗಿಯಾಗಿ, ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆ ತೆಗೆದುಕೊಂಡರು. ಶುಕ್ರವಾರ ಮಧ್ಯಾಹ್ನದಿಂದ ನಡೆಯುತ್ತಿದ್ದ ತಪಾಸಣೆಯು ಹಲವು ಕಚೇರಿಗಳಲ್ಲಿ ತಡರಾತ್ರಿವರೆಗೂ …
Read More »ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿಯಾದ ಶಿವಮೊಗ್ಗದ ಸಫಾ ಬೈತುಲ್ ಮಾಲ್ ಸಂಸ್ಥೆ
ಶಿವಮೊಗ್ಗ : ನಮ್ಮ ನಿಮ್ಮ ಮನೆಯಲ್ಲಿ ಉಪಯೋಗಕ್ಕೆ ಬಾರದೇ ಇರುವ ವಸ್ತುಗಳನ್ನು ಗುಜರಿಗೆ ಹಾಕುತ್ತೇವೆ. ಆದರೆ, ಇಂತಹ ಗುಜರಿ ವಸ್ತುಗಳನ್ನು ಪಡೆದ ಶಿವಮೊಗ್ಗದ ಸಂಸ್ಥೆಯೊಂದು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಅಡಿಪಾಯ ಹಾಕುವ ಮೂಲಕ ಸಮಾಜ ಸೇವೆ ಸಲ್ಲಿಸುತ್ತಿದೆ. ಶಿವಮೊಗ್ಗದ ಇಲಿಯಾಜ್ ನಗರದಲ್ಲಿನ ಸಫಾ ಬೈತುಲ್ ಮಾಲ್ ಸಂಸ್ಥೆಯು ಗುಜರಿ ವ್ಯಾಪಾರ ನಡೆಸಿ, ಇದರಲ್ಲಿ ಬಂದ ಹಣದಲ್ಲಿ ಮಹಿಳೆಯರಿಗೆ ಉಚಿತವಾಗಿ ಟೈಲರಿಂಗ್ ಹೇಳಿ ಕೊಡುವ ಜೊತೆಗೆ ಕಂಪ್ಯೂಟರ್ ಶಿಕ್ಷಣವನ್ನೂ ನೀಡುತ್ತಿದೆ. …
Read More »ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದರ ಪ್ರಜ್ವಲ್ ವಿರುದ್ಧ ಆರೋಪ ನಿಗದಿ ಮಾಡದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ನಿಗದಿಗೂ ಮುಂಚಿನ ವಾದ ಪ್ರತಿವಾದ ಆಲಿಸಬಹುದಾಗಿದೆ. ಆದರೆ, ಆರೋಪ ನಿಗದಿ ಮಾಡಬಾರದು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ. ಪ್ರಜ್ವಲ್ ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ಎಲ್ಲಾ ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ …
Read More »ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,
ಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ ಉದ್ಯೋಗಿಗಳಿಗೆ ಜನವರಿ 26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಬೋನಿಗೆ ಬೀಳದೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಕ್ಯಾಮೆರಾದಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಆದರೆ ಕಾರ್ಯಾಚರಣೆ ವೇಳೆ ಇನ್ನೂ ಪತ್ತೆಯಾಗದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. …
Read More »ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಇತರ ಆರೋಪಿಗಳು ಇಂದು ನ್ಯಾಯಾಲಯದೆದುರು ಹಾಜರ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳು ಷರತ್ತಿನ ಪ್ರಕಾರ ಇಂದು (ಶುಕ್ರವಾರ) ಬೆಂಗಳೂರಿನ ಸಿಸಿಹೆಚ್ 57ರ ನ್ಯಾಯಾಲಯದ ಮುಂದೆ ಹಾಜರಾದರು. ದರ್ಶನ್, ಪವಿತ್ರಾ ಗೌಡ, ಪ್ರದೋಶ್, ನಾಗರಾಜ್ ಸೇರಿದಂತೆ ಎಲ್ಲ 17 ಮಂದಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಆರೋಪಿಗಳಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ, ಎಲ್ಲಾ ಆರೋಪಿಗಳು ನ್ಯಾಯಾಧೀಶರೆದುರು ಹಾಜರಾಗಿದ್ದಾರೆ. ಆರೋಪಿಗಳ ಹಾಜರಿ ಪಡೆದುಕೊಂಡ ನ್ಯಾಯಾಧೀಶರು …
Read More »ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳೆಲ್ಲಿ? ‘ಪೊಲೀಸರು ಪತ್ತೆ ಹಚ್ತಾರೆ’- ಜಿ.ಪರಮೇಶ್ವರ್
ಬೆಂಗಳೂರು: ”ಶರಣಾಗತರಾದ ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮವದವರ ಜೊತೆ ಮಾತನಾಡಿದ ಅವರು, ಸರ್ಕಾರವು ನಕ್ಸಲರಿಗೆ ಪರಿಹಾರ ಮತ್ತು ಪುನರ್ ವಸತಿ ಕಲ್ಪಿಸುವ ವಿಚಾರದಲ್ಲಿ ತೋರಿದ ಮುತುವರ್ಜಿಯನ್ನು ಶಸ್ತ್ರಾಸ್ತ್ರ ಹುಡುಕುವುದರಲ್ಲಿ ತೋರುತ್ತಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ”ನಾವು ಮಾಡುವ ಕೆಲಸ ಮಾಡುತ್ತೇವೆ. ಕಾಡಲ್ಲಿ ಎಲ್ಲಿ ಶಸ್ತ್ರಾಸ್ತ್ರ ಇಟ್ಟಿದ್ದಾರೆ …
Read More »ಗುಂಡಿನ ದಾಳಿಗೊಳಗಾದ ಕಾರು, ಉದ್ಯಮಿ ಪ್ರಪುಲ್ ಬಾಲಕೃಷ್ಣ ಪಾಟೀಲ
ಬೆಳಗಾವಿ: ಕಾರಿನಲ್ಲಿ ಹೋಗುತ್ತಿದ್ದ ಉದ್ಯಮಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ಬೆಳಗಾವಿಯ ಗಣೇಶಪುರದ ಹಿಂದು ನಗರದ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ, ಶಾಹುನ ನಗರದ ನಿವಾಸಿ ಪ್ರಪುಲ್ ಬಾಲಕೃಷ್ಣ ಪಾಟೀಲ (30) ಎಂಬವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಕಾರಿನ ಗ್ಲಾಸ್ಗೆ ಗುಂಡು ತಗುಲಿದ್ದು, ಅದೃಷ್ಟವಶಾತ್ ಪ್ರಪುಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಗಾಜು ಪ್ರಪುಲ್ ಅವರ ತಲೆ, ಮುಖಕ್ಕೆ ಸಿಡಿದು ಗಾಯವಾಗಿದೆ. …
Read More »ಭೀಕರ ರಸ್ತೆ ಅಪಘಾತ.. ಬೆಳಗಾವಿ ಯೋಧ ರವಿ ಯಲ್ಲಪ್ಪ ಹುತಾತ್ಮ
ಬೆಳಗಾವಿ: ನಾಗಾಲ್ಯಾಂಡ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸೇನಾ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ. ಸೇನಾ ವಾಹನದಿಂದ ಯೋಧರು ಕೆಳಗೆ ಜಿಗಿದಿದ್ದು, ಯೋಧರ ಮೇಲೆಯೇ ವಾಹನ ಪಲ್ಟಿಯಾಗಿದೆ. ಸೇನಾ ವಾಹನದ ಈ ದುರಂತದಲ್ಲಿ ಬೆಳಗಾವಿ ಯೋಧ ರವಿ ಯಲ್ಲಪ್ಪ ತಳವಾರ (35) ಹುತಾತ್ಮರಾಗಿದ್ದಾರೆ. ರವಿ ಯಲ್ಲಪ್ಪ ತಳವಾರ ಅವರು ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದವರು. ರವಿ ಯಲ್ಲಪ್ಪ ತಳವಾರ ಅವರಿದ್ದ ಸೇನಾ ವಾಹನ ರಸ್ತೆ ಮಾರ್ಗವಾಗಿ ಹೊರಟಿದ್ದಾಗ …
Read More »ಅಣ್ಣಾವ್ರ ಬಗ್ಗೆ ಸುದೀಪ್ ಅಂದು ಹೇಳಿದ್ದ ಮಾತು ಇಂದು ವೈರಲ್, ಕಾಮೆಂಟ್ಸ್ ಸುರಿಮಳೆ!
ಕಿಚ್ಚ ಸುದೀಪ್ ಅವರು ಡಾ ರಾಜ್‌ಕುಮಾರ್ () ಬಗ್ಗೆ ಮಾತನ್ನಾಡಿದ್ದಾರೆ. ಅವರು ಅಣ್ಣಾವ್ರ ಬಗ್ಗೆ ಅದೇನು ಹೇಳಿದ್ದಾರೆ ಅನ್ನೋದು ಇಲ್ಲಿದೆ. ಜೊತೆಗೆ, ಅವರು ಹೇಳಿದ್ದು ಯಾವಾಗಲೋ ಇರಬಹುದು. ಆದರೆ ಅದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗಿದ್ದರೆ ಕನ್ನಡದ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಮೇರುನಟ ಡಾ ರಾಜ್‌ಕುಮಾರ್ ಬಗ್ಗೆ ಅದೇನು ಹೇಳಿದ್ದಾರೆ? ಬಹುಶಃ ನೀವು ಊಹಿಸಿರಲಿಕ್ಕೂ ಸಾಧ್ಯವಿಲ್ಲ. ಅಂತಹ ಮಾತನ್ನು ಸುದೀಪ್ ಹೇಳಿದ್ದಾರೆ. ಅದಕ್ಕೆ ತುಂಬಾ …
Read More »
Laxmi News 24×7