Breaking News

ಅಂತರಾಷ್ಟ್ರೀಯ

ಶಿವಮೊಗ್ಗ ಶಂಕರ ವಲಯ ವ್ಯಾಪ್ತಿಯಲ್ಲಿ ಗಂಧದ ಮರಗಳ ಕಳ್ಳತನ ಜೋರಾಗಿ ನಡೆಯುತ್ತಿದೆ.

ಶಿವಮೊಗ್ಗ ತಾಲೂಕಿನ ಬಿಕೋನಹಳ್ಳಿ ಬಳಿ ಅಧಿಕಾರಿಗಳು ಹೇಮಣ್ಣನ ಬೈಕ್ ಪರಿಶೀಲನೆ ಮಾಡಿದ್ದು, ಬೈಕ್ ಮತ್ತು ಏಳು ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧ ಮರದ ತುಂಡುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಎತ್ತ ನೋಡಿದರೂ ಬೆಲೆಬಾಳುವ ಮರಗಳು ಕಣ್ಣಿಗೆ ಬೀಳುತ್ತವೆ. ಇಂತಹ ಅರಣ್ಯದಲ್ಲಿ ಮರಗಳ ಚೋರರ ಹಾವಳಿ ಬಲು ಜೋರಾಗಿದೆ. ಅದರಲ್ಲೂ ಬೆಲೆಬಾಳುವ ಶ್ರೀಗಂಧದ ಮರ ಹಂತ ಹಂತವಾಗಿ ಅರಣ್ಯದಿಂದ ಕಣ್ಮರೆಯಾಗುತ್ತಿವೆ. ಹೀಗಾಗಿ ಇದಕ್ಕೆ ಅಂತ್ಯ ಹಾಡಲು ಮುಂದಾದ ಅರಣ್ಯ ಇಲಾಖೆ ಅಧಿಕಾರಿಗಳ …

Read More »

ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು.

ರಾಮನಗರ: ನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಬಳಿ ಶನಿವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದರು.   ರಾಯರದೊಡ್ಡಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಅಪಘಾತ ನಡೆದಿದ್ದು, ರಾಮನಗರ ಬಾಲಗೇರಿಯ‌ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತಪಟ್ಟವರು. ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 …

Read More »

ಪಶು ಸಹಾಯವಾಣಿಗೆ ಒಂದೇ ತಿಂಗಳಲ್ಲಿ 9000 ಕರೆ

ಚಿತ್ರದುರ್ಗ (ಆ.29): ಪ್ರತಿ ಜಿಲ್ಲೆಯಲ್ಲಿ 60ರಿಂದ 100 ಎಕರೆ ಜಾಗದಲ್ಲಿ ಸರ್ಕಾರಿ ಗೋ ಶಾಲೆಗಳನ್ನು ನಿರ್ಮಿಸಲಾಗುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ತಿಳಿಸಿದರು.   ನಗರದ ಹೊರವಲಯದಲ್ಲಿ ಇರುವ ಆದಿಚುಂಚನಗಿರಿ ಗೋಶಾಲೆಗೆ ಶನಿವಾರ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದ 30 ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಈಗಾಗಲೇ ಕ್ಯಾಬಿನೆಟ್‌ ಅನುಮೋದನೆ ದೊರೆತಿದೆ. ಎಲ್ಲ ಜಿಲ್ಲಾಧಿಕಾರಿಗಳಿಗೂ ಗೋಮಾಳ ಜಾಗವನ್ನು ಗುರುತಿಸಿ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ …

Read More »

ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ?

ಬೆಂಗಳೂರು (ಆ.29): ಕೋವಿಡ್‌ ಸೋಂಕು ಹಿನ್ನೆಲೆಯಲ್ಲಿ ಗಣೇಶ ಹಬ್ಬದ ವೇಳೆ ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುವುದರ ಜತೆ 40-50 ಮಂದಿ ಸೇರಿ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮನವಿ ಮಾಡಿದ್ದಾರೆ. ಮಸೀದಿ, ಚಚ್‌ರ್‍ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ಅದರಂತೆ ಹಿಂದೂಗಳ ಹಬ್ಬಕ್ಕೆ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.   ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ? …

Read More »

8ನೇ ತರಗತಿ ಮಕ್ಕಳಿಗೆ ಉಚಿತ ಬೈಸಿಕಲ್‌ ಯೋಜನೆಯನ್ನು ಸರ್ಕಾರ 2020-21ನೇ ಸಾಲಿನಲ್ಲಿ ಸ್ಥಗಿತಗೊಳಿಸಿತ್ತು.

ಬೆಂಗಳೂರು (ಆ.29: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬೈಸಿಕಲ್‌ ಭಾಗ್ಯವಿಲ್ಲ. ಹಣಕಾಸು ಕೊರತೆ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ಉಚಿತ ಸೈಕಲ್‌ ಯೋಜನೆ ಅನುಷ್ಠಾನ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯವನ್ನು 2020ರ ಮಾ ರ್ಚ್ನಿಂದ ಕಾಡುತ್ತಿರುವ ಕೋವಿಡ್‌ನಿಂದಾಗಿ ಮಕ್ಕಳ ಶಾಲಾ ಶಿಕ್ಷಣ ಮಾತ್ರವಲ್ಲದೆ, ಅವರಿಗಾಗಿ ಜಾರಿಯಲ್ಲಿದ್ದ ಕೆಲ ಯೋಜನೆಗಳಿಗೂ ಹಣಕಾಸು ಕೊರತೆಯಿಂದ ಕೊಕ್ಕೆ ಬಿದ್ದಿದೆ. 2006-07ರ ಬಿಜೆಪಿ- ಜೆಡಿಎಸ್‌ …

Read More »

ಸಾಹುಕಾರ ನೀಗೆ ಸಿಕ್ಕಿದೆ ಹೊಸ ಅಸ್ತ್ರ ಗೇಮ್ ಒಂದೇ ಬಾಕಿ…!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಮುನ್ನವೇ ದೆಹಲಿಗೆ ತಮ್ಮ ತಂಡದ ಶಾಸಕರೊಂದಿಗೆ ತರೆಳಿರುವ ಮಾಜಿ ಸಚಿವ ರಮೇಶ್​​ ಜಾರಕಿಹೊಳಿ, ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ವರಿಷ್ಠರ ಮೇಲೆ ಒತ್ತಡ ಹಾಕಲಿದ್ದಾರೆ. ಶಾಸಕರಾದ ಸಹೋದರ ಬಾಲಚಂದ್ರ ಜಾರಕಿಹೊಳಿ, ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್ ಜೊತೆ ದೆಹಲಿಯಲ್ಲೇ ರಮೇಶ್​​ ಜಾರಕಿಹೊಳಿ ಠಿಕಾಣಿ ಹೂಡಿದ್ದರು. ತಮ್ಮ ಬೆಂಬಲಿಗ ಶಾಸಕರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಬೆಳಗಾವಿ ಪಾಲಿಕೆ …

Read More »

ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಯೇ ಕಾಂಗ್ರೆಸ್ ಧ್ಯೇಯ; ಪಕ್ಷದ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ

    ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಮಹಾನಗರ ಪಾಲಿಕೆ ಚುನಾವಣೆಯ ಪಕ್ಷದ ಅಭ್ಯರ್ಥಿಗಳ ಪರ ಇಂದು (ಶನಿವಾರ) ಸಂಜೆ ಕಾಂಗ್ರೆಸ್ ಮುಖಂಡರು ಬಿರುಸಿನ ಪ್ರಚಾರ ನಡೆಸಿದರು.   ಬೆಳಗಾವಿ ಕಾಂಗ್ರೆಸ್ ಚುನಾವಣಾ ವೀಕ್ಷಕರಾದ ಗುಜರಾತ್ ರಾಜ್ಯಸಭಾ ಸದಸ್ಯೆ ಅಮೀ ಯಜನಿಕ್ , ಮಹಾರಾಷ್ಟ್ರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸತ್ಯಜೀತ್ ಪಾಂಬೆ ಪಾಟೀಲ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ …

Read More »

ಮೈಸೂರು ಅತ್ಯಾಚಾರ ಪ್ರಕರಣ: ಹಿರಿಯ ಪೊಲೀಸ್‌ ಅಧಿಕಾರಿಗಳ ಜೊತೆ ಸಚಿವ ಆರಗ ಸಭೆ

ಮೈಸೂರು: ಸಾಮೂಹಿಕ ಅತ್ಯಾಚಾರದಂತಹ ಗಂಭೀರ ಪ್ರಕರಣ ನಡೆದಿರುವ ಹೊತ್ತಿನಲ್ಲಿ ಪೊಲೀಸ್‌ ಅಧಿಕಾರಿಗಳೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಮಧ್ಯಾಹ್ನದವರೆಗೂ ಯಾವುದೇ ಸಭೆ ನಡೆಸಿರಲಿಲ್ಲ. ನಂತರ ಮಧ್ಯಾಹ್ನ 1 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಆರಂಭಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಹಾಗೂ ಚಿನ್ನದಂಗಡಿ ದರೋಡೆ ಪ್ರಕರಣ ಕುರಿತು ಮೊದಲಿಗೆ ಚರ್ಚೆ ಆರಂಭಿಸಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಕುರಿತೂ ಅಸಮಾಧಾನ ಹೊರಹಾಕಿದ್ದಾರೆ. ಗುರುವಾರ ರಾತ್ರಿ ನಗರಕ್ಕೆ ಬಂದ ಸಚಿವರು, ಶುಕ್ರವಾರ …

Read More »

ಗ್ಯಾಂಗ್‌ ರೇಪ್‌ ಹಿನ್ನೆಲೆಯಲ್ಲಿ ಮೈಸೂರಿಗೆ ಬಂದು ಸುತ್ತಾಟದಲ್ಲೇ ಕಾಲ ಕಳೆದ ಸಚಿವ!

ಮೈಸೂರು: ಸಾಮೂಹಿಕ ಅತ್ಯಾಚಾರದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಮೈಸೂರಿಗೆ ಬಂದು ವಾಸ್ತವ್ಯ ಹೂಡಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದರು. ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಕರ್ನಾಟಕ ಪೊಲೀಸ್‌ ಅಕಾಡೆಮಿಯಲ್ಲಿ ಸುತ್ತಾಟ ನಡೆಸಿದರು. ಅಲ್ಲಿ ಫೈರಿಂಗ್ ಸ್ಟಿಮಿಲೇಟರ್‌ನ್ನು ಉದ್ಘಾಟಿಸಿ, ತಾವೂ ಫೈರಿಂಗ್‌ ನಡೆಸಿ ಖುಷಿಪಟ್ಟರು. ಮಾದರಿ ಪೊಲೀಸ್ ಠಾಣೆ, ಪರೀಕ್ಷಾರ್ಥಿಗಳ ಕೊಠಡಿ, ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಅತ್ಯಾಚಾರ ಪ್ರಕರಣ ಹಾಗೂ …

Read More »

ಬೆಳಗಾವಿ: ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 385 ಅಭ್ಯರ್ಥಿಗಳು ಉಳಿದಿದ್ದಾರೆ.

ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 385 ಅಭ್ಯರ್ಥಿಗಳು ಉಳಿದಿದ್ದಾರೆ.   58 ವಾರ್ಡ್‌ಗಳ ಪೈಕಿ ಬಹುತೇಕ ಕಡೆಗಳಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ. ಕೆಲವೆಡೆ ತ್ರಿಕೋನ ಪೈಪೋಟಿ ಕಂಡುಬಂದಿದೆ. ಶುಕ್ರವಾರದಿಂದ ಪ್ರಚಾರ ಕಣ ರಂಗೇರಲಿದೆ.       ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ 468 ಮಂದಿಯ ನಾಮಪತ್ರಗಳು ಕ್ರಮಬದ್ಧವಾಗಿದ್ದವು. ಉಮೇದುವಾರಿಕೆ ವಾಪಸ್ ಪಡೆಯಲು ಗುರುವಾರ ಕೊನೆಯ ದಿನವಾಗಿತ್ತು. ಒಟ್ಟು 83 ಮಂದಿ …

Read More »