ಲಕ್ನೋ, ಸೆಪ್ಟೆಂಬರ್ 01: ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಶಂಕಿತ ಡೆಂಗ್ಯೂನಿಂದ ಕಳೆದ ಹತ್ತು ದಿನದಲ್ಲೇ 53 ಮಂದಿ ಸಾವನ್ನಪ್ಪಿದ್ದು ಈ ಪೈಕಿ 45 ಮಂದಿ ಮಕ್ಕಳಾಗಿದ್ದಾರೆ. ನಗರ ಒಂದರಲ್ಲೇ 53 ಮಂದಿ ಶಂಕಿತ ಡೆಂಗ್ಯೂಗೆ ಬಲಿಯಾಗಿರುವ ಕಾರಣ ಸರ್ಕಾರದ ವಿರುದ್ದ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು ಕಾರಣವಾಗಿ ಹೊರಹೊಮ್ಮಿದೆ. ಫಿರೋಜಾಬಾದ್ನ ಮೆಡಿಕಲ್ ಕಾಲೇಜಿನಲ್ಲಿ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ಫಿರೋಜಾಬಾದ್ನ ಮೆಡಿಕಲ್ ಕಾಲೇಜಿನಲ್ಲಿ ಹಲವಾರು ಮಕ್ಕಳು ಜ್ವರದಿಂದ ಬಳಲುತ್ತಿದ್ದು ಪೋಷಕರು …
Read More »ಮುಂದಿನ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅವರನ್ನು ಕಣಕ್ಕಿಸಲು ಸುಮಲತಾ ಪ್ಲ್ಯಾನ್
ಮಂಡ್ಯ: ಚುನಾವಣೆಯಲ್ಲಿ ಕೊಟ್ಟ ಮಾತನ್ನು ಸಂಸದೆ ಸುಮಲತಾ ಅಂಬರೀಶ್ ಉಳಿಸಿಕೊಂಡಿದ್ದು, ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಲೋಕಸಭಾ ಚುನಾವಣೆ ಗೆದ್ದ ವೇಳೆ ಸುಮಲತಾ ಅವರು ಮಂಡ್ಯ ಜಿಲ್ಲೆಯಲ್ಲಿಯೇ ಮನೆ ನಿರ್ಮಾಣ ಮಾಡಿ, ಇಲ್ಲೇ ಇರುತ್ತೇನೆ ಎಂದು ಹೇಳಿದ್ದರು. ಅದರಂತೆ ಇದೀಗ ಇಲ್ಲಿಯೇ ಮನೆ ನಿರ್ಮಾಣ ಶುರು ಮಾಡಿದ್ದಾರೆ. ಮಂಡ್ಯ-ಮದ್ದೂರು ನಡುವಿನ ಹನಕೆರೆ ಗ್ರಾಮದಲ್ಲಿ ಸುಮಲತಾ ಸ್ವಂತ ಮನೆ ನಿರ್ಮಿಸಲಿದ್ದು, ತಮ್ಮ ತನ್ನ ಆಪ್ತ …
Read More »ಮುಂದಿನ ಆವೃತ್ತಿಯಲ್ಲಿ 74 ಪಂದ್ಯಗಳು ಇರಲಿವೆ ಎಂದು ತಿಳಿದುಬಂದಿದೆ.
ಮುಂಬೈ(ಸೆ.01) ಮುಂಬರುವ 2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ 2 ಹೊಸ ಫ್ರಾಂಚೈಸಿಗಳು ಸೇರ್ಪಡೆಗೊಳ್ಳುವ ಸಾಧ್ಯತೆಯಿದ್ದು, ಇದರಿಂದ ಬಿಸಿಸಿಐ 5,000 ಕೋಟಿ ರುಪಾಯಿ ಆದಾಯ ಗಳಿಸುವ ನಿರೀಕ್ಷೆಯಲ್ಲಿದೆ. ಒಂದೊಮ್ಮೆ ಹೊಸ ಫ್ರಾಂಚೈಸಿಗಳು ಅಸ್ತಿತ್ವಕ್ಕೆ ಬಂದಲ್ಲಿ, ಮುಂದಿನ ಆವೃತ್ತಿಯಲ್ಲಿ 10 ತಂಡಗಳು ಪಂದ್ಯಾವಳಿ ಸ್ಪರ್ಧೆಗಿಳಿಯಲಿವೆ. 15ನೇ ಆವೃತ್ತಿಯ ಐಪಿಎಲ್ಗೆ ಪಾಲ್ಗೊಳ್ಳಲು ಇಚ್ಚಿಸುವವರು 10 ಲಕ್ಷ ಪಾವತಿ ಮಾಡಿ ಯಾವುದೇ ಕಂಪನಿ ಬಿಡ್ನ ದಾಖಲೆಗಳನ್ನು ಖರೀದಿಸಬಹುದಾಗಿದೆ. ಈ ಮೊದಲು ಹೊಸ ತಂಡಗಳಿಗೆ 1,700 …
Read More »ಅಫ್ಘಾನಿಸ್ತಾನದ ರಕ್ಷಣೆಗೆ ನೀಡಿದ್ದ ಉಪಕರಣಗಳು ಉಗ್ರರ ಕೈವಶವಾಗದಂತೆ ನೋಡಿಕೊಂಡಿದೆ.
ವಾಷಿಂಗ್ಟನ್(ಸೆ.01): ತಾಲಿಬಾನ್ ಉಗ್ರರ ಜತೆ ಮಾಡಿಕೊಂಡಿದ್ದ ಒಪ್ಪಂದಕ್ಕೆ ಅನುಗುಣವಾಗಿ ನಿಗದಿತ ಗಡುವಿನೊಳಗೆ ಅಫ್ಘಾನಿಸ್ತಾನವನ್ನು ತೊರೆದಿರುವ ಅಮೆರಿಕ, ಅದಕ್ಕೂ ಮುನ್ನ ಹಲವು ಮಿಲಿಟರಿ ಉಪಕರಣಗಳನ್ನು ನಾಶ ಮಾಡಿ ಜಾಗ ಖಾಲಿ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ತನ್ಮೂಲಕ ತಾನು ಅಫ್ಘಾನಿಸ್ತಾನದ ರಕ್ಷಣೆಗೆ ನೀಡಿದ್ದ ಉಪಕರಣಗಳು ಉಗ್ರರ ಕೈವಶವಾಗದಂತೆ ನೋಡಿಕೊಂಡಿದೆ. ಇದರಿಂದ ತಾಲಿಬಾನ್ಗೆ ಭಾರಿ ಹಿನ್ನಡೆಯಾಗಿದೆ. ಕಾಬೂಲ್ನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 73 ವಿಮಾನಗಳನ್ನು ಅಮೆರಿಕ ಸಿಬ್ಬಂದಿ ನಿಷ್ಕಿರಯಗೊಳಿಸಿದ್ದಾರೆ. …
Read More »ಸಿಎಂ ಬೊಮ್ಮಾಯಿ ಬಿಜೆಪಿ ಪಂಜರದಲ್ಲಿದ್ದಾರಾ?: ಕಟೀಲ್ ಹೇಳಿದ್ದಿಷ್ಟು
ಬೆಂಗಳೂರು(ಸೆ.01): ಬಜೆಟ್ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಕಾಲಮಿತಿಯಲ್ಲಿ ಅನುಷ್ಠಾನವಾಗದೆ ವಿಳಂಬವಾಗುತ್ತಿರುವುದಕ್ಕೆ ಸಿಡಿಮಿಡಿಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಸರಿಯಾಗಿ ತೊಡಗಿಸಿಕೊಳ್ಳದಿರುವುದಕ್ಕೆ ಗರಂ ಆದರು. ಜನರ ಕಲ್ಯಾಣಕ್ಕಾಗಿ ಬಜೆಟ್ನಲ್ಲಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತೇವೆ. ಅವುಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನು ಹೊಣೆ ಮಾಡಿ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ದೂರುಗಳು …
Read More »ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸೂಚನೆ
ನವದೆಹಲಿ (ಸೆ.01): ಬಹುನಿರೀಕ್ಷಿತ ಕರ್ನಾಟಕದ ಮೇಕೆದಾಟು ಯೋಜನೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಯೋಜನೆಗೆ ತಮಿಳುನಾಡು, ಕೇರಳ ಸೇರಿ ಎಲ್ಲಾ ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರುವ ಸಾಧ್ಯತೆ ಇದೆ. ಹಾಗೆಯೇ ತಮಿಳುನಾಡು ಕೈಗೊಂಡಿರುವ ಗುಂಡಾರ್ ನದಿ ನೀರು ಜೋಡಣೆಗೆ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಇನ್ನು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಾಧಿಕಾರದ ಅಧ್ಯಕ್ಷ …
Read More »ಅಮೆರಿಕ ಸೇನೆ ಅಷ್ಘಾನಿಸ್ತಾನದಿಂದ ಹೊರಟಿರುವ ಬೆನ್ನಲ್ಲೇ,
ಲಂಡನ್(ಸೆ.01): ಅಮೆರಿಕ ಸೇನೆ ಅಷ್ಘಾನಿಸ್ತಾನದಿಂದ ಹೊರಟಿರುವ ಬೆನ್ನಲ್ಲೇ, ಇತ್ತ ತಾಲಿಬಾನ್ ಉಗ್ರರು ಈ ಹಿಂದೆ ಅಮೆರಿಕ ನೇತೃತ್ವದ ನ್ಯಾಟೋ ಪಡೆಗಳ ಪರ ಕೆಲಸ ಮಾಡಿದ್ದಾರೆ ಎನ್ನಲಾದ ಆರೋಪಿಗಳ ಮನೆಗಳ ಮೇಲೆ ತಾವೇ ಶರಣಾಗಬೇಕು. ಇಲ್ಲದಿದ್ದರೆ ನಿಮಗೆ ಸಾವಿನ ಶಿಕ್ಷೆ ನೀಡಬೇಕಾಗುತ್ತದೆ ಎಂಬ ಭಯಾನಕವಾದ ‘ಬೆದರಿಕೆ ಪತ್ರ’ ಅಂಟಿಸುತ್ತಿದ್ದಾರೆ. ಹಿಂದೆ ತಾಲಿಬಾನ್ ಉಗ್ರರನ್ನು ಶೋಧಿಸಲು ಅಮೆರಿಕದ ಪಡೆಗಳಿಗೆ ನೆರವು ನೀಡಿದ್ದಾರೆ ಎನ್ನಲಾದ ಆರೋಪಿಗಳನ್ನು ಉದ್ದೇಶಿಸಿ ಈ ಪತ್ರದಲ್ಲಿ ನೀವು ನ್ಯಾಟೋ ಪಡೆಗಳ …
Read More »ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ನೇತೃತ್ವದಲ್ಲಿ ನಗರದ ಕೆಲವೆಡೆ 112 ಸಹಾಯವಾಣಿ
ಮಹಾನಗರ: ಮಂಗಳೂರು ನಗರ ಪೊಲೀಸರು ಶನಿವಾರ “ತುರ್ತು ಸಹಾಯವಾಣಿ 112′ ಮೂಲಕ ಮಹಿಳೆಯರಿಂದ ಕರೆಗಳನ್ನು ಸ್ವೀಕರಿಸಿ ತ್ವರಿತ ವಾಗಿ ಸ್ಥಳಕ್ಕೆ ತೆರಳಿ ಸ್ಪಂದಿಸಿದರು. “ಮಹಿಳೆಯರ ಸುರಕ್ಷೆಗಾಗಿ ಒಂದು ದಿನ’ ಎಂಬ ಈ ಅಭಿಯಾನದಲ್ಲಿ ಸಬ್ಇನ್ಸ್ಪೆಕ್ಟರ್ ದರ್ಜೆಗಿಂತ ಮೇಲಿನ ದರ್ಜೆಯ ಪೊಲೀಸ್ ಅಧಿಕಾರಿಗಳು, ಮಹಿಳಾ ಪೊಲೀಸ್ ಅಧಿ ಕಾರಿ, ಸಿಬಂದಿಯನ್ನೊಳಗೊಂಡ 100ಕ್ಕೂ ಅಧಿಕ ಪೊಲೀಸರು ಪಾಲ್ಗೊಂಡಿ ದ್ದರು. ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಈ ವಿಶೇಷ ಅಭಿಯಾನ ನಡೆಯಿತು. …
Read More »ಶಿವಮೊಗ್ಗ ಶಂಕರ ವಲಯ ವ್ಯಾಪ್ತಿಯಲ್ಲಿ ಗಂಧದ ಮರಗಳ ಕಳ್ಳತನ ಜೋರಾಗಿ ನಡೆಯುತ್ತಿದೆ.
ಶಿವಮೊಗ್ಗ ತಾಲೂಕಿನ ಬಿಕೋನಹಳ್ಳಿ ಬಳಿ ಅಧಿಕಾರಿಗಳು ಹೇಮಣ್ಣನ ಬೈಕ್ ಪರಿಶೀಲನೆ ಮಾಡಿದ್ದು, ಬೈಕ್ ಮತ್ತು ಏಳು ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧ ಮರದ ತುಂಡುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಎತ್ತ ನೋಡಿದರೂ ಬೆಲೆಬಾಳುವ ಮರಗಳು ಕಣ್ಣಿಗೆ ಬೀಳುತ್ತವೆ. ಇಂತಹ ಅರಣ್ಯದಲ್ಲಿ ಮರಗಳ ಚೋರರ ಹಾವಳಿ ಬಲು ಜೋರಾಗಿದೆ. ಅದರಲ್ಲೂ ಬೆಲೆಬಾಳುವ ಶ್ರೀಗಂಧದ ಮರ ಹಂತ ಹಂತವಾಗಿ ಅರಣ್ಯದಿಂದ ಕಣ್ಮರೆಯಾಗುತ್ತಿವೆ. ಹೀಗಾಗಿ ಇದಕ್ಕೆ ಅಂತ್ಯ ಹಾಡಲು ಮುಂದಾದ ಅರಣ್ಯ ಇಲಾಖೆ ಅಧಿಕಾರಿಗಳ …
Read More »ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು.
ರಾಮನಗರ: ನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಬಳಿ ಶನಿವಾರ ರಾತ್ರಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದರು. ರಾಯರದೊಡ್ಡಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಅಪಘಾತ ನಡೆದಿದ್ದು, ರಾಮನಗರ ಬಾಲಗೇರಿಯ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತಪಟ್ಟವರು. ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 …
Read More »