ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಸಾಧನಾ ಸಮಾವೇಶದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಹಿಂದಿನ ಹೋರಾಟ ನೆನಪುಗಳನ್ನು ನೆನದು ಕಣ್ಣೀರಿಟ್ಟಿದ್ದಾರೆ. ನಿಮ್ಮ ಅಪ್ಪಣೆ ಪಡೆದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಹೋರಾಟದ ದಿನಗಳನ್ನು ಭಾಷಣದ ವೇಳೆ ನೆನಪಿಸಿದ ಸಿಎಂ ಬಿಎಸ್‌ವೈ ಅವರು, ನಾನೊಬ್ಬನೇ ವಿಧಾನಸಭೆಯೊಳಗೆ ಹೋರಾಡಿದ್ದೇನೆ. ನನ್ನ ಕರ್ತವ್ಯವನ್ನ ಮಾಡಿದ್ದೇನೆ.. ನನಗೆ …
Read More »ನೊಂದ ಕುಟುಂಬಗಳಿಗೆ ಆಸರೆಯಾಗೋಣ: ರಾಹುಲ್ ಜಾರಕಿಹೊಳಿ ನಿರ್ಗತಿಕರ ಸಾತ್ವಾಂನ ಹೇಳಿದ ಯುವ ನಾಯಕ ರಾಹುಲ್
ಗೋಕಾಕ: ರಣ ಭೀಕರ ಮಳೆಗೆ ಘಟಪ್ರಭಾ ನದಿಯ ತೀರದ ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದ್ದು, ಪ್ರವಾಹ ಪೀಡಿತ ಗ್ರಾಮಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ, ರವಿವಾರ ಪರಿಸ್ಥಿತಿ ಅವಲೋಕಿಸಿದರು. ಅರಭಾವಿ ವಿಧಾನ ಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಡಿಬಟ್ಟಿ, ಚಿಗದೊಳ್ಳಿ, ಜಾಕ್ವೆಲ್ ಗೌಡನ್ ಕ್ರಾಸ್ ಮೆಳವಂಕಿ, ಕಲಾರ್ಕೊಪ್ಪ, ಹಡಗಿನಾಳ, ತಳಕಟ್ನಾಳ , ಉದಗಟ್ಟಿ ಗ್ರಾಮದ ಗಂಜಿ ಕೇಂದ್ರಗಳಲ್ಲಿರುವ ನಿರ್ಗತಿಕರನ್ನು ಭೇಟಿ ಮಾಡಿ, …
Read More »ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ …
Read More »ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …
Read More »ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು …
Read More »ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ
ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ. ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …
Read More »ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್‍ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ 16 ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್‍ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ …
Read More »ನೂತನ ಶಾಲಾ ಕೊಠಡಿಗಳ ಅಡಿಗಲ್ಲು ಕಾರ್ಯಕ್ರಮಕ್ಕೆ ಭೂಮಿ ಪೂಜೆ
ಘಟಪ್ರಭಾ: ಸಮೀಪದ ಕೊಟಬಾಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯನ್ನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟಿಸಿದರು. ಎರಡು ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಎಸ್‍ಡಿಎಂಸಿ ಅಧ್ಯಕ್ಷ ರಾಜಕುಮಾರ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಇಒ ಮೋಹನ ದಂಡಿನ, ಬಿಸಿಯೂಟ ಸಹ ನಿರ್ದೇಶಕ ಹಿರೇಮಠ, ಸಿಆರ್‍ಪಿಗಳಾದ ವಿ.ಎಸ್.ರಜಪೂತ, ಪ್ರಧಾನ ಗುರು ಎಸ್.ಬಿ.ಹೊಳೆಪ್ಪಗೋಳ ಸೇರಿದಂತೆ ಎಸ್ ಡಿಎಂಸಿ ಸದಸ್ಯರು,ಶಿಕ್ಷಣ ಪ್ರೇಮಿಗಳು ಹಾಗೂ …
Read More »50 ಲಕ್ಷ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ಹೊಂದುತ್ತಿರುವುದು ಪ್ರಶಂಸನೀಯ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಶತಮಾನೋತ್ಸವ ಆಚರಿಸಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಈ ಭಾಗದಲ್ಲಿ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡುತ್ತ ಬರುತ್ತಿದೆ. ಈ ಹಿಂದೆ 8 ಕೋಟಿ ರೂ.ಗಳಷ್ಟಿದ್ದ ಪತ್ತನ್ನು 15 ಕೋಟಿ ರೂ.ಗಳವರೆಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಕಲ್ಲೋಳಿ ಪಿಕೆಪಿಎಸ್‍ಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರ …
Read More »ಒಲಿಂಪಿಕ್ಸ್ ಆರಂಭಕ್ಕೆ ಐದು ದಿನ ಬಾಕಿ ಒಟ್ಟು 44 ಮಂದಿಗೆ COVID ಸೋಂಕು
ಟೋಕಿಯೊ: ಜಾಗತಿಕ ಕ್ರೀಡಾ ಕೂಟವಾದ ಒಲಿಂಪಿಕ್ಸ್ ಆರಂಭಕ್ಕೆ ಐದು ದಿನ ಬಾಕಿ ಉಳಿದಿರುವಂತೆ ಒಲಿಂಪಿಕ್ಸ್ ಕ್ರೀಡಾ ಗ್ರಾಮದಲ್ಲಿ ಮೊದಲ ಕೋವಿಡ್ ಪ್ರಕರಣ ದಾಖಲಾಗಿದೆ. ಶನಿವಾರ ಕೂಟದ ಸಂಘಟಕರು ಈ ಕುರಿತು ಮಾಹಿತಿ ನೀಡಿದ್ದಾರೆ. “ಕ್ರೀಡಾ ಗ್ರಾಮದಲ್ಲಿ ಒಬ್ಬ ವ್ಯಕ್ತಿಗೆ ಸ್ಕ್ರೀನಿಂಗ್ ಪರೀಕ್ಷೆ ವೇಳೆ ಕೋವಿಡ್ ದೃಢಪಟ್ಟಿದೆ. ಇದು ಇಲ್ಲಿ ಪತ್ತೆಯಾದ ಮೊದಲ ಪ್ರಕರಣವಾಗಿದೆ’ ಎಂದು ಟೋಕಿಯೊ ಒಲಿಂಪಿಕ್ಸ್ ಸಂಘಟನಾ ಸಮಿತಿಯ ವಕ್ತಾರ, ಮಾಸ ಟಕಾಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸೋಂಕಿತ ವ್ಯಕ್ತಿಯ …
Read More »