Breaking News

ಅಂತರಾಷ್ಟ್ರೀಯ

ಸಮಾಜದಲ್ಲಿ ಜೂಜು, ಡಾರ್ಕ್‌ ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು.

ಬೆಂಗಳೂರು: ಸಮಾಜದಲ್ಲಿ ಜೂಜು, ಡಾರ್ಕ್‌ ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್‌ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು …

Read More »

ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್‌ಎಸ್‌ಎಲ್‌ಸಿ ತೇಗರ್ಡೆಯಾಗಿದ್ದಾಳೆ.

ಮಂಗಳೂರು, (ಆ.10): ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್‌ಎಸ್‌ಎಲ್‌ಸಿ ತೇಗರ್ಡೆಯಾಗಿದ್ದಾಳೆ. ಅಚ್ಚರಿ ಎನ್ನಿಸಿದರೂ ಸತ್ಯ.   ಕೇವಲ ಐದನೇ ತರಗತಿ ವಿದ್ಯಾರ್ಹತೆ ಪಡೆದು ಮಂಗಳೂರು ವಿವಿ ಕಾಲೇಜಿನ ತಾತ್ಕಾಲಿಕ ಅಟೆಂಡರ್ ಆಗಿರುವ ಜಯಶ್ರೀ, ಇದೀಗ ಮೊದಲ ಪ್ರಯತ್ನದಲ್ಲೇ ಎಸ್‌ಎಸ್‌ಎಲ್‌ಸಿ ಪಾಸ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಲ್ಲದೇ 35 ವರ್ಷಗಳ ಬಳಿಕ ಮತ್ತೆ ವಿದ್ಯಾರ್ಥಿನಿಯಾಗಿ ಗೆದ್ದಿದ್ದಾರೆ.   ಒಂದೇ ಜಿಲ್ಲೆಯ ನಾಲ್ವರಿಗೆ 625ಕ್ಕೆ 625 ಅಂಕ …

Read More »

ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, ಕಾರು, ಬೈಕ್‍ಗಳ ಸಂಚಾರಕ್ಕೆ ಮಾತ್ರ ರಸ್ತೆ ಸಂಚಾರವನ್ನು ಆರಂಭಿಸಲಾಗಿದೆ ಎಂದು ಹೇಳಿದರು. …

Read More »

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಪ್ರವಾಹ ಬಾಧಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಸಾರ್ವಜನಿಕ ದೂರುಗಳು ಬರದ ರೀತಿಯಲ್ಲಿ …

Read More »

ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಧನಸಹಾಯ ಒದಗಿಸಿದ ಪ್ರಿಯಾಂಕಾ ಜಾರಕಿಹೊಳಿ

    ಗೋಕಾಕ: ನೇಪಾಳದಲ್ಲಿ ಅಗಸ್ಟ್ 10 ರಂದು ನಡೆಯಲಿರುವ 19 ವರ್ಷದೊಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ದೇಶವನ್ನು ಪ್ರತಿನಿಧಿಸಲು ಹೊರಟಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೆಳವಂಕಿ ಗ್ರಾಮದ ಸಿದ್ದಪ್ಪ ಹಂಜಿ ಹಾಗೂ ತಪಸಿ ಗ್ರಾಮದ ಮಲ್ಲಪ್ಪ ನಾಯಕ ಎಂಬ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗೂ ಪ್ರಯಾಣ ಖರ್ಚುನ್ನು ನೀಡಿ ಸಹಾಯ ಒದಗಿಸಿದರು.   ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ …

Read More »

ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.

ಗೋಕಾಕ : ಯುಕ್ರೇನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಿನಿಪುಟ್ ಬಾಲ್ ಸ್ಪರ್ಧೆಯಲ್ಲಿ ಇಂಡಿಯನ್ ಟೀಂ ಗೆ ಆಯ್ಕೆಯಾದ ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.   ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಸೂಚನೆಯಂತೆ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ ನೀಡಿ, …

Read More »

ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.  

*ದಿನಾಂಕ 01:08:21 ರಿಂದ 10:08:21 ರ ವರೆಗೆ* ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.   *ಇ-ಕೆವೈಸಿ ಎಂದರೇನು?* ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ನ ಜೋಡಣೆಯ ಉದ್ದೇಶದಿಂದ ಪಡೆಯುವ ಬೆರಳಚ್ಚು ಆಗಿದೆ.   *ಇ-ಕೆವೈಸಿ ಏಕೆ ಮಾಡಿಕೊಳ್ಳಬೇಕು?* ಒಂದು ವೇಳೆ ಇ-ಕೆವೈಸಿ ಆಗದ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕುವ ಅಥವಾ ಪಡಿತರ ನಿಲ್ಲಿಸುವ ಸಂಭವವಿರುವುದರಿಂದ …

Read More »

ಯಾವುದೇ ಸಂಘದ ಅಭಿವೃದ್ಧಿಯಲ್ಲಿ ಅಧ್ಯಕ್ಷರು, ಅಧಿಕಾರಿಗಳ ಪಾತ್ರ ಪ್ರಮುಖವಾಗಿರುತ್ತದೆ: ಸತೀಶ ಜಾರಕಿಹೊಳಿ

        ಗೋಕಾಕ: ಸಮೀಪದ ಸತ್ತಿಗೇರಿ ತೋಟದಲ್ಲಿ ಇಂದು ಹಮ್ಮಿಕೊಂಡಿದ್ದ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು.   ನಂತರ ಮಾತನಾಡಿದ ಅವರು, ಸಂಘದವರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕುರಿಗಾಹಿಗಳು ಹಾಗೂ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಹೇಳಿದರು.   ಯಾವುದೇ ಸಂಘ …

Read More »

ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ.

ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ. ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ 54 ಜನ ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದರು. ಎನ್​ಡಿಆರ್​ಎಫ್​ ತಂಡ ಹಾಗೂ ಸ್ಥಳೀಯ ಪೊಲೀಸರು ಜನರನ್ನು ರಕ್ಷಿಸಿ, ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ಕೃಷ್ಣಾ ನದಿಯಿಂದ ಸವದಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಏಕಾಏಕಿ ನೀರು ಬಂದಿದ್ದರಿಂದ ಗ್ರಾಮಸ್ಥರು ಸಿಲುಕಿಕೊಂಡಿದ್ದರು. ಉತ್ತರ ಕನ್ನಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿರುವ …

Read More »

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವೃದ್ಧ.

      ಬೆಳಗಾವಿ : ಬೆಳಗಾವಿಯ ಹಳೆ ಗಾಂಧಿನಗರದ ಬಳಿಯಿರುವ ರೈಲು ಹಳಿಯ ಮೇಲೆ ವೃದ್ಧನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.     ಬೆಳಗಾವಿಯ ಹಳೆ ಗಾಂಧಿನಗರ ಹೈವೆ ಸೇತುವೆ ಹತ್ತಿರ ಇರುವ ರೈಲು ಹಳಿಯ ಮೇಲೆ ಆ ವೃದ್ಧ ಬೆಳಿಗ್ಗೆಯಿಂದ ಕುಳಿತಿದ್ದನಂತೆ, ಮಧ್ಯಾಹ್ನ 3:15 ರ ವೇಳೆಗೆ ಬೆಳಗಾವಿ – ಶೇಡಬಾಳ ರೈಲು ಸಾಂಬ್ರಾ ಕಡೆಯಿಂದ ಬರುತ್ತಿದ್ದಂತೆಯೇ ತಕ್ಷಣ ಹಳಿಯ …

Read More »