Breaking News

ಅಂತರಾಷ್ಟ್ರೀಯ

ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರ ಎಲ್ಲ ಸೌಲಭ್ಯ ಒದಗಿಸಲಿ: ಯುವ ನಾಯಕ ರಾಹುಲ್ ಜಾರಕಿಹೊಳಿ

ಬೆಳಗಾವಿ : ಬೀದಿಬದಿ ವ್ಯಾಪಾರಿಗಳು ಮಳೆ, ಗಾಳಿ, ಬಿಸಿಲು ಲೆಕ್ಕಿಸದೇ ರಸ್ತೆ ಬದಿಯಲ್ಲಿ ಕುಳಿತು ವ್ಯಾಪಾರ ಮಾಡುತ್ತಾರೆ, ಅವರ ಆರೋಗ್ಯ, ಬದುಕು, ಭವಿಷ್ಯದ ಬಗ್ಗೆ ಸರ್ಕಾರ ವಿಚಾರ ಮಾಡಿ ಸೌಲಭ್ಯ ಒದಗಿಸಬೇಕು, ಮೊದಲಿನಿಂದಲೂ ನಮ್ಮ ತಂದೆಯವರು, ಬಡವರ ಶೋಷಿತರ ಪರವಾಗಿ ನಿಂತವರು, ನಮ್ಮ ಕುಟುಂಬ ಹಾಗೂ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರು ಶ್ರಮಿಕ ಬೀದಿಬದಿ ವ್ಯಾಪಾರಿಗಳ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ನಗರದಲ್ಲಿ …

Read More »

ಗೋಕಾಕ : ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮತದಾರರ ಗುರುತಿನ ಚೀಟಿ ವಿತರಿಸುತ್ತಿರುವ ಗಣ್ಯರು.

ಗೋಕಾಕ: ನಮ್ಮ ದೇಶದ ಮತದಾರರನ್ನು ಸಬಲೀಕರಣ, ಜಾಗೃಕ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುರ ನಾಗರಿಕರಾಗಲು ಅವರಿಗೆ ಸಹಕರಿಸುವುದು ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಹೇಳಿದರು. ಬುಧವಾರದಂದು ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ತಾಲೂಕಾಡಳಿತ, ತಾಪಂ, ನಗರಸಭೆ, ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು ಆಶ್ರಯದಲ್ಲಿ ಹಮ್ಮಿಕೊಂಡ 13ನೇ ರಾಷ್ಟ್ರೀಯ ಮತದಾರರ …

Read More »

ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ*

  *ಮೂಡಲಗಿ*: ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ ರಡ್ಡಿ ಬಳಗ ಹಮ್ಮಿಕೊಂಡಿದ್ದ ದಾರ್ಶನಿಕ ಕವಿ, ಮಹಾಯೋಗಿ ವೇಮನರ 611ನೇ ಜಯಂತ್ಯುತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜ ಬಾಂಧವರು ಈ ಸಮುದಾಯ …

Read More »

ಗೋಕಾಕ : ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

ಗೋಕಾಕ :  ಗೋಕಾಕ ತಾಲೂಕಿನ ವಾಲ್ಮೀಕಿ ನಗರದಲ್ಲಿ ಕುಡಿದ ಅಮಲಿನಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ಅಮಲಿನಲ್ಲಿ ತಿಲಕ ಎಂಬಾತ ಚೇತನ ಎಂಬ ಯುವಕನನ್ನು ಕೊಲೆ ಮಾಡಿದ್ದಾನೆ.   ಗೋಕಾಕ ಫಾಲ್ಸ್ ನ ಸಮೀಪವಿರುವ ವಾಲ್ಮೀಕಿ ನಗರದಲ್ಲಿ ಇಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಕುಡಿದ ಅಮಲಿನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.   ಗೋಕಾಕ ಗ್ರಾಮೀಣ ಪೊಲೀಸ್ …

Read More »

ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*   *ನಾಗನೂರ*- ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊದಲಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಅಭಿಮಾನವನ್ನು ಜೊತೆಗೆ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿಗಳ ಒತ್ತಾಯದ ಮೇರೆಗೆ ಬ್ಯಾಟಿಂಗ್ ಮಾಡುವ ಮೂಲಕ ನೆರೆದ ಸಭಿಕರನ್ನು ರಂಜಿಸಿದರು. ಹಿರಿಯ ಸಹಕಾರಿ ಬಿ.ಆರ್. ಪಾಟೀಲ ಹಾಗೂ ಮಾಜಿ ಸಚಿವ ಆರ್. …

Read More »

ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

  *ವಡೇರಹಟ್ಟಿ (ಮೂಡಲಗಿ)-* ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಅರಭಾವಿ ಬಿಜೆಪಿ ಮಂಡಲದಿಂದ ವಿಜಯ ಸಂಕಲ್ಪ ಅಭಿಯಾನದ ನಿಮಿತ್ಯ ಹಮ್ಮಿಕೊಂಡಿದ್ದ ಮತಗಟ್ಟೆ ಶಕ್ತಿಕೇಂದ್ರ, ಪೇಜ್ …

Read More »

1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.

ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಅರಭಾವಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ಮಠದ …

Read More »

ಅಂಧ ಮಹಿಳೆಯರ ಕ್ರಿಕೆಟ್ 9ರಿಂದ

ಬೆಂಗಳೂರು: ಭಾರತ ಅಂಧರ ಕ್ರಿಕೆಟ್ ಸಂಸ್ಥೆ ಮತ್ತು ಸಮರ್ಥನಂ ಟ್ರಸ್ಟ್‌ ಫಾರ್ ದಿ ಡಿಸೇಬಲ್ಸ್‌ ಸಹಯೋಗದೊಂದಿಗೆ ಇದೇ 9ರಿಂದ 13ರವರೆಗೆ ಇಂಡಸ್‌ಇಂಡ್ ಬ್ಯಾಂಕ್ ಮಹಿಳಾ ರಾಷ್ಟ್ರೀಯ ಟಿ20 ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. 16 ರಾಜ್ಯಗಳ ತಂಡಗಳು ಸ್ಪರ್ಧಿಸಲಿವೆ. ಬರ್ಮಿಂಗ್ ಹ್ಯಾಮ್ ನ 2023ರ ವಿಶ್ವ ಅಂಧರ ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡವನ್ನೂ ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಗುವುದು. ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮರ್ಥನಂ ಟ್ರಸ್ಟ್ ಸಂಸ್ಥಾಪಕ …

Read More »

ಪೋಷಕರು ಮಾಡಿದ ಸಾಲಕ್ಕೆ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ (Assault on boy) ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೂಸೂರಿನಲ್ಲಿ ಡಿಸೆಂಬರ್‌ನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಕನಕರಾಯಪ್ಪ, ರಾಜೇಶ್ವರಿ ಸೇರಿ 6 ಜನರು, 14 ವರ್ಷದ ಬಾಲಕನನ್ನು ಗಿಡಕ್ಕೆ ಕಟ್ಟಿ ಥಳಿಸಿದ್ದಾರೆ. ಬಾಲಕನ ಮೈಮೇಲೆ ಹಾಗೂ ಗುಪ್ತಾಂಗಕ್ಕೂ ಗಾಯವಾಗಿದೆ. ಕನಕರಾಯಪ್ಪ ಎಂಬುವರು ಮಂಜುಳಾ ಮಡಿವಾಳ ಎಂಬುವರಿಗೆ …

Read More »

ಮತ್ತೆ ಸ್ಯಾಟಲೈಟ್‌ ಫೋನ್‌ ಸದ್ದು: ಕರ್ನಾಟಕ-ಕೇರಳ ಗಡಿಯಲ್ಲಿ ಸಿಗ್ನಲ್‌ ಪತ್ತೆ

ಮಂಗಳೂರು (ಜ.07): ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಹಾಗೂ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಸ್‌ ಉಗ್ರಗಾಮಿ ಸಂಘಟನೆ ಜತೆ ನಂಟು ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದ ಬೆನ್ನಲ್ಲೇ ರಾಜ್ಯದ ಗಡಿ ಭಾಗದಲ್ಲಿ ಗುರುವಾರ ಸ್ಯಾಟಲೈಟ್‌ ಫೋನ್‌ ಸಿಗ್ನಲ್‌ ಪತ್ತೆಯಾಗಿದೆ. ನೆರೆಯ ಕೇರಳ ರಾಜ್ಯದ ಕಾಸರಗೋಡು, ಪಾಣಾಜೆ ಗಡಿ ಪ್ರದೇಶಗಳಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆ ಆಗಿರುವುದು ಪತ್ತೆಯಾಗಿದೆ. ಕೇಂದ್ರ ಗುಪ್ತಚರ ಇಲಾಖೆಯು ಸ್ಯಾಟಲೈಟ್‌ …

Read More »