ಗೋಕಾಕ : ಸಾಮಾಜಿಕ ಅಂತರ ಕಾಯ್ದುಕೊಂಡು ವಾರದ ಸಂತೆಯನ್ನು ನಡೆಸಲು ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿರುವ ಮಾರುಕಟ್ಟೆಯನ್ನು ವಾಲ್ಮೀಕಿ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡಲಾಗಿದೆ. ಮೈದಾನದಲ್ಲಿ ಸಾಮಾಜಿ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಯ ಸಿಬ್ಬಂದಿ ಗುರುತು( ಮಾರ್ಕಿಂಗ್ ) ಮಾಡಿದ್ದಾರೆ. ಅಂಗಡಿಗಳಿಗೆ ಹಾಗೂ ಗ್ರಾಹಕರಿಗೆ ಮಾರ್ಕಿಂಗ್ ಮಾಡಲಾಗಿದ್ದು, ಆ ವ್ಯಾಪ್ತಿಯಲ್ಲೇ ನಿಂತು ವ್ಯಾಪಾರ- ವಹಿವಾಟು ನಡೆಸಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮಾರ್ಕಿಂಗ್ ಮಾಡಲಾಗಿದ್ದು, ಅಲ್ಲಿಯೇ ನಿಂತು ತರಕಾರಿಗಳನ್ನು ಖರೀದಿ ಮಾಡಬೇಕಾಗಿದೆ. …
Read More »ಅದಾನಿಗೆ ಆಘಾತ, ಯುಎಸ್ ಷೇರುಪೇಟೆಯಿಂದ ಹೊರಕ್ಕೆ
ನ್ಯೂಯಾರ್ಕ್: ಗಲಭೆ ಪೀಡಿತ ಮ್ಯಾನ್ಮಾರ್ ದೇಶದ ಮಿಲಿಟರಿ ಪಡೆ ಜೊತೆ ಸಂಪರ್ಕ, ವ್ಯವಹಾರ ಹೊಂದಿರುವ ಕಾರಣಕ್ಕೆ ಭಾರತ ಮೂಲದ ಅದಾನಿ ಅವರ ಅದಾನಿ ಪೋರ್ಟ್ಸ್ ಸಂಸ್ಥೆಯನ್ನು ನ್ಯೂಯಾರ್ಕ್ ಷೇರುಪೇಟೆ ಪಟ್ಟಿಯಿಂದ ಹೊರ ಹಾಕಲಾಗಿದೆ. ಅದಾನಿ ಬಂದರುಗಳು ಮತ್ತು ಭಾರತದ ವಿಶೇಷ ಆರ್ಥಿಕ ವಲಯ ಲಿಮಿಟೆಡ್ ಸಂಸ್ಥೆಗೆ ಯುಎಸ್ ಷೇರುಪೇಟೆ ಎಸ್ & ಪಿ ಡೌ ಜೋನ್ಸ್ ಭಾರಿ ಆಘಾತ ನೀಡಿದೆ. ಮಾನವ ಹಕ್ಕು ಉಲ್ಲಂಘನೆ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಳುಗೆಡವಿರುವ …
Read More »IPL 2021 Live Score, MI vs RCB: ಆರ್ಸಿಬಿ ಶುಭಾರಂಭ: ಟಾಸ್ ಗೆದ್ದ ವಿರಾಟ್ ಕೊಹ್ಲಿ
ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಸೀಸನ್ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ನ್ನು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅತ್ತ 6ನೇ ಬಾರಿ ಚಾಂಪಿಯನ್ ಪಟ್ಟದ ಮೇಲೆ ಕಣ್ಣಿಟ್ಟಿರುವ ಮುಂಬೈ ಇಂಡಿಯನ್ಸ್ಗೆ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸುವ …
Read More »ಗೋಕಾಕ ನಗರದಲ್ಲಿ ಕೊರೋನಾ ಲಸಿಕೆ ಕಾರ್ಯಕ್ರಮ
ಗೋಕಾಕ ನಗರದಲ್ಲಿ ಇಂದು ಆರೋಗ್ಯ ಇಲಾಖೆ ಇವರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋರೋನಾ ಲಸಿಕೆಯನ್ನು ನೀಡಲಾಯಿತು. ನಗರದ ಜನರಿಗೆ ಅಂಗನವಾಡಿ ಕೇಂದ್ರ ಮತ್ತು ದೇವಸ್ಥಾನಗಳಲ್ಲಿ ಲಸಿಕೆಯನ್ನು ಪಡೆಯಲು ಅವಕಾಶ ಒದಗಿಸಿದರು. ಕೊರೋನಾವನ್ನು ನಿಯಂತ್ರಿಸಲು ಈ ಲಸಿಕೆಯನ್ನು ಪಡಯುವುದು ಅತ್ಯಾವಶ್ಯಕವಾಗಿದೆ. ಆದುದರಿಂದ ಸರಕಾರದವರು ಹಳ್ಳಿಯ ಜನರ ಊರುಗಳಿಗೆ ತಲುಪಿಸಿದ್ದಾರೆ. ಇದರ ಪ್ರಯೋಜನವನ್ನು 45 ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬೇಕು.ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಅಂಗನವಾಡಿ ಕಾರ್ಯಕರ್ತೆ ಆಶಾ ಕಾರ್ಯ …
Read More »ಬಸವರಾಜ ಖಾನಪ್ಪನ್ನವರ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳ ಭೇಟಿ ನೀಡಿ ಆಶೀರ್ವಾದ ಪಡೆದು ಮಾತನಾಡಿದರು
ಕನ್ನಡಪರ ಹೋರಾಟಗಾರ ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ ಅವರಿಗೆ ಈ ಬಾರಿಯ ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಗೆಲ್ಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಕೊಡಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದರು. ಸೋಮವಾರದಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ ಅಭ್ಯರ್ಥಿ ಬಸವರಾಜ ಖಾನಪ್ಪನ್ನವರ ಅವರೊಂದಿಗೆ ನಗರದ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳು ಆರ್ಶಿವಾದ ಪಡೆದು ಮತನಾಡಿದರು …
Read More »ದೂರದೃಷ್ಟಿ ಹಾಗೂ ಅಭಿವೃದ್ದಿ ಯೋಜನೆಗಳು ನಮ್ಮ ತಂದೆ ಗೆಲುವಿಗೆ ಸಹಕಾರಿಯಾಗಲಿದೆ- ಯುವನಾಯಕಿ ಪ್ರಿಯಾಂಕಾ ಜಾರಕಿಹೊಳಿ
ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಕರ್ತರು ಕಾಂಗ್ರೆಸ್ ಗೆ ಸೇರ್ಪಡೆ.. ಗೋಕಾಕ: ದೂರದೃಷ್ಟಿ ಹಾಗೂ ಅಭಿವೃದ್ದಿ ಪರ ಯೋಜನೆಗಳು ಮತ್ತು ಜನಪರ ಕಾರ್ಯಗಳು ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಪ್ರಿಯಾಂಕಾ ಜಾರಕಿಹೊಳಿ ಆಶಾಭಾವನೆಯನ್ನು ವ್ಯಕ್ತಪಡಿಸಿದರು. ಶನಿವಾರದಂದು ಸಂಜೆ ನಗರದ ಉಪ್ಪಾರ ಗಲ್ಲಿಯಲ್ಲಿ ಲೋಕಸಭಾ ಉಪಚುನಾವಣೆಯ ನಿಮಿತ್ಯ ತಮ್ಮ ತಂದೆಯ ಪರವಾಗಿ ಮತಯಾಚನೆ ಮಾಡುತ್ತಾ ಮಾತನಾಡಿದ ಅವರು, ಮಾತುಗಿಂತ ಕೃತಿ …
Read More »ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವರು ..!
ಸರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುವುದೇನೆಂದರೆ covid-19 ಎರಡನೆಯ ಅಲೆಯಾಗಿ ಪ್ರಾರಂಭವಾಗಿದ್ದು ಎಲ್ಲರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜನದಟ್ಟಣೆಯಿಂದ ದೂರ ಇರಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು ಕರ್ನಾಟಕ ರಾಜ್ಯ ಸರ್ಕಾರ ಆದೇಶ ಏನೆಂದರೆ ಯಾವುದೇ ಹಬ್ಬಹರಿದಿನಗಳ ಆಚರಣೆಯನ್ನು ನಿಬಂಧನೆ ಮಾಡಲಾಗಿದೆ ಸಾರ್ವಜನಿಕರು ಜಾತ್ರೆಗಳಿಂದ, ಮತ್ತು ಸಭೆ ಸಮಾರಂಭಗಳಿಂದ ದೂರವಿರುವುದು ಉತ್ತಮ ಉದ್ಯಾನವನಗಳಲ್ಲಿ, (ಸೇರುವುದು) ಮದುವೆ, ಜಾತ್ರೆಯಲ್ಲಿ, ಸೇರುವುದು ನಿಷೇಧಿಸಲಾಗಿದೆ. ಎಂದು ಪಿ ಎಸ್ ಐ ವಾಲಿಕರ್ …
Read More »ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ
ಮೈಸೂರು: ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮಗು ಹಾಗೂ ಓರ್ವ ವ್ಯಕ್ತಿ ಸಜೀವವಾಗಿ ದಹನವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿಯಲ್ಲಿ ನಡೆದಿದೆ. ತನ್ವೀತ್(5) ಹಾಗು ದೀಪಕ್ ಮೃತ ದುರ್ದೈವಿಗಳು. ಕಳಸ ಮೂಲದ ಪೇಂಟರ್ ಭರತ್ ಮೈಸೂರಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪುತ್ರ ತನ್ವಿತ್ ಜೊತೆ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಭರತ್ ಎಣ್ಣೆ ಪಾರ್ಟಿ ಆಯೋಜಿಸಿದ್ದರು. ಸ್ನೇಹಿತರೆಲ್ಲ ರಾತ್ರಿ ಪೂರ ವಿಪರೀತ ಮದ್ಯಪಾನ ಮಾಡಿದ್ದರು. ಬಳಿಕ ಭರತ್ನ ಒಬ್ಬ …
Read More »ನನ್ನ ರಾಜಕೀಯ ಏಳ್ಗೆಗೆ ಗೋಕಾಕ ಕ್ಷೇತ್ರದ ಜನರ ಸಹಕಾರವೇ ಪ್ರಮುಖ ಕಾರಣ: ಸತೀಶ ಜಾರಕಿಹೊಳಿ
ಗೋಕಾಕ: “ನನ್ನ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕ ಮತಕ್ಷೇತ್ರದಿಂದ. ಗೋಕಾಕ ಜನರೇ ನನ್ನ ರಾಜಕೀಯ ಏಳ್ಗೆಗೆ ಪ್ರಮುಖ ಕಾರಣ” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಗೋಕಾಕ ವಿಧಾನಸಭಾ ಮತಕ್ಷೇತ್ರದ ಮಮದಾಪುರ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ ಅವರು ಮಾತನಾಡಿದರು. “ಕಳೆದ 30 ವರ್ಷಗಳಿಂದ ನಾನು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ನಮ್ಮ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕನಿಂದ. ಮಮದಾಪುರ ಗ್ರಾಮದ ಮುಖಂಡರು ಹಾಗೂ ಈ ಭಾಗದ …
Read More »ಡಿಕೆಶಿವಕುಮಾರ್ , ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ : ಸತೀಶ್ ಜಾರಕಿಹೊಳಿ
ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೋಕಸಭಾ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕದಲ್ಲಿ ಪ್ರಚಾರದ ವೇಳೆ ಮಾತನಾಡಿ, ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ. ರಾಜಕೀಯದಲ್ಲಿ ಪರ ವಿರೋಧ ಇದ್ದೇ ಇರುತ್ತದೆ ಎಂದರು. ಗೋಕಾಕ್, ಅರಭಾವಿ ಕ್ಷೇತ್ರ ಬಿಟ್ಟು ಬೇರೆ ಕಡೆ ಪ್ರಚಾರ ಮಾಡುವ ಕುರಿತು ಚರ್ಚೆ ಮಾಡುತ್ತೇನೆ. ಇನ್ನು ಸಿಡಿ …
Read More »