ಬೆಳಗಾವಿ : ‘ ಮನುವಾದಿಗಳಿಗೆ ಹೆದರಿ ಜೀವನ ಮಾಡುವವರು ನಾವಲ್ಲ. ಅವರಿಗೆ ಸೆಡ್ಡು ಹೊಡೆದು ಬದುಕುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಅಭಿಮಾನಿಯ ಹೊಸ ಕಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಮೂಢನಂಬಿಕೆಯ ವಿರುದ್ಧ ಜನರಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದೇವೆ. ಅದರ ಒಂದು ಭಾಗ ನೂತನ ಕಾರಿಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದರು. ‘ಸಂಕೇಶ್ವರದ ವಿಕ್ರಂ ಎಂಬುವವರು …
Read More »‘ಗೋಕಾಕ್ ಕ್ಷೇತ್ರ ಟಾರ್ಗೆಟ್ ಮಾಡ್ತೀನಿ’ ಎಂದ ಹೆಬ್ಬಾಳ್ಕರ್ಗೆ ಸತೀಶ್ ಜಾರಕಿಹೊಳಿ ಮಾಸ್ಟರ್ ಸ್ಟ್ರೋಕ್
ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ. ಸರ್ಕಾರವನ್ನು ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ. ಎಂಎಲ್ಎಗಳನ್ನೇ ಎಸ್ಕೇಪ್ ಮಾಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ. ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಮೊನ್ನೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಈ ಒಂದು ಮಾತು ಬೆಳಗಾವಿಯಲ್ಲಿ ಹೊಸ ಚರ್ಚೆ ಹುಟ್ಟು …
Read More »ಹಾವೇರಿಯ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ.!!!
ಹಾವೇರಿ : ಯಾಲಕ್ಕಿ ನಗರಿ ಹಾವೇರಿಯಲ್ಲಿ ಇದೇ ಫೆ.26ರಿಂದ 28ರವರೆಗೆ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಕೊರೊನಾ ಆತಂಕದ ನಡುವೆ ವಿವಿಧ ಸಿದ್ಧತೆಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡಿಕೊಳ್ಳುತ್ತಿದೆ. ಆದರೆ, ಸರ್ಕಾರದಿಂದ ಅನುದಾನ ಮಂಜೂರಾಗದಿರುವುದು, ಸಿದ್ಧತೆಗೆ ಸಮಯ ಕಡಿಮೆ ಇರುವುದರಿಂದಾಗಿ ನಿರ್ಧಾರಿತ ದಿನಾಂಕದಂದು ಸಾಹಿತ್ಯ ಸಮ್ಮೇಳನ ನಡೆಸುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ. ರಾಜ್ಯ ಸರ್ಕಾರ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು 20 …
Read More »ರೈಲಿಗೆ ತಲೆ ಕೊಟ್ಟು ಬೆಳಗಾವಿಯಲ್ಲಿ ದಂಪತಿ ಆತ್ಮಹತ್ಯೆಗೆ ಯತ್ನ..ಪತಿ ಸಾವು..ಪತ್ನಿಗೆ ಗಾಯ
ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ ಮಾಡಿದ್ದು ಘಟನೆಯಲ್ಲಿ ಪತಿ ಸಾವನ್ನಪ್ಪಿ, ಪತ್ನಿಗೆ ಗಾಯವಾಗಿರುವ ಘಟನೆ ಬೆಳಗಾವಿ ನಗರದ ಒಂದನೇ ರೇಲ್ವೆ ಗೇಟ್ ಬಳಿ ನಡೆದಿದೆ.ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಮೃತ ದುರ್ದೈವಿ ಆಗಿದ್ದು, ಪತ್ನಿಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಈ ದಂಪತಿ ಯತ್ನಿಸಿದೆ. ಸ್ಥಳಕ್ಕೆ ಬೆಳಗಾವಿ ರೇಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …
Read More »ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳು ಡಿಕ್ಕಿ
ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಭದ್ರತಾ ವಾಹನಗಳು ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಹಾಪುರದಲ್ಲಿ ಭದ್ರತಾ ವಾಹನಗಳು ಡಿಕ್ಕಿಯಾಗಿದ್ದು. ಅದೃಷ್ಟವಶಾತ್ ಭದ್ರತಾ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಉತ್ತರಪ್ರದೇಶದ ರಾಮ್ ಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
Read More »ಏರೋ ಇಂಡಿಯಾ 2021 ಚಾಲನೆಗೆ ಕ್ಷಣಗಣನೆ : ಟ್ರಾಫಿಕ್ ದಟ್ಟಣೆ
ಬೆಂಗಳೂರು ಐತಿಹಾಸಿಕ 13ನೇ ಆವೃತ್ತಿಯ ಏರೋ ಇಂಡಿಯಾ 2021ಗೆ ಕ್ಷಣಗಣನೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಏರೋ ಇಂಡಿಯಾ 2021 ಉದ್ಘಾಟಿಸಲಿದ್ದಾರೆ.. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಫೆ.3ರಿಂದ 5ರ ತನಕ ಏರ್ ಶೋ ನಡೆಯಲಿದೆ. ಏರ್ ಶೋ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶವಿದ್ದು, ಬೆಳ್ಳಂಬೆಳಗ್ಗೆಯೇ ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿಯಿಂದಲೇ ಟ್ರಾಫಿಕ್ ಜಾಮ್ ಶುರುವಾಗಿದೆ. ಸಾರ್ವಜನಿಕರು ಏರ್ ಶೋ ವೀಕ್ಷಿಸಲು …
Read More »ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ
ಹೊಸದಿಲ್ಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳು ಮತ್ತು ರೈತರ ಹೋರಾಟ ಸಂಸತ್ ನಲ್ಲಿ ಪ್ರತಿಧ್ವನಿಸಿದ್ದು, ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಕೃಷಿ ಕಾನೂನು ಮತ್ತು ರೈತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳು ಸಭಾತ್ಯಾಗ ಮಾಡಿದವು. ರೈತರ ಪ್ರತಿಭಟನೆ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ವಿರೋಧ ಪಕ್ಷಗಳು ಗದ್ದಲ, ಕೋಲಾಹಲ ಎಬ್ಬಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಬಜೆಟ್ ಮಂಡನೆಯ ಮರುದಿನವಾದ ಇಂದು …
Read More »ಗೋಕಾಕದಲ್ಲಿ ಸರಕಾರಿ ವೈದ್ಯರಿಂದ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ
ಗೋಕಾಕದಲ್ಲಿ ಗೋಕಾಕ ತಾಲೂಕಾ ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ನೇತೃತ್ವದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಗೋಕಾಕ ನಗರಸಭೆಯ ಆಯುಕ್ತರಾದ ಶಿವಾನಂದ ಹೀರೆಮಠ ಇವರು ರಿಬ್ಬನ್ ಕಟ್ ಮಾಡಿ ನಗರಸಭೆಯ ಉಪಾದಕ್ಷ ಬಸವರಾಜ ಆರೆನ್ನವರ ಇವರು ಬ್ಯಾಂಡ ಬಾರಿಸುವ ಮೂಲಕ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ನಾಳೆ ದಿನ ಜನೆವರಿ 31 ರವಿವಾರದಂದು ಸ್ಥಳಿಯ ಪ್ರಾಥಮಿಕ …
Read More »ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಎಂಜಿನಿಯರ್
ಬೆಂಗಳೂರು – ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿ.ಜಿ. ಸೀತಾರಾಮ್ ನೇಮಕವಾಗಿದ್ದಾರೆ. ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿ.ಜಿ. ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ಶ್ರೀ ರಾಮ ಮಂದಿರದ ತಳಪಾಯದ ಕೆಲಸ ನಡೆಯುತ್ತದೆ. ಇವರ ಮಾರ್ಗದರ್ಶನದಲ್ಲಿ ಭವ್ಯವಾದ, ಯಾವುದೇ ಕಂಪನಗಳಿಗೆ ಅಲುಗಾಡದ ಹಾಗೆ …
Read More »ಲಾರಿ- ಆಟೋ ನಡುವೆ ಭೀಕರ ಅಪಘಾತ ; ಮದುವೆಗೆ ಬಟ್ಟೆ ತರಲು ಹೊರಟ್ಟಿದ್ದ ಆರು ಜನರು ಸಾವು !
ತೆಲಂಗಾಣ : ಲಾರಿ- ಆಟೋ ನಡುವೆ ಭೀಕರ ರಸ್ತೆ ಅಪಘಾತ ಸಂಭಿಸಿದ್ದು, ಸ್ಥಳದಲ್ಲೇ ಆರು ಜನರು ಮೃತಪಟ್ಟಿರುವ ಘಟನೆ ಮೆಹಬೂಬಾಬಾದ್ ಜಿಲ್ಲೆಯ ಗುಡೂರ್ ವಲಯದ ಮರ್ರಿಮಿಟ್ಟದಲ್ಲಿ ಇಂದು ನಡೆದಿದೆ. ಮೃತರು ಒಂದೇ ಕುಟುಂಬದವರಾಗಿದ್ದು, ಮದುವೆಗೆ ಬಟ್ಟೆ ತರಲು ತೆರಳುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ವದು ಸೇರಿ ಆಟೋದಲ್ಲಿ ಆರು ಮಂದಿ ಇದ್ದರು ಎನ್ನಲಾಗಿದೆ. ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು …
Read More »