ದಂತೇವಾಡ: ಛತ್ತೀಸಗಡ ರಾಜ್ಯದ ದಕ್ಷಿಣ ಬಸ್ತಾರ್ ವಲಯದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ 24 ಮಂದಿ ಬಂಡುಕೋರರು ಗಣರಾಜ್ಯೋತ್ಸವದಂದು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸ್ಥಳೀಯ ಪೊಲೀಸರಿಗೆ ಶರಣಾಗಿದ್ದಾರೆ. ಜಿಲ್ಲಾ ಪೊಲೀಸರು ಕರೆ ನೀಡಿರುವ ಮನೆ ಮತ್ತು ಗ್ರಾಮ ವಾಪಸಾತಿಯ (ಲೊನ್ ವರತ್ತು ಪುನರ್ವಸತಿ) ಅಭಿಯಾನದಿಂದ ಪ್ರೇರಿತರಾಗಿ ಶರಣಾಗಿದ್ದಾರೆ ಎಂದು ದಂತೇವಾಡ ಎಸ್ಪಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ. ಶರಣಾದ ನಕ್ಸಲ್ ನಾಯಕರಲ್ಲಿ ಮಾವೋವಾದಿ ಚಿಕ್ಪಾಲ್-ಜಂಗಲೆಪಾರ ದಂಡಕಾರಣ್ಯ ಆದಿವಾಸಿ ಕಿಸಾನ್ ಮಜ್ದೂರ್‍ನ ಮುಖ್ಯಸ್ಥ ಆಯ್ತು ಮುಚಾಕಿ …
Read More »10ನೇ ತರಗತಿ ಪಾಸಾದವರಿಗೆ ಆರ್ಬಿಐನಲ್ಲಿ ಉದ್ಯೋಗವಕಾಶ
ನವದೆಹಲಿ (25.01.2021) : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ 241 ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿದೆ. 10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 1, 2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿದಾರರು 50 ರೂ …
Read More »ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ವೃದ್ದಾಪ್ಯ ವೇತನ
ಚಿಕ್ಕಮಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ಆಧಾರ್ ದಾಖಲೆ ಆಧರಿಸಿ ಮನೆಬಾಗಿಲಿಗೆ ಪಿಂಚಣಿ ತಲುಪಿಸುವ ಆದೇಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಫಲಾನುಭವಿಗಳು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಅವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಜನವರಿ 27 ರಂದು ಈ ಹೊಸ ಪ್ರಯೋಗಕ್ಕೆ ಚಾಲನೆ ನೀಡಲಾಗುವುದು ಎಂದರು. ಅಂಚೆ ಕಚೇರಿ ಮೂಲಕ ಪಿಂಚಣಿ ಹಣ ಸರಿಯಾಗಿ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿಯಿಂದ ತಪಸಿ ಗ್ರಾಪಂ. ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ : ಡಾ.ರಾಜೇಂದ್ರ
ಬೆಟಗೇರಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಜ್ಜಿಹಾಳ ಗ್ರಾಮದಿಂದ ಗಲಗಲಿ ತೋಟ ಮತ್ತು ತಿರಕನ್ನವರ ತೋಟ ಹಾಗೂ ಬಣಜಿಗೇರ ತೋಟಕ್ಕೆ ಕುಡಿಯುವ ನೀರು ಸರಬರಾಜು ಪೈಪ್‍ಲೈನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ …
Read More »ದೆಹಲಿ ಗಣರಾಜ್ಯೋತ್ಸವ ಪೆರೇಡೆಗೆ ಬೈಲಹೊಂಗಲದ ಕೃಷ್ಣಾ ಬಡಿಗೇರ ಆಯ್ಕೆ
ಬೈಲಹೊಂಗಲ : ಪಟ್ಟಣದ ಮೂರುಸಾವಿರ ಮಠದ ಎಸ್.ಜಿ.ವಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕದ ವಿದ್ಯಾರ್ಥಿ ಕೃಷ್ಣಾ ಬಡಿಗೇರ ಇದೇ ಜ.26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಗೆ ಆಯ್ಕೆಯಾಗಿದ್ದಾನೆ. ಬಿಕಾಂ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಎನ್.ಸಿ.ಸಿ ಘಟಕದಲ್ಲಿ ಸೀನಿಯರ್ ಅಂಡರ್ ಆಫೀಸರ ಇದ್ದಾನೆ. ರಾಜ್ಯದಿಂದ ಒಟ್ಟು 26 ಕೆಡೆಟಗಳು ದೆಹಲಿಯ ಗಣರಾಜ್ಯೋತ್ಸವ ಪರೇಡನಲ್ಲಿ ಭಾಗವಹಿಸುತ್ತಿದ್ದು, ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಅವಕಾಶ ಸಿಕ್ಕಿದ್ದು . 25 ನೇ …
Read More »ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ
ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ. ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್‌ನ ಬಜೆಟ್ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ …
Read More »15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಕೆಪಿಟಿಸಿಎಲ್‍ನಿಂದ 15.09 ಕೋಟಿ ರೂ. ವೆಚ್ಚದ 110 ಕೆವ್ಹಿ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ …
Read More »ಬೆಳಗಾವಿಯ 19 ವರ್ಷದ ಯುವತಿ ಕಾಣೆ
ಬೆಳಗಾವಿ : ಅನಗೋಳ ನಿವಾಸಿಯಾದ 19 ವರ್ಷದ ಸ್ವಾತಿ ಸದಾನಂದ ಕಮ್ಮಾರ ಜ.4 ರಂದು ಕಾಣೆಯಾಗಿದ್ದಾಳೆ. ಪಾಂಗೂಳ ಗಲ್ಲಿಯಲ್ಲಿರುವ ಸಾಯಿ ಲಕ್ಷ್ಮಿ ಇಂಡೋಲಿಯನ್ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದಳು. ಸಂಜೆ 4 ಗಂಟೆಗೆ ಮಾಲೀಕರಿಂದ 1400 ರೂಪಾಯಿ ಹಣ ಪಡೆದು ಕೆಲಸಕ್ಕೆ ಬರುವುದಿಲ್ಲವೆಂದು ಮರಳಿದ್ದಾಳೆ. ಆದರೆ ಮನೆಗೆ ಬಾರದೆ ಕಾಣೆಯಾಗಿದ್ದು, ಬೆಳಗಾವಿ ಮಾರ್ಕೇಟ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಿ ಸದಾನಂದ ಕಮ್ಮಾರ 5 ಪೂಟ 1 ಇಂಚು ಎತ್ತರವಿದ್ದು, …
Read More »ಕೇಂದ್ರ ಬಜೆಟ್ : ಜ.30ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ
ಹೊಸದಿಲ್ಲಿ : ಫೆಬ್ರವರಿ 1 ರಂದು 2021-2022ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನವರಿ 30 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರು ಸರ್ವಪಕ್ಷ ಸಭೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ 2021-22 ಅನ್ನು ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನವು …
Read More »ಮಹಾ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಖಂಡಿಸಿ..ಬೆಳಗಾವಿಯಲ್ಲಿ ಉದ್ಧವ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ..!
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಡೋಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ರಾಜ್ಯಾಧ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿವೆ. ಗಡಿ ವಿಚಾರದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ …
Read More »