ಕಾರವಾರ: ಮಾಜಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಕೋಲದ ಕೇಣಿ ಬಳಿ ಈ ದಾಳಿ ನಡೆದಿದೆ. ಅಂಕೋಲದ ಕೇಣಿ ಬಳಿ ಕಾರಿನಲ್ಲಿ ತೆರಳುತಿದ್ದಾಗ ಗೋವಾ ನೋಂದಣಿಯ ಕಾರಿನಲ್ಲಿ ಬಂದು ಅಡ್ಡಗಟ್ಟಿದ ಕಿಡಿಗೇಡಿಗಳು ರಾಡ್ ನಿಂದ ಹೊಡೆದು ಚಾಕು ಇರಿದಿದ್ದಾರೆ. ಅವರ ತಲೆಗೆ, ಕುತ್ತಿಗೆಗೆ ಪೆಟ್ಟಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಅಂಕೋಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಕೋಲ …
Read More »ಆಟವಾಡುತ್ತಾ ಬಾವಿಗೆ ಬಿದ್ದ ಎರಡು ವರ್ಷದ ಮಗು – ಅದೃಷ್ಟವಶಾತ್ ಪಾರು
ಕಾರವಾರ: ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ವರ್ಷದ ಬಾಲಕಿಯನ್ನು ವ್ಯಕ್ತಿಯೋರ್ವ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿನಗರದ ಕಸ್ತೂರಬಾ ನಗರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಭುವಿ (2) ಬಾವಿಗೆ ಬಿದ್ದು ಅದೃಷ್ಟವಶಾತ್ ಬದುಕುಳಿದ ಬಾಲಕಿಯಾಗಿದ್ದಾಳೆ. ಮನೆಯಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದ್ದಾರೆ. ಬಾವಿಯ ಹತ್ತಿರ ಹೋದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಆತಂಕದೊಂದಿಗೆ ಬಾವಿಯೊಳಗೆ ಇಣುಕಿ ನೋಡಿದಾಗ, ಮಗು ನೀರಿಗೆ …
Read More »ಶಿರಸಿ ಮಾರಿಕಾಂಬಾ ದೇವಿಯ ಮಹಾ ರಥೋತ್ಸವಕ್ಕೆ ಅದ್ಧೂರಿ ಚಾಲನೆ
ಕಾರವಾರ: ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಹಾಗೂ ಧಾರ್ಮಿಕ ಮಹತ್ವದ ಜಾತ್ರೆ ಎಂದೇ ಖ್ಯಾತಿ ಪಡೆದಿರುವ ‘ಶಿರಸಿ ಶ್ರೀ ಮಾರಿಕಾಂಬಾ ದೇವಿ ಜಾತ್ರೆ’ಯ ಮಹಾ ರಥೋತ್ಸವಕ್ಕೆ ಬುಧವಾರ ಅತ್ಯಂತ ಸಡಗರ, ಸಂಭ್ರಮದಿಂದ ವಿದ್ಯುಕ್ತ ಚಾಲನೆ ನೀಡಲಾಯಿತು. ಬೆಳಿಗ್ಗೆ 7:00 ಗಂಟೆಯಿಂದಲೇ ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳು ಹಾಗೂ ಪರಂಪರೆಯ ಆಚರಣೆಗಳು ಆರಂಭವಾದವು. ಸರಿಯಾಗಿ ಬೆಳಿಗ್ಗೆ 7:28ಕ್ಕೆ ದೇವಸ್ಥಾನದಿಂದ ಮಾರಿಕಾಂಬೆಯನ್ನು ಹೊರತಂದು ರಥದ ಮೇಲೆ ಆಸೀನಳನ್ನಾಗಿ ಮಾಡಲಾಯಿತು. ತದನಂತರ, ಕಿಕ್ಕಿರಿದು ತುಂಬಿದ್ದ ಭಕ್ತಸಾಗರದ …
Read More »ಜೂನ್ ಒಳಗೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ
ಕಾರವಾರ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂಕೋಲಾ ತಾಲೂಕಿನ ಮಂಜುಗಣಿಯಲ್ಲಿ ಭಾನುವಾರ ಗಂಗಾವಳಿ -ಮಂಜುಗಣಿ ಸೇತುವೆ ಉದ್ಘಾಟಿಸಿ ಅವರು ಮಾತನಾಡಿದರು. ಗೋಕರ್ಣ ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿಸುವಂತೆ ಬೇಡಿಕೆ ಇದೆ. ಆದರೆ, ಚುನಾವಣೆ ಸಮೀಪಿಸಿದ್ದು, ಜನಗಣತಿ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಹೊಸದಾಗಿ ಪಟ್ಟಣ ಪಂಚಾಯಿತಿ ರಚನೆ ಸಾಧ್ಯವಿಲ್ಲ. ಚುನಾವಣೆ ಮುಗಿದ ನಂತರ ಗೋಕರ್ಣ ಪಟ್ಟಣ ಪಂಚಾಯಿತಿ ರಚನೆ …
Read More »ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ
ಕಾರವಾರ: ಕಾಡು ಪ್ರಾಣಿಗಳ ಹತ್ಯೆ ಶಂಕೆಯ ಮೇರೆಗೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಭಟ್ಕಳ (Bhatkal) ತಾಲೂಕಿನ ಹುರುಳಿಸಾಲದ ಮನೆ ಒಂದರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 21 ಕೆಜಿ ಜಿಂಕೆ ಮಾಂಸ, ಜಿಂಕೆ (Deer) ಕೊಬ್ಬು ಹಾಗೂ ಎರಡು ಏರ್‌ಗನ್‌ಗಳು ಪತ್ತೆಯಾಗಿವೆ. ಜಾಫರ್ ಬ್ರಹ್ಮವರ್ ಎಂಬಾತ ಕಾಡಿನಲ್ಲಿ ಪ್ರಾಣಿಯನ್ನು ಹತ್ಯೆ ಮಾಡಿ, ಮಾಂಸವನ್ನು ಮನೆಯ ಪಕ್ಕದಲ್ಲೇ ಬೇರ್ಪಡಿಸಿ ಉಳಿದ ಅವಶೇಷಗಳನ್ನು ಪಾಳುಬಿದ್ದ ಬಾವಿಗೆ ಎಸೆದಿದ್ದ. ದಾಳಿ …
Read More »ಚರಂಡಿ ಕೆಳಗೆ ಬಚ್ಚಿಟ್ಟಿದ್ದ ರೂ.2.4 ಲಕ್ಷ ಮೌಲ್ಯದ ಅಕ್ರಮ ಸಾರಾಯಿ ವಶ
ಅಂಕೋಲಾ : ಚರಂಡಿಯ ಕೆಳಗೆ ಅಕ್ರಮವಾಗಿ ಬಚ್ಚಿಟ್ಟಿದ್ದ ಸುಮಾರು 2.4 ಲಕ್ಷ ಮೌಲ್ಯದ ಸಾಯಾಯಿಯನ್ನು ಅಂಕೋಲಾ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಹಾರವಾಡಾ ಗ್ರಾಮದ ಸೀಬರ್ಡ್ ಕಾಲೊನಿಯಲ್ಲಿ ನಡೆದಿದೆ. 345 ಲೀ. ಗೋವಾ ಸಾರಾಯಿ ಮತ್ತು 80 ಲೀ. ಗೋವಾ ಫೆನ್ನಿಯನ್ನು ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ .ವಶಕ್ಕೆ ಪಡಿಸಿದ ವಸ್ತುಗಳ ಒಟ್ಟೂ ಮೌಲ್ಯ ರೂ. 2.42,080 ಎಂದು ತಿಳಿದುಬಂದಿದೆ. ಆರೋಪಿ ಯಾರೆಂದು ಪತ್ತೆಯಾಗಿಲ್ಲ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ …
Read More »ತಂದೆಯ ಪ್ರಾಣ ಉಳಿಸಿದ್ದ ಮಗಳಿಗೆ ಶೌರ್ಯ ಪ್ರಶಸ್ತಿ..
ಕಾರವಾರ: ಆಕೆಗೆ ಕೇವಲ 11 ವರ್ಷ ಮಾತ್ರ. ಆದರೆ ಆಕೆ ಮಾಡಿರುವ ಕೆಲಸ ಇಡೀ ಜಗತ್ತು ಮೆಚ್ಚಿಸುವಂತದ್ದು. ತಂದೆಯ ಜೀವವನ್ನು ಕಾಪಾಡುವ ಮೂಲಕ ಅನೇಕರಿಗೆ ಮಾದರಿಯಾಗಿದ್ದಾಳೆ. ಅಂದ ಹಾಗೆ ಇವಳ ಹೆಸರು ಕೌಸಲ್ಯ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನವಳು. ಇದೀಗ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಕೊಡುವ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ. ಹೌದು, ಈಕೆಯ ತಂದೆ ಕಾರ್ಯಕ್ರಮದಲ್ಲಿ ಅಡುಗೆ ಮಾಡುವವರು. 2021ರ ಮಾರ್ಚ್ 15ರಂದು ಮಾವಿನಗುಂಡಿ ಸಮೀಪದ ಹಳ್ಳಿಯೊಂದಕ್ಕೆ …
Read More »ನ. 1ರಿಂದ 20 ನಿಮಿಷಗಳಲ್ಲೇ ಆಸ್ತಿ ನೋಂದಣಿ ಸೌಲಭ್ಯ
ಬೆಂಗಳೂರು: ಆಸ್ತಿ ನೋಂದಣಿಯ ಹಲವು ತೊಡಕುಗಳನ್ನು ನಿವಾರಿಸಲು ಮುಂದಾದ ಸರಕಾರ ನ. 1ರಿಂದ ಹೊಸ ನಿಯಮ ಜಾರಿಗೊಳಿಸಲಿದೆ. ಪಾಸ್ ಪೋರ್ಟ್ ಪಡೆಯುವ ಮಾದರಿಯ ವೆಬ್ ಆಧಾರಿತ ಸೇವೆ ಇದಾಗಿದ್ದು ತರುವ ಮೂಲಕ 20 ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ರಾಜ್ಯ ಸರಕಾರ ತನ್ನ ಇ- ಆಡಳಿತ ಇಲಾಖೆ ಅಧೀನ ಸಂಸ್ಥೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಸಂಸ್ಥೆ ಅಭಿವೃದ್ಧಿಪಡಿಸಿದ ‘ಕಾವೇರಿ-2’ ತಂತ್ರಾಂಶವನ್ನು ರೂಪಿಸಿದೆ. ಸಂಪೂರ್ಣ ತಾಂತ್ರಿಕ ದೋಷರಹಿತವಾಗಿರುವ …
Read More »ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ
ನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ ತಂದಿದೆ. ಗದಗ ಜಿಲ್ಲೆಯ ನರಗುಂದ, ರೋಣ, ಧಾರವಾಡ ಜಿಲ್ಲೆಯ ನವಲಗುಂದ, ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಈ ಜಲಾಶಯದ ಕಾಲುವೆ ನೀರಿನ ಮೂಲಕ ಈ ಭಾಗದ ರೈತರು ಜಮೀನುಗಳನ್ನು ನೀರಾವರಿ ಮಾಡಿ ಬದುಕು ಕಟ್ಟಿಕೊಳ್ಳುತ್ತಾರೆ. ಜಲಾಶಯ ಒಟ್ಟು 37.73 ಟಿಎಂಸಿ ನೀರಿನ …
Read More »ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ; ಅಂಗಾಂಗ ದಾನ ಮಾಡಿ ಮೂವರ ಬಾಳಿಗೆ ಬೆಳಕಾದ ಕಮಲವ್ವ
ಬೆಳಗಾವಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹತ್ತಿರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಎತ್ತಿನಗುಡ್ಡ ಗ್ರಾಮದ 48 ವರ್ಷದ ಕಮಲವ್ವ ಕೆಲಗೇರಿ ಅವರು ತಮ್ಮ ಅಂಗಾಂಗಳನ್ನು ದಾನ ಮಾಡಿ ಮೂವರ ಜೀವ ಉಳಿಸಿ ಸಮಾಜಕ್ಕೆ ಪ್ರೇರಣಾದಾಯಿಯಾಗಿದ್ದಾರೆ. ಕಮಲವ್ವ ಅವರ ಒಂದು ಕಿಡ್ನಿಯನ್ನು ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. …
Read More »
Laxmi News 24×7