Home / ಕಾರವಾರ

ಕಾರವಾರ

ಚರಂಡಿ ಕೆಳಗೆ ಬಚ್ಚಿಟ್ಟಿದ್ದ ರೂ.2.4 ಲಕ್ಷ ಮೌಲ್ಯದ ಅಕ್ರಮ ಸಾರಾಯಿ ವಶ

ಅಂಕೋಲಾ : ಚರಂಡಿಯ ಕೆಳಗೆ ಅಕ್ರಮವಾಗಿ ಬಚ್ಚಿಟ್ಟಿದ್ದ ಸುಮಾರು 2.4 ಲಕ್ಷ ಮೌಲ್ಯದ ಸಾಯಾಯಿಯನ್ನು ಅಂಕೋಲಾ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಹಾರವಾಡಾ ಗ್ರಾಮದ ಸೀಬರ್ಡ್ ಕಾಲೊನಿಯಲ್ಲಿ ನಡೆದಿದೆ. 345 ಲೀ. ಗೋವಾ ಸಾರಾಯಿ ಮತ್ತು 80 ಲೀ. ಗೋವಾ ಫೆನ್ನಿಯನ್ನು ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ .ವಶಕ್ಕೆ ಪಡಿಸಿದ ವಸ್ತುಗಳ ಒಟ್ಟೂ ಮೌಲ್ಯ ರೂ. 2.42,080 ಎಂದು ತಿಳಿದುಬಂದಿದೆ. ಆರೋಪಿ‌ ಯಾರೆಂದು‌ ಪತ್ತೆಯಾಗಿಲ್ಲ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ …

Read More »

ತಂದೆಯ ಪ್ರಾಣ ಉಳಿಸಿದ್ದ ಮಗಳಿಗೆ ಶೌರ್ಯ ಪ್ರಶಸ್ತಿ..

ಕಾರವಾರ: ಆಕೆಗೆ ಕೇವಲ 11 ವರ್ಷ ಮಾತ್ರ. ಆದರೆ ಆಕೆ ಮಾಡಿರುವ ಕೆಲಸ ಇಡೀ ಜಗತ್ತು ಮೆಚ್ಚಿಸುವಂತದ್ದು. ತಂದೆಯ ಜೀವವನ್ನು ಕಾಪಾಡುವ ಮೂಲಕ‌ ಅನೇಕರಿಗೆ ಮಾದರಿಯಾಗಿದ್ದಾಳೆ. ಅಂದ ಹಾಗೆ ಇವಳ ಹೆಸರು ಕೌಸಲ್ಯ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನವಳು. ಇದೀಗ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಕೊಡುವ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ. ಹೌದು, ಈಕೆಯ ತಂದೆ ಕಾರ್ಯಕ್ರಮದಲ್ಲಿ ಅಡುಗೆ ಮಾಡುವವರು. 2021ರ ಮಾರ್ಚ್ 15ರಂದು ಮಾವಿನಗುಂಡಿ ಸಮೀಪದ ಹಳ್ಳಿಯೊಂದಕ್ಕೆ …

Read More »

ನ. 1ರಿಂದ 20 ನಿಮಿಷಗಳಲ್ಲೇ ಆಸ್ತಿ ನೋಂದಣಿ ಸೌಲಭ್ಯ

ಬೆಂಗಳೂರು: ಆಸ್ತಿ ನೋಂದಣಿಯ ಹಲವು ತೊಡಕುಗಳನ್ನು ನಿವಾರಿಸಲು ಮುಂದಾದ ಸರಕಾರ ನ. 1ರಿಂದ ಹೊಸ ನಿಯಮ ಜಾರಿಗೊಳಿಸಲಿದೆ.   ಪಾಸ್ ಪೋರ್ಟ್ ಪಡೆಯುವ ಮಾದರಿಯ ವೆಬ್ ಆಧಾರಿತ ಸೇವೆ ಇದಾಗಿದ್ದು ತರುವ ಮೂಲಕ 20 ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ರಾಜ್ಯ ಸರಕಾರ ತನ್ನ ಇ- ಆಡಳಿತ ಇಲಾಖೆ ಅಧೀನ ಸಂಸ್ಥೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಸಂಸ್ಥೆ ಅಭಿವೃದ್ಧಿಪಡಿಸಿದ ‘ಕಾವೇರಿ-2’ ತಂತ್ರಾಂಶವನ್ನು ರೂಪಿಸಿದೆ.   ಸಂಪೂರ್ಣ ತಾಂತ್ರಿಕ ದೋಷರಹಿತವಾಗಿರುವ …

Read More »

ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ

ನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ ತಂದಿದೆ. ಗದಗ ಜಿಲ್ಲೆಯ ನರಗುಂದ, ರೋಣ, ಧಾರವಾಡ ಜಿಲ್ಲೆಯ ನವಲಗುಂದ, ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಈ ಜಲಾಶಯದ ಕಾಲುವೆ ನೀರಿನ ಮೂಲಕ ಈ ಭಾಗದ ರೈತರು ಜಮೀನುಗಳನ್ನು ನೀರಾವರಿ ಮಾಡಿ ಬದುಕು ಕಟ್ಟಿಕೊಳ್ಳುತ್ತಾರೆ.   ಜಲಾಶಯ ಒಟ್ಟು 37.73 ಟಿಎಂಸಿ ನೀರಿನ …

Read More »

ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ; ಅಂಗಾಂಗ ದಾನ ಮಾಡಿ ಮೂವರ ಬಾಳಿಗೆ ಬೆಳಕಾದ ಕಮಲವ್ವ

ಬೆಳಗಾವಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹತ್ತಿರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಎತ್ತಿನಗುಡ್ಡ ಗ್ರಾಮದ 48 ವರ್ಷದ ಕಮಲವ್ವ ಕೆಲಗೇರಿ ಅವರು ತಮ್ಮ ಅಂಗಾಂಗಳನ್ನು ದಾನ ಮಾಡಿ ಮೂವರ ಜೀವ ಉಳಿಸಿ ಸಮಾಜಕ್ಕೆ ಪ್ರೇರಣಾದಾಯಿಯಾಗಿದ್ದಾರೆ.   ಕಮಲವ್ವ ಅವರ ಒಂದು ಕಿಡ್ನಿಯನ್ನು ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. …

Read More »

ರೈಲಿನಲ್ಲಿ 2 ಕೋಟಿ ಸಾಗಿಸುತ್ತಿದ್ದವನ ಬಳಿ ಟಿಕೆಟ್ಟೇ ಇರಲಿಲ್ಲ..!

ಕಾರವಾರ; ಸಾಮಾನ್ಯವಾಗಿ ಹಣ ಇಲ್ಲದೇ ಇದ್ದವರು ರೈಲಿನಲ್ಲಿ ಟಿಕೆಟ್‌ ಇಲ್ಲದೆ ಕಳ್ಳತನವಾಗಿ ಪ್ರಯಾಣ ಮಾಡುತ್ತಾರೆ. ಆದ್ರೆ, ಮುಂಬೈನಿಂದ ಬರುತ್ತಿದ್ದ ವ್ಯಕ್ತಿಯ ಬಳಿಯ ರೈಲು ಟಿಕೆಟ್‌ ಇರಲಿಲ್ಲ, ಹಣ ಅಂತೂ ಸಾಕಷ್ಟಿತ್ತು. ಅದು ಅಷ್ಟೋ ಇಷ್ಟೂ ಅಲ್ಲ, ಬರೋಬ್ಬರಿ 2 ಕೋಟಿ ರೂಪಾಯಿ. ಅದಕ್ಕೆ ದಾಖಲೆ ಇಲ್ಲದ ಕಾರಣಕ್ಕಾಗಿ ಆ ವ್ಯಕ್ತಿಯನ್ನು ಹಾಗೂ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೌದು, ವ್ಯಕ್ತಿಯೊಬ್ಬ ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ 2 ಕೋಟಿ ರೂಪಾಯಿ ಹಣ …

Read More »

ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,,

ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,,   ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ ಬಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಮಾಡಿದ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಗೋಕಾಕದಲ್ಲಿ ಬಸವೇಶ್ವರ ವೃತ್ತದಲ್ಲಿ ಗೋಕಾಕದ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೆಂದ್ರ ಮಹಾಸ್ವಾಮಿಗಳ ಮುಖಂಡತ್ವದಲ್ಲಿ ಹಾಗೂ ಯುವ ದಲಿತ ಸಮಿತಿ ನೇತೃತ್ವದಲ್ಲಿ ವಿವಿದ ಸಂಘಟನೆಗಳಿಂದ ಪ್ರದಾನ ಮಂತ್ರಿಯವರಿಗೆ ಸಾವಿರಾರು ಪತ್ರ ಬರೆದು ಪತ್ರ ಚಳುವಳಿ ಮಾಡಲಾಯಿತು. ಈ ಸಮಯದಲ್ಲಿ ಮಾತನಾಡಿದ …

Read More »

ರಸ್ತೆಯಲ್ಲೇ ಚಾಕಲೇಟ್‌ ಎಸೆದ ವ್ಯಾಪಾರಿ ..!

ಕಾರವಾರ: ಸಗಟು ವ್ಯಾಪಾರಿಯೊಬ್ಬರು ಒಬ್ಬರು ಕ್ವಿಂಟಾಲ್ ಗೂ ಹೆಚ್ಚು ತೂಕದ ಚಾಕ್ಲೇಟ್ ಅನ್ನು ರಸ್ತೆಯಲ್ಲಿ ಎಸೆದು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಹುಡ್ಲಮನೆ ರಸ್ತೆಯಲ್ಲಿ ನಡೆದಿದೆ. ಕ್ಯಾಂಡಿ ಕಂಪನಿಗೆ ಸೇರಿದ ವಿವಿಧ ಬಗೆಯ ಪ್ಲೇವರ್ ಹೊಂದಿದ ಚಾಕ್ಲೇಟ್ ಇದಾಗಿದ್ದು ಕೊರೊನಾ ಲಾಕ್ ಡೌನ್ ನಿಂದ ಈ ಕಂಪನಿಯ ಚಾಕ್ಲೇಟ್ ಗಳು ಮಾರುಕಟ್ಟೆಯಲ್ಲಿ ಮಾರಾಟವಾಗಿಲ್ಲ. ಈ ಕಾರಣದಿಂದ ಇದರ ಅವಧಿ ಮುಗಿದಿದ್ದು, ಕಂಪನಿಯ ಡೀಲರ್ ನಗರಸಭೆಯ ಕಸ …

Read More »

ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಕಾರವಾರದಲ್ಲಿ ಇಬ್ಬರು ಅರೆಸ್ಟ್

ಕಾರವಾರ: ನಗರದ ಕೋಡಿಭಾಗದ ಸಾಗರ ದರ್ಶನ ಹಾಲ್ ಹಿಂಭಾಗದಲ್ಲಿ ಇಬ್ಬರು ಅಕ್ರಮವಾಗಿ ಗಾಂಜಾ ಸಾಗಾಟ, ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ನಗರ ಪೊಲೀಸ್ ಠಾಣೆ ಅಧಿಕಾರಿಗಳು ದಾಖಲಿ ನಡೆಸಿ ಇಬ್ಬರನ್ನು ಬಂಧಿಸಿದ್ದು 3.20 ಲಕ್ಷ ರೂ. ಗಾಂಜಾ ಜಪ್ತಿ ಮಾಡಿಕೊಂಡ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕಿನ ಸಂಕ್ರಿವಾಡಾದ ರಿಜ್ವಾನ್ ಅಕ್ಬರ್ ಶೇಖ್ (30) ಹಾಗೂ ನಗರದ ಗುನಗಿವಾಡಾದ ಸಾಹಿಲ್ ನಾದರ್ ಭಾಷಾ ಶೇಖ್ (20) ಎನ್ನುವ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. …

Read More »

ಲಸಿಕೆ ಪಡೆಯಲು ಜನರ ತಳ್ಳಾಟ ನೂಕಾಟ

ಕಾರವಾರ: ರಾಜ್ಯಾದ್ಯಂತ ಕೊರೊನಾ ಲಸಿಕೆಯ ಅಭಾವ ಮಿತಿಮೀರಿದ್ದು ಗಡಿ ಜಿಲ್ಲೆ ಉತ್ತರ ಕನ್ನಡವನ್ನೂ ಬಿಟ್ಟಿಲ್ಲ. 15 ಲಕ್ಷ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಇದುವರೆಗೆ 3,81000 ಜನ ಮೊದಲ ಹಂತದ ಲಸಿಕೆ ಪಡೆದಿದ್ದಾರೆ. 77000 ಜನ ಎರಡನೇ ಹಂತದ ಲಸಿಕೆ ಸಹ ನೀಡಲಾಗಿದೆ. ಆದರೆ ಇದೀಗ ರಾಜ್ಯ ಹಾಗೂ ಕೇಂದ್ರದಿಂದ ಬರಬೇಕಾದ ಪ್ರಮಾಣದಲ್ಲಿ ಲಸಿಕೆ ಬರುತ್ತಿಲ್ಲ. ಕಳೆದ ಮೂರು ದಿನದಿಂದ ಜಿಲ್ಲೆಯಲ್ಲಿ ಲಸಿಕೆ ಅಭಾವ ಸಹ ಆಗಿದ್ದು, ಜಿಲ್ಲಾಡಳಿತದಿಂದ ನಿಗದಿ ಮಾಡಿದವರನ್ನು …

Read More »