Breaking News

ಕಾರವಾರ

ಹುತಾತ್ಮರ ದಿನಾಚರಣೆಯಂದೇ ರಕ್ತದಾನ

ಕಾರವಾರ: ಹುತಾತ್ಮ ದಿನದ ಪ್ರಯುಕ್ತ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಜಿಲ್ಲಾ ಘಟಕ ಕಾರವಾರ, ನಿಫಾ, ಕ್ರಿಮ್ಸ್‌ ಕಾರವಾರ, ಪಹರೆ ವೇದಿಕೆ ಹಾಗೂ ಇತರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದೇಶಾದ್ಯಂತ ನಡೆದ ರಕ್ತದಾನದ ಕಾರ್ಯಕ್ರಮ ಜಿಲ್ಲಾ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ರೆಡ್‌ಕ್ರಾಸ್‌ ಸಂಸ್ಥೆ ನೇತೃತ್ವದಲ್ಲಿ ನಡೆಯಿತು. ಡಿಸಿ ಮುಲ್ಲೈ ಮುಹಿಲನ್‌ ಅಧ್ಯಕ್ಷತೆ ವಹಿಸಿ ಇಂದು ರೆಡ್‌ಕ್ರಾಸ್‌ ಸಂಸ್ಥೆ ಜಗತ್ತಿನಾದ್ಯಾಂತ ಅತ್ಯಂತ ಪ್ರಭಾವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜಗತ್ತಿನಾದ್ಯಂತ ರಕ್ತದ ಅವಶ್ಯಕತೆ …

Read More »

ಕಾರವಾರ DySp ಅರವಿಂದ ಕಲಗುಜ್ಜಿ ವಾಹನಕ್ಕೆ ಓಮ್ನಿ ಡಿಕ್ಕಿ: ಅಡ್ಡ ಬಂದ ಮಗು ಬಚಾವು ಮಾಡಲು ಹೋಗಿ ನಡೆದ ಅಪಘಾತ

ಕಾರವಾರ: ಕಾರವಾರ DYSP ಪಿ. ಅರವಿಂದ ಕಲಗುಜ್ಜಿ ಅವರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ DYSP ಪಿ. ಅರವಿಂದ ಕಲಗುಜ್ಜಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ಕಾರವಾರದಿಂದ ಮುಂಡಗೋಡಿಗೆ ಡಿವೈಎಸ್ಪಿ ಅರವಿಂದ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ವಾಹನಕ್ಕೆ ಅಡ್ಡ ಬಂದ ಮಗುವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಓಮ್ನಿ ಕಾರು ರಸ್ತೆಯಲ್ಲಿಯೇ ಉರುಳಿ ಬಿದ್ದಿದೆ. ಕಾರು …

Read More »

ಒಂಟಿಯಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ: ಕಾರವಾರ ತಲುಪಿದ ಕೊಲ್ಕತ್ತಾ ವ್ಯಕ್ತಿ

ಕಾರವಾರ: ಕೊಲ್ಕತ್ತಾದ ಈ ವ್ಯಕ್ತಿಯು, ದೇಶ ಪರ್ಯಟನೆಗೆ ಆಯ್ಕೆ ಮಾಡಿದ್ದು ಸೈಕಲ್ ಸವಾರಿಯನ್ನು. ಜ.1ರಂದು ಪ್ರಯಾಣ ಆರಂಭಿಸಿ, ಗುರುವಾರ ಕಾರವಾರಕ್ಕೆ ತಲುಪಿ ಗೋವಾದತ್ತ ಸಾಗಿದರು. 54 ವರ್ಷದ ಪರಿಮಳ ಕಾಂಜಿ ಎಂಬುವವರೇ ಇಂಥ ಸಾಹಸ ಮಾಡುತ್ತಿರುವವರು. ಕೊಲ್ಕತ್ತಾದ ಬೋಡೊ ಬಜಾರ್ ನಿವಾಸಿಯಾಗಿರುವ ಇವರು, ದೇಶದ ವಿವಿಧ ಸಂಸ್ಕೃತಿಗಳನ್ನು ಪರಿಚಯಿಸಿಕೊಳ್ಳುವುದು, ಪರಿಸರ ಸಂರಕ್ಷಣೆ, ಸಸ್ಯ ಸಂಪತ್ತಿನ ಪಾಲನೆ ಹಾಗೂ ನೀರಿನ ರಕ್ಷಣೆಯ ಬಗ್ಗೆ ಅರಿವು ಮೂಡಿಸುತ್ತ ಸೈಕಲ್ ತುಳಿಯುತ್ತಿದ್ದಾರೆ. ದೇಶದ ಕರಾವಳಿ …

Read More »

ಅಧಿಕಾರಿಗಳ ನಿರ್ಲಕ್ಷಕ್ಕೆ ಕೈಗನ್ನಡಿಯಾಗಿದೆ. ಶಿಕ್ಷಕರ ಕೈಚಳಕ

ಕಾರವಾರ: ಒಬ್ಬ ಶಿಕ್ಷಕ ಮನಸ್ಸು ಮಾಡಿದರೆ ವಿದ್ಯಾರ್ಥಿಯ ಬದುಕೇ ಬದಲಾಗುತ್ತದೆ. ಶಿಕ್ಷಕನ ಪಾತ್ರ ಅಂತಹ ಮಹತ್ವದ್ದಾಗಿದೆ. ಆದರೆ ಶಿಕ್ಷಣಾಧಿಕಾರಿ  ಕಚೇರಿಗಳು ಮಾತ್ರ ಹಾಳು ಕೊಂಪೆಯಂತೆ ಇರುವುದು ನಮ್ಮ ಅಧಿಕಾರಿಗಳ ನಿರ್ಲಕ್ಷಕ್ಕೆ ಕೈಗನ್ನಡಿಯಾಗಿದೆ. ಇದೀಗ ಶಿಕ್ಷಕರ ಕೈಚಳಕದಿಂದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಚಿತ್ರಣವೇ ಬದಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಶಿಕ್ಷಕರು ತಮ್ಮ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಹೋಗಲು ಹೆದರುವಂತಿತ್ತು. ಬಣ್ಣವಿಲ್ಲದ ಗೋಡೆಗಳು, ಜೋತು ಬಿದ್ದ ಕಿಟಕಿಗಳು, ಕಚೇರಿಯಲ್ಲಿ ಎಲ್ಲಿ ಬೇಕೆಂದರಲ್ಲಿ …

Read More »

ನಿವೃತ್ತ ಸೈನಿಕನ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜ್ಯ ಮಟ್ಟದಲ್ಲಿ ಸದ್ದು

ಕಾರವಾರ; ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಬಿರಂಪಾಲಿಯಲ್ಲಿ ನಿವೃತ್ತ ಸೈನಿಕನ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹಲ್ಲೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಪಕ್ಷಪಾತ ಮಾಡಿದ್ದಾರೆ ಎಂದು ಪೋಲಿಸ್ ಇಲಾಖೆ ವಿರುದ್ದ ರಾಜ್ಯ ಮಾಜಿ ಸೈನಿಕರ ಸಂಘ ಆರೋಪದ ಜತೆ ಅಸಮಾಧಾನ ವ್ಯಕ್ತ ಪಡಿಸಿದೆ. ಕಳೆದ ನಾಲ್ಕು ದಿನದ ಹಿಂದೆ ಜಿಲ್ಲೆಯ ಜೋಯಿಡಾ ತಾಲೂಕಿನ ಬಿರಂಪಾಲಿಯಲ್ಲಿ ಹತ್ತು ಜನರ ಗುಂಪೊಂದು ಜಮೀನು ದಾರಿಯ ವಿವಾದಕ್ಕೆ …

Read More »

ನಾನು ಮಾಸ್ಕ್ ಧರಿದೇ ಜನರಲ್ಲಿ ಕೊರೊನಾ ಜಾಗೃತಿ ಮಾಡುತ್ತೇನೆ:ಶಾಸಕ ಸುನೀಲ

ಕಾರವಾರ: ವ್ಯಾಕ್ಸಿನ್ ಬರೋವರೆಗೂ ಕೊರೊನಾ ವಿರುದ್ಧ ಇರುವ ಏಕೈಕ ಅಸ್ತ್ರ ಮಾಸ್ಕ್ ಅಂತ ಪ್ರಧಾನಿಗಳಿಂದ ಹಿಡಿದು ತಜ್ಞ ವೈದ್ಯರವರೆಗೆ ಎಲ್ಲರೂ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಾತ್ರ ಇದಕ್ಕೆ ತದ್ವಿರುದ್ಧದ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ. ತಾನು ಮಾಸ್ಕ್ ಧರಿಸದೇ ಕೊರೊನಾ ಜಾಗೃತಿ ಮಾಡುತ್ತೇನೆ ಎಂದು ಭಟ್ಕಳದ ಬಿಜೆಪಿ ಶಾಸಕ ಸುನೀಲ್ ನಾಯ್ಕ ಎಡವಟ್ಟು ಹೇಳಿಕೆ ಕೊಟ್ಟಿದ್ದಾರೆ. ಭಟ್ಕಳದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, …

Read More »

ದೆಹಲಿ ನಾಯಕರಿಗೆ 2-3 ದಿನದ ಹಿಂದೆ ಅವರ ಪರ್ಸನಲ್ ವೀಡಿಯೊ ತೋರಿಸಿದ್ದಾರೆ. ಹೀಗಾಗಿ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿರಬಹುದು: ಡಿಕೆ ಶಿವಕುಮಾರ್.

ಕಾರವಾರ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರು ಏನೋ ಬೇಜಾರಾಗಿ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.ಕಾರವಾರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಂತೋಷ್‍ರವರು ಯಾವುದೋ ವೀಡಿಯೋ ಮಾಡಿ ಎಂಎಲ್‍ಸಿಗೆ ಮತ್ತು ಮಿನಿಸ್ಟರ್ ಕೈಗೆ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಇತ್ತು. ಅದನ್ನು ಮಿನಿಸ್ಟರ್ ಮತ್ತು ಎಂಎಲ್‍ಸಿಗೆ ಸೇರಿ ದೆಹಲಿ ನಾಯಕರಿಗೆ ತಲುಪಿಸಿದ್ದಾರೆ ಎನ್ನುವುದು ಮಾಹಿತಿ ಇದೆ ಎಂದರು. ದೆಹಲಿ ನಾಯಕರಿಗೆ 2-3 ದಿನದ ಹಿಂದೆ ಅವರ …

Read More »

ಸೇತುವೆಯಿಂದ ಬಿದ್ದ ಕಾರು-ಇಬ್ಬರ ಸಾವು

ಕಾರವಾರ: ನಗರದ ಲಂಡನ್ ಬ್ರಿಜ್ ಬಳಿ ಸೇತುವೆಯಿಂದ ಮಂಗಳವಾರ ಬೆಳಗ್ಗೆ ಕಾರೊಂದು ಕೆಳಗೆ ಬಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಿರಣ್ (28) ಹಾಗೂ ರಾಕೇಶ್ ಸಿ.ಆರ್ (28) ಎಂದು ಗುರುತಿಸಲಾಗಿದೆ. ಮೃತರು ಚಿಕ್ಕಮಗಳೂರಿನ ನಿವಾಸಿಗಳೆಂದು ತಿಳಿದು ಬಂದಿದೆ. ಕಾರ್ ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರು ಅಂಕೋಲಾದಿಂದ ಗೋವಾ ಕಡೆಗೆ ಹೋಗುತ್ತಿದ್ದಾಗ ಈ ಅವಘಡ ನಡೆದಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದ …

Read More »

ಸಚಿವರಿಗೆ ಮನವಿ ಸಲ್ಲಿಸಿ ಸುಸ್ತು- ಗ್ರಾಮಸ್ಥರಿಂದಲೇ ಬಸ್ ನಿಲ್ದಾಣ ನಿರ್ಮಾಣ

ಕಾರವಾರ: ನಮ್ಮೂರಿಗೊಂದು ಬಸ್ ನಿಲ್ದಾಣ ನಿರ್ಮಿಸಿ ಎಂದು ಮನವಿ ಸಲ್ಲಿಸಿದರೂ ಪ್ರಯೋಜನ ಆಗಿರಲಿಲ್ಲ. ಕೊನೆಗೆ ಗ್ರಾಮಸ್ಥರೇ ತಮ್ಮ ಹಣದಿಂದಲೇ ತಮ್ಮೂರಿಗೆ ಬಸ್ ನಿಲ್ದಾಣ ನಿರ್ಮಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಸಚಿವ ಶಿವರಾಂ ಹೆಬ್ಬಾರ್ ಸ್ವಕ್ಷೇತ್ರ ಯಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮಸ್ಥರು ಶ್ರಮದಾನದ ಮೂಲಕ ಬಸ್ ನಿಲ್ದಾಣ ನಿರ್ಮಿಸಿದ್ದಾರೆ. ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಮಾರ್ಗದಲ್ಲಿ ತೆರಳುವಾಗ ಗ್ರಾಮದಲ್ಲಿ ಯಾವುದೇ ಬಸ್ ತಂಗುದಾಣದ ವ್ಯವಸ್ಥೆ ಇರಲಿಲ್ಲ. ಇದರಿಂದ ವಿದ್ಯಾರ್ಥಿಗಳು, ಗರ್ಭಿಣಿಯರು ಹಾಗೂ ವಯಸ್ಸಾದವರು ಪರದಾಡುವಂತಾಗಿತ್ತು. …

Read More »

ಕೊರೊನಾ ವಾರ್ಡಿನಿಂದ ಸೋಂಕಿತ ಗಂಧದ ಕಳ್ಳ ಪರಾರಿ

ಕಾರವಾರ: ಕೊರೊನಾ ಸೋಂಕಿತ ಗಂಧದ ಕಳ್ಳ ಕೋವಿಡ್ ವಾರ್ಡಿನಿಂದ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕ್ರಿಮ್ಸ್ ಕೋವಿಡ್ ವಾರ್ಡಿನಲ್ಲಿ ನಡೆದಿದೆ.ಮುಂಡಗೋಡಿನ ನಿವಾಸಿ ಸೈಯದ್ ಇಸ್ರಾಲ್ ಕರೀಮ್ ಕಾನ್ ಕೊರೊನಾ ವಾರ್ಡಿನಿಂದ ತಪ್ಪಿಸಿಕೊಂಡ ಕೋವಿಡ್ ಸೋಂಕಿತ ಕಳ್ಳನಾಗಿದ್ದಾನೆ. ಎರಡು ದಿನದ ಹಿಂದೆ ಮುಂಡಗೋಡಿನಲ್ಲಿ ಗಂಧ ಕಳ್ಳತನ ಮಾಡಿದ ಹಿನ್ನೆಲೆಯಲ್ಲಿ ಈತನನ್ನು ಬಂಧಿಸಲಾಗಿತ್ತು. ಬಂಧನದ ನಂತರ ಕೊರೊನಾ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾರವಾರದ ವೈದ್ಯಕೀಯ ವಿಜ್ಞಾನ …

Read More »