Breaking News
Home / ಕಾರವಾರ (page 3)

ಕಾರವಾರ

ನಾನು ಮಾಸ್ಕ್ ಧರಿದೇ ಜನರಲ್ಲಿ ಕೊರೊನಾ ಜಾಗೃತಿ ಮಾಡುತ್ತೇನೆ:ಶಾಸಕ ಸುನೀಲ

ಕಾರವಾರ: ವ್ಯಾಕ್ಸಿನ್ ಬರೋವರೆಗೂ ಕೊರೊನಾ ವಿರುದ್ಧ ಇರುವ ಏಕೈಕ ಅಸ್ತ್ರ ಮಾಸ್ಕ್ ಅಂತ ಪ್ರಧಾನಿಗಳಿಂದ ಹಿಡಿದು ತಜ್ಞ ವೈದ್ಯರವರೆಗೆ ಎಲ್ಲರೂ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಾತ್ರ ಇದಕ್ಕೆ ತದ್ವಿರುದ್ಧದ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ. ತಾನು ಮಾಸ್ಕ್ ಧರಿಸದೇ ಕೊರೊನಾ ಜಾಗೃತಿ ಮಾಡುತ್ತೇನೆ ಎಂದು ಭಟ್ಕಳದ ಬಿಜೆಪಿ ಶಾಸಕ ಸುನೀಲ್ ನಾಯ್ಕ ಎಡವಟ್ಟು ಹೇಳಿಕೆ ಕೊಟ್ಟಿದ್ದಾರೆ. ಭಟ್ಕಳದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, …

Read More »

ದೆಹಲಿ ನಾಯಕರಿಗೆ 2-3 ದಿನದ ಹಿಂದೆ ಅವರ ಪರ್ಸನಲ್ ವೀಡಿಯೊ ತೋರಿಸಿದ್ದಾರೆ. ಹೀಗಾಗಿ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿರಬಹುದು: ಡಿಕೆ ಶಿವಕುಮಾರ್.

ಕಾರವಾರ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರು ಏನೋ ಬೇಜಾರಾಗಿ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.ಕಾರವಾರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಂತೋಷ್‍ರವರು ಯಾವುದೋ ವೀಡಿಯೋ ಮಾಡಿ ಎಂಎಲ್‍ಸಿಗೆ ಮತ್ತು ಮಿನಿಸ್ಟರ್ ಕೈಗೆ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಇತ್ತು. ಅದನ್ನು ಮಿನಿಸ್ಟರ್ ಮತ್ತು ಎಂಎಲ್‍ಸಿಗೆ ಸೇರಿ ದೆಹಲಿ ನಾಯಕರಿಗೆ ತಲುಪಿಸಿದ್ದಾರೆ ಎನ್ನುವುದು ಮಾಹಿತಿ ಇದೆ ಎಂದರು. ದೆಹಲಿ ನಾಯಕರಿಗೆ 2-3 ದಿನದ ಹಿಂದೆ ಅವರ …

Read More »

ಸೇತುವೆಯಿಂದ ಬಿದ್ದ ಕಾರು-ಇಬ್ಬರ ಸಾವು

ಕಾರವಾರ: ನಗರದ ಲಂಡನ್ ಬ್ರಿಜ್ ಬಳಿ ಸೇತುವೆಯಿಂದ ಮಂಗಳವಾರ ಬೆಳಗ್ಗೆ ಕಾರೊಂದು ಕೆಳಗೆ ಬಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಿರಣ್ (28) ಹಾಗೂ ರಾಕೇಶ್ ಸಿ.ಆರ್ (28) ಎಂದು ಗುರುತಿಸಲಾಗಿದೆ. ಮೃತರು ಚಿಕ್ಕಮಗಳೂರಿನ ನಿವಾಸಿಗಳೆಂದು ತಿಳಿದು ಬಂದಿದೆ. ಕಾರ್ ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರು ಅಂಕೋಲಾದಿಂದ ಗೋವಾ ಕಡೆಗೆ ಹೋಗುತ್ತಿದ್ದಾಗ ಈ ಅವಘಡ ನಡೆದಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದ …

Read More »

ಸಚಿವರಿಗೆ ಮನವಿ ಸಲ್ಲಿಸಿ ಸುಸ್ತು- ಗ್ರಾಮಸ್ಥರಿಂದಲೇ ಬಸ್ ನಿಲ್ದಾಣ ನಿರ್ಮಾಣ

ಕಾರವಾರ: ನಮ್ಮೂರಿಗೊಂದು ಬಸ್ ನಿಲ್ದಾಣ ನಿರ್ಮಿಸಿ ಎಂದು ಮನವಿ ಸಲ್ಲಿಸಿದರೂ ಪ್ರಯೋಜನ ಆಗಿರಲಿಲ್ಲ. ಕೊನೆಗೆ ಗ್ರಾಮಸ್ಥರೇ ತಮ್ಮ ಹಣದಿಂದಲೇ ತಮ್ಮೂರಿಗೆ ಬಸ್ ನಿಲ್ದಾಣ ನಿರ್ಮಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಸಚಿವ ಶಿವರಾಂ ಹೆಬ್ಬಾರ್ ಸ್ವಕ್ಷೇತ್ರ ಯಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮಸ್ಥರು ಶ್ರಮದಾನದ ಮೂಲಕ ಬಸ್ ನಿಲ್ದಾಣ ನಿರ್ಮಿಸಿದ್ದಾರೆ. ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಮಾರ್ಗದಲ್ಲಿ ತೆರಳುವಾಗ ಗ್ರಾಮದಲ್ಲಿ ಯಾವುದೇ ಬಸ್ ತಂಗುದಾಣದ ವ್ಯವಸ್ಥೆ ಇರಲಿಲ್ಲ. ಇದರಿಂದ ವಿದ್ಯಾರ್ಥಿಗಳು, ಗರ್ಭಿಣಿಯರು ಹಾಗೂ ವಯಸ್ಸಾದವರು ಪರದಾಡುವಂತಾಗಿತ್ತು. …

Read More »

ಕೊರೊನಾ ವಾರ್ಡಿನಿಂದ ಸೋಂಕಿತ ಗಂಧದ ಕಳ್ಳ ಪರಾರಿ

ಕಾರವಾರ: ಕೊರೊನಾ ಸೋಂಕಿತ ಗಂಧದ ಕಳ್ಳ ಕೋವಿಡ್ ವಾರ್ಡಿನಿಂದ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕ್ರಿಮ್ಸ್ ಕೋವಿಡ್ ವಾರ್ಡಿನಲ್ಲಿ ನಡೆದಿದೆ.ಮುಂಡಗೋಡಿನ ನಿವಾಸಿ ಸೈಯದ್ ಇಸ್ರಾಲ್ ಕರೀಮ್ ಕಾನ್ ಕೊರೊನಾ ವಾರ್ಡಿನಿಂದ ತಪ್ಪಿಸಿಕೊಂಡ ಕೋವಿಡ್ ಸೋಂಕಿತ ಕಳ್ಳನಾಗಿದ್ದಾನೆ. ಎರಡು ದಿನದ ಹಿಂದೆ ಮುಂಡಗೋಡಿನಲ್ಲಿ ಗಂಧ ಕಳ್ಳತನ ಮಾಡಿದ ಹಿನ್ನೆಲೆಯಲ್ಲಿ ಈತನನ್ನು ಬಂಧಿಸಲಾಗಿತ್ತು. ಬಂಧನದ ನಂತರ ಕೊರೊನಾ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾರವಾರದ ವೈದ್ಯಕೀಯ ವಿಜ್ಞಾನ …

Read More »

ಗೋಕರ್ಣದ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತ- ಭಾರೀ ಅನಾಹುತ ತಪ್ಪಿಸಿದ ಮರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಪುರಾಣ ಪ್ರಸಿದ್ಧ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತವಾಗಿದ್ದು, ಅದೃಷ್ಟವಶಾತ್ ದೇವಸ್ಥಾನಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಗೋಕರ್ಣದ ಮಾಣೇಶ್ವರ ದೇವಸ್ಥಾನದ ಮೇಲ್ಭಾಗದಲ್ಲಿರುವ ಗುಡ್ಡ ಕುಸಿದಿದ್ದು, ಈ ವೇಳೆ ದೊಡ್ಡ ಕಲ್ಲುಬಂಡೆ ಜಾರಿದೆ. ಆದರೆ ಪಕ್ಕದಲ್ಲೇ ಬೃಹದಾಕಾರದ ಮರವಿದ್ದ ಕಾರಣ ಗುಡ್ಡದಿಂದ ಜಾರಿದ ಕಲ್ಲುಬಂಡೆ ಮರದ ಬಳಿ ನಿಂತಿದ್ದು, ದೊಡ್ಡ ಅನಾಹುತ …

Read More »

ಜೋಯಿಡಾ ತಹಶೀಲ್ದಾರ್ ಕಚೇರಿಗೆ ಎಸಿಬಿ ದಾಳಿ – ಲಂಚ ಪಡೆಯುತ್ತಿದ್ದ ಅಧಿಕಾರಿ ಬಲೆಗೆ

ಕಾರವಾರ: ಲಂಚ ಸ್ವೀಕರಿಸುತಿದ್ದ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಮೇಲೆ ಎಸಿಬಿ ದಾಳಿ ನೆಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಜೋಯಿಡಾ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಹುಚ್ಚಣ್ಣನವರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಆತನ್ನು ವಶಕ್ಕೆ ಪಡೆದು ತನಿಖೆ ಮಾಡಲಾಗುತ್ತಿದೆ. ಗೋಪಿಕಾ ಶಾಂತ ಸಾವಂತ್ ಇವರ ಹೆಸರು ಬದಲಾವಣೆಗೆ ಇವರ ಸಂಬಂಧಿ ಮೋಹನ್ ದೇಸಾಯಿ …

Read More »

ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ

ಕಾರವಾರ: ಕಪ್ಪೆಗಳನ್ನು ಹಾವು ನುಂಗುವುದು ಸಾಮಾನ್ಯ. ಹಾಗೆಯೇ ಅಪರೂಪಕ್ಕೆ ಕಪ್ಪೆಗಳೇ ಹಾವನ್ನು ನುಂಗಿದ ಘಟನೆ ಕೂಡ ನಡೆದಿದೆ. ಆದರೆ ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡ ಗ್ರಾಮದಲ್ಲಿ ನಡೆದಿದೆ.   ಗೋಂಕರು ಕಪ್ಪೆ ಸಂಶೋಧಕರು ಹೇಳುವಂತೆ ಸುಮಾರು ಏಳು ಕೆಜಿ ತೂಕದ ವರೆಗೆ ದೂಡ್ಡ ಗಾತ್ರದಲ್ಲಿ ಬೆಳೆಯುತ್ತವೆ. ಈ ಕಪ್ಪೆಗಳು ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಹೆಚ್ಚು ಕಾಣಸಿಗುತ್ತವೆ. …

Read More »

ವಿವಾಹಿತ ಮಹಿಳೆಯನ್ನ ಕರ್ಕೊಂಡು ಬಂದಿದ್ದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

ಕಾರವಾರ: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿ ಕರೆದುಕೊಂಡು ಬಂದಿದ್ದ ಯುವಕನಿಗೆ ಮಹಿಳೆಯ ಪತಿ ಹಾಗೂ ಸಂಬಂಧಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದೆ ಧಾರವಾಡ ಮೂಲದ ಮುತ್ತು ಥಳಿತಕ್ಕೊಳಗಾದ ಯುವಕ. ಮುತ್ತು ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಅಲ್ಲದೇ ಈತ ಧಾರವಾಡದಿಂದ ಮಹಿಳೆಯನ್ನು ಕರೆದುಕೊಂಡು ಕಾರವಾರಕ್ಕೆ ಬಂದಿದ್ದನು. ಜಿಲ್ಲಾಧಿಕಾರಿ ಕಚೇರಿ ಬಳಿ ಮಹಿಳೆಯೊಂದಿಗೆ ಮುತ್ತು ನಿಂತಿದ್ದನು. ಇತ್ತ ಕಾರವಾರಕ್ಕೆ ಬಂದ ವಿಷಯ …

Read More »

ಬಡ ಮಕ್ಕಳ ಹಸಿವಿಗೆ ತುತ್ತು ನೀಡಿದ ಮಾದರಿ ಶಿಕ್ಷಕ

ಕಾರವಾರ: ಇದು ಬಡ ಮಕ್ಕಳ ಹಸಿವಿಗೆ ತುತ್ತು ನೀಡಿದ ಮಾದರಿ ಶಿಕ್ಷಕರ ಕಥೆ. ಪಾಠದ ಜೊತೆಗೆ ಬೆಳಗ್ಗೆ ಹಸಿವಿನಿಂದ ಶಾಲೆಗೆ ಬರುವ ಮಕ್ಕಳಿಗೆ ತಮ್ಮ ಸ್ವಂತ ಹಣದಲ್ಲಿಯೇ ಬೆಳಗಿನ ಉಪಹಾರದ ವ್ಯವಸ್ಥೆಯನ್ನ ಮಾಡಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಗಣಪತಿಗಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ರಾಮಚಂದ್ರ ನಾಯ್ಕ್ ಬಡ ಮಕ್ಕಳಿಗಾಗಿ ಉಪಹಾರ ಆರಂಭಿಸಿದ್ದಾರೆ. ಈ ಶಾಲೆಗೆ ಬರುವ ಮಕ್ಕಳು ಬಡ ಕುಟುಂಬದವರು. ವಿದ್ಯಾರ್ಥಿಗಳು ಬೆಳಗ್ಗೆ ಉಪಹಾರ ಸೇವಿಸದೇ ಬರುತ್ತಿರೋದು ರಾಮಚಂದ್ರ …

Read More »