ಕಾರವಾರ: ಮಳೆಗಾಲ ಮುಗಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯ ಹಸಿರು ಕಾನನಗಳ ಮಧ್ಯೆ ಜಲಪಾತಗಳಿಗೇನೂ ಕಮ್ಮಿ ಇಲ್ಲ. ಅದೇ ರೀತಿ ಇದೀಗ ಬಂಡೆಗಳನ್ನು ಸೀಳಿಕೊಂಡು ಹಾಲಿನಂತೆ ಧುಮ್ಮಕ್ಕುವ ಅಣಶಿ ಜಲಪಾದದ ನರ್ತನ ನೋಡಿ ಪ್ರವಾಸಿಗರು ಮಾರು ಹೋಗದಿದ್ದಾರೆ. ರಸ್ತೆ ಪಕ್ಕದಲ್ಲೇ ಇರುವುದರಿಂದ ಪ್ರವಾಸಿಗರಿಗೆ ಎಂಜಾಯ್ ಮಾಡಲು ಇನ್ನೂ ಅನುಕೂಲವಾಗಿದೆ.ಜಿಲ್ಲೆಯ ಕಾರವಾರ-ಜೋಯಿಡಾ ಘಟ್ಟ ಪ್ರದೇಶದ ಅಣಶಿ ಬಳಿ ಮಳೆ ನಿಲ್ಲುತಿದ್ದಂತೆ ಜಲಪಾತ ದುಮ್ಮಿಕ್ಕಿ ಹರಿಯುತಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಕಾರವಾರದಿಂದ 40 ಕಿಲೊಮೀಟರ್ …
Read More »ಜೂಜಾಟ ಆಡುತ್ತಿದ್ದ 17 ಜನರನ್ನು ಕಾರವಾರದ ಹಳಿಯಾಳದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕಾರವಾರ: ಜೂಜಾಟ ಆಡುತ್ತಿದ್ದ 17 ಜನರನ್ನು ಕಾರವಾರದ ಹಳಿಯಾಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ದುಸಗಿ ಬ್ರಿಡ್ಜ್ ನ ಕೆಳಭಾಗದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ 17 ಜನರನ್ನು ಕಾರವಾರದ ಡಿ.ಸಿ.ಐ.ಬಿ ಅಧೀಕ್ಷಕ ನಿಶ್ಚಲ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ 1,43,650 ರಪಾಯಿಯನ್ನು ಹಾಗೂ ಇಸ್ಪೀಟ್ ಕಾರ್ಡ್ ವಶಕ್ಕೆ ಪಡೆದು ಬಂಧಿಸಿದೆ.ಜಿಲ್ಲೆಯ ಹಳಿಯಾಳದಲ್ಲಿ ಹಲವು ದಿನಗಳಿಂದ ಇಸ್ಪೀಟ್ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಡಿಸಿಐಬಿ ತಂಡ …
Read More »ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು: ಅನಂತಕುಮಾರ್ ಹೆಗಡೆ
ಕಾರವಾರ: ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಕುಮಟಾದಲ್ಲಿ ಇಂದು ಸಂಸದರ ಹಾಗೂ ಕೇಂದ್ರ ಸರ್ಕಾರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ಎನ್‍ಎಲ್ ಸರಿಪಡಿಸಲು ನಮ್ಮ ಸರ್ಕಾರದಿಂದಲೂ ಸಾಧ್ಯವಾಗಿಲ್ಲ. ಸಮರ್ಪಕ ಸೇವೆ ನೀಡಲು ಬಿಎಸ್‍ಎನ್‍ಎಲ್ ಸಂಸ್ಥೆಯ ನೌಕರರಿಂದ ಸಾಧ್ಯವಾಗೋದಿಲ್ಲ. ಈಗಾಗಲೇ 85 …
Read More »ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ.
ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಘಟ್ಟ ಪ್ರದೇಶ, ಚಿಕ್ಕಮಗಳೂರು ಭಾಗಳಿಂದ ಹರಿದು ಬರುತ್ತಿರುವ ನೀರಿನಿಂದಾಗಿ ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ. ಚಾರ್ಮಾಡಿಯ ಅಂತರ, ಕೊಳಂಬೆ, ಅರಣೆಪಾದೆ, ಪರ್ಲಾಣಿ, ಹೊಸಮನೆ, ಕುಕ್ಕಾವು, ಕಕ್ಕೆನಾಜೆಯಲ್ಲಿ ಮೃತ್ಯುಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸೇತುವೆಗಳು ಮತ್ತು ಕಿಂಡಿ ಅಣೆಕಟ್ಟುಗಳಲ್ಲಿ ಬೃಹತ್ ಮರದ ದಿಮ್ಮಿಗಳು, ಕಸ ಬಂದು ಸಿಲುಕುತ್ತಿದೆ. ಇದರಿಂದಾಗಿ ಸೇತುವೆಯ ಅಂಚಿನ ಮಣ್ಣು ರಸ್ತೆ ಸಮೇತ ಕೊಚ್ಚಿಕೊಂಡು ಹೋಗಿದೆ. …
Read More »ರೈಲ್ವೆ ಸುರಂಗ ಗೋಡೆ ಕುಸಿತ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಮಾರ್ಗ ಸಂಚಾರ ಬಂದ್
ಕಾರವಾರ: ಮುಂಡ್ರೆ -ಪೆರ್ಣೆ ಮಾರ್ಗದಲ್ಲಿ ರೈಲ್ವೆ ಸುರಂಗ ಗೋಡೆ ಕುಸಿತ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಮಾರ್ಗ ಸಂಚಾರ ಬಂದ್ ಮಾಡಲಾಗಿದೆ.ಇಂದಿನಿಂದ ಮುಂದಿನ ಆದೇಶ ಬರುವವರೆಗೂ ಎರ್ನಾಕುಲಮ್ -ಹಜರತ್ ನಿಜಾಮುದ್ದೀನ್ ಸೂಪರ್ ಪಾಸ್ಟ್ ಟ್ರೈನ್ (ಮಡಗಾಂ, ಮೀರಜ್, ಪುಣೆ, ಪನ್ನವೇಲ್ ಮಾರ್ಗ) ತಿರುವಂತಪುರಂ ಲೋಕಮಾನ್ಯ ತಿಲಕ್ ಟ್ರೈನ್ (ಮಡಗಾಂ, ಲೋಂಡ, ನೀರಜ್, ಪುಣೆ, ಪನ್ನವೇಲ್ ಮಾರ್ಗ), ನ್ಯೂ ಡೆಲ್ಲಿ ತಿರುವನಂತಪುರಂ ಸೆಂಟ್ರಲ್ ರಾಜಧಾನಿ ಎಕ್ಸ್ ಪ್ರೆಸ್(ಪನ್ನವೇಲ್, ಪುಣೆ, ಮೀರಜ್ ,ಲೋಂಡ, ಮಡಗಾಂ …
Read More »ಭಾರೀ ಮಳೆಗೆ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋಗಿದೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋಗಿದೆ. ಹುಬ್ಬಳ್ಳಿ – ಧಾರವಾಡ ಭಾಗದಲ್ಲಿ ಹೆಚ್ಚಿನ ಮಳೆ ಹಿನ್ನಲೆಯಲ್ಲಿ ಯಲ್ಲಾಪುರ ಭಾಗದ ಹಲವು ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಮಂಚಿಕೇರಿಯ ಹಲವು ಭಾಗದ ಕೃಷಿ ಭೂಮಿಗೂ ನೀರು ನುಗ್ಗಿದೆ. ಯಲ್ಲಾಪುರ -ಮಂಚಿಕೇರಿ ಸೇತುವೆ ಕೊಚ್ಚಿಹೋದ್ದರಿಂದ ನಗರ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದೂ ಕೂಡ ಮಳೆಯ ಅಬ್ಬರ …
Read More »ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ.
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಕರಾವಳಿ ತಾಲೂಕುಗಳ ಅನೇಕ ಹಳ್ಳಿಗಳು ಜಲಾವೃತವಾಗಿವೆ.ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಯಲ್ಲಾಪುರ ತಾಲೂಕಿನ ತಗ್ಗು ಪ್ರದೇಶಗಳಿಗೆ ಗಂಗಾವಳಿ, ಅಘನಾಶಿನಿ, ಬೇಡ್ತಿ ನದಿ ನೀರು ನುಗ್ಗಿದೆ. ಗಂಗಾವಳಿ ನದಿ ಪ್ರವಾಹದಿಂದ ಅಂಕೋಲಾ ತಾಲೂಕಿನ ವಾಸರಕುದ್ರಗಿ ಹಳ್ಳಿ ಸಂಪೂರ್ಣ ಜಲಾವೃತವಾಗಿದ್ದು, 150 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮದ ಜನರನ್ನು ದೋಣಿ ಮೂಲಕ ರಕ್ಷಣೆ ಮಾಡಲಾಗುತ್ತಿದೆ. ಹಲವು ಮನೆಗಳಲ್ಲಿ ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳು, …
Read More »ಸಮುದ್ರಕ್ಕಿಳಿದ ಬೋಟುಗಳು ಮರಳಿ ದಡಕ್ಕೆ
ಕಾರವಾರ: ರಾಜ್ಯದ ಕರಾವಳಿಯಲ್ಲಿ ಅಗಸ್ಟ್ ತಿಂಗಳ ಮೊದಲ ದಿನ ಮೀನುಗಾರಿಕೆ ಪ್ರಾರಂಭಕ್ಕೆ ವಿದ್ಯುಕ್ತ ಚಾಲನೆ ಸಿಗುತ್ತದೆ. ಮಳೆಗಾಲದ ಎರಡು ತಿಂಗಳು ಬಂದ್ ಆಗುವ ಮೀನುಗಾರಿಕೆ, ಸರ್ಕಾರದ ಆದೇಶದಂತೆ ಇಂದಿನಿಂದ ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಪ್ರತಿ ವರ್ಷ ಅಗಸ್ಟ್ ನಲ್ಲಿ ಮೀನುಗಾರಿಕೆಯನ್ನು ಹಬ್ಬದಂತೆ ಆಚರಿಸುತ್ತಿದ್ದ ಉತ್ತರ ಕನ್ನಡ ಮೀನುಗಾರರ ಸಂಭ್ರಮ ಕಳೆಗುಂದಿದೆ. ಸರ್ಕಾರದ ಆದೇಶದಂತೆ ಜೂನ್, ಜುಲೈ ತಿಂಗಳ ಮಳೆಗಾಲದ ಅವಧಿಯಲ್ಲಿ ಮೀನುಗಾರಿಕೆಗೆ ನಿಷೇಧ ಹೇರಿದ ಬಳಿಕ ಅಗಸ್ಟ್ 1 ರಿಂದ …
Read More »ಬಿಜೆಪಿಯವರು ಹೆಣದ ಮೇಲೆ ಹಣ ಮಾಡುವವರು: ಬಿ.ಕೆ.ಹರಿಪ್ರಸಾದ್
ಕಾರವಾರ: ಕೊರೊನಾ ವಿಚಾರಲ್ಲಿ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ. ಬಿಜೆಪಿಯವರು ಹೆಣದ ಮೇಲೆ ಹಣ ಮಾಡುವವರು. ಶವದ ಮೇಲೆ ಕುಳಿತು ಊಟ ಮಾಡುವವರು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದ್ದಾರೆ. ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗರಿಗೆ ಯಾವುದೇ ನಾಚಿಕೆ, ಮಾನಮರ್ಯಾದೆ ಇಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಸರ್ಕಾರ ಇಂಥ ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲೂ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಇದು …
Read More »3.50 ಲಕ್ಷ ರೂ. ಮೌಲ್ಯದ ಗೋಮಾಂಸ ಸಾಗಾಟ ಮಾಡ್ತಿದ್ದವರ ಬಂಧನ
ಕಾರವಾರ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿ ಸೇರಿ ವಾಹನ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹಿರೇಗುತ್ತಿ ಚೇಕ್ ಪೋಸ್ಟ್ ಬಳಿ ನಡೆದಿದೆ. ಆರೋಪಿಗಳನ್ನು ಅಮೂಲ (36), ಜಮೀರ್ ಸಯ್ಯದ್(29) ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಭಟ್ಕಳಕ್ಕೆ ಸಾಗಾಟವಾಗುತ್ತಿದ್ದ ಗೋಮಾಂಸವನ್ನು ರಾಷ್ಟ್ರೀಯ ಹೆದ್ದಾರಿ 66 ರ ಹಿರೆಗುತ್ತಿ ಚೆಕ್ ಪೋಸ್ಟ್ ನಲ್ಲಿ ಗೋಕರ್ಣ ಪಿಎಸ್‍ಐ ನವೀನ್ ಕುಮಾರ ನೇತೃತ್ವದ ತಂಡ ತಪಾಸಣೆ ನಡೆಸಿದ ವೇಳೆ …
Read More »